T20 World Cup: ಹಾರ್ದಿಕ್ ಪಾಂಡ್ಯ ಸ್ಥಾನದ ಮೇಲೆ ಅಪಾಯದ ತೂಗುಗತ್ತಿ
ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಬಿಸಿಸಿಐ ಆಯ್ಕೆ ಸಮಿತಿಯ ಮುಖ್ಯಸ್ಥ ಅಜಿತ್ ಅಗರ್ಕರ್ ಹಾಗೂ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಇಂದು ಭೇಟಿಯಾಗಿದ್ದಾರೆ ಎಂಬ ವರದಿಗಳು ಬಂದಿವೆ. ಈ ಮೂವರು ಟಿ20 ವಿಶ್ವಕಪ್‌ಗೆ ತಂಡವನ್ನು ಕಟ್ಟುವ ನೀಟಿನಲ್ಲಿ ಭೇಟಿ ಆಗಿರಬಹುದು ಎಂದು ಅಂದಾಜಿಸಲಾಗಿದೆ. ಈ ಸ್ಥಾನದ ಮೇಲೆ ಕಣ್ಣು ನೆಟ್ಟಿದ್ದ ಟೀಮ್ ಇಂಡಿಯಾದ ಸ್ಟಾರ್ ಪ್ಲೇಯರ್ ಅವರ ಸ್ಥಾನ ಸಂಕಷ್ಟದಲ್ಲಿದೆ.
ಐಪಿಎಲ್ ಆರಂಭಕ್ಕೂ ಮುನ್ನವೇ ಗುಜರಾತ್ ಟೈಟನ್ಸ್ ತಂಡದಿಂದ ಟ್ರೇಡ್ ಆಗಿದ್ದ ಹಾರ್ದಿಕ್ ಪಾಂಡ್ಯ, ಮುಂಬೈ ಇಂಡಿಯನ್ಸ್ ತಂಡವನ್ನು ಮುನ್ನಡೆಸುತ್