T20 World Cup: ಅಜಿತ್ ಅಗರ್ಕರ್, ರಾಹುಲ್ ದ್ರಾವಿಡ್ ಭೇಟಿಯಾದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ
ಭಾರತದಲ್ಲಿ ಐಪಿಎಲ್ ಹಾಗೂ ಚುನಾವಣೆಗಳ ಕಾವು ಏರುತ್ತಲೆ ಇದೆ. ಚುನಾವಣೆಗಳ ಫಲಿತಾಂಶ ಜೂನ್ 4ರಂದು ಹೊರ ಬೀಳಲಿದ್ದು, ಇದಾದ ಒಂದೇ ವಾರದಲ್ಲಿ ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ಟಿ20 ವಿಶ್ವಕಪ್ ಆಯೋಜಿಸಲಾಗುತ್ತಿದೆ. ಚುಟುಕು ವಿಶ್ವಕಪ್‌ಗೆ ಎಲ್ಲ ತಂಡಗಳು ಭರ್ಜರಿ ತಯಾರಿ ನಡೆಸಿವೆ. ಈ ನಿಟ್ಟಿನಲ್ಲಿ ಟೀಮ್ ಇಂಡಿಯಾ ಸಹ ಕಾರ್ಯ ಪ್ರವೃತ್ತವಾಗಿದೆ.
ಸದ್ಯ ಟೀಮ್ ಇಂಡಿಯಾದ ಆಟಗಾರರು ಐಪಿಎಲ್ ಆಡುವಲ್ಲಿ ಫುಲ್ ಬ್ಯೂಸಿ ಆಗಿದ್ದಾರೆ. ಐಪಿಎಲ್ ಮಧ್ಯೆ ಟೀಮ್ ಇಂಡಿಯಾದ ಅಭಿಮಾನಿಗಳಿಗೆ ಬಿಗ್ ನ್ಯೂಸ್ ಸಿಕ್ಕಿದೆ. ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ, ಬಿಸಿಸಿಐ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ಕೋಚ್ ರಾಹುಲ್ ದ್ರಾವಿಡ್ ಅವರನ್ನು ಭೇಟಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಮಾಧ್ಯಮ ವರದಿಗಳ ಪ್ರಕಾರ, ಈ ಅವಧಿಯಲ್ಲಿ ಟಿ 20 ವಿಶ್ವಕಪ್ ತಂಡದ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

ಇನ್ನೋಬ್ಬ ವೇಗಿ ಯಾರು?
ಇದೇ ವೇಳೆ ತಂಡದಲ್ಲಿ ಯಾವೆಲ್ಲಾ ಪ್ಲೇಯರ್‌ಗೆ ಸ್ಥಾನ ನೀಡಬೇಕು ಎಂಬುದರ ಬಗ್ಗೆಯೂ ಚರ್ಚೆ ನಡೆದಿದೆ ಎಂದು ತಿಳಿದು ಬಂದಿದೆ. ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿರುವ ಯುವ ಆಟಗಾರರತ್ತ ಗಮನ ಹರಿಸಲಾಗಿದೆ. ಇದಲ್ಲದೇ ಭಾರತದ ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಬಗ್ಗೆಯೂ ಮಾತುಕತೆ ನಡೆದಿದೆ. ಹಾರ್ದಿಕ್ ಪಾಂಡ್ಯ ಅವರ ಕಳಪೆ ಫಾರ್ಮ್ ಐಪಿಎಲ್ 2024 ರಲ್ಲಿ ತೊಂದರೆಗೆ ಕಾರಣವಾಗಿದೆ. ಅದರಲ್ಲೂ ಹಾರ್ದಿಕ್ ಪಾಂಡ್ಯ ಬೌಲರ್ ಆಗಿ ವಿಫಲವಾಗಿರುವುದರಿಂದ ಟಿ20 ವಿಶ್ವಕಪ್ ತಂಡದಿಂದ ಹಾರ್ದಿಕ್ ಪಾಂಡ್ಯ ಅವರನ್ನು ಕೈಬಿಡಬಹುದು ಎಂದು ನಂಬಲಾಗಿದೆ.
ಟೀಮ್ ಇಂಡಿಯಾದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಟಿ20 ವಿಶ್ವಕಪ್ ವೇಳೆಗೂ ಫಿಟ್ ಆಗುವ ಸಾಧ್ಯತೆ ಇಲ್ಲ. ಹೀಗಾಗಿ ಇವರ ಬದಲಿಗೆ ಇನ್ನೊಬ್ಬ ಆಟಗಾರನನ್ನು ಹುಡುಕುವ ಅನಿವಾರ್ಯತೆ ಇದೆ. ಜಸ್ಪ್ರಿತ್ ಬುಮ್ರಾ ಐಪಿಎಲ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ್ದು ಇವರು ವಿಶ್ವಕಪ್‌ಗೆ ಆಯ್ಕೆ ಆಗುವುದು ಖಚಿತ ಎಂದು ಹೇಳಲಾಗುತ್ತಿದೆ. ಮೊಹಮ್ಮದ್ ಸಿರಾಜ್ ಅವರ ಪ್ರಸಕ್ತ ಫಾರ್ಮ್ ಪರಿಗಣಿಸಿದರೆ ಇವರನ್ನು ಆಯ್ಕೆ ಮಾಡುವುದು ಕಷ್ಟವಾಗಿದೆ. ಹೀಗಾಗಿ ಬಿಸಿಸಿಐ ಆಯ್ಕೆ ಸಮಿತಿ ಬುಮ್ರಾಗೆ ಸಾಥ್ ನೀಡುವ ಇನ್ನೊಬ್ಬ ಬೌಲರ್ ಹುಡುಕಾಟವನ್ನು ನಡೆಸಿದೆ.

ಹಾರ್ದಿಕ್ ಪಾಂಡ್ಯ ಕಳಪೆ ಫಾರ್ಮ್ ಹೊರತಾಗಿಯೂ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬಹುದು ಎಂದು ನಂಬಲಾಗಿದೆ. ವಾಸ್ತವವಾಗಿ, ಭಾರತೀಯ ತಂಡದ ಆಡಳಿತವು ವೇಗದ ಬೌಲರ್‌ಗಾಗಿ ಹುಡುಕುತ್ತಿದೆ, ಆದ್ದರಿಂದ ಹಾರ್ದಿಕ್ ಪಾಂಡ್ಯಗೆ ಪ್ರಾಮುಖ್ಯತೆಯನ್ನು ನೀಡಬಹುದು ಎಂದು ಅಂದಾಜಿಸಲಾಗಿದೆ.
ಹಾರ್ದಿಕ್ ಫ್ಲಾಪ್
ಹಾರ್ದಿಕ್ ಪಾಂಡ್ಯ ಪ್ರಸ್ತುತ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಆದರೆ ಇಲ್ಲಿಯವರೆಗೆ ಅವರು ಈ ಋತುವಿನಲ್ಲಿ ತಮ್ಮ ಬ್ಯಾಟಿಂಗ್ ಹೊರತುಪಡಿಸಿ ಬೌಲಿಂಗ್‌ನಲ್ಲಿ ಯಶಸ್ಸು ಕಂಡಿಲ್ಲ. ಸದ್ಯ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ 6 ಪಂದ್ಯಗಳಲ್ಲಿ 4 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ.
ಮಾಧ್ಯಮ ವರದಿಗಳ ಪ್ರಕಾರ, ಮೇ ಮೊದಲ ವಾರದಲ್ಲಿ ಎಲ್ಲಾ ದೇಶಗಳು T20 ವಿಶ್ವಕಪ್ 2024 ಗಾಗಿ ತಮ್ಮ ತಂಡಗಳನ್ನು ಘೋಷಿಸಬೇಕಾಗಿದೆ. ಹೀಗಾಗಿ ಇನ್ನು 20 ರಿಂದ 25 ದಿನಗಳಲ್ಲಿ ತಂಡವನ್ನು ಪ್ರಕಟಿಸುವ ಅನಿವಾರ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಭಾರತ ಕ್ರಿಕೆಟ್ ತಂಡದ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಮತ್ತು ಟೀಂ ಇಂಡಿಯಾದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರನ್ನು ಭೇಟಿ ಮಾಡಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಯಾರಿಗೆಲ್ಲಾ ಸ್ಥಾನ ನೀಡಬೇಕು ಎಂಬ ಬಗ್ಗೆ ಈ ಮೀಟಿಂಗ್‌ನಲ್ಲಿ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.












Click it and Unblock the Notifications