T20 World Cup 2026: ಫೆಬ್ರವರಿ 7ರಿಂದ ಟಿ20 ವಿಶ್ವಕಪ್ 2026 ಶುರು: ಇಲ್ಲಿದೆ ಭಾರತದ ಪಂದ್ಯಗಳ ವೇಳಾಪಟ್ಟಿ
T20 World Cup 2026: ಫೆಬ್ರವರಿ 7ರ ಶನಿವಾರದಿಂದ ಆರಂಭ ಆಗಲಿರುವ ಟಿ20 ವಿಶ್ವಕಪ್ 2026ಕ್ಕೆ ಟೀಮ್ ಇಂಡಿಯಾ ಭರ್ಜರಿ ಸಿದ್ಧತೆ ನಡೆಸಿದೆ. ಭಾರತ ಮತ್ತು ಶ್ರೀಲಂಕಾ ಸಹ-ಆತಿಥ್ಯ ವಹಿಸಿಕೊಂಡಿರುವ ಈ ಮಹತ್ವದ ಟೂರ್ನಿ ಒಂದು ತಿಂಗಳ ಕಾಲ ನಡೆಯಲಿದೆ. ಹಾಗಾದ್ರೆ ಭಾರತದ ಪಂದ್ಯಗಳ ಸಂಪೂರ್ಣ ವೇಳಾಪಟ್ಟಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ವಿಶ್ವಕಪ್‌ಗೆ ಮುನ್ನ ನಡೆದ ಅಭ್ಯಾಸ ಪಂದ್ಯದಲ್ಲಿ ಭಾರತ, ದಕ್ಷಿಣ ಆಫ್ರಿಕಾ ವಿರುದ್ಧ 30 ರನ್‌ಗಳ ಜಯ ಸಾಧಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ. ಹಾಲಿ ಚಾಂಪಿಯನ್ ಭಾರತ ತಂಡ, 2024ರ ಟಿ20 ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು ಮಣಿಸಿ ಎರಡನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಈ ಬಾರಿ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಕಣಕ್ಕಿಳಿಯುತ್ತಿರುವ ಟೀಮ್ ಇಂಡಿಯಾ, ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಅಮೆರಿಕ ವಿರುದ್ಧ ಮೊದಲ ಪಂದ್ಯ ಆಡಲಿದೆ.

ಎ ಗುಂಪಿನಲ್ಲಿ ಭಾರತ ಪಾಕಿಸ್ತಾನ, ಅಮೆರಿಕ, ನೆದರ್‌ಲ್ಯಾಂಡ್ಸ್ ಮತ್ತು ನಮೀಬಿಯಾ ತಂಡಗಳೊಂದಿಗೆ ಸ್ಥಾನ ಪಡೆದಿದೆ. ಭಾರತದ ಎಲ್ಲಾ ಪಂದ್ಯಗಳು ಸಂಜೆ 7 ಗಂಟೆಗೆ ಆರಂಭ ಆಗಲಿದ್ದು, ಫೆಬ್ರವರಿ 21ರಿಂದ ಸೂಪರ್-8 ಹಂತ ಶುರುವಾಗಲಿದೆ. ಮಾರ್ಚ್ 4 ಮತ್ತು 5ರಂದು ಸೆಮಿಫೈನಲ್ ಪಂದ್ಯಗಳು ನಡೆಯಲಿದ್ದು, ಮಾರ್ಚ್ 8ರಂದು ಚಾಂಪಿಯನ್ ತಂಡ ಯಾವುದು ಎನ್ನುವ ನಿರ್ಧಾರ ಹೊರಬೀಳಲಿದೆ.
ಭಾರತದ ಟಿ-20 ವಿಶ್ವಕಪ್ ಪಂದ್ಯಗಳ ವೇಳಾಪಟ್ಟಿ
* ಫೆಬ್ರವರಿ 7: ಭಾರತ vs ಅಮೆರಿಕ - ವಾಂಖೆಡೆ ಕ್ರೀಡಾಂಗಣ, ಮುಂಬೈ
* ಫೆಬ್ರವರಿ 12: ಭಾರತ vs ನಮೀಬಿಯಾ - ಅರುಣ್ ಜೇಟ್ಲಿ ಕ್ರೀಡಾಂಗಣ, ದೆಹಲಿ
* ಫೆಬ್ರವರಿ 15: ಭಾರತ vs ಪಾಕಿಸ್ತಾನ - ಆರ್. ಪ್ರೇಮದಾಸ ಕ್ರೀಡಾಂಗಣ, ಕೊಲಂಬೊ
* ಫೆಬ್ರವರಿ 18: ಭಾರತ vs ನೆದರ್‌ಲ್ಯಾಂಡ್ಸ್ - ನರೇಂದ್ರ ಮೋದಿ ಕ್ರೀಡಾಂಗಣ, ಅಹಮದಾಬಾದ್
ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಹಾರ್ದಿಕ್ ಪಾಂಡ್ಯ, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಕುಲದೀಪ್ ಯಾದವ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್. ಬಲಿಷ್ಠ ತಂಡವನ್ನು ಹೊಂದಿರುವ ಟೀಂ ಇಂಡಿಯಾ ಈ ಬಾರಿ ಮತ್ತೊಮ್ಮೆ ಚಾಂಪಿಯನ್ ಆಗುವ ಭರವಸೆಯಲ್ಲಿದೆ.
