ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

India Squad for Asia Cup 2022: ಏಷ್ಯಾಕಪ್‌ಗೆ ತಂಡ ಪ್ರಕಟ, ಕೊಹ್ಲಿ, ರಾಹುಲ್ ವಾಪಸ್

|
Google Oneindia Kannada News

ಮುಂಬೈ, ಆಗಸ್ಟ್ 8: ಭಾರಿ ಕುತೂಹಲ ಕೆರಳಿಸಿದ್ದ ಏಷ್ಯಾಕಪ್‌ಗಾಗಿ ಟೀಂ ಇಂಡಿಯಾ ಪ್ರಕಟಗೊಂಡಿದೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳೀ(ಬಿಸಿಸಿಐ) ಆಯ್ಕೆ ಸಮಿತಿ ಸೋಮವಾರ ಸಂಜೆ ತಂಡವನ್ನು ಹೆಸರಿಸಿದೆ. ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಕೆಎಲ್ ರಾಹುಲ್ ತಂಡಕ್ಕೆ ಮರಳಿದ್ದಾರೆ. ಪ್ರಮುಖ ಬೌಲರ್‌ಗಳಾದ ಜಸ್ ಪ್ರೀತ್ ಬೂಮ್ರಾ ಹಾಗೂ ಹರ್ಷಲ್ ಪಟೇಲ್ ಅವರು ಗಾಯದ ಸಮಸ್ಯೆಯಿಂದ ಸರಣಿಯಿಂದ ಹೊರಗುಳಿಯಲಿದ್ದಾರೆ.

''ಬೂಮ್ರಾ ಹಾಗೂ ಹರ್ಷಲ್ ಇಬ್ಬರು ಗಾಯದಿಂದ ಚೇತರಿಸಿಕೊಂಡಿದ್ದು, ಸದ್ಯ ಬೆಂಗಳೂರಿನ ಎನ್ ಸಿಎನಲ್ಲಿ ಫಿಟ್ನೆಸ್ ತರಬೇತಿಯಲ್ಲಿ ತೊಡಗಿಕೊಂಡಿದ್ದಾರೆ'' ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಶ್ರೇಯಸ್ ಅಯ್ಯರ್, ಅಕ್ಸರ್ ಪಟೇಲ್ ಹಾಗೂ ದೀಪಕ್ ಚಾಹರ್ ಸ್ಟಾಂಡ್ ಬೈಆಗಿ ಅಯ್ಕೆಯಾಗಿದ್ದಾರೆ. ವೆಸ್ಟ್ ಇಂಡೀಸ್ ಪ್ರವಾಸದ ವೇಳೆ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದ್ದ ಅರ್ಷ್ ದೀಪ್ ಸಿಂಗ್ ತಂಡದಲ್ಲಿ ಉಳಿದುಕೊಂಡಿದ್ದಾರೆ.

Breaking News: Team India squad for Asia Cup 2022 announced by BCCI

ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ T20I ಸರಣಿಯಲ್ಲಿ ವಿಶ್ರಾಂತಿ ಪಡೆದ ನಂತರ ಲೆಗ್-ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಕೂಡ ತಂಡಕ್ಕೆ ಮರಳಿದ್ದಾರೆ, ಆದರೆ ಸಾಮಾನ್ಯ ಆಟಗಾರರಾದ ಹಾರ್ದಿಕ್ ಪಾಂಡ್ಯ, ರಿಷಬ್ ಪಂತ್ ಮತ್ತು ಸೂರ್ಯಕುಮಾರ್ ಯಾದವ್ ಎಲ್ಲರೂ 15 ಸದಸ್ಯರ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

39 ವರ್ಷಗಳ ನಂತರ ವೆಸ್ಟ್ ಇಂಡೀಸ್‌ ನೆಲದಲ್ಲಿ ಟೀಂ ಇಂಡಿಯಾ ದಾಖಲೆ39 ವರ್ಷಗಳ ನಂತರ ವೆಸ್ಟ್ ಇಂಡೀಸ್‌ ನೆಲದಲ್ಲಿ ಟೀಂ ಇಂಡಿಯಾ ದಾಖಲೆ

ಏಷ್ಯಾ ಕಪ್ ಯುಎಇಯಲ್ಲಿ ಆಗಸ್ಟ್ 27 ರಂದು ಆರಂಭವಾಗಲಿದ್ದು, ಭಾರತವು ಆಗಸ್ಟ್ 28 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ದುಬೈನಲ್ಲಿ ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. 15ನೇ ಏಷ್ಯಾಕಪ್ ಸೆಪ್ಟೆಂಬರ್ 11ರ ತನಕ ಪಂದ್ಯಾವಳಿ ನಡೆಯಲಿದೆ.

ದಿನೇಶ್ ಕಾರ್ತಿಕ್ ಫಿನಿಶರ್ ಪಾತ್ರ ನಿರ್ವಹಿಸುತ್ತಿಲ್ಲ: ಚರ್ಚೆ ಹುಟ್ಟುಹಾಕಿದ ಕೆ. ಶ್ರೀಕಾಂತ್ ಹೇಳಿಕೆದಿನೇಶ್ ಕಾರ್ತಿಕ್ ಫಿನಿಶರ್ ಪಾತ್ರ ನಿರ್ವಹಿಸುತ್ತಿಲ್ಲ: ಚರ್ಚೆ ಹುಟ್ಟುಹಾಕಿದ ಕೆ. ಶ್ರೀಕಾಂತ್ ಹೇಳಿಕೆ

ಎ ಗುಂಪಿನಲ್ಲಿ ಭಾರತ, ಪಾಕಿಸ್ತಾನ ಹಾಗೂ ಅರ್ಹತಾ ಸುತ್ತಿನಿಂದ ಆಯ್ಕೆಯಾದ ತಂಡ ಇದ್ದರೆ, ಬಿ ಗುಂಪಿನಲ್ಲಿ ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ಆಫ್ಘಾನಿಸ್ತಾನ ತಂಡ ಗಳಿವೆ. ಪ್ರತಿ ತಂಡಗಳು ಗುಂಪಿನ ಇತರೆ ತಂಡಗಳ ಜೊತೆ ಸೆಣೆಸಲಿವೆ, ಪ್ರತಿ ಗುಂಪಿನ ಟಾಪ್ 2 ತಂಡಗಳು ಸೂಪರ್ 4 ಹಂತಕ್ಕೇರಲಿವೆ. ಈ ಹಂತದ ಟಾಪ್ 2 ತಂಡಗಳು ಫೈನಲ್ ಹಂತಕ್ಕೇರಲಿವೆ.

ಅಕ್ಟೋಬರ್-ನವೆಂಬರ್‌ನಲ್ಲಿ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ 2022 ರ ಐಸಿಸಿ ಪುರುಷರ ಟಿ 20 ವಿಶ್ವಕಪ್‌ಗಾಗಿ ಅವರು ತಮ್ಮ ಸಿದ್ಧತೆಗಳನ್ನು ಹೆಚ್ಚಿಸುತ್ತಿರುವುದರಿಂದ ಪಂದ್ಯಾವಳಿಯು ಎಲ್ಲಾ ತಂಡಗಳಿಗೆ ಅತ್ಯಂತ ಮಹತ್ವದ್ದಾಗಿದೆ.

Breaking News: Team India squad for Asia Cup 2022 announced by BCCI

ಭಾರತ ತಂಡ: ರೋಹಿತ್ ಶರ್ಮಾ, ಕೆಎಲ್ ರಾಹುಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್(ವಿಕೆಟ್ ಕೀಪರ್), ದೀಪಕ್ ಹೂಡಾ, ದಿನೇಶ್ ಕಾರ್ತಿಕ್(ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಆರ್ ಅಶ್ವಿನ್, ಯುಜ್ವೇಂದ್ರ ಚಾಹಲ್, ರವಿ ಬಿಷ್ಣೋಯಿ, ಭುವನೇಶ್ವರ್ ಕುಮಾರ್, ಅರ್ಶ್ ದೀಪ್ ಸಿಂಗ್, ಅವೇಶ್ ಖಾನ್.

ಐಪಿಎಲ್ 2022ರ ಸೀಸನ್‌ನಲ್ಲಿ ಲಕ್ನೋ ಸೂಪರ್‌ಜೈಂಟ್ಸ್ ತಂಡವನ್ನು ಮುನ್ನಡೆಸಿದ್ದ ಕೆ.ಎಲ್ ರಾಹುಲ್, ನಂತರ ಇಂಗ್ಲೆಂಡ್ ಸರಣಿಗೂ ತಂಡದಿಂದ ಹೊರಗುಳಿದಿದ್ದರು. ಸದ್ಯ ಜರ್ಮನಿಯಲ್ಲಿ ಸರ್ಜರಿ ಯಶಸ್ವಿಯಾಗಿದ್ದು, ತಂಡಕ್ಕೆ ಸೇರಲು ಸಜ್ಜಾಗಿದ್ದಾರೆ. ಎನ್ ಸಿ ಎ ಅಂಗಳದಲ್ಲಿ ಅಭ್ಯಾಸ ಆರಂಭಿಸಿದ್ದರು. ಆದರೆ, ನಂತರ ಕೋವಿಡ್ 19ಗೆ ತುತ್ತಾಗಿದ್ದರಿಂದ ತಂಡಕ್ಕೆ ಮರಳಲು ಸಾಧ್ಯವಾಗಿರಲಿಲ್ಲ. ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಆಯ್ಕೆಯಾಗಿರುವ ಕೆಎಲ್ ರಾಹುಲ್ ಈ ಸರಣಿಯಿಂದ ಹೊರಗುಳಿದರು.

ಆಗಸ್ಟ್ ತಿಂಗಳಲ್ಲಿ ಜಿಂಬಾಬ್ವೆ ಪ್ರವಾಸ ಕೈಗೊಳ್ಳಲಿರುವ ತಂಡ ಮೂರು ಪಂದ್ಯಗಳ ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಲಿದೆ. ಆಗಸ್ಟ್ 18, 20 ಹಾಗೂ 22 ರಂದು ಪಂದ್ಯಾವಳಿ ನಿಗದಿಯಾಗಿದೆ.

English summary
BCCI announced 15-man Team India squad for Asia Cup 2022.Virat Kohli returns to the side, and KL Rahul is the vice-captain again, having fully recovered from his injury and Covid-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X