ಟೀಮ್ ಇಂಡಿಯಾ ಈ ಬಾರಿ ಕಪ್ ಗೆಲ್ಲುವುದು ಫಿಕ್ಸ್: ತಂಡದಲ್ಲಿದ್ದಾರೆ ಲಕ್ಕಿ ಮ್ಯಾನ್!
ಟೀಮ್ ಇಂಡಿಯಾ ಭರ್ಜರಿ ಪ್ರದರ್ಶನ ನೀಡುತ್ತಿದೆ. ಸೆಮಿಫೈನಲ್ ಪಂದ್ಯದಲ್ಲಿ ಭಾರತ, ಇಂಗ್ಲೆಂಡ್ ವಿರುದ್ದ ಸೊಗಸಾದ ಪ್ರದರ್ಶನ ನೀಡಿ ಜಯ ಸಾಧಿಸಿದೆ. ರೋಹಿತ್ ಪಡೆ ಪ್ರಶಸ್ತಿಯಿಂದ ಇನ್ನೊಂದು ಹೆಜ್ಜೆ ದೂರ ನಿಂತಿದೆ. ಈ ಬಾರಿ ಟೀಮ್ ಇಂಡಿಯಾ ವಿಶ್ವಕಪ್ ಗೆಲ್ಲಬಹುದು ಎಂಬ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿದೆ.
ಈ ಬಾರಿ ಟೀಮ್ ಇಂಡಿಯಾ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಾದಾಟ ನಡೆಸಲಿದೆ. ಈಗಾಗಲೇ ಎರಡು ಬಾರಿ ಫೈನಲ್ ತಲುಪಿರುವ ಟೀಮ್ ಇಂಡಿಯಾ ಒಂದು ಬಾರಿ ಪ್ರಶಸ್ತಿಯನ್ನು ಗೆದ್ದು ಕೊಂಡಿದೆ. 2007, 2014ರಲ್ಲಿ ಟೀಮ್ ಇಂಡಿಯಾ ಫೈನಲ್ ಪ್ರವೇಶಿಸಿತ್ತು. ಆದರೆ 2007ರಲ್ಲಿ ಮಾತ್ರ ಪ್ರಶಸ್ತಿ ಗೆಲ್ಲುವಲ್ಲಿ ಸಫಲವಾಗಿತ್ತು. 2014ರ ಫೈನಲ್‌ನಲ್ಲಿ ಟೀಮ್ ಇಂಡಿಯಾ, ಶ್ರೀಲಂಕಾ ವಿರುದ್ಧ ಸೋಲು ಕಂಡಿತ್ತು.

ಏಳು ತಿಂಗಳಲ್ಲೇ ಎರಡನೇ ಸೆಮಿಫೈನಲ್
ಟೀಮ್ ಇಂಡಿಯಾ ಒಂದು ವರ್ಷದ ಅವಧಿಯಲ್ಲಿ ಎರಡನೇ ಫೈನಲ್ ಪಂದ್ಯವನ್ನು ಆಡುತ್ತಿದೆ. ಕಳೆದ ವರ್ಷದ ನವಂಬರ್‌ನಲ್ಲಿ ಭಾರತ, ಆಸ್ಟ್ರೇಲಿಯಾ ಏಕದಿನ ವಿಶ್ವಕಪ್ ಫೈನಲ್‌ನಲ್ಲಿ ಕಾದಾಟ ನಡೆಸಿದ್ದವು. ಆಗ ಟೀಮ್ ಇಂಡಿಯಾ ನಿರಾಸೆ ಕಂಡಿತ್ತು.
ಟೀಮ್ ಇಂಡಿಯಾ ಏಳು ತಿಂಗಳ ಬಳಿಕ ಮತ್ತೊಂದು ಸೆಮಿಫೈನಲ್ ಪಂದ್ಯವನ್ನು ಆಡಲು ರೆಡಿ ಆಗಿದೆ. ಈ ಪಂದ್ಯದಲ್ಲಿ ಗೆದ್ದು ದಶಕಗಳ ಟ್ರೋಫಿ ಬರದ ಕನಸನ್ನು ಈಡೇರಿಸುವ ಇರಾದೆಯನ್ನು ರೋಹಿತ್ ಪಡೆ ಹೊಂದಿದೆ. ಈ ತಂಡವನ್ನು ಟೀಮ್ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ಮುನ್ನಡೆಸುತ್ತಿದ್ದಾರೆ. ಇವರಿಗೂ ಇದು ತಮ್ಮ ಸಾಮರ್ಥ್ಯ ಪ್ರೂ ಮಾಡಿಕೊಳ್ಳಲು ಇದು ಅವರಿಗೆ ಸದಾವಕಾಶ.

ಲಕ್ಕಿ ಮ್ಯಾನ್ ಯಾರು?
ರಾಹುಲ್ ದ್ರಾವಿಡ್ ಅವರಿಗೆ ಹಾಗೂ ಎರಡು ನಂಬರ್‌ಗೆ ಅವಿನಾಭವ ಸಂಬಂಧ ಇದ್ದಂತೆ ಕಾಣುತ್ತಿದೆ. ರಾಹುಲ್ ದ್ರಾವಿಡ್ ಅವರು ಅಂಡರ್ 19 ತಂಡವನ್ನು ಎರಡು ಬಾರಿ ವಿಶ್ವಕಪ್‌ನಲ್ಲಿ ಮುನ್ನಡೆಸಿದ್ದಾರೆ. ಈ ಪ್ರಯತ್ನದಲ್ಲಿ ಕಿರಿಯರ ತಂಡ ಒಂದು ಬಾರಿ ಪ್ರಶಸ್ತಿ ಗೆಲ್ಲುವಲ್ಲಿ ಸಫಲವಾಗಿದೆ.
ಈಗಾಗಲೇ ರಾಹುಲ್ ದ್ರಾವಿಡ್ 2023 ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್, 2023ರ ಏಕದಿನ ವಿಶ್ವಕಪ್ ಫೈನಲ್ ಹಾಗೂ 2022ರಲ್ಲಿ ಟಿ20 ವಿಶ್ವಕಪ್ ಸೆಮಿಫೈನಲ್ ವರೆಗೂ ತಂಡವನ್ನು ಮುನ್ನಡೆಸಿದ ಕೀರ್ತಿ ಸಲ್ಲುತ್ತದೆ. ಇದು ಅವರ ಕೋಚಿಂಗ್ ವೃತ್ತಿ ಜೀವನದ ಎರಡನೇ ಟಿ20 ವಿಶ್ವಕಪ್ ಆಗಿದೆ. ಹೀಗಾಗಿ ಈ ಬಾರಿ ರಾಹುಲ್ ದ್ರಾವಿಡ್ ಅವರ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಕಪ್ ಗೆಲ್ಲಬಹುದು ಎಂಬ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗಿದೆ.
ಟೀಮ್ ಇಂಡಿಯಾ ಶನಿವಾರ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕಾದಾಟ ನಡೆಸಲಿದೆ. ಫೈನಲ್ ಪಂದ್ಯದಲ್ಲಿ ಮಾಯಾಜಿಂಕೆಯಂತೆ ಕಾಡುತ್ತಿರುವ ಟ್ರೋಫಿಯನ್ನು ಹೊತ್ತು ಟೀಮ್ ಇಂಡಿಯಾ ಭಾರತಕ್ಕೆ ಮರಳುವ ವಿಶ್ವಾಸವನ್ನು ಹೊಂದಿದೆ.
ಕ್ರಿಕೆಟ್ ಬದುಕು
ರಾಹುಲ್ ದ್ರಾವಿಡ್ ತಮ್ಮ ಕ್ರಿಕೆಟ್ ವೃತ್ತಿ ಜೀವನದಲ್ಲೂ ಮಾಡಲಾಗದ ಸಾಧನೆಯನ್ನು ಕೋಚ್ ಆಗಿ ಮಾಡಿದ್ದಾರೆ. ಇವರು ಏಕದಿನ ಕ್ರಿಕೆಟ್‌ನಲ್ಲಿ ಒಮ್ಮೆ ಮಾತ್ರ ವಿಶ್ವಕಪ್ ಫೈನಲ್ ಆಡಿದ ಅನುಭವ ಹೊಂದಿದ್ದಾರೆ. 2003ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ, ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿತ್ತು. ಈ ತಂಡದ ಭಾಗವಾಗಿದ್ದ ರಾಹುಲ್ ದ್ರಾವಿಡ್ ನಿರಾಸೆ ಕಂಡಿದ್ದರು. ಆದರೆ ಆ ಟೂರ್ನಿಯಲ್ಲಿ ದ್ರಾವಿಡ್ ತಮ್ಮ ಕ್ಷಮತೆಯನ್ನು ಸಾಬೀತು ಪಡಿಸಿದ್ದರು. ಈ ಟೂರ್ನಿಯಲ್ಲಿ ರಾಹುಲ್ ದ್ರಾವಿಡ್ ಆಡಿದ 11 ಪಂದ್ಯಗಳಲ್ಲಿ 2 ಅರ್ಧಶತಕ ಸೇರಿದಂತೆ 496 ರನ್ ಸಿಡಿಸಿದ್ದರು.












Click it and Unblock the Notifications