ಹಾಲಿ ಚಾಂಪಿಯನ್ ಭಾರತ ತಂಡ ಮತ್ತೊಮ್ಮೆ ಟ್ರೋಫಿ ಉಳಿಸಿಕೊಳ್ಳುವ ಗುರಿಯೊಂದಿಗೆ ಕಣಕ್ಕಿಳಿಯಲಿದೆ. 2024ರ ಟಿ20 ವಿಶ್ವಕಪ್‌ನಲ್ಲಿ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ಪ್ರಶಸ್ತಿ ಗೆದ್ದಿದ್ದ ಟೀಮ್ ಇಂಡಿಯಾ, ಈ ಬಾರಿ ಸಹ ಚಾಂಪಿಯನ್ ಆಗುವ ನಿರೀಕ್ಷೆ ಇಟ್ಟುಕೊಂಡಿದೆ.
ಟೂರ್ನಿಯಲ್ಲಿ ಲೀಗ್ ಹಂತ, ಸೂಪರ್-8, ಸೆಮಿಫೈನಲ್ ಮತ್ತು ಫೈನಲ್ ಹಂತಗಳು ಇರಲಿದ್ದು, ಪ್ರತಿ ಹಂತದಲ್ಲೂ ತೀವ್ರ ಪೈಪೋಟಿ ಇರಲಿದೆ. ಭಾರತ, ಇಂಗ್ಲೆಂಡ್, ಆಸ್ಟ್ರೇಲಿಯಾ, ದಕ್ಷಿಣ ಆಫ್ರಿಕಾ ಸೇರಿದಂತೆ ಪ್ರಮುಖ ತಂಡಗಳು ಪ್ರಶಸ್ತಿ ರೇಸ್‌ನಲ್ಲಿವೆ ಎನ್ನಲಾಗುತ್ತಿದೆ.
---------
ಕ್ರಿಕೆಟ್ ಬಗ್ಗೆ ನಿಮಗೇನು ಬೇಕೋ ಅದೆಲ್ಲ 'ಮೈಖೇಲ್' ವೆಬ್‌ಸೈಟ್‌ನಲ್ಲಿದೆ
ಕ್ರಿಕೆಟ್ ಆಟವನ್ನು ಲೈವ್ ನೋಡುವುದಷ್ಟೇ ಅಲ್ಲ, ರಿಪೋರ್ಟ್ ಓದುವುದೂ ಸಹ ಅಭಿಮಾನಿಗಳ ಪಾಲಿಗೆ ಸುಖ. ಕನ್ನಡದಲ್ಲಿ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ 'ಮೈಖೇಲ್' ಜಾಲತಾಣದಲ್ಲಿ ಲಭ್ಯ. ಇಲ್ಲಿ ಲೈವ್ ಸ್ಕೋರ್, ಬ್ರೇಕಿಂಗ್ ನ್ಯೂಸ್, ಪಂದ್ಯಗಳ ವೇಳಾಪಟ್ಟಿ, ಮ್ಯಾಚ್ ರಿಪೋರ್ಟ್, ಆಟಗಾರರ ಹೇಳಿಕೆ, ವಿವಾದ, ಗಾಸಿಪ್, ಪ್ರೊಫೈಲ್, ಆಕರ್ಷಕ ಫೋಟೊಗಳು, ಇನ್‌ಫೋಗ್ರಾಫಿಕ್ಸ್ ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಬಯಸುವ ಎಲ್ಲವೂ ಇದೆ. ಕ್ರಿಕೆಟ್ ಬಗ್ಗೇ ಏನೇ ಬೇಕಿದ್ದರೂ 'ಮೈಖೇಲ್' ವೆಬ್‌ಸೈಟ್ ನೋಡಿ. ನೆನಪಿರಲಿ: ಕನ್ನಡದಲ್ಲಿ ಕ್ರಿಕೆಟ್, 'ಮೈಖೇಲ್' ವೆಬ್‌ಸೈಟ್ ಬೆಸ್ಟ್.
ಕ್ರೀಡಾಲೋಕದ ತಾಜಾ ಮಾಹಿತಿಗಾಗಿ ಫೇಸ್‌ಬುಕ್ ಮತ್ತು ಟ್ವಿಟರ್‌ನಲ್ಲೂ ಮೈಖೇಲ್ ಫಾಲೊ ಮಾಡಿ.












Click it and Unblock the Notifications