T20 World Cup: ಇತಿಹಾಸ ನಿರ್ಮಿಸಿದ ಅಫ್ಘಾನಿಸ್ತಾನ ಸೆಮಿಫೈನಲ್‌ಗೆ ಅರ್ಹತೆ, ಆಸೀಸ್‌ಗೆ ನಿರಾಸೆ
ಸೂಪರ್ 8 ಹಂತದ ರೋಚಕ ಪಂದ್ಯದಲ್ಲಿ ಅಫ್ಘಾನಿಸ್ತಾನ ರೋಚಕ ಗೆಲುವು ಸಾಧಿಸಿದೆ.ಟಿ20 ವಿಶ್ವಕಪ್ ಕ್ರಿಕೆಟ್ ಅಫ್ಘಾನಿಸ್ತಾನ ಇತಿಹಾಸ ರಚಿಸಿದೆ. ವೆಸ್ಟ್ ಇಂಡೀಸ್‌ನಲ್ಲಿ ಅಬ್ಬರದ ಆಟವನ್ನು ಆಡಿದ ಆಫ್ಘಾನ್, ಬಾಂಗ್ಲಾದೇಶ ತಂಡವನ್ನು ಮಣಿಸಿ ಇದೇ ಮೊದಲ ಬಾರಿಗೆ ಐಸಿಸಿ ಟೂರ್ನಿಯ ಸೆಮಿಫೈನಲ್ ಹಂತವನ್ನು ಪ್ರವೇಶಿಸಿದೆ. ಈ ಮೂಲಕ ಉಪಾಂತ್ಯವನ್ನು ಪ್ರವೇಶಿಸುವ ಆಸ್ಟ್ರೇಲಿಯಾ ತಂಡದ ಕನಸು ಭಗ್ನಗೊಂಡಿದೆ.
ಟಾಸ್ ಗೆದ್ದ ಅಫ್ಘಾನಿಸ್ತಾನ ಮೊದಲು ಬ್ಯಾಟಿಂಗ್ ಮಾಡಿ 20 ಓವರ್‌ಗಳಲ್ಲಿ 5 ವಿಕೆಟ್ ಗೆ 115 ರನ್ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಬಾಂಗ್ಲಾದೇಶ 105 ರನ್‌ಗಳಿಗೆ ಆಲೌಟ್ ಆಯಿತು.

ಬಾಂಗ್ಲಾದೇಶ ತಂಡ ಈ ಪಂದ್ಯದಲ್ಲಿ 12 ಓವರ್‌ಗಳಲ್ಲಿ ಈ ಪಂದ್ಯವನ್ನು ಗೆದ್ದು ಸೆಮಿಫೈನಲ್ ಪ್ರವೇಶಿಸುವ ಕನಸು ಕಾಣುತ್ತಿತ್ತು. ಆದರೆ ಆಫ್ಘಾನಿಸ್ತಾನ ಬೌಲರ್‌ಗಳು ಅಮೋಘ ಬೌಲಿಂಗ್ ದಾಳಿ ನಡೆಸಿ ಅಬ್ಬರಿಸಿತು. ಅವಶ್ಯಕ ಸಮಯದಲ್ಲಿ ವಿಕೆಟ್‌ಗಳನ್ನು ಪಡೆದ ಅಫ್ಘಾನಿಸ್ತಾನ ಬೌಲರ್‌ಗಳು ಇತಿಹಾಸ ಬರೆದರು.
ಆಸರೆ ಆಗದ ಸ್ಟಾರ್ ಪ್ಲೇಯರ್ಸ್
ಒತ್ತಡದಲ್ಲೇ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾದೇಶ ಪವರ್‌ಪ್ಲೇನಲ್ಲಿ ಪವರ್ ಫುಲ್ ಆಟವನ್ನು ಆಡುವಲ್ಲಿ ವಿಫಲವಾಯಿತು. ತಂಜಿದ್ ಹಸನ್ (0), ನಜ್ಮುಲ್ ಹೊಸೈನ್ ಶಾಂಟೊ (5), ಶಕೀಬ್ ಅಲ್ ಹಸನ್ (0), ರನ್ ಕಲೆ ಹಾಕುವಲ್ಲಿ ವಿಫಲರಾದರು. ಮಧ್ಯಮ ಕ್ರಮಾಂಕದಲ್ಲಿ ಸೌಮ್ಯ ಸರ್ಕಾರ 10, ತೌಹಿದ್ ಹೃದಯೊಯ್ 14 ರನ್ ಸಿಡಿಸಿ ಔಟ್ ಆದರು.
ಭರವಸೆಯ ಆಟಗಾರ ಲಿಟನ್ ದಾಸ್ 49 ಎಸೆತಗಳಲ್ಲಿ 5 ಬೌಂಡರಿ, 1 ಸಿಕ್ಸರ್ ನೆರವಿನಿಂದ ಅಜೇಯ 54 ರನ್ ಸಿಡಿಸಿ ಅಫ್ಘಾನಿಸ್ತಾನ ಬೌಲರ್‌ಗಳನ್ನು ಕಾಡಿದರು. ಆದರೆ ತಂಡಕ್ಕೆ ಜಯದ ಮಾಲೆ ತೊಡಿಸುವಲ್ಲಿ ವಿಫಲರಾದರು.
ರಶೀದ್ ಖಾನ್ ಅಬ್ಬರ
ಅಫ್ಘಾನಿಸ್ತಾನ ತಂಡದ ಸ್ಟಾರ್ ಸ್ಪಿನ್ ಬೌಲರ್ ರಶೀದ್ ಖಾನ್ 23 ರನ್ ನೀಡಿ ನಾಲ್ಕು ವಿಕೆಟ್ ಕಬಳಿಸಿದರು. ವೇಗಿ ನವೀನ್ ಉಲ್ ಹಕ್ ಸಹ ನಾಲ್ಕು ವಿಕೆಟ್ ಪಡೆದು ಮಿಂಚಿದರು.

