'ಇದು ಬೆಂಗಳೂರು ಪಿಚ್ ಅಲ್ಲ' ವಿರಾಟ್ ಪ್ರದರ್ಶನದ ವಿರುದ್ಧ ಪಾಕ್ ಮಾಜಿ ನಾಯಕ ಕಿಡಿ
ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಸದ್ಯ ಟಿ20 ವಿಶ್ವಕಪ್‌ನಲ್ಲಿ ಆಡುತ್ತಿದ್ದಾರೆ. ಅಮೆರಿಕ ಹಾಗೂ ವೆಸ್ಟ್ ಇಂಡೀಸ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್‌ನಲ್ಲಿ ವಿರಾಟ್ ರನ್ ಕಲೆ ಹಾಕುವಲ್ಲಿ ವಿಫಲರಾಗುತ್ತಿದ್ದಾರೆ. ಈ ಬಗ್ಗೆ ಹಲವು ಜನ ಬೇರೆ ಬೇರೆ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಆದರೆ ಪಾಕ್ ಮಾಜಿ ನಾಯಕ ತನ್ನದೇ ಧಾಟಿಯಲ್ಲಿ ಕಿಡಿ ಕಾರಿದ್ದಾರೆ.
ವಿರಾಟ್ ಕೊಹ್ಲಿ, ಈ ವಿಶ್ವಕಪ್‌ನಲ್ಲಿ ಒಂದೇ ಒಂದು ಅರ್ಧಶತಕ ಬಾರಿಸಿಲ್ಲ ಎನ್ನುವುದು ಸತ್ಯ. ಅವರು ರನ್ ಕಲೆ ಹಾಕಲು ಪರದಾಡುತ್ತಿದ್ದಾರೆ ನಿಜ. ಆದರೆ ಅವರ ಫಾರ್ಮ್ ಯಾವಗಲಾದರೂ ಕೈ ಹಿಡಿಯಬಹುದು. ಈ ಬಗ್ಗೆ ಅಭಿಮಾನಿಗಳು ಹಾಗೂ ಸ್ವತಃ ತಂಡದ ನಾಯಕ ರೋಹಿತ್ ಶರ್ಮಾ ಅವರಿಗೆ ಅಪಾರವಾದ ನಂಬಿಕೆ ಇದೆ. ಅಂದಹಾಗೆ ವಿರಾಟ್ ಕೊಹ್ಲಿ ಅವರ ಬಗ್ಗೆ ರೋಹಿತ್ ಶರ್ಮಾ ಅವರಿಗೆ ಒಂದು ಪ್ರಶ್ನೆ ಕೇಳಿದಾಗ ಅವರು ನೀಡಿದ ಉತ್ತರ ಸೊಗಸಾಗಿತ್ತು.

ರೋಹಿತ್ ಹೇಳಿದ್ದೇನು?
ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿತು. ಬಳಿಕ ನಾಯಕರನ್ನು ಸಂದರ್ಶಿಸುವಾಗ ವಿರಾಟ್ ಕೊಹ್ಲಿ ಫಾರ್ಮ್ ಬಗ್ಗೆ ಪ್ರಶ್ನೆ ಕೇಳಿದಾಗ, ರೋಹಿತ್ ಅವರು ಫೈನಲ್‌ಗಾಗಿ ಫಾರ್ಮ್ ಕಾಯ್ದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಟೀಮ್ ಇಂಡಿಯಾ ವಿರಾಟ್ ಕೊಹ್ಲಿ ಅವರ ಪ್ರದರ್ಶನ ಮಹತ್ವದಾಗಿದೆ. ಆದರೆ ವಿರಾಟ್ ಕೊಹ್ಲಿ ಅವರು ರನ್ ಬಾರಿಸದೇ ಇದ್ದಾಗಲೂ ಟೀಮ್ ಇಂಡಿಯಾ ಗೆಲ್ಲುತ್ತಿದೆ. ವಿರಾಟ್ ಕೊಹ್ಲಿ, ಈ ಬಾರಿ ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದಿದ್ದಾರೆ. ಇದಕ್ಕೆ ಹಲವು ಟೀಕೆಗಳು ವ್ಯಕ್ತವಾಗಿದೆ. ಪಾಕ್ ತಂಡದ ಮಾಜಿ ನಾಯಕ ಸಹ ಕಿಡಿಕಾರಿದ್ದಾರೆ.

ರಶೀದ್ ಹೀಗೆ ಹೇಳಿದ್ದೇಕೆ?
ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 9 ಎಸೆತಗಳಲ್ಲಿ ಕೇವಲ 9 ರನ್ ಗಳಿಸಿ ರೀಸ್ ಟೋಪ್ಲಿ ಎಸೆತದಲ್ಲಿ ಬೌಲ್ಡ್ ಆದರು. ಕೊಹ್ಲಿ ಕಳಪೆ ಫಾರ್ಮ್ ಬಗ್ಗೆ ಪಾಕಿಸ್ತಾನದ ಮಾಜಿ ನಾಯಕ ರಶೀದ್ ಲತೀಫ್ ಕಿಡಿಕಾರಿದ್ದಾರೆ. ಇದು ಬೆಂಗಳೂರಿನ ಪಿಚ್ ಅಲ್ಲ ಎಂದಿದ್ದಾರೆ.
ವಿರಾಟ್ ಕೊಹ್ಲಿ ಔಟ್ ಆಫ್ ಫಾರ್ಮ್‌ನಲ್ಲಿದ್ದಾರೆ. ಇದು ಬೆಂಗಳೂರಿನ ಎಂ ಚಿನ್ನಸ್ವಾಮಿ ಪಿಚ್ ಅಲ್ಲ. ಇದು ವಿಭಿನ್ನ ರೀತಿಯ ಪಿಚ್. ಈ ಪಿಚ್‌ಗಳಲ್ಲಿ ಚೆಂಡು ಪಿಚ್ ಆದಮೇಲೆ ಬ್ಯಾಟ್‌ಗೆ ಸುಲಭವಾಗಿ ಸಿಗುವುದಿಲ್ಲ. ಈ ಪಿಚ್‌ಗಳಲ್ಲಿ ದೊಡ್ಡ ಇನ್ನಿಂಗ್ಸ್ ಆಡುವುದು ಸುಲಭದ ಮಾತಲ್ಲ. ಒಟ್ಟಾರೆ ತಂಡ ಈ ಪಿಚ್‌ಗಳ ಮೇಲೆ 171 ರನ್ ಸೇರಿಸುವುದು ಸುಲಭವಲ್ಲ. ನಿಜಕ್ಕೂ ಈ ಪಿಚ್‌ಗಳಲ್ಲಿ ಬ್ಯಾಟ್ಸ್‌ಮನ್‌ಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದಿದ್ದಾರೆ.
ಇನ್ನು ರೋಹಿತ್ ಶರ್ಮಾ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದರು. ಈ ಪಿಚ್‌ನಲ್ಲಿ ಬ್ಯಾಟ್ ಮಾಡುವುದು ಕಷ್ಟ. ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆ ಆಗಿದೆ. ವಿರಾಟ್ ಕೊಹ್ಲಿ ಬ್ಯಾಟ್ ಮಾಡಲು ಬಂದಾಗ ಇದು ಕಂಡಿತು. ಆರಂಭದಲ್ಲಿ ಈ ಪಿಚ್‌ಗಳ ಮೇಲೆ ಬ್ಯಾಟರ್ ಎಚ್ಚರಿಕೆಯಿಂದ ಆಡಬೇಕು ಎಂದು ತಿಳಿಸಿದ್ದಾರೆ.
ಶನಿವಾರ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಹಾಗೂ ದಕ್ಷಿಣ ಆಫ್ರಿಕಾ ತಂಡದ ವಿರುದ್ಧ ಸೆಣಸಾಟ ನಡೆಸಲಿದೆ. ಈ ಬಾರಿ ಪ್ರಶಸ್ತಿಯನ್ನು ಗೆದ್ದು ಟ್ರೋಫಿ ಬರವನ್ನು ನೀಗಿಸಿಕೊಳ್ಳುವ ಕನಸು ಟೀಮ್ ಇಂಡಿಯಾದ್ದಾಗಿದೆ.












Click it and Unblock the Notifications