• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಶಮಿ ಬದಲಿಗೆ ಉಮೇಶ್‌ಗೆ ಸ್ಥಾನ

|
Google Oneindia Kannada News

ಮುಂಬೈ, ಸೆ.18: ಭಾರತದ ಪ್ರಮುಖ ವೇಗದ ಬೌಲರ್ ಮೊಹಮ್ಮದ್ ಶಮಿ ಕೊರೊನಾವೈರಸ್ ಸೋಂಕಿನಿಂದ ಬಳಲುತ್ತಿದ್ದು, ಆಸ್ಟ್ರೇಲಿಯಾ ವಿರುದ್ಧದ ಟಿ20ಐ ಸರಣಿಗೆ ಅಲಭ್ಯರಾಗಿದ್ದಾರೆ. ಮೂರು ಪಂದ್ಯಗಳ ಟಿ20ಐ ಸರಣಿಗೆ ಬದಲಿ ಆಟಗಾರನನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಭಾನುವಾರದಂದು ಪ್ರಕಟಿಸಿದೆ. ಶಮಿ ಸ್ಥಾನದಲ್ಲಿ ಉಮೇಶ್ ಯಾದವ್ ಆಡಲಿದ್ದಾರೆ.

ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧದ ಟಿ20ಐ ಸರಣಿಯ ತಂಡದಲ್ಲಿ ಶಮಿ ಸ್ಥಾನ ಪಡೆದಿದ್ದರು. ಟಿ20 ವಿಶ್ವಕಪ್ ಆಡಲಿರುವ ಟೀಂ ಇಂಡಿಯಾದಲ್ಲಿ ಸ್ಟ್ಯಾಂಡ್ ಬೈ ಆಟಗಾರನಾಗಿ ಆಯ್ಕೆಯಾಗಿದ್ದರು.

"ವೇಗದ ಬೌಲರ್ ಮೊಹಮ್ಮದ್ ಶಮಿಗೆ ಕೋವಿಡ್ 19 ಪಾಸಿಟಿವ್ ಇರುವುದು ಪರೀಕ್ಷೆಯ ನಂತರ ದೃಢಪಟ್ಟಿದೆ. ಆಸ್ಟ್ರೇಲಿಯಾ ವಿರುದ್ಧ ಮುಂಬರುವ ಮೂರು ದಿನಗಳ ಮಾಸ್ಟರ್‌ಕಾರ್ಡ್ T20I ಸರಣಿಯಲ್ಲಿ ಭಾಗವಹಿಸಲು ಸಾಧ್ಯವಾಗುವುದಿಲ್ಲ" ಎಂದು ಬಿಸಿಸಿಐ ಅಧಿಕೃತ ಪ್ರಕಟಣೆ ತಿಳಿಸಿದೆ.

12ನೇ ಪ್ಲೇಯರ್: ಫುಟ್‌ಬಾಲ್‌ನಂತೆಯೇ ಕ್ರಿಕೆಟ್‌ಗೂ ಈ ಹೊಸ ನಿಯಮ?12ನೇ ಪ್ಲೇಯರ್: ಫುಟ್‌ಬಾಲ್‌ನಂತೆಯೇ ಕ್ರಿಕೆಟ್‌ಗೂ ಈ ಹೊಸ ನಿಯಮ?

ಈ ನಡುವೆ ನ್ಯೂಜಿಲೆಂಡ್ ಎ ವಿರುದ್ಧದ ಇಂಡಿಯಾ ಎ ತಂಡದಲ್ಲೂ ಒಂದು ಬದಲಾವಣೆಯಾಗಿದ್ದು, ವೇಗಿ ನವದೀಪ್ ಸೈನಿ ಅವರು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದು, ಸರಣಿಯಿಂದ ಹೊರನಡೆದಿದ್ದಾರೆ. ದುಲೀಪ್ ಟ್ರೋಫಿ ಆಡುತ್ತಿದ್ದಾಗ ಸೈನಿ ಗಾಯಗೊಂಡಿದ್ದಾರೆ.

ಉತ್ತರ ವಲಯ ಹಾಗೂ ದಕ್ಷಿಣ ವಲಯ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಗಾಯಗೊಂಡ ಸೈನಿ, ನ್ಯೂಜಿಲೆಂಡ್ ಎ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯಿಂದ ಹೊರ ನಡೆದಿದ್ದಾರೆ. ಗುಣಮುಖರಾದ ಬಳಿಕ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಸೈನಿ ರಿಪೋರ್ಟ್ ಮಾಡಿಕೊಳ್ಳಬೇಕಾಗುತ್ತದೆ.

ಐಸಿಸಿ ಟಿ20 ವಿಶ್ವಕಪ್ ಟೂರ್ನಿ
ಆಸ್ಟ್ರೇಲಿಯಾದಲ್ಲಿ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಅಭ್ಯಾಸ ಪಂದ್ಯಗಳಲ್ಲಿ ಭಾರತದ ಎದುರಾಳಿಗಳು ಫಿಕ್ಸ್ ಆಗಿದ್ದಾರೆ. ಅಕ್ಟೋಬರ್ 17 ಮತ್ತು ಅಕ್ಟೋಬರ್ 19ರಂದು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ತಂಡಗಳ ವಿರುದ್ಧ ಭಾರತ ಅಭ್ಯಾಸ ಪಂದ್ಯಗಳನ್ನು ಆಡಲಿದೆ.

Team India T20 World Cup Jersey : ಟೀಂ ಇಂಡಿಯಾ ಹೊಸ ಜರ್ಸಿ ಟೀಸರ್ ಹೇಗಿದೆ?Team India T20 World Cup Jersey : ಟೀಂ ಇಂಡಿಯಾ ಹೊಸ ಜರ್ಸಿ ಟೀಸರ್ ಹೇಗಿದೆ?

ಎ ಗುಂಪಿನಲ್ಲಿ ಶ್ರೀಲಂಕಾ, ನೆದರ್‌ಲೆಂಡ್ಸ್, ನಮೀಬಿಯಾ ಮತ್ತು ಯುಎಇ ತಂಡಗಳಿವೆ. ಬಿ ಗುಂಪಿನಲ್ಲಿ ವೆಸ್ಟ್ ಇಂಡೀಸ್, ಜಿಂಬಾಬ್ವೆ, ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್ ತಂಡಗಳಿವೆ. ಈ ಎರಡು ಗುಂಪುಗಳಿಂದ ನಾಲ್ಕು ತಂಡಗಳು ಸೂಪರ್-12 ಹಂತಕ್ಕೇರುತ್ತವೆ. ಒಟ್ಟು 8 ತಂಡಗಳು ಈಗಾಗಲೇ ನೇರವಾಗಿ ಸೂಪರ್-12 ಹಂತದಲ್ಲಿವೆ. ಆಸ್ಟ್ರೇಲಿಯಾ, ಭಾರತ, ಪಾಕಿಸ್ತಾನ, ಸೌತ್ ಆಫ್ರಿಕಾ, ಅಫ್ಗಾನಿಸ್ತಾನ, ಬಾಂಗ್ಲಾದೇಶ, ಇಂಗ್ಲೆಂಡ್, ನ್ಯೂಜಿಲೆಂಡ್ ತಂಡಗಳ ಹಾಗೂ ಗ್ರೂಪ್ ಹಂತದಿಂದ ಬಂದ 4 ತಂಡಗಳು ಹೀಗೆ 12 ತಂಡಗಳು ಸೂಪರ್-12ನಲ್ಲಿ ಸೆಣಸಲಿವೆ.

ಸ್ಟ್ಯಾಂಡ್ ಬೈ ಪ್ಲೇಯರ್ಸ್: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ನೋಯಿ, ದೀಪಕ್ ಚಾಹರ್

ಆಸ್ಟ್ರೇಲಿಯಾ ವಿರುದ್ಧದ ಟಿ20ಐ ಸರಣಿಗಾಗಿ ತಂಡ: ರೋಹಿತ್ ಶರ್ಮ(ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಬ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್ ಅಶ್ವಿನ್, ಯಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ದೀಪಕ್ ಚಾಹರ್, ಉಮೇಶ್ ಯಾದವ್ ಹಾಗೂ ಅರ್ಷ್ ದೀಪ್ ಸಿಂಗ್.

ಭಾರತ ಎ ತಂಡ: ಪೃಥ್ವಿ ಶಾ, ಅಭಿಮನ್ಯು ಈಶ್ವರನ್, ಋತುರಾಜ್ ಗಾಯಕ್ವಾಡ್, ರಾಹುಲ್ ತ್ರಿಪಾಠಿ, ರಜತ್ ಪಾಟಿದಾರ್, ಸಂಜು ಸ್ಯಾಮ್ಸನ್ (ನಾಯಕ), ಕೆಎಸ್ ಭರತ್(ವಿಕೆಟ್ ಕೀಪರ್), ಕುಲದೀಪ್ ಯಾದವ್, ಶಾಬಾಜ್ ಅಹ್ಮದ್, ರಾಹುಲ್ ಚಾಹರ್, ತಿಲಕ್ ವರ್ಮ, ಕುಲದೀಪ್ ಸೇನ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲೀಕ್, ರಿಷಿ ಧವನ್, ರಾಜ್ ಅಂಗದ್ ಬಾವಾ.

English summary
T20I Series vs Australia: India pacer Mohammed Shami Ruled Out Of three match T20I Series vs Australia After Testing COVID-19 Positive, Umesh Yadav Named Replacement, the BCCI confirmed in an official media released.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X