India vs South Africa: ಟೀಂ ಇಂಡಿಯಾ ಬ್ಯಾಟಿಂಗ್ ಅಬ್ಬರಕ್ಕೆ ಬೆಚ್ಚಿದ ದಕ್ಷಿಣ ಆಫ್ರಿಕಾ

ಜೋಹಾನ್ಸ್‌ಬರ್ಗ್‌ನ ವಾಂಡರರ್ಸ್ ಕ್ರೀಡಾಂಗಣದಲ್ಲಿ ಭಾರತದ ಬ್ಯಾಟಿಂಗ್ ಅಬ್ಬರಕ್ಕೆ ದಕ್ಷಿಣ ಆಫ್ರಿಕಾ ಬೆಚ್ಚಿಬಿದ್ದಿದೆ. ಕಳೆದ ಪಂದ್ಯದಲ್ಲಿ ಶತಕ ಬಾರಿಸಿ ಮಿಂಚಿದ್ದ ತಿಲಕ್ ವರ್ಮಾ, ಸರಣಿಯಲ್ಲಿ ಉತ್ತಮ ಲಯದಲ್ಲಿರುವ ಸಂಜು ಸ್ಯಾಮ್ಸನ್ ಮತ್ತು ಅಭಿಷೇಕ್ ಶರ್ಮಾ ದಕ್ಷಿಣ ಆಫ್ರಿಕಾ ಬೌಲರ್ ಗಳನ್ನು ಮನ ಬಂದಂತೆ ದಂಡಿಸಿದರು. ಈ ಮೂವರ ಅಬ್ಬರದ ಬ್ಯಾಟಿಂಗ್‌ನಿಂದ ಭಾರತ 20 ಓವರ್ ಗಳಲ್ಲಿ 1 ವಿಕೆಟ್ ಕಳೆದುಕೊಂಡು 283 ರನ್ ಕಲೆಹಾಕುವ ಮೂಲಕ ದಾಖಲೆ ಬರೆದಿದೆ.

ಟಿ20 ಸರಣಿಯ ನಾಲ್ಕನೇ ಮತ್ತು ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಅಭಿಷೇಕ್ ಶರ್ಮಾ ಮತ್ತು ಸಂಜು ಸ್ಯಾಮ್ಸನ್ ಭಾರತಕ್ಕೆ ಸ್ಫೋಟಕ ಆರಂಭ ಒದಗಿಸಿದರು. ಅಭಿಷೇಕ್ ಶರ್ಮಾ 18 ಎಸೆತಗಳಲ್ಲಿ 36 ರನ್ ಗಳಿಸಿ ಔಟಾದರು. ಬಳಿಕ ಜೊತೆಯಾದ ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಅಬ್ಬರಿಸಿದರು.

Team india creats record in 4th t20 match against South africa sanju samson tilak varma

ಸಂಜು ಸ್ಯಾಮ್ಸನ್‌ 56 ಎಸೆತಗಳಲ್ಲಿ 6 ಬೌಂಡರಿ 9 ಭರ್ಜರಿ ಸಿಕ್ಸರ್ ಸಹಿತ ಅಜೇಯ 109 ರನ್ ಗಳಿಸಿದರು. ಕಳೆದ 5 ಟಿ20 ಇನ್ನಿಂಗ್ಸ್‌ಗಳಲ್ಲಿ ಇದು ಅವರ ಮೂರನೇ ಶತಕವಾಗಿದ್ದು ಭಾರತ ತಂಡದಲ್ಲಿ ತಮ್ಮ ಸ್ಥಾನ ಭದ್ರಪಡಿಸಿಕೊಳ್ಳುತ್ತಿದ್ದಾರೆ. ಮತ್ತೊಂದು ಕಡೆ ಅಬ್ಬರಿಸಿದ ತಿಲಕ್ ವರ್ಮಾ ಸತತ ಎರಡನೇ ಪಂದ್ಯದಲ್ಲಿ ಶತಕ ಸಿಡಿಸಿ ಮಿಂಚಿದರು. 47 ಎಸೆತಗಳಲ್ಲಿ 9 ಬೌಂಡರಿ 10 ಸಿಕ್ಸರ್ ಸಹಿತ ಅಜೇಯ 120 ರನ್ ಗಳಿಸಿದರು. ಮೂರನೇ ಟಿ20 ಪಂದ್ಯದಲ್ಲಿ ಶತಕ ಗಳಿಸಿದ್ದ ತಿಲಕ್ ವರ್ಮಾ ತಮ್ಮ ಅದ್ಭುತ ಫಾರ್ಮ್ ಅನ್ನು ಮುಂದುವರೆಸಿದರು.

ಹಲವು ದಾಖಲೆ ನಿರ್ಮಾಣ

ಸಂಜು ಸ್ಯಾಮ್ಸನ್ ಮತ್ತು ತಿಲಕ್ ವರ್ಮಾ ಜೋಡಿ 2ನೇ ವಿಕೆಟ್‌ಗೆ 210 ರನ್ ಕಲೆಹಾಕುವ ಮೂಲಕ ಹೊಸ ದಾಖಲೆ ಬರೆದರು. ಭಾರತದ ಪರವಾಗಿ ಟಿ20 ಕ್ರಿಕೆಟ್‌ನಲ್ಲಿ ಇದು ಅತ್ಯಧಿಕ ಜೊತೆಯಾಟವಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡದ ಗರಿಷ್ಠ ಜೊತೆಯಾಟ ಎನ್ನುವ ದಾಖಲೆ ಬರೆಯಿತು. ಟೆಸ್ಟ್ ಸದಸ್ಯ ರಾಷ್ಟ್ರಗಳ ಪಟ್ಟಿಯಲ್ಲಿ ಇದು ಎರಡನೇ ಗರಿಷ್ಠ ಟಿ20 ಸ್ಕೋರ್ ಆಗಿದೆ. ಇದೇ ವರ್ಷ ಬಾಂಗ್ಲಾದೇಶದ ವಿರುದ್ಧ 297 ರನ್ ಗಳಿಸಿದ ಭಾರತವೇ ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ.

ಸದಸ್ಯ ರಾಷ್ಟ್ರಗಳ ಟಿ20 ಪಂದ್ಯದಲ್ಲಿ ಇನ್ನಿಂಗ್ಸ್ ಒಂದರಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಕೂಡ ನಿರ್ಮಾಣವಾಗಿದೆ. ಇಂದು ಭಾರತದ ಬ್ಯಾಟರ್ ಗಳು ಬರೋಬ್ಬರಿ 23 ಸಿಕ್ಸರ್ ಸಿಡಿಸುವ ಮೂಲಕ ಹೊಸ ದಾಖಲೆ ಬರೆದರು. ಬಾಂಗ್ಲಾದೇಶ ವಿರುದ್ದ ಹೈದರಾಬಾದ್‌ನಲ್ಲಿ ಭಾರತ 297 ರನ್ ಗಳಿಸಿದ್ದಾಗ 22 ಸಿಕ್ಸರ್ ಸಿಡಿಸಿದ್ದು ಈವರೆಗಿನ ದಾಖಲೆಯಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+