ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

T20 ವಿಶ್ವಕಪ್ 2022: ಭಾರತ-ಪಾಕಿಸ್ತಾನ ಪಂದ್ಯಕ್ಕೆ ಮೋಡ ಕವಿದ ವಾತಾವರಣ, ಪಂದ್ಯ ರದ್ದಾಗುತ್ತದೆಯೇ?

|
Google Oneindia Kannada News

ಮೆಲ್ಬೋರ್ನ್‌, ಅಕ್ಟೋಬರ್ 15: ಈಗ ಟಿ-20 ವಿಶ್ವಕಪ್ ಆರಂಭಕ್ಕೆ ಕೆಲವೇ ದಿನಗಳು ಉಳಿದಿವೆ. ಎಲ್ಲಾ ತಂಡಗಳು ವಿಶ್ವಕಪ್ ತಯಾರಿಯಲ್ಲಿ ನಿರತವಾಗಿವೆ. ಈ ವರ್ಷದ ವಿಶ್ವಕಪ್ ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ವಿಶ್ವಕಪ್‌ನ ಅತಿ ದೊಡ್ಡ ಪಂದ್ಯ ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿದೆ. ಕ್ರಿಕೆಟ್ ಪ್ರೇಮಿಗಳೆಲ್ಲ ಈ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ. ಉಭಯ ತಂಡಗಳ ನಡುವಿನ ಪಂದ್ಯ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿದೆ. ಈ ಪಂದ್ಯ ಅಕ್ಟೋಬರ್ 23 ರಂದು ನಡೆಯಲಿದೆ. ಆದರೆ ಈ ಪಂದ್ಯ ನಡೆಯುವ ಸಾಧ್ಯತೆ ಕಡಿಮೆ ಇದೆ.

ಹೌದು, ವಿಶ್ವಕಪ್‌ನ ವೇಳಾಪಟ್ಟಿಯ ಪ್ರಕಾರ, ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಪಂದ್ಯವು ಮೆಲ್ಬೋರ್ನ್‌ನಲ್ಲಿ ಅಕ್ಟೋಬರ್ 23 ರಂದು ನಡೆಯಲಿದೆ. ಆದರೆ ಅಕ್ಟೋಬರ್ 23 ರಂದು, ಮೆಲ್ಬೋರ್ನ್‌ನಲ್ಲಿ ಮಳೆಯು ಪಂದ್ಯಕ್ಕೆ ಅಡ್ಡಿಯಾಗಬಹುದು. ಹವಾಮಾನ ಮುನ್ಸೂಚನೆಯ ಪ್ರಕಾರ, ಮೆಲ್ಬೋರ್ನ್‌ನಲ್ಲಿ ಅಕ್ಟೋಬರ್ 20ರಿಂದ ಅಕ್ಟೋಬರ್ 28ರವರೆಗೆ ಮಳೆಯಾಗುವ ಸಾಧ್ಯತೆಯಿದೆ. ಹೀಗಿರುವಾಗ ಈ ಪಂದ್ಯಕ್ಕಾಗಿ ಕಾತರದಿಂದ ಕಾಯುತ್ತಿರುವ ಕ್ರಿಕೆಟ್ ಪ್ರೇಮಿಗಳೆಲ್ಲರ ಎದೆಯೂ ಛಿದ್ರವಾಗಬಹುದು. ಹವಾಮಾನ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 23ರಂದು ಶೇ.60 ರಷ್ಟು ಮಳೆಯಾಗುವ ಸಾಧ್ಯತೆಯಿದೆ. ಇದೇ ಸಮಯದಲ್ಲಿ ಕನಿಷ್ಠ ತಾಪಮಾನವು 12 ಡಿಗ್ರಿ ಮತ್ತು ಗರಿಷ್ಠ ತಾಪಮಾನವು 19 ಡಿಗ್ರಿಗಳಿಗೆ ಏರುವ ನಿರೀಕ್ಷೆಯಿದೆ.

T20 World Cup: India vs Pakistan at MCG to be washed out? Early weather prediction sends warning signals

ಕೋಟ್ಯಂತರ ಕ್ರಿಕೆಟ್‌ ಅಭಿಮಾನಿಗಳ ಬೇಸರ
ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕಾಗಿ ವಿಶ್ವದಾದ್ಯಂತ ಕ್ರಿಕೆಟ್ ಪ್ರೇಮಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ವರ್ಷ ಏಷ್ಯಾಕಪ್‌ನಲ್ಲಿ ಉಭಯ ತಂಡಗಳ ನಡುವೆ ಪಂದ್ಯ ನಡೆದಿತ್ತು. ಎರಡೂ ತಂಡಗಳು ಒಟ್ಟು ಎರಡು ಪಂದ್ಯಗಳನ್ನು ಆಡಿದ್ದವು. ಅದರಲ್ಲಿ ಭಾರತ ಮತ್ತು ಒಂದು ಪಂದ್ಯವನ್ನು ಪಾಕಿಸ್ತಾನ ಗೆದ್ದಿತ್ತು. ಕಳೆದ ವರ್ಷ ಟಿ20 ವಿಶ್ವಕಪ್‌ನಲ್ಲಿ ಪಾಕಿಸ್ತಾನದ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತೀಯ ಅಭಿಮಾನಿಗಳು ಕಾಯುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ, ಅಂತಹ ವಾತಾವರಣದ ಮನಸ್ಥಿತಿಯು ಕೋಟ್ಯಂತರ ಅಭಿಮಾನಿಗಳ ಹೃದಯವನ್ನು ಬೇಸರ ಮೂಡಿಸಬಹುದು. ಕಳೆದ ವಿಶ್ವಕಪ್‌ನಲ್ಲಿ ಭಾರತವನ್ನು ಪಾಕಿಸ್ತಾನ 10 ವಿಕೆಟ್‌ಗಳಿಂದ ಸೋಲಿಸಿತ್ತು. ಭಾರತ ಮತ್ತು ಪಾಕಿಸ್ತಾನ ನಡುವಿನ ಈ ಅಮೋಘ ಪಂದ್ಯದ ಎಲ್ಲಾ ಟಿಕೆಟ್‌ಗಳು ಈಗಾಗಲೇ ಸೋಲ್ಡ್ ಔಟ್ ಆಗಿವೆ.

T20 World Cup: India vs Pakistan at MCG to be washed out? Early weather prediction sends warning signals

ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ-20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಒಟ್ಟು 11 ಪಂದ್ಯಗಳು ನಡೆದಿವೆ. ಇದರಲ್ಲಿ 8 ಪಂದ್ಯಗಳನ್ನು ಭಾರತ ಗೆದ್ದಿದೆ. 3 ಪಂದ್ಯಗಳನ್ನು ಪಾಕಿಸ್ತಾನ ಗೆದ್ದುಕೊಂಡಿದೆ. ಆದರೆ, ಟಿ20ಯಲ್ಲಿ ಭಾರತವೇ ಮೇಲುಗೈ ಸಾಧಿಸಿದೆ. ಆದರೆ ಕಳೆದ ವಿಶ್ವಕಪ್‌ನಲ್ಲಿನ ಸೋಲಿನಿಂದಾಗಿ ಪಾಕಿಸ್ತಾನವನ್ನು ಹಗುರವಾಗಿ ಪರಿಗಣಿಸುವ ತಪ್ಪನ್ನು ಭಾರತ ಮಾಡುವುದಿಲ್ಲ.

English summary
T20 World Cup: India vs Pakistan at MCG to be washed out? Early weather prediction sends warning signals Read more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X