T20 World Cup: ಭಾರತ vs ಬಾಂಗ್ಲಾದೇಶದ ಅಭ್ಯಾಸ ಪಂದ್ಯ; ಸಮಯ, ಲೈವ್ ಸ್ಟ್ರೀಮಿಂಗ್
ಟಿ20 ವಿಶ್ವಕಪ್ ಅಭಿಯಾನ ಆರಂಭಕ್ಕೆ ಮುನ್ನ ಭಾರತ ತಂಡ ಅಭ್ಯಾಸ ಪಂದ್ಯ ಆಡಲು ಸಜ್ಜಾಗಿದೆ. ಟಿ20 ವಿಶ್ವಕಪ್‌ನ ಕೊನೆಯ ಅಭ್ಯಾಸ ಪಂದ್ಯದಲ್ಲಿ ಭಾರತ ಬಾಂಗ್ಲಾದೇಶ ಸೆಣೆಸಲಿವೆ.
ನ್ಯೂಯಾರ್ಕ್‌ನ ನಸ್ಸು ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನದಲ್ಲಿ ಈ ಅಭ್ಯಾಸ ಪಂದ್ಯ ನಡೆಯಲಿದೆ. ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ (ಸ್ಥಳೀಯ ಕಾಲಮಾನ ಬೆಳಗ್ಗೆ 10.30ಕ್ಕೆ) ಪಂದ್ಯ ಆರಂಭವಾಗಲಿದೆ.

ಅಭ್ಯಾಸ ಪಂದ್ಯಕ್ಕೆ ಮುನ್ನ ವಿರಾಟ್ ಕೊಹ್ಲಿ ಭಾರತ ತಂಡವನ್ನು ಸೇರಿಕೊಂಡಿದ್ದಾರೆ. ಆದರೆ ಅಭ್ಯಾಸ ಪಂದ್ಯದಲ್ಲಿ ಅವರು ಆಡುತ್ತಾರಾ ಇಲ್ಲವಾ ಎನ್ನುವುದು ಇನ್ನೂ ಖಚಿತವಾಗಿಲ್ಲ. ಉಳಿದ ಭಾರತ ತಂಡದ ಆಟಗಾರರು ಅಭ್ಯಾಸ ಪಂದ್ಯದಲ್ಲಿ ಕಣಕ್ಕಿಳಿಯುವುದು ಖಚಿತವಾಗಿದೆ.
ಅಭ್ಯಾಸ ಪಂದ್ಯಕ್ಕೆ ಮಳೆ ಅಡ್ಡಿ?
ಈಗಾಗಲೇ ಹಲವು ಅಭ್ಯಾಸ ಪಂದ್ಯಗಳು ಮಳೆಯಿಂದ ರದ್ದಾಗಿವೆ. ಆದರೆ ಇಂದಿನ ಪಂದ್ಯಕ್ಕೆ ಮಳೆ ತೊಂದರೆ ಕೊಡುವುದಿಲ್ಲ. ನ್ಯೂಯಾರ್ಕ್‌ನಲ್ಲಿ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ಇದ್ದರೆ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ.
ಪಿಚ್ ವರದಿ
ಟಿ20 ವಿಶ್ವಕಪ್ ಪಂದ್ಯಾವಳಿಗಾಗಿಯೇ ನಸ್ಸು ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಮೈದಾನವನ್ನು ನಿರ್ಮಾಣ ಮಾಡಲಾಗಿದ್ದು, ಆಸ್ಟ್ರೇಲಿಯಾದಿಂದ ತಂದಿರುವ ಪಿಚ್‌ಗಳನ್ನು ಮೈದಾನದಲ್ಲಿ ಹಾಕಲಾಗಿದೆ. ಮೊದಲು ಬ್ಯಾಟಿಂಗ್ ಮಾಡುವ ತಂಡಕ್ಕೆ ಪಿಚ್ ನೆರವಾಗಲಿದ್ದು, ಪಂದ್ಯ ನಡೆದಂತೆ ಸ್ಪಿನ್ ಬೌಲರ್ ಗಳಿಗೆ ಹೆಚ್ಚಿನ ನೆರವು ನೀಡುವ ಸಾಧ್ಯತೆ ಇದೆ.
ಟಿ20 ವಿಶ್ವಕಪ್‌ಗೆ ಭಾರತ, ಬಾಂಗ್ಲಾದೇಶ ತಂಡಗಳು
ಭಾರತ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಶದೀಪ್ ಸಿಂಗ್ , ಯುಜ್ವೇಂದ್ರ ಚಾಹಲ್
ಬಾಂಗ್ಲಾದೇಶ ತಂಡ: ಲಿಟ್ಟನ್ ದಾಸ್, ಸೌಮ್ಯ ಸರ್ಕಾರ್, ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತೌಹಿದ್ ಹೃದೋಯ್, ಶಕೀಬ್ ಅಲ್ ಹಸನ್, ಮಹಮ್ಮದುಲ್ಲಾ, ಜಾಕರ್ ಅಲಿ (ವಿಕೆಟ್ ಕೀಪರ್), ಮಹೇದಿ ಹಸನ್, ರಿಶಾದ್ ಹೊಸೈನ್, ತಸ್ಕಿನ್ ಅಹ್ಮದ್, ಮುಸ್ತಫಿಜುರ್ ರಹಮಾನ್, ಶೊರಿಫುಲ್ ಇಸ್ಲಾಂ, ತಂಝಿದ್ ಇಸ್ಲಾಮ್, ತಂಜಿಮ್ ಹಸನ್ ಸಾಕಿಬ್, ತನ್ವೀರ್ ಇಸ್ಲಾಂ.












Click it and Unblock the Notifications