ಉತ್ತಮ ಜೊತೆಯಾಟ
ಟೂರ್ನಿಯುದ್ದಕ್ಕೂ ಭರ್ಜರಿ ಪ್ರದರ್ಶನ ನೀಡಿರುವ ಅಫ್ಘಾನಿಸ್ತಾನ ತಂಡದ ಆರಂಭಿಕರು, ಬಾಂಗ್ಲಾದೇಶ ವಿರುದ್ಧ ಸೊಗಸಾದ ಪ್ರದರ್ಶನ ನೀಡಿದರು. ರಹಮಾನುಲ್ಲಾ ಗುರ್ಬಾಜ್ ಹಾಗೂ ಇಬ್ರಾಹಿಂ ಜದ್ರಾನ್ ಅಬ್ಬರದ ಜೊತೆಯಾಟದ ಕಾಣಿಕೆಯನ್ನು ನೀಡಿತು. ಈ ಜೋಡಿ ಬಾಂಗ್ಲಾದೇಶ ಬೌಲರ್‌ಗಳನ್ನು ಬೆವರಿಳಿಸಿತು. ಅಲ್ಲದೆ 10.4 ಓವರ್‌ಗಳಲ್ಲಿ 59 ರನ್‌ಗಳ ಜೊತೆಯಾಟದ ಕಾಣಿಕೆ ನೀಡಿತು. ಇನ್ನೋರ್ವ ಆರಂಭಿಕ ಇಬ್ರಾಹಿಂ ಜದ್ರಾನ್ 18 ರನ್ ಸಿಡಿಸಿದರು. ಮಧ್ಯಮ ಕ್ರಮಾಂಕದಲ್ಲಿ ಅಜ್ಮತುಲ್ಲಾ ಒಮರ್ಜಾಯ್ 10 ರನ್‌ಗಳಿಗೆ ಆಟ ಮುಗಿಸಿದರು.
ಬಾಂಗ್ಲಾದೇಶದ ಬೌಲರ್‌ಗಳನ್ನು ಕಾಡಿದ ರಹಮಾನುಲ್ಲಾ ಗುರ್ಬಾಜ್, 3 ಬೌಂಡರಿ, 1 ಸಿಕ್ಸರ್ ಸಹಾಯದಿಂದ 43 ರನ್ ಸಿಡಿಸಿ ಔಟ್ ಆದರು. ಅಫ್ಘಾನಿಸ್ತಾನ ತಂಡದ ಮಿಡ್ಲ್ ಆರ್ಡರ್ ಬ್ಯಾಟರ್‌ಗಳು ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಕೆಳ ಕ್ರಮಾಂಕದಲ್ಲಿ ನಾಯಕ ರಶೀದ್ ಖಾನ್ 10 ಎಸೆತಗಳಲ್ಲಿ 19 ರನ್ ಸಿಡಿಸಿದರು. ಇದರಲ್ಲಿ ಮೂರು ಸಿಕ್ಸರ್ ಸೇರಿವೆ.
ಬಾಂಗ್ಲಾದೇಶದ ಪರ ರಿಶಾದ್ ಹೊಸೈನ್ ಅಮೋಘ ಬೌಲಿಂಗ್ ನಡೆಸಿದರು. ಇವರು 4 ಓವರ್ ಬೌಲಿಂಗ್ ನಡೆಸಿ 26 ರನ್ ನೀಡಿ ಮೂರು ವಿಕೆಟ್ ಕಬಳಿಸಿದರು. ಉಳಿದಂತೆ ತಸ್ಕಿನ್ ಅಹ್ಮದ್, ಮುಸ್ತಾಫಿಜುರ್ ರಹಮಾನ್ ತಲಾ ಒಂದು ವಿಕೆಟ್ ಕಬಳಿಸಿದರು.
ದಕ್ಷಿಣ ಆಫ್ರಿಕಾ ವಿರುದ್ಧ ಆಫ್ಘಾನ್
ಬಾಂಗ್ಲಾದೇಶ ವಿರುದ್ಧ ಅಮೋಘ ಜಯ ಸಾಧಿಸಿದ ಅಫ್ಘಾನಿಸ್ತಾನ ಸೆಮಿಫೈನಲ್ ಹಂತವನ್ನು ಪ್ರವೇಶಿಸಿತು. ಸೂಪರ್ 8 ಹಂತದ ಪಂದ್ಯದಲ್ಲಿ ಎರಡೂ ಪಂದ್ಯಗಳಲ್ಲಿ ಜಯ ಸಾಧಿಸಿರುವ ಆಫ್ಘಾನ್, ಇತಿಹಾಸ ನಿರ್ಮಿಸಿದೆ. ಐಸಿಸಿ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಅಫ್ಘಾನಿಸ್ತಾನ ದಾಖಲೆ ನಿರ್ಮಿಸಿದೆ. ಸೆಮಿಫೈನಲ್ ಪಂದ್ಯದಲ್ಲಿ ಆಫ್ಘಾನ್, ದಕ್ಷಿಣ ಆಫ್ರಿಕಾ ವಿರುದ್ಧ ಕಾದಾಟ ನಡೆಸಲಿದೆ.












Click it and Unblock the Notifications