Get Updates
Get notified of breaking news, exclusive insights, and must-see stories!

ಟಿ20 ವಿಶ್ವಕಪ್‌ 2026: ಇಂಗ್ಲೆಂಡ್‌ ವಿರುದ್ಧ ಸಂಜು, ದುಬೆ, ಇಶಾನ್ ಕಿಶನ್ ಅಬ್ಬರದ ಬ್ಯಾಟಿಂಗ್: ಫೈನಲ್‌ ಪ್ರವೇಶಿಸಿದ ಟೀಂ ಇಂಡಿಯಾ

T20 World Cup 2026: ಟಿ20 ವಿಶ್ವಕಪ್‌ 2026ರ ರೋಚಕ ಸೆಮಿಫೈನಲ್ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿದ ಭಾರತ ತಂಡ ಭರ್ಜರಿಯಾಗಿ ಫೈನಲ್ ಪ್ರವೇಶಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ, ಸಂಜು ಸ್ಯಾಮ್ಸನ್ ಅವರ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ 253 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು.

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟಿ20 ವಿಶ್ವಕಪ್​ನ ಸೆಮಿಫೈನಲ್‌ ಪಂದ್ಯದಲ್ಲಿ ಭಾರತ 7 ರನ್​ಗಳಿಂದ ಗೆಲುವು ಸಾಧಿಸಿತು. ಈ ಮೂಲಕ ಟೀಂ ಇಂಡಿಯಾ ಸತತ ಎರಡನೇ ಬಾರಿಗೆ ಟಿ20 ವಿಶ್ವಕಪ್ ಫೈನಲ್ ಪ್ರವೇಶ ಮಾಡಿದೆ. ​

T20 World Cup 2026 India Beat England in Semi-Final Enters Final to Face New Zealand on Sunday

ಈ ಐತಿಹಾಸಿಕ ಜಯದ ಮೂಲಕ ಸೂರ್ಯಕುಮಾರ್ ಯಾದವ್ ನೇತೃತ್ವದ ಟೀಂ ಇಂಡಿಯಾ ಈಗ ಪ್ರಶಸ್ತಿ ಸುತ್ತಿಗೆ ಲಗ್ಗೆ ಇಟ್ಟಿದ್ದು, ಭಾನುವಾರ ನಡೆಯಲಿರುವ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು ಎದುರಿಸಲಿದೆ. ಸಂಜು ಸ್ಯಾಮ್ಸನ್ ಮತ್ತು ಇಶಾನ್ ಕಿಶನ್ ನೀಡಿದ ಭದ್ರ ಬುನಾದಿ ಹಾಗೂ ಬೌಲರ್‌ಗಳ ಉತ್ತಮ ಬೌಲಿಂಗ್‌ ದಾಳಿಯಿಂದ ಭಾರತ ಫೈನಲ್‌ ಪ್ರವೇಶ ಮಾಡಿತು.

ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್‌ ಬೀಸಿದ ಭಾರತ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ಮಾಡಿತು. ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 253 ರನ್ ಗಳಿಸಿತು. ಈ ಗುರಿ ಮುಟ್ಟುವಲ್ಲಿ ಇಂಗ್ಲೆಂಡ್‌ ವಿಫಲವಾಗುವ ಮೂಲಕ ಸೋಲನುಭವಿಸಿತು.

ಇಂಗ್ಲೆಂಡ್‌ ಪರ ಸ್ಫೋಟಕ ಬ್ಯಾಟಿಂಗ್‌ ಆಡಿದ ಜೆಕಬ್ ಬೆಥೆಲ್‌ ಶತಕ ಸಿಡಿಸಿ ತಂಡವನ್ನು ಗೆಲುವಿನ ಸನಿಹಕ್ಕೆ ತಂದರು. ಆದರೆ, ಕೊನೆಯ 4 ಓವರ್​ಗಳಲ್ಲಿ ಭಾರತದ ಬೌಲರ್​ಗಳು ಪಂದ್ಯದ ದಿಕ್ಕನ್ನೇ ಬದಲಿಸಿ 246 ರನ್‌ಗಳಿಗೆ ಕಟ್ಟಿಹಾಕಿದರು.

ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಹ್ಯಾರಿ ಬ್ರೂಕ್ ಭಾರತವನ್ನು ಮೊದಲು ಬ್ಯಾಟಿಂಗ್‌ಗೆ ಆಹ್ವಾನಿಸಿದರು. ಅದರಂತೆಯೇ ಮೊದಲು ಬ್ಯಾಟಿಂಗ್ ಮಾಡಿದ ಭಾರತ ನಿಗದಿತ 20 ಓವರ್‌ಗಳಲ್ಲಿ 253 ರನ್‌ಗಳನ್ನು ಕಲೆಹಾಕಿತು. ಇದು ಟಿ20 ವಿಶ್ವಕಪ್ ನಾಕೌಟ್ ಪಂದ್ಯದಲ್ಲಿ ತಂಡವೊಂದು ಕಲೆಹಾಕಿದ ಅತ್ಯಧಿಕ ಮೊತ್ತವಾಗಿತ್ತು.

ಭಾರತದ ಪರ ಸಂಜು ಸ್ಯಾಮ್ಸನ್ 42 ಎಸೆತಗಳಲ್ಲಿ 89 ರನ್ ಗಳಿಸಿದರೆ, ಶಿವಂ ದುಬೆ 43, ಹಾರ್ದಿಕ್ ಪಾಂಡ್ಯ 27 ರನ್, ತಿಲಕ್ ವರ್ಮಾ 21 ರನ್ ಗಳಿಸಿ ತಂಡ ಮೊತ್ತವನ್ನು 250ರ ಗಡಿ ದಾಟಿಸಿ ಬೃಹತ್ ಮೊತ್ತ ಕಲೆಹಾಕಿದರು.

ಟೀಂ ಇಡಿಯಾ ನೀಡಿದ ಗುರಿ ಬೆನ್ನತ್ತಿದ ಇಂಗ್ಲೆಂಡ್ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳಿಗೆ 246 ರನ್‌ಗಳಿಸಲಷ್ಟೇ ಶಕ್ತವಾಯಿತು. ಇಂಗ್ಲೆಂಡ್‌ ಪರ ಏಕಾಂಗಿ ಹೋರಾಟ ನಡೆಸಿದ ಜಾಕೋಬ್ ಬೆಥೆಲ್ ಸೆಮಿಫೈನಲ್‌ನಲ್ಲಿ ಬೆಥೆಲ್ 48 ಎಸೆತಗಳಲ್ಲಿ 7 ಸಿಕ್ಸರ್‌ಗಳೊಂದಿಗೆ 105 ರನ್​ಗಳ ಇನ್ನಿಂಗ್ಸ್ ಆಡಿದರು. ಆದರೂ ಫಲ ಸಿಗದೇ ತಂಡ ಸೋಲನುಭವಿಸಿ ಭಾರತಕ್ಕೆ ಶರಣಾಯಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+