India vs Ireland: ಆರ್‌ಸಿಬಿ ಸ್ಟಾರ್ ಆಟಗಾರನಿಗೆ ಇಲ್ಲ ಅವಕಾಶ! ಮೊದಲ ಪಂದ್ಯಕ್ಕೆ ಹೀಗಿರಲಿದೆ ಭಾರತ ತಂಡ

ಟಿ20 ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿರುವ ಭಾರತ, ತನ್ನ ಮೊದಲ ಪಂದ್ಯದಲ್ಲಿ ಐರ್ಲೆಂಡ್ ತಂಡವನ್ನು ಎದುರಿಸಲಿದ್ದು, ಗೆಲುವಿನ ಮೂಲಕ ವಿಶ್ವಕಪ್ ಅಭಿಯಾನ ಆರಂಭಿಸಲು ಸಜ್ಜಾಗಿದೆ.

ಅಭ್ಯಾಸ ಪಂದ್ಯದಲ್ಲಿ ಬಾಂಗ್ಲಾದೇಶದ ವಿರುದ್ಧ ಭರ್ಜರಿ ಗೆಲುವು ಸಾಧಿಸಿರುವ ಭಾರತ ಆತ್ಮವಿಶ್ವಾಸದಿಂದಲೇ ಮೊದಲ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಅಭ್ಯಾಸ ಪಂದ್ಯ ಆಡದೇ ಇದ್ದರೂ, ವಿರಾಟ್ ಕೊಹ್ಲಿ ಮೊದಲ ಪಂದ್ಯವನ್ನಾಡಲು ಸಜ್ಜಾಗಿದ್ದಾರೆ.

T20 World Cup India vs Ireland Samson Siraj out India playing xi pitch report

ಮೊದಲ ಪಂದ್ಯದಲ್ಲಿ ಭಾರತ ತಂಡದ ಪ್ಲೇಯಿಂಗ್ 11 ಹೇಗಿರಲಿದೆ ಎನ್ನುವುದು ಕುತೂಹಲಕಾರಿಯಾಗಿದೆ. ನಾಯಕ ರೋಹಿತ್ ಶರ್ಮಾ, ಪಿಚ್ ನೋಡಿಕೊಂಡು ಪ್ಲೇಯಿಂಗ್ 11 ಆಯ್ಕೆ ಮಾಡುವ ಸಾಧ್ಯತೆ ಇದೆ. ಬಾಂಗ್ಲಾದೇಶದ ವಿರುದ್ಧ ಈಗಾಗಲೇ ಪಂದ್ಯ ಆಡಿರುವ ಕಾರಣ ರೋಹಿತ್ ಶರ್ಮಾ ಮತ್ತೊ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಪ್ಲೇಯಿಂಗ್ 11 ಆಯ್ಕೆ ಮಾಡುವುದು ಸುಲಭವಾಗಲಿದೆ.

ಸಿರಾಜ್‌ಗೆ ಇಲ್ಲ ಅವಕಾಶ!

ಹಾರ್ದಿಕ್ ಪಾಂಡ್ಯ ಮತ್ತು ಶಿವಂ ದುಬೆ ಆಲ್‌ರೌಂಡರ್ ಆಗಿರುವ ಕಾರಣ. ಇಬ್ಬರು ವೇಗದ ಬೌಲರ್ ಗಳಿಗೆ ಮಾತ್ರ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಅವಕಾಶ ಸಿಗಲಿದೆ. ಜಸ್ಪ್ರೀತ್ ಬುಮ್ರಾ ಸ್ಥಾನ ಖಚಿತವಾಗಿದ್ದು ಉಳಿದ ಒಂದು ಸ್ಥಾನಕ್ಕೆ ಅರ್ಷದೀಪ್ ಸಿಂಗ್ ಮತ್ತು ಮೊಹಮ್ಮದ್ ಸಿರಾಜ್ ನಡುವೆ ಪೈಪೋಟಿ ಇರಲಿದೆ. ಬಾಂಗ್ಲಾದೇಶದ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದು, ಐರ್ಲೆಂಡ್ ವಿರುದ್ಧ ಸಿರಾಜ್ ಬದಲು ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಾಗಿದೆ.

ಸಂಜು ಸ್ಯಾಮ್ಸನ್‌ ಕೂಡ ಹೊರಗೆ?

ಬಾಂಗ್ಲಾದೇಶದ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಸಂಜು ಸ್ಯಾಮ್ಸನ್ 1 ರನ್ ಗಳಿಸಿ ಔಟಾದರು. ವಿರಾಟ್ ಕೊಹ್ಲಿ ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಕಾರಣ ಸಂಜು ಸ್ಯಾಮ್ಸನ್ ಕೂಡ ಬೆಂಚ್ ಕಾಯಬೇಕಾಗುತ್ತದೆ.

ಪಾಕಿಸ್ತಾನದ ವಿರುದ್ಧದ ಪಂದ್ಯಕ್ಕೆ ತಂಡ ಸಜ್ಜಾಗುವುದು ಮುಖ್ಯವಾಗಿದ್ದು, ಐರ್ಲೆಂಡ್ ವಿರುದ್ಧ ದೊಡ್ಡ ಅಂತರದಲ್ಲಿ ಗೆದ್ದರೆ ಭಾರತ ತಂಡದ ಆತ್ಮವಿಶ್ವಾಸ ಹೆಚ್ಚಲಿದೆ.

ಪಂದ್ಯ ಯಾವಾಗ?

ಜೂನ್ 5ರಂದು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ (ಸ್ಥಳೀಯ ಕಾಲಮಾನ ಬೆಳಗ್ಗೆ 10.30ಕ್ಕೆ) ಈ ಪಂದ್ಯ ಆರಂಭವಾಗಲಿದೆ. ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.

ಭಾರತ ತಂಡದ ಪ್ಲೇಯಿಂಗ್ 11

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+