Ind vs NZ 3rd Test: ನ್ಯೂಜಿಲೆಂಡ್ ವಿರುದ್ಧ ಮೇಲುಗೈ ಸಾಧಿಸಿದ ಭಾರತ
ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ಮೇಲುಗೈ ಸಾಧಿಸಿದೆ. ಎರಡನೇ ದಿನದಾಟದ ಅಂತ್ಯಕ್ಕೆ ನ್ಯೂಜಿಲೆಂಡ್ ಎರಡನೇ ಇನ್ನಿಂಗ್ಸ್‌ನಲ್ಲಿ 171 ರನ್‌ಗಳಿಗೆ 9 ವಿಕೆಟ್ ಕಳೆದುಕೊಂಡಿದ್ದು 143 ರನ್‌ಗಳ ಮುನ್ನಡೆ ಸಾಧಿಸಿದೆ. ಭಾನುವಾರವೇ ಪಂದ್ಯ ಮುಕ್ತಾಯವಾಗುವುದು ಬಹುತೇಕ ಖಚಿತವಾಗಿದ್ದು, ಭಾರತಕ್ಕೆ ಗೆಲ್ಲಲು ಉತ್ತಮ ಅವಕಾಶ ಸಿಕ್ಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 235 ರನ್‌ಗಳಿಗೆ ಆಲೌಟ್ ಆಗಿತ್ತು. ಬಳಿಕ ಮೊದಲ ಇನ್ನಿಂಗ್ಸ್ ಬ್ಯಾಟಿಂಗ್ ಮಾಡಿದ ಭಾರತ 263 ರನ್‌ಗಳಿಗೆ ಆಲೌಟ್ ಆಗುವ ಮೂಲಕ 38 ರನ್‌ಗಳ ಮುನ್ನಡೆ ಪಡೆದುಕೊಂಡಿತು. ಶುಭಮನ್ ಗಿಲ್ 90 ರನ್ ಗಳಿಸಿದರೆ, ರಿಷಬ್ ಪಂತ್ 60 ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು. ವಾಷಿಂಗ್ಟನ್ ಸುಂದರ್ 36 ಎಸೆತಗಳಲ್ಲಿ ಅಜೇಯ 38 ರನ್ ಗಳಿಸಿ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸುವಲ್ಲಿ ಯಶಸ್ವಿಯಾದರು.

ಅಜಾಜ್ ಪಟೇಲ್ 5 ವಿಕೆಟ್ ಪಡೆಯುವ ಮೂಲಕ ಭಾರತಕ್ಕೆ ಮತ್ತೊಮ್ಮೆ ಆಘಾತ ನೀಡಿದರು. ಮ್ಯಾಟ್ ಹೆನ್ರಿ, ಗ್ಲೆನ್ ಫಿಲಿಪ್ಸ್, ಇಶ್ ಸೋಧಿ ತಲಾ ಒಂದು ವಿಕೆಟ್ ಪಡೆದರು. ಸ್ಪಿನ್ನರ್ ಗಳಿಗೆ ಪಿಚ್ ಸಹಕಾರಿಯಾಗಿದ್ದು ಬ್ಯಾಟಿಂಗ್ ಮಾಡುವುದು ಪಿಚ್‌ನಲ್ಲಿ ಕಷ್ಟವಾಗಿತ್ತು, ಆದರೂ ಗಿಲ್ ಮತ್ತು ಪಂತ್ ಅತ್ಯುತ್ತಮ ಇನ್ನಿಂಗ್ಸ್ ಭಾರತಕ್ಕೆ ನೆರವಾಯಿತು.
ಜಡೇಜಾ, ಅಶ್ವಿನ್ ಮೋಡಿ
ಈ ಸರಣಿಯಲ್ಲಿ ಇದೇ ಮೊದಲ ಬಾರಿಗೆ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ ಹಿನ್ನಡೆ ಅನುಭವಿಸಿತು. 28 ರನ್‌ಗಳ ಹಿನ್ನಡೆಯೊಂದಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿದ ನ್ಯೂಜಿಲೆಂಡ್‌ಗೆ ಆಕಾಶ್ ದೀಪ್ ಆರಂಭದಲ್ಲೇ ಆಘಾತ ನೀಡಿದರು. ನಾಯಕ ಟಾಮ್ ಲಾಥಮ್‌ರನ್ನು 1 ರನ್ ಗಳಿಸಿದ್ದಾಗ ಕ್ಲೀನ್ ಬೌಲ್ಡ್ ಮಾಡಿದರು.
ಬಳಿಕ ಭಾರತದ ಸ್ಪಿನ್ ಜೋಡಿ ರವೀಂದ್ರ ಜಡೇಜಾ ಮತ್ತು ರವಿಚಂದ್ರನ್ ಅಶ್ವಿನ್ ಮೋಡಿ ಮಾಡಿತು. ಇವರಿಬ್ಬರ ಅಮೋಘ ಬೌಲಿಂಗ್ ನೆರವಿನಿಂದ ನ್ಯೂಜಿಲೆಂಡ್ ದಿನದಾಟದ ಅಂತ್ಯಕ್ಕೆ 171 ರನ್‌ಗಳಿಗೆ 9 ವಿಕೆಟ್ ಕಳೆದುಕೊಂಡಿದೆ. ವಿಲ್ ಯಂಗ್ 51 ರನ್ ಗಳಿಸಿ ಮಿಂಚಿದರು.
ಈ ಸರಣಿಯಲ್ಲಿ ವಿಕೆಟ್ ಪಡೆಯುವಲ್ಲಿ ವಿಫಲವಾಗಿದ್ದ ರವಿಚಂದ್ರನ್ ಅಶ್ವಿನ್ ಮುಂಬೈ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನಲ್ಲಿ 3 ವಿಕೆಟ್ ಪಡೆಯುವ ಮೂಲಕ ಫಾರ್ಮ್‌ಗೆ ಮರಳಿದರು. ಮೊದಲ ಇನ್ನಿಂಗ್ಸ್‌ನಲ್ಲಿ 5 ವಿಕೆಟ್ ಪಡೆದು ಮಿಂಚಿದ್ದ ರವೀಂದ್ರ ಜಡೇಜಾ ಎರಡನೇ ಇನ್ನಿಂಗ್ಸ್‌ನಲ್ಲಿ ಕೂಡ 4 ವಿಕೆಟ್ ಪಡೆದು ನ್ಯೂಜಿಲೆಂಡ್‌ಗೆ ಆಘಾತ ಕೊಟ್ಟರು.
ನ್ಯೂಜಿಲೆಂಡ್ ಈಗ 143 ರನ್‌ಗಳ ಮುನ್ನಡೆ ಪಡೆದಿದ್ದು, ಭಾರತಕ್ಕೆ ಇನ್ನೊಂದು ವಿಕೆಟ್ ಬೇಕಾಗಿದೆ. ಪಿಚ್‌ನಲ್ಲಿ ಬ್ಯಾಟಿಂಗ್ ಮಾಡುವುದು ಕಷ್ಟಕರವಾಗಿದ್ದು 150 ರನ್‌ಗಳ ಗುರಿಯನ್ನು ಬೆನ್ನಟ್ಟುವುದು ಕೂಡ ಸವಾಲಾಗಲಿದೆ. ಭಾನುವಾರ ಬೇಗನೆ ನ್ಯೂಜಿಲೆಂಡ್ ತಂಡವನ್ನು ಆಲೌಟ್ ಮಾಡಿ, ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರೆ ಭಾರತಕ್ಕೆ ಗೆಲುವು ಸುಲಭವಾಗಲಿದೆ.












Click it and Unblock the Notifications