India vs Pakistan: ಪಾಕಿಸ್ತಾನದ ವಿರುದ್ಧದ ಪಂದ್ಯಕ್ಕೆ ಭಾರತ ತಂಡದಲ್ಲಿ ಒಂದು ಬದಲಾವಣೆ ಫಿಕ್ಸ್!

ಚಾಂಪಿಯನ್ಸ್ ಟ್ರೋಫಿ 2025ರ ಪಂದ್ಯಾವಳಿಯಲ್ಲಿ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಮಣಿಸಿ ಶುಭಾರಂಭ ಮಾಡಿರುವ ಭಾರತ ತಂಡವು ಫೆಬ್ರವರಿ 23 (ಭಾನುವಾರ) ಮತ್ತೊಂದು ಮಹತ್ವದ ಪಂದ್ಯಕ್ಕೆ ತಯಾರಿ ನಡೆಸುತ್ತಿದೆ. ನಾಳೆ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದ್ದು ಎರಡೂ ತಂಡಗಳು ಈಗಾಗಲೇ ಕಠಿಣ ಅಭ್ಯಾಸ ನಡೆಸುತ್ತಿದೆ.

ಮೊದಲನೇ ಪಂದ್ಯವನ್ನು ಕರಾಚಿಯಲ್ಲಿ ಆಡಿದ್ದ ಪಾಕಿಸ್ತಾನ ಭಾರತದ ವಿರುದ್ಧ ಆಡಲು ದುಬೈಗೆ ಪ್ರಯಾಣಿಸಿದೆ. ದುಬೈನಲ್ಲೇ ಬಾಂಗ್ಲಾದೇಶದ ವಿರುದ್ಧ ಮೊದಲ ಪಂದ್ಯ ಆಡಿರುವ ಭಾರತ, ಎರಡನೇ ಪಂದ್ಯದಲ್ಲಿ ಪಾಕಿಸ್ತಾನವನ್ನು ಮಣಿಸಲಿದೆ.

team india can make one change in playing xi vs pakistan champions trophy 2025

ಉದ್ಘಾಟನಾ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಕಂಡಿರುವ ಪಾಕಿಸ್ತಾನಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಒಂದು ವೇಳೆ ಭಾರತದ ವಿರುದ್ಧ ಸೋತರೆ ಪಂದ್ಯಾವಳಿಯಿಂದಲೇ ಹೊರಬೀಳುವ ಸಾಧ್ಯತೆ ಹೆಚ್ಚಾಗಿದೆ.

ಭಾರತ ತಂಡದಲ್ಲಿ ಒಂದು ಬದಲಾವಣೆ

ಬಾಂಗ್ಲಾದೇಶದ ವಿರುದ್ಧ ಗೆಲುವು ಸಾಧಿಸಿದ್ದರೂ ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡುವ ಸಾಧ್ಯತೆ ಹೆಚ್ಚಾಗಿದೆ. ಬಾಂಗ್ಲಾದೇಶ ವಿರುದ್ಧ ವಿಕೆಟ್ ಪಡೆಯುವಲ್ಲಿ ವಿಫಲವಾದ ಕುಲದೀಪ್ ಯಾದವ್ ಬದಲಿಗೆ ಮಿಸ್ಟರಿ ಸ್ಪಿನ್ನರ್ ಎಂದೇ ಹೆಸರಾಗಿರುವ ವರುಣ್ ಚಕ್ರವರ್ತಿ ಅವಕಾಶ ಪಡೆಯುವ ಸಾಧ್ಯತೆ ಇದೆ.

ಬಾಂಗ್ಲಾದೇಶದ ವಿರುದ್ಧದ ಪಂದ್ಯದಲ್ಲಿ ಕುಲದೀಪ್ ಯಾದವ್ ಸಂಪೂರ್ಣವಾಗಿ ಫಿಟ್ ಆಗಿರುವಂತೆ ಕಾಣಲಿಲ್ಲ. ವರುಣ್ ಚಕ್ರವರ್ತಿ ಭಾರತದ ಪಿಚ್‌ಗಳಲ್ಲೇ ಅತ್ಯುತ್ತಮ ಪ್ರದರ್ಶನ ನೀಡಿದ್ದು ಉತ್ತಮ ಲಯದಲ್ಲಿದ್ದಾರೆ. ಪಾಕಿಸ್ತಾನದ ವಿರುದ್ಧ ಗೆಲ್ಲುವುದು ಭಾರತ ತಂಡಕ್ಕೆ ಮಹತ್ವವಾದ ಕಾರಣ ಚಕ್ರವರ್ತಿಗೆ ಅವಕಾಶ ನೀಡುವ ಸಾಧ್ಯತೆ ಇದೆ.

ಪಾಕಿಸ್ತಾನ ತಂಡದಲ್ಲಿ ಕೂಡ ಆಡುವ ಬಳಗದಲ್ಲಿ ಬದಲಾವಣೆಯಾಗಲಿದೆ. ತಂಡದ ಆರಂಭಿಕ ಬ್ಯಾಟರ್ ಫಖಾರ್ ಜಮಾನ್ ನ್ಯೂಜಿಲೆಂಡ್ ವಿರುದ್ಧದ ಪಂದ್ಯದ ವೇಳೆ ಗಾಯಗೊಂಡಿದ್ದು, ಪಂದ್ಯಾವಳಿಯಿಂದಲೇ ಹೊರಬಿದ್ದಿದ್ದಾರೆ. ಅವರ ಬದಲಾಗಿ ಇಮಾಮ್-ಉಲ್-ಹಕ್ ಅವರನ್ನು ಬದಲೀ ಆಟಗಾರನಾಗಿ ಹೆಸರಿಸಲಾಗಿದೆ. ಭಾರತದ ವಿರುದ್ಧ ಪಂದ್ಯದಲ್ಲಿ ಇಮಾಮ್ ಅವರೇ ಆರಂಭಿಕರಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಮೊದಲ ಪಂದ್ಯದಲ್ಲಿ ಸೋತಿರುವ ಪಾಕಿಸ್ತಾನಕ್ಕೆ ಸಹಜವಾಗಿಯೇ ಒತ್ತಡದಲ್ಲಿದೆ. ಭಾರತ ಇದನ್ನೇ ಉತ್ತಮ ಅವಕಾಶವನ್ನಾಗಿ ಬಳಸಿಕೊಂಡು, ಪಂದ್ಯದಲ್ಲಿ ಮತ್ತಷ್ಟು ಒತ್ತಡ ಹೇರಿ ಬೃಹತ್ ಗೆಲುವು ಸಾಧಿಸಿದರೆ ಪಾಕಿಸ್ತಾನವನ್ನು ಮನೆಗೆ ಕಳಿಸುವ ಜೊತೆಗೆ ತನ್ನ ಸೆಮಿಫೈನಲ್ ಸ್ಥಾನವನ್ನು ಕೂಡ ಖಚಿತಪಡಿಸಿಕೊಳ್ಳಬಹುದಾಗಿದೆ.

ಉಭಯ ತಂಡಗಳ ಸಂಭಾವ್ಯ ಆಡುವ ಬಳಗ

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಹರ್ಷಿತ್ ರಾಣಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್/ವರುಣ್ ಚಕ್ರವರ್ತಿ.

ಪಾಕಿಸ್ತಾನ: ಇಮಾಮ್-ಉಲ್-ಹಕ್, ಬಾಬರ್ ಅಜಂ, ಮೊಹಮ್ಮದ್ ರಿಜ್ವಾನ್ (ನಾಯಕ), ಸಲ್ಮಾನ್ ಅಘಾ, ತಯ್ಯದ್ ತಾಹಿರ್, ಖುಶ್ದಿಲ್ ಶಾ, ಶಹೀನ್ ಅಫ್ರಿದಿ, ನಸೀಂ ಶಾ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+