IND Vs PAK: ಟಿ20 ವಿಶ್ವಕಪ್‌ನಲ್ಲಿ ಭಾರತ-ಪಾಕಿಸ್ತಾನ ನಡುವೆ ಮತ್ತೆ ಹೈವೋಲ್ಟೇಜ್ ಕದನ ಸಾಧ್ಯತೆ: ಇಲ್ಲಿದೆ ವರದಿ
India Vs Pakistan match in T20 World cup: ಟಿ20 ವಿಶ್ವಕಪ್ 2026 ಇದೀಗ ನಿರ್ಣಾಯಕ ಹಂತಕ್ಕೆ ಬಂದು ತಲುಪಿದೆ. ಸೂಪರ್ 8 ಹಂತಕ್ಕೆ ಪ್ರವೇಶಿಸಿರುವ ತಂಡಗಳು ಖಚಿತವಾಗಿದ್ದು, ಪಂದ್ಯಗಳ ವೇಳಾಪಟ್ಟಿಯೂ ಪ್ರಕಟವಾಗಿದೆ. ಇನ್ಮುಂದೆ ನಡೆಯುವ ಪ್ರತಿಯೊಂದು ಪಂದ್ಯವೂ ಮಹತ್ವದ್ದಾಗಿದ್ದು, ನಾಕೌಟ್ ಹಂತ ಪ್ರಮುಖ ತಂಡಗಳಿಗೆ ಕಠಿಣ ಪರೀಕ್ಷೆಯಾಗಲಿದೆ. ಇನ್ನೂ ಭಾರತ-ಪಾಕ್ ಮತ್ತೆ ಮುಖಾಮುಖಿಯಾಗುವ ಸಾಧ್ಯತೆ ಹೆಚ್ಚಿದೆ. ಹೇಗೆ ಅಂತೀರಾ? ಇಲ್ಲಿದೆ ನೋಡಿ ಲೆಕ್ಕಾಚಾರ.
ಇದುವರೆಗೆ ಆಡಿದ ನಾಲ್ಕು ಪಂದ್ಯಗಳಲ್ಲೂ ಜಯ ಸಾಧಿಸಿರುವ ಟೀಂ ಇಂಡಿಯಾ, ಸೂಪರ್ 8 ಹಂತದಲ್ಲಿ ಮೂರು ಬಲಿಷ್ಠ ತಂಡಗಳನ್ನು ಎದುರಿಸಲಿದೆ. ಈ ಹಂತದ ಪ್ರತಿಯೊಂದು ಗೆಲುವು ಸೆಮಿಫೈನಲ್ ದಾರಿಯನ್ನು ಸುಗಮಗೊಳಿಸುವುದರಿಂದ ತಂಡಗಳು ಎಚ್ಚರಿಕೆಯಿಂದ ಆಟ ಆಡಬೇಕಿದೆ. ನಾಕೌಟ್ ಹಂತದಲ್ಲಿ ಭಾರತ-ಪಾಕಿಸ್ತಾನ ತಂಡಗಳು ಎದುರಾಗುವ ಸಾಧ್ಯತೆ ಹೆಚ್ಚಿದೆ. ಈ ಪಂದ್ಯವು ಎರಡೂ ತಂಡಗಳಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗುವ ಸಾಧ್ಯತೆಯಿದ್ದು, ಅಭಿಮಾನಿಗಳಲ್ಲಿ ಭಾರೀ ಕುತೂಹಲ ಕೆರಳಿಸಿದೆ.

ವಿಶ್ವಕಪ್‌ನಲ್ಲಿ ಈಗ ಎಲ್ಲರ ಗಮನವೂ ಸೂಪರ್ 8 ಹಂತದ ಫಲಿತಾಂಶಗಳ ಮೇಲೆ ನೆಟ್ಟಿದೆ. ಟೀಂ ಇಂಡಿಯಾ ಸೂಪರ್ 8ರಲ್ಲಿ ಎದುರಿಸಬೇಕಾದ ಮೂರು ತಂಡಗಳು ಈಗಾಗಲೇ ಖಚಿತವಾಗಿವೆ. ದಕ್ಷಿಣ ಆಫ್ರಿಕಾ, ಜಿಂಬಾಬ್ವೆ ಮತ್ತು ವೆಸ್ಟ್ ಇಂಡೀಸ್ ವಿರುದ್ಧ ಸೂರ್ಯಕುಮಾರ್ ಯಾದವ್ ಪಡೆ ಸೆಣಸಲಿದೆ. ಲೀಗ್ ಹಂತದಲ್ಲಿ ನೆದರ್‌ಲ್ಯಾಂಡ್ ಉತ್ತಮ ಪ್ರದರ್ಶನ ನೀಡಲು ಪ್ರಯತ್ನಿಸಿದರೂ, ಟೀಂ ಇಂಡಿಯಾ ಕೊನೆಗೂ ಜಯ ಸಾಧಿಸಿತು
ಭಾರತ-ಪಾಕ್ ಮುಖಾಮುಖಿ ಮತ್ತೆ ಮುಖಾಮುಖಿ ಸಾಧ್ಯತೆ
ಕೊಲೊಂಬೊದಲ್ಲಿ ನಡೆದ ಲೀಗ್ ಹಂತದಲ್ಲಿ ನಡೆದ ಪಂದ್ಯದಲ್ಲಿ ಪಾಕಿಸ್ತಾನವನ್ನು ಸೋಲಿಸಿ ಭಾರತ ಪ್ರಾಬಲ್ಯ ಸಾಧಿಸಿದೆ. ಮತ್ತೊಮ್ಮ ಇದೇ ತಂಡದ ವಿರುದ್ಧ ಆಡುವ ಸಾಧ್ಯತೆಯಿದ್ದು, ಮತ್ತೆ ಇದೇ ಮರುಕಳಿಸಿದರೂ ಆಶ್ಚರ್ಯವಿಲ್ಲ ಎನ್ನುವ ಮಾತುಗಳು ಕೇಳಿಬರುತ್ತಿವೆ. ಸೂಪರ್ 8 ಹಂತದಲ್ಲಿ ಪಾಕಿಸ್ತಾನ ಇಂಗ್ಲೆಂಡ್, ನ್ಯೂಜಿಲೆಂಡ್ ಮತ್ತು ಶ್ರೀಲಂಕಾ ಬಲಿಷ್ಠ ತಂಡಗಳ ವಿರುದ್ಧ ಆಡಬೇಕಿದೆ. ಮೊದಲ ಎರಡು ಸ್ಥಾನಗಳಲ್ಲಿ ಸ್ಥಾನ ಪಡೆದರೆ ಮಾತ್ರ ಸೆಮಿಫೈನಲ್ ತಲುಪುವ ಅವಕಾಶ ಇರುತ್ತದೆ.
ಆದ್ದರಿಂದ ಈ ಸೂಪರ್ 8 ಪಂದ್ಯಗಳು ಭಾರತ ಹಾಗೂ ಪಾಕಿಸ್ತಾನ ಎರಡೂ ತಂಡಗಳಿಗೂ ಅತ್ಯಂತ ಮಹತ್ವವಾಗಿವೆ. ಇಲ್ಲಿ ಪಾಕಿಸ್ತಾನ ಸತತ ಗೆಲುವು ಸಾಧಿಸಿದರೆ, ಸೆಮಿಫೈನಲ್‌ನಲ್ಲಿ ಮತ್ತೊಮ್ಮೆ ಭಾರತವನ್ನು ಎದುರಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಭಾರತ-ಪಾಕ್ ಮುಖಾಮುಖಿಯ ಲೆಕ್ಕಾಚಾರ
ಆರಂಭದಿಂದಲೂ ಉತ್ತಮ ಪ್ರದರ್ಶನದ ಮೂಲಕ ಗಮನ ಸೆಳೆಯುತ್ತಿರುವ ಟೀಂ ಇಂಡಿಯಾ ಸೂಪರ್ 8ರಲ್ಲಿ ಅಗ್ರಸ್ಥಾನದಲ್ಲೇ ಮುಂದುವರಿಯುವ ಸಾಧ್ಯತೆಯಿದೆ. ನಿರೀಕ್ಷೆಯಂತೆ ಸೂರ್ಯ ಪಡೆ ತಮ್ಮ ಗುಂಪಿನಲ್ಲಿ ನಿರೀಕ್ಷೆಯಂತೆ ಅಗ್ರಸ್ಥಾನದಲ್ಲಿದ್ದರೆ, ಪಾಕಿಸ್ತಾನ ಎರಡನೇ ಸ್ಥಾನ ಪಡೆದರೆ, ಎರಡು ತಂಡಗಳು ಸೆಮಿಫೈನಲ್‌ನಲ್ಲಿ ಮುಖಾಮುಖಿಯಾಗುವ ಸಾಧ್ಯತೆ ಹೆಚ್ಚಿರುತ್ತದೆ.
ಮತ್ತೊಂಡೆ, ಎರಡೂ ತಂಡಗಳು ಸೆಮೀಸ್‌ನಲ್ಲಿ ಬೇರೆ ಬೇರೆ ತಂಡಗಳನ್ನು ಸೋಲಿಸಿ ಫೈನಲ್‌ಗೆ ಪ್ರವೇಶಿಸಿದರೆ, ಆಗ ಭಾರತ - ಪಾಕ್ ನಡುವೆ ನಡೆಯುವ ಪಂದ್ಯ ರಣರೋಚಕವಾಗಿರಲಿದೆ. ಆ ಪಂದ್ಯವು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯುವ ಸಾಧ್ಯತೆಯಿದೆ. ಈ ಎರಡೂ ತಂಡಗಳು ಮುಖಾಮುಖಿಯಾಗುವ ಯಾವುದೇ ಪಂದ್ಯ ಮಾಡು ಇಲ್ಲವೆ ಮಡಿ ಎಂಬಂತಿರುತ್ತಿವೆ. ಈವರೆಗೆ ನಡೆದ ಪಂದ್ಯಗಳಲ್ಲಿ ಭಾರತ ಮೇಲುಗೈ ಸಾಧಿಸಿ ಗಮನ ಸೆಳೆದಿದೆ. ಒಂದು ವೇಳೆ ಈ ಎರಡು ತಂಡಗಳು ಫೈನಲ್‌ನಲ್ಲಿ ಎದುರಾದರೆ, ಆ ಪಂದ್ಯ ಇಡೀ ವಿಶ್ವದ ಗಮನ ಸೆಳೆಯುವುದರಲ್ಲಿ ಎರಡು ಮಾತಿಲ್ಲ. ಇದೀಗ ಸದ್ಯ ಸೂಪರ್ 8 ಹಂತದಲ್ಲಿ ಎರಡು ತಂಡಗಳು ಸಾಧಿಸುವ ಫಲಿತಾಂಶಗಳ ಮೇಲೆ ಕೋಟ್ಯಾಂತರ ಕ್ರಿಕೆಟ್ ಅಭಿಮಾನಿಗಳ ಚಿತ್ತ ನೆಟ್ಟಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications