T20 World Cup: ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ: ಕನ್ನಡಿಗರಿಗೆ ಇಲ್ಲ ಸ್ಥಾನ

ಟಿ20 ವಿಶ್ವಕಪ್‌ಗೆ ಟೀಮ್ ಇಂಡಿಯವನ್ನು ಪ್ರಕಟಿಸಲಾಗಿದೆ. ವೆಸ್ಟ್‌ ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆಯಲಿರುವ ವಿಶ್ವಕಪ್‌ಗೆ ಭಾರತ ತಂಡವನ್ನು ನಿರೀಕ್ಷೆಯಂತೆ ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಉಪನಾಯಕನ ಸ್ಥಾನವನ್ನು ಹಾರ್ದಿಕ್ ಪಾಂಡ್ಯ ಅವರಿಗೆ ನೀಡಲಾಗಿದೆ. ಪ್ರಕಟಿತ ತಂಡದಲ್ಲಿ ಕನ್ನಡಿಗರಿಗೆ ಸ್ಥಾನ ಲಭಿಸಿಲ್ಲ.

ಬಹು ನಿರೀಕ್ಷಿತ ತಂಡದಲ್ಲಿ ವಿಕೆಟ್‌ ಕೀಪರ್‌ ಆಗಿ ಯಾರು ಕಾಣಿಸಿಕೊಳ್ಳಲಿದ್ದಾರೆ ಎಂಬುದೇ ದೊಡ್ಡ ಪ್ರಶ್ನೆ ಆಗಿತ್ತು. ಈ ಪ್ರಶ್ನೆಗೆ ಬಿಸಿಸಿಐ ಆಯ್ಕೆ ಸಮಿತಿ ಉತ್ತರ ನೀಡಿದ್ದು, ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ರಿಷಭ್‌ ಪಂತ್‌ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್‌ ಅವರಿಗೆ ಅವಕಾಶ ನೀಡಲಾಗಿದೆ.

T20 World Cup Indian team announced for T20 World Cup No place for Kannadigas

ರಿಷಭ್ ಬಹಳ ದಿನಗಳ ನಂತರ ಟೀಂ ಇಂಡಿಯಾಗೆ ಮರಳಿದ್ದಾರೆ. ಕಾರು ಅಪಘಾತವಾದಾಗಿನಿಂದ ಅವರು ಮೈದಾನದಿಂದ ದೂರವಿದ್ದರು. ಆದರೆ ಅವರು ಐಪಿಎಲ್ ಮೂಲಕ ಮೈದಾನಕ್ಕೆ ಮರಳಿ ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಅಲ್ಲದೆ ತಾವು ಟಿ20 ವಿಶ್ವಕಪ್ ಆಡಲು ಸಿದ್ಧರಾಗಿರುವುದಾಗಿ ಪ್ರದರ್ಶನದ ಮೂಲಕ ತಿಳಿಸಿದ್ದರು.

ಶಿವಂಗೆ ಅವಕಾಶ

ಬಿಸಿಸಿಐ ಶಿವಂ ದುಬೆ ಮತ್ತು ಅಕ್ಷರ್ ಪಟೇಲ್ ಮೇಲೆ ವಿಶ್ವಾಸ ಹೊಂದಿದೆ. ಶಿವಂ ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿದ್ದು ಅಬ್ಬರಿಸುತ್ತಿದ್ದರೆ. ಅವರು ಸ್ಫೋಟಕ ಬ್ಯಾಟಿಂಗ್‌ನಿಂದ ಫಿನಿಶರ್ ಪಾತ್ರವನ್ನು ನಿಭಾಯಿಸಬಲ್ಲರು. ಶಿವಂ ದುಬೆ ಈ ಋತುವಿನಲ್ಲಿ 9 ಪಂದ್ಯಗಳಲ್ಲಿ 350 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಅವರು 3 ಅರ್ಧಶತಕಗಳನ್ನು ಗಳಿಸಿದ್ದಾರೆ. ಅಕ್ಷರ್ ಅವರು ಬೌಲಿಂಗ್ ಮತ್ತು ಬ್ಯಾಟಿಂಗ್‌ನಲ್ಲಿ ತಂಡಕ್ಕೆ ನೆರವಾಗಬಲ್ಲ ಆಟಗಾರ.

T20 World Cup Indian team announced for T20 World Cup No place for Kannadigas

ಜೈಸ್ವಾಲ್‌ಗೆ ಅವಕಾಶ

ಇನ್ನು ಆರಂಭಿಕರಾಗಿ ಯಶಸ್ವಿ ಜೈಸ್ವಾಲ್‌ ಕಣಕ್ಕಿಳಿಯಲಿದ್ದು, ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದ್ದು, ಇವರಿಗೆ ಬಿಸಿಸಿಐ ಮಣೆ ಹಾಕಿದೆ. ಇನ್ನು ವಿರಾಟ್‌ ಕೊಹ್ಲಿ ಮೂರನೇ ಕ್ರಮಾಂಕದಲ್ಲಿ, ನಾಲ್ಕನೇ ಕ್ರಮಾಂಕದಲ್ಲಿ ವಿಶ್ವದ ಶ್ರೇಷ್ಠ ಟಿ20 ಬ್ಯಾಟರ್‌ ಸೂರ್ಯಕುಮಾರ್ ಯಾದವ್‌ ಕಾಣಿಸಿಕೊಳ್ಳಲಿದ್ದಾರೆ.

ಜಡ್ಡುಗೆ ಸ್ಥಾನ

ಆಲ್‌ರೌಂಡರ್‌ ರೂಪಲದಲ್ಲಿ ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್‌ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ. ಇವರು ಬ್ಯಾಟ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಬಲ್ಲರು. ಇನ್ನು ನುರಿತ ಸ್ಪಿನ್ ಬೌಲರ್‌ ಆಗಿ ಕುಲ್‌ದೀಪ್‌ ಯಾದವ್‌, ಯುಜುವೇಂದ್ರ ಚಹಾಲ್‌ ಕಾಣಿಸಿಕೊಳ್ಳಲಿದ್ದಾರೆ.

ಪವರ್‌ ಪ್ಲೇ ಹಾಗೂ ಡೆತ್‌ ಓವರ್‌ಗಳಲ್ಲಿ ಎದುರಾಳಿಗಳನ್ನು ಕಟ್ಟಿ ಹಾಕಲು ಜಸ್ಪ್ರಿತ್ ಬುಮ್ರಾ ಅವರ ಜೊತೆ ಮೊಹಮ್ಮದ್ ಸಿರಾಜ್‌, ಅರ್ಷದೀಪ್‌ ಸಿಂಗ್ ಕಾಣಿಸಿಕೊಳ್ಳಲಿದ್ದಾರೆ.

ಟಿ20 ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್‌, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್‌ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್‌, ಹಾರ್ದಿಕ್ ಪಾಂಡ್ಯ (ಉಪನಾಯಕ), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್‌, ಕುಲ್‌ದೀಪ್‌ ಯಾದವ್‌, ಯುಜುವೇಂದ್ರ ಚಹಾಲ್‌, ಅರ್ಷದೀಪ್ ಸಿಂಗ್, ಜಸ್ಪ್ರಿತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್

ಕಾಯ್ದಿರಿಸಿದ ಆಟಗಾರರು - ಶುಭ್ಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+