T20 World Cup 2026: ಟಿ-20 ವಿಶ್ವಕಪ್ 2026 ಆರಂಭಕ್ಕೂ ಮುನ್ನ ಟೀಮ್ ಇಂಡಿಯಾಗೆ ಬಿಗ್ ಶಾಕ್: ಸ್ಟಾರ್ ಆಟಗಾರ ಔಟ್
T20 World Cup 2026: ಟಿ-20 ವಿಶ್ವಕಪ್ 2026 ಆರಂಭಕ್ಕೂ ಮುನ್ನ ಹಾಲಿ ಚಾಂಪಿಯನ್ ಟೀಮ್ ಇಂಡಿಯಾಗೆ ಬಿಗ್ ಶಾಕ್ ಎದುರಾಗಿದೆ. ತಂಡದ ಪ್ರಮುಖ ಯುವ ವೇಗಿ ಹರ್ಷಿತ್ ರಾಣಾ ಗಾಯದ ಕಾರಣದಿಂದಾಗಿ ಟೂರ್ನಿಯಿಂದ ಹೊರಬಿದ್ದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಗಾಯಗೊಂಡ ಅವರು, ಪೂರ್ಣ ಫಿಟ್ ಆಗಲು ಸಮಯ ಬೇಕಾಗಿರುವುದರಿಂದ ವಿಶ್ವಕಪ್ ಆಡಲು ಸಾಧ್ಯವಿಲ್ಲ ಎಂದು ತಿಳಿದುಬಂದಿದೆ.
ಟಿ20 ವಿಶ್ವಕಪ್ 2026 ಫೆಬ್ರವರಿ 7ರಿಂದ ಭಾರತ ಹಾಗೂ ಶ್ರೀಲಂಕಾದಲ್ಲಿ ಆರಂಭವಾಗುತ್ತಿರುವ ಬೆನ್ನಲ್ಲೇ ಹಾಲಿ ಚಾಂಪಿಯನ್ ಭಾರತ ತಂಡಕ್ಕೆ ದೊಡ್ಡ ಹಿನ್ನಡೆ ಎದುರಾಗಿದೆ. ಕಳೆದೊಂದು ವರ್ಷದಿಂದ ಭಾರತದ ವೇಗದ ಬೌಲಿಂಗ್ ದಾಳಿಯಲ್ಲಿ ಗಮನ ಸೆಳೆದಿರುವ ಯುವ ವೇಗಿ ಹರ್ಷಿತ್ ರಾಣಾ ಗಾಯದ ಕಾರಣದಿಂದಾಗಿ ಟೂರ್ನಿಯಿಂದ ಹೊರಗುಳಿದಿದ್ದಾರೆ. ವಿಶ್ವಕಪ್‌ಗೆ ತಯಾರಿ ಸಂದರ್ಭದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಅಭ್ಯಾಸ ಪಂದ್ಯದಲ್ಲಿ ಅವರು ಗಾಯಗೊಂಡಿದ್ದರು.

ಹರ್ಷಿತ್ ರಾಣಾಗೆ ಮೊಣಕಾಲಿನ ಗಾಯ: ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮಾಡುವ ವೇಳೆ ಹರ್ಷಿತ್ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದು, ಕೇವಲ ಒಂದು ಓವರ್ ಬೌಲಿಂಗ್ ಮಾಡಿದ ನಂತರ ಮೈದಾನ ತೊರೆದಿದ್ದರು. ಅವಾಗಿನಿಂದಲೇ ಅವರ ಫಿಟ್‌ನೆಸ್ ಬಗ್ಗೆ ಅನುಮಾನಗಳು ಮೂಡಿದ್ದವು. ವೈದ್ಯಕೀಯ ಪರೀಕ್ಷೆಗಳ ನಂತರ ಅವರ ಗಾಯ ಗಂಭೀರ ಆಗಿರುವುದು ದೃಢಪಟ್ಟಿದ್ದು, ಸಂಪೂರ್ಣವಾಗಿ ಚೇತರಿಸಿಕೊಳ್ಳಲು ಮತ್ತಷ್ಟು ಸಮಯದ ಅಗತ್ಯವಿದೆ ಎನ್ನಲಾಗಿದೆ. ಇದರ ಪರಿಣಾಮವಾಗಿ ಹರ್ಷಿತ್ ರಾಣಾ ಮೊದಲ ಟಿ-20 ವಿಶ್ವಕಪ್ ಆಡಬೇಕಿದ್ದ ಅವಕಾಶ ಕೈ ತಪ್ಪಿದೆ.
ಸೂರ್ಯಕುಮಾರ್ ಯಾದವ್ ಹೇಳಿದ್ದೇನು?: ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡಕ್ಕೆ ಇದು ದೊಟ್ಟ ಆಘಾತವಾದಂತಾಗಿದೆ. ಹರ್ಷಿತ್ ರಾಣಾ ಇತ್ತೀಚಿನ ಸರಣಿಗಳಲ್ಲಿ ಸ್ಥಿರ ಪ್ರದರ್ಶನ ನೀಡುವ ಮೂಲಕ ತಂಡದ ಬೌಲಿಂಗ್ ವಿಭಾಗದಲ್ಲಿ ಪ್ರಮುಖ ಆಯ್ಕೆಯಾಗಿದ್ದರು. ಅವರಿಗೆ ಆಡುವ 11ರ ಬಳಗದಲ್ಲಿ ಅವಕಾಶ ಸಿಗುವ ಸಾಧ್ಯತೆಗಳು ಹೆಚ್ಚಾಗಿದ್ದವು.
ಆದರೆ, ಇದೀಗ ಬಂದ ವರದಿಗಳ ಪ್ರಕಾರ, ಹರ್ಷಿತ್ ರಾಣಾ ಅವರು ಇನ್ನೂ ಸಂಪೂರ್ಣವಾಗಿ ಫಿಟ್ ಆಗಿಲ್ಲ. ಈ ಕುರಿತು ಮಾತನಾಡಿದ್ದ ನಾಯಕ ಸೂರ್ಯಕುಮಾರ್, ಹರ್ಷಿತ್ ಗಾಯದಿಂದ ಬಳಲುತ್ತಿದ್ದು, ತಂಡದ ವೈದ್ಯಕೀಯ ಸಿಬ್ಬಂದಿ ಅವರ ಸ್ಥಿತಿಗತಿಗಳನ್ನು ನಿರಂತರವಾಗಿ ಪರಿಶೀಲಿಸುತ್ತಿದ್ದಾರೆ. ಆಡಳಿತ ಮಂಡಳಿ ಶೀಘ್ರದಲ್ಲೇ ಅವರ ಕುರಿತು ಅಧಿಕೃತ ಮಾಹಿತಿ ನೀಡಲಿದೆ ಎಂದು ಹೇಳಿದ್ದಾರೆ.
ಟೀಮ್ ಇಂಡಿಯಾದಲ್ಲಿ ಜಸ್ಪ್ರೀತ್ ಬುಮ್ರಾ ಹಾಗೂ ಅರ್ಷದೀಪ್ ಸಿಂಗ್‌ನಂತಹ ಅನುಭವಿ ವೇಗಿಗಳು ಇರುವುದರಿಂದ ಬೌಲಿಂಗ್ ವಿಭಾಗದಲ್ಲಿ ತಕ್ಷಣದ ದೊಡ್ಡ ಸಮಸ್ಯೆ ಎದುರಾಗುವುದಿಲ್ಲ. ಆದರೆ, ಅಗತ್ಯ ಸಂದರ್ಭಗಳಲ್ಲಿ ಬದಲಾವಣೆಯ ಆಯ್ಕೆಯಾಗಿ ಹರ್ಷಿತ್ ರಾಣಾ ಅವರು ಬೇಕಾಗುವ ಸಾಧ್ಯತೆಯಿತ್ತು. ಆದರೆ, ಇದೀಹ ತಂಡದ ಮ್ಯಾನೇಜ್‌ಮೆಂಟ್ ಹಾರ್ದಿಕ್ ಪಾಂಡ್ಯ ಹಾಗೂ ಶಿವಂ ದುಬೆ ಅವರನ್ನು ಬೌಲಿಂಗ್ ಆಲ್‌ರೌಂಡರ್‌ಗಳಾಗಿ ಹೆಚ್ಚು ಬಳಸುವ ಬಗ್ಗೆ ಯೋಚಿಸುವ ಸಾಧ್ಯತೆ ಇದೆ. ಇನ್ನೂ ಹಾಲಿ ಚಾಂಪಿಯನ್ ಆಗಿರುವ ಭಾರತ ತಂಡ ಈ ಎಲ್ಲಾ ಸವಾಲುಗಳ ನಡುವೆಯೂ ವಿಶ್ವಕಪ್‌ನಲ್ಲಿ ಶ್ರೇಷ್ಠ ಪ್ರದರ್ಶನ ಮುಂದುವರಿಸುವ ವಿಶ್ವಾಸವನ್ನು ಹೊಂದಿದೆ.
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ರಿಂಕು ಸಿಂಗ್, ಹರ್ಷಿತ್ ರಾಣಾ.
---------
ಕ್ರಿಕೆಟ್ ಬಗ್ಗೆ ನಿಮಗೇನು ಬೇಕೋ ಅದೆಲ್ಲ 'ಮೈಖೇಲ್' ವೆಬ್‌ಸೈಟ್‌ನಲ್ಲಿದೆ
ಕ್ರಿಕೆಟ್ ಆಟವನ್ನು ಲೈವ್ ನೋಡುವುದಷ್ಟೇ ಅಲ್ಲ, ರಿಪೋರ್ಟ್ ಓದುವುದೂ ಸಹ ಅಭಿಮಾನಿಗಳ ಪಾಲಿಗೆ ಸುಖ. ಕನ್ನಡದಲ್ಲಿ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ 'ಮೈಖೇಲ್' ಜಾಲತಾಣದಲ್ಲಿ ಲಭ್ಯ. ಇಲ್ಲಿ ಲೈವ್ ಸ್ಕೋರ್, ಬ್ರೇಕಿಂಗ್ ನ್ಯೂಸ್, ಪಂದ್ಯಗಳ ವೇಳಾಪಟ್ಟಿ, ಮ್ಯಾಚ್ ರಿಪೋರ್ಟ್, ಆಟಗಾರರ ಹೇಳಿಕೆ, ವಿವಾದ, ಗಾಸಿಪ್, ಪ್ರೊಫೈಲ್, ಆಕರ್ಷಕ ಫೋಟೊಗಳು, ಇನ್‌ಫೋಗ್ರಾಫಿಕ್ಸ್ ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಬಯಸುವ ಎಲ್ಲವೂ ಇದೆ. ಕ್ರಿಕೆಟ್ ಬಗ್ಗೇ ಏನೇ ಬೇಕಿದ್ದರೂ 'ಮೈಖೇಲ್' ವೆಬ್‌ಸೈಟ್ ನೋಡಿ. ನೆನಪಿರಲಿ: ಕನ್ನಡದಲ್ಲಿ ಕ್ರಿಕೆಟ್, 'ಮೈಖೇಲ್' ವೆಬ್‌ಸೈಟ್ ಬೆಸ್ಟ್.
ಕ್ರೀಡಾಲೋಕದ ತಾಜಾ ಮಾಹಿತಿಗಾಗಿ ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲೂ ಮೈಖೇಲ್ ಫಾಲೊ ಮಾಡಿ.












Click it and Unblock the Notifications