T20 World Cup: ಮುಂಬೈನಲ್ಲಿ ರೋಹಿತ್ ಶರ್ಮಾ ರುದ್ರಾವತಾರ: ಎದುರಾಳಿಗೆ ಹೆಚ್ಚಿದ ಟೆನ್ಷನ್
ಇಂಡಿಯನ್ ಪ್ರೀಮಿಯರ್ ಲೀಗ್ ಈಗ ಕುತೂಹಲಕಾರಿ ಘಟ್ಟಕ್ಕೆ ಬಂದು ನಿಂತಿದೆ. ಸ್ಟಾರ್ ಆಟಗಾರರು ಲಯಕ್ಕೆ ಮರಳುತ್ತಿದ್ದು, ಇನ್ನು ಹಲವರು ಲಯಕ್ಕಾಗಿ ಪರದಾಡುತ್ತಿದ್ದಾರೆ. ಮುಂಬೈನಲ್ಲಿ ಚೋಟಾ ಮುಂಬೈಕರ್ ಬ್ಯಾಟಿಂಗ್‌ಗೆ ಚೆನ್ನೈ ಬೌಲರ್‌ಗಳು ಕಂಗಾಲಾದರು.
ಭಾನುವಾರ ನಡೆದ ಎರಡನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪಂದ್ಯವನ್ನು 20 ರನ್‌ಗಳಿಂದ ಗೆದ್ದಿತು. ಆದರೆ ಪಂದ್ಯದ ಫುಲ್ ಹೈಲೇಟ್ ಮುಂಬೈ ತಂಡದ ಮಾಜಿ ನಾಯಕ ರೋಹಿತ್ ಶರ್ಮಾ ಅಬ್ಬರದ ಬ್ಯಾಟಿಂಗ್ ಮಾಡಿ ಎದುರಾಳಿಗಳನ್ನು ಕಾಡಿದರು. ಭರ್ಜರಿ ಬ್ಯಾಟ್ ಮಾಡಿದ ಹಿಟ್ ಮ್ಯಾನ್ ಪ್ರಸಕ್ತ ಐಪಿಎಲ್‌ನಲ್ಲಿ ಮೊದಲ ಬಾರಿಗೆ ಮೂರಂಕಿ ಮುಟ್ಟಿ ಸಂಭ್ರಮಿಸಿದರು.

ಐಪಿಎಲ್‌ನಲ್ಲಿ ಎರಡನೇ ಶತಕ
ಐಪಿಎಲ್‌ನಲ್ಲಿ ಹಲವು ದಾಖಲೆಗಳಿಗೆ ತಮ್ಮ ಹೆಸರನ್ನು ನಮೂದಿಸಿದರುವ ರೋಹಿತ್ ಎರಡನೇ ಶತಕ ಬಾರಿಸಿ ಮಿಂಚಿದರು. ರೋಹಿತ್ ಶರ್ಮಾ 2012ರ ಬಳಿಕ ಇದೇ ಮೊದಲ ಬಾರಿಗೆ ಐಪಿಎಲ್‌ನಲ್ಲಿ ಶತಕ ಬಾರಿಸಿ ಅಬ್ಬರಿಸಿದರು. ರೋಹಿತ್ ಶರ್ಮಾ ಅವರ ಬ್ಯಾಟಿಂಗ್ ನೆರವಿನಿಂದಲೂ ಮುಂಬೈ ಗೆಲ್ಲುವಲ್ಲಿ ಸಾಧ್ಯವಾಗಲಿಲ್ಲ. ಆದರೆ ಟೀಮ್ ಇಂಡಿಯಾ ಪಾಲಿಗೆ ಇದು ಗುಡ್ ನ್ಯೂಸ್.
ವಿಶ್ವಕಪ್‌ಗೆ ಭರ್ಜರಿ ತಯಾರಿ
ಐಪಿಎಲ್ ಮುಗಿಯುತ್ತಿದ್ದಂತೆ ರೋಹಿತ್ ಶರ್ಮಾ ಮುಂದಾಳತ್ವದ ಟೀಮ್ ಇಂಡಿಯಾ, ವೆಸ್ಟ್ ಇಂಡೀಸ್ ಹಾಗೂ ಅಮೆರಿಕದ ಆಶ್ರಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ನಲ್ಲಿ ಭಾಗವಹಿಸಲಿದೆ. ಈ ಬಾರಿ ಟಿ20 ವಿಶ್ವಕಪ್‌ನ್ನು ಶತಾಯ ಗತಾಯ ಎತ್ತಲೇ ಬೇಕು ಎಂಬ ಕನಸು ಕಾಣುತ್ತಿರುವ ರೋಹಿತ್ ಶರ್ಮಾ ಪರ್ಫೆಕ್ಟ್ ಟೈಮ್‌ಗೆ ಲಯಕ್ಕೆ ಮರಳಿರುವುದು ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ಗೆ ಖುಷಿ ನೀಡಿದೆ.

ಏನು ಹೇಳುತ್ತೆ ಟಿ20 ಅಂಕಿ ಅಂಶ
2007ರ ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆದಿದ್ದ ರೋಹಿತ್, ಮತ್ತೊಮ್ಮೆ ಚುಟುಕು ವಿಶ್ವಕಪ್‌ನಲ್ಲಿ ತಮ್ಮ ಛಾಪು ಮೂಡಿಸಲು ಮಾಸ್ಟರ್ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಈಗಾಗಲೇ ರೋಹಿತ್ ಶರ್ಮಾ ಭಾರತದ ಪರ 151 ಟಿ20 ಪಂದ್ಯಗಳನ್ನು ಆಡಿದ್ದು, 31.79ರ ಸರಾಸರಿಯಲ್ಲಿ 3974 ರನ್ ಸಿಡಿಸಿದ್ದಾರೆ. ಈ ವೇಳೆ 5 ಶತಕ ಹಾಗೂ 29 ಅರ್ಧಶತಕಗಳನ್ನು ಬಾರಿಸಿದ್ದಾರೆ. ಅಲ್ಲದೆ 359 ಬೌಂಡರಿ, 190 ಸಿಕ್ಸರ್‌ಗಳನ್ನು ಬಾರಿಸಿದ ಹೆಗ್ಗಳಿಕೆ ಇವರದ್ದಾಗಿದೆ.
ರೋಹಿತ್ ಶರ್ಮಾ ತಮ್ಮ ನಾಯಕತ್ವದ ಗುಣಗಳಿಂದಲೇ ಹೆಸರುವಾಸಿ. ಐಪಿಎಲ್‌ನಲ್ಲಿ ಅತಿ ಹೆಚ್ಚು ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿರುವ ತಂಡ ಮುಂಬೈ ಇಂಡಿಯನ್ಸ್ ತಂಡದ ಮಾಜಿ ನಾಯಕ. ಇವರ ಕ್ಯಾಪ್ಟನ್ಸಿಯಲ್ಲಿ ಮುಂಬೈ ಐದು ಬಾರಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತ್ತು. ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಭಾರತವನ್ನು ಫೈನಲ್‌ಗೆ ಕೊಂಡಯ್ದಿದ್ದರು.
ಇದೇ ವರ್ಷದ ಆರಂಭದಲ್ಲಿ ಅಫ್ಘಾನಿಸ್ತಾನ ವಿರುದ್ಧ ಸರಣಿಯಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ 14 ತಿಂಗಳ ಬಳಿಕ ಕಮ್ ಬ್ಯಾಕ್ ಮಾಡಿದ್ದ ರೋಹಿತ್, ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಐದನೇ ಶತಕ ಬಾರಿಸಿ ಅಬ್ಬರಿಸಿದ್ದರು. ಈಗ ಐಪಿಎಲ್‌ನಲ್ಲಿ ಅಬ್ಬರಿಸಿ ಬೊಬ್ಬೆರೆದಿದ್ದಾರೆ. ಇವರ ಪ್ರಸಕ್ತ ಫಾರ್ಮ್ ನಿಜಕ್ಕೂ ಎದುರಾಳಿಗಳಿಗೆ ನಡುಕ ಹುಟ್ಟಿಸಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications