T20 Rankings: ಟಿ20 ಕ್ರಿಕೆಟ್‌ಗೆ ಉತ್ತುಂಗದಲ್ಲಿ ಕೊನೆಗೊಳಿಸಿದ ವಿರಾಟ್, ರೋಹಿತ್; ಹಾರ್ದಿಕ್ ನಂಬರ್ 1 ಆಲ್‌ರೌಂಡರ್
ಅಮೆರಿಕ ಮತ್ತು ವೆಸ್ಟ್ ಇಂಡೀಸ್ ನಲ್ಲಿ ನಡೆದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಟೀಮ್ ಇಂಡಿಯಾ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ತಂಡದ ಗೆಲುವಿನ ಪ್ರಮುಖ ಪಾತ್ರವನ್ನು ನೀಡಿದ್ದಾರೆ.
ಇದೇ ಟೂರ್ನಿಯ ಚಾಂಂಪಿಯನ್ ಪಟ್ಟವನ್ನು ಅಲಂಕರಿಸಿದ ಬಳಿಕ ನಾಯಕ ರೋಹಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ನಿವೃತ್ತಿ ಘೋಷಿಸಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿದ ಫಲವಾಗಿ ಇವರ ಶ್ರೇಯಾಂಕದಲ್ಲೂ ಏರಿಕೆ ಆಗಿದೆ.

ಟೂರ್ನಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದ್ದ ರೋಹಿತ್ ಶರ್ಮಾ ಹಾಗೂ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದ ವಿರಾಟ್ ರ್ಯಾಂಕಿಂಗ್‌ನಲ್ಲೂ ಏರಿಕೆ ಆಗಿದೆ. ಐಸಿಸಿ ತನ್ನ ನೂತನ ಟಿ20 ಅಂತಾರಾಷ್ಟ್ರೀಯ ಶ್ರೇಯಾಂಕವನ್ನು ಜುಲೈ 3 ರಂದು ಬಿಡುಗಡೆ ಮಾಡಿದೆ.
ಈ ಮೂಲಕ ಇಬ್ಬರು ತಮ್ಮ T20 ಅಂತರಾಷ್ಟ್ರೀಯ ವೃತ್ತಿಜೀವನವನ್ನು ಅದ್ಭುತ ರೀತಿಯಲ್ಲಿ ಕೊನೆಗೊಳಿಸಿದ್ದಾರೆ. ರೋಹಿತ್ ಶರ್ಮಾ ಈ ವಿಶ್ವಕಪ್‌ನಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಮತ್ತು ICC T20I ಶ್ರೇಯಾಂಕದಲ್ಲಿ ಎರಡು ಸ್ಥಾನಗಳನ್ನು ಗಳಿಸಿದ್ದಾರೆ. ರೋಹಿತ್ ಶರ್ಮಾ 541 ರೇಟಿಂಗ್ ಅಂಕಗಳೊಂದಿಗೆ 37ನೇ ಸ್ಥಾನಕ್ಕೆ ತಲುಪಿದ್ದಾರೆ. ಆದರೆ ವಿರಾಟ್ ಕೊಹ್ಲಿ 520 ರೇಟಿಂಗ್‌ನೊಂದಿಗೆ 40 ನೇ ಸ್ಥಾನಕ್ಕೆ ತಲುಪಿದ್ದಾರೆ.
ವಿರಾಟ್ ಕೊಹ್ಲಿ T20 ವಿಶ್ವಕಪ್ 2024 ರ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 59 ಎಸೆತಗಳಲ್ಲಿ 76 ರನ್‌ಗಳ ಮ್ಯಾಚ್ ವಿನ್ನಿಂಗ್ ಪ್ರದರ್ಶನ ನೀಡಿ ತಮ್ಮ T20 ವೃತ್ತಿಜೀವನವನ್ನು ಕೊನೆಗೊಳಿಸಿದರು. ರೋಹಿತ್ ಶರ್ಮಾ ವಿಶ್ವಕಪ್‌ನಲ್ಲಿ 156.70 ಸ್ಟ್ರೈಕ್ ರೇಟ್ ಮತ್ತು 45.81 ಸರಾಸರಿಯಲ್ಲಿ 257 ರನ್ ಗಳಿಸಿದ್ದಾರೆ. ಇಬ್ಬರೂ ಆಟಗಾರರು ತಮ್ಮ ವಿಶೇಷ ಪ್ರದರ್ಶನದ ಫಲವಾಗಿ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ರೋಹಿತ್ ಶರ್ಮಾ ಅವರನ್ನು ಐಸಿಸಿ ಟಿ20 ವಿಶ್ವಕಪ್ ತಂಡದ ನಾಯಕರನ್ನಾಗಿಯೂ ಮಾಡಲಾಗಿದೆ.
ಸೂರ್ಯಕುಮಾರ್ ಯಾದವ್‌ಗೆ ಎರಡನೇ ಸ್ಥಾನ
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಸೂರ್ಯಕುಮಾರ್ ಯಾದವ್ ಟಿ20 ರ್ಯಾಂಕಿಂಗ್‌ನಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಟೂರ್ನಿಯಲ್ಲಿ ಸೂರ್ಯಕುಮಾರ್ ಯಾದವ್ ಆಡಿದ 8 ಪಂದ್ಯಗಳಲ್ಲಿ 2 ಅರ್ಧಶತಕಗಳ ಸಹಾಯದಿಂದ 199 ರನ್ ಸಿಡಿಸಿದ್ದಾರೆ. ಇವರು ಶ್ರೇಯಾಂಕದಲ್ಲಿ 838 ಅಂಕಗಳನ್ನು ಕಲೆ ಹಾಕಿ ಎರಡನೇ ಸ್ಥಾನದಲ್ಲಿದ್ದಾರೆ. ಇವರು ಆಸ್ಟ್ರೇಲಿಯಾದ ಟ್ರಾವಿಸ್ ಹೆಡ್‌ಗಿಂತ 6 ಅಂಕಗಳು ಮಾತ್ರ ಹಿಂದೆ ಇದೆ.

ಇಂಗ್ಲೆಂಡ್‌ನ ಬ್ಯಾಟರ್ ಫಿಲ್ ಸಾಲ್ಟ್ ಮೂರನೇ ಸ್ಥಾನವನ್ನು ಪಡೆದಿದ್ದಾರೆ. ಪಾಕ್‌ನ ಬಾಬರ್ ಅಜಮ್, ಮೊಹಮ್ಮದ್ ರಿಜ್ವಾನ್, ಇಂಗ್ಲೆಂಡ್‌ನ ಜೋಸ್ ಬಟ್ಲರ್ ಮುಂದಿನ ಕ್ರಮಾಂಕದಲ್ಲಿ ಕಾಣಿಸಿಕೊಂಡಿದ್ದಾರೆ. ಟಿ20 ವಿಶ್ವಕಪ್‌ನಲ್ಲಿ ಒಂದೇ ಒಂದು ಪಂದ್ಯವನ್ನು ಆಡದ ಯಶಸ್ವಿ ಜೈಸ್ವಾಲ್ ಸದ್ಯ ಏಳನೇ ಸ್ಥಾನದಲ್ಲಿದ್ದಾರೆ.
ಅಕ್ಷರ್ ಪಟೇಲ್, ಕುಲ್‌ದೀಪ್ ಯಾದವ್‌ಗೆ ಬಡ್ತಿ
ಟಿ20 ವಿಶ್ವಕಪ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಅಕ್ಷರ್ ಪಟೇಲ್ ಹಾಗೂ ಕುಲ್‌ದೀಪ್ ಯಾದವ್ ಶ್ರೇಯಾಂಕದಲ್ಲಿ ಏರಿಕೆ ಕಂಡಿದ್ದಾರೆ. ಅಕ್ಷರ್ ಪಟೇಲ್ ಒಂದು ಸ್ಥಾನ ಬಡ್ತಿ ಪಡೆದ ಅವರು ಏಳನೇ ಸ್ಥಾನ ಹಾಗೂ ಕುಲ್‌ದೀಪ್ ಯಾದವ್ ಮೂರು ಸ್ಥಾನ ಜಿಗಿತ ಕಂಡು ಒಂಬತ್ತನೇ ಸ್ಥಾನಕ್ಕೆ ಏರಿಕೆ ಕಂಡಿದ್ದಾರೆ.

ಹಾರ್ದಿಕ್ ಪಾಂಡ್ಯ ನಂಬರ್ 1 ಆಲ್‌ರೌಂಡರ್
ಟೀಮ್ ಇಂಡಿಯಾ ಟಿ20 ವಿಶ್ವಕಪ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿರುವ ಹಾರ್ದಿಕ್ ಪಾಂಡ್ಯ ಅವರು ಆಲ್‌ರೌಂಡರ್ ಶ್ರೇಯಾಂಕದ ಲೆಕ್ಕಾಚಾರದಲ್ಲಿ ಭರ್ಜರಿ ಜಿಗಿತ ಕಂಡಿದ್ದಾರೆ. ಇವರು ಒಟ್ಟು 222 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ವನಿಂದು ಹಸರಂಗಾ ಇಷ್ಟೇ ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಆಸೀಸ್‌ನ ಮಾರ್ನಸ್ ಸ್ಟೋಯಿನಿಸ್ ಮೂರನೇ ಸ್ಥಾನದಲ್ಲಿದ್ದಾರೆ.












Click it and Unblock the Notifications