T20 World Cup; ಪಂತ್, ಪಾಂಡ್ಯ ಅಬ್ಬರ: ಅಭ್ಯಾಸ ಪಂದ್ಯದಲ್ಲೇ ಭರ್ಜರಿ ಗೆಲುವು ಸಾಧಿಸಿದ ಭಾರತ

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಅಭ್ಯಾಸ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶದ ವಿರುದ್ಧ 62 ರನ್‌ಗಳ ಬೃಹತ್ ಗೆಲುವು ಸಾಧಿಸಿದೆ. ಈ ಮೂಲಕ ಮೆಗಾ ಪಂದ್ಯಾವಳಿಗೆ ತಾನು ಸಿದ್ಧ ಎನ್ನುವ ಸಂದೇಶ ರವಾನಿಸಿದೆ.

ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿತು. ತಂಡ ಸೇರಿಕೊಂಡಿರುವ ವಿರಾಟ್ ಕೊಹ್ಲಿ ಅಭ್ಯಾಸ ಪಂದ್ಯದಿಂದ ಹೊರಗುಳಿದರು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು 182 ರನ್ ಗಳಿಸಿತು.

T20 World Cup India Defeated Bangladesh by Runs In Practice Match

ಕೊಹ್ಲಿ ಅನುಪಸ್ಥಿತಿಯಲ್ಲಿ ರೋಹಿತ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಿದ ಸಂಜು ಸ್ಯಾಮ್ಸನ್ 6 ಎಸೆತಗಳಲ್ಲಿ ಕೇವಲ 1 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ನಾಯಕ ರೋಹಿತ್ ಶರ್ಮಾ 19 ಎಸೆತಗಳಲ್ಲಿ 23 ರನ್ ಗಳಿಸಿದರು.

ಬಳಿಕ ಜೊತೆಯಾದ ರಿಷಬ್ ಪಂತ್ ಮತ್ತು ಸೂರ್ಯಕುಮಾರ್ ಯಾದವ್ ಬಿರುಸಿನ ಬ್ಯಾಟಿಂಗ್ ಮಾಡಿದರು. ರಿಷಬ್ ಪಂತ್ 32 ಎಸೆತಗಳಲ್ಲಿ 4 ಬೌಂಡರಿ 4 ಸಿಕ್ಸರ್ ಸಹಿತ 53 ರನ್ ಗಳಿಸಿ ರಿಟೈರ್ಡ್ ಹರ್ಟ್ ಆದರು. ಸೂರ್ಯಕುಮಾರ್ ಯಾದವ್ 18 ಎಸೆತಗಳಲ್ಲಿ 31 ರನ್ ಗಳಿಸಿದರು.

ಶಿವಮ್ ದುಬೆ 16 ಎಸೆತಗಳಲ್ಲಿ 14 ರನ್ ಗಳಿಸಿದರೆ, ಹಾರ್ದಿಕ್ ಪಾಂಡ್ಯ 23 ಎಸೆತಗಳಲ್ಲಿ 2 ಬೌಂಡರಿ 4 ಭರ್ಜರಿ ಸಿಕ್ಸರ್ ಸಹಿತ ಅಜೇಯ 40 ರನ್ ಗಳಿಸಿದರು.

ಮಾರಕ ಬೌಲಿಂಗ್ ದಾಳಿ

183 ರನ್‌ಗಳ ಬೃಹತ್ ಗುರಿ ಬೆನ್ನತ್ತಿದ ಬಾಂಗ್ಲಾದೇಶ ಭಾರತದ ಮಾರಕ ಬೌಲಿಂಗ್ ದಾಳಿಗೆ ತತ್ತರಿಸಿತು. ಆರಂಭದಲ್ಲೇ ಎರಡು ವಿಕೆಟ್ ಪಡೆದ ಅರ್ಷದೀಪ್ ಸಿಂಗ್ ಬಾಂಗ್ಲಾದೇಶಕ್ಕೆ ಆಘಾತ ನೀಡಿದರು. 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು ಕೇವಲ 122 ರನ್ ಗಳಿಸಿದ ಬಾಂಗ್ಲಾದೇಶ ಸೋಲೊಪ್ಪಿಕೊಂಡಿತು.

ಅರ್ಷದೀಪ್ ಸಿಂಗ್ ಮತ್ತು ಶಿವಂ ದುಬೆ ತಲಾ 2 ವಿಕೆಟ್ ಪಡೆದರೆ. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್ ತಲಾ ಒಂದು ವಿಕೆಟ್ ಪಡೆದರು.

ಜೂನ್ 5 ರಂದು ಐರ್ಲೆಂಡ್ ವಿರುದ್ಧ ಸೆಣೆಸುವ ಮೂಲಕ ಭಾರತ ಟಿ20 ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ನ್ಯೂಯಾರ್ಕ್‌ನ ಇದೇ ಮೈದಾನದಲ್ಲಿ ಆ ಪಂದ್ಯ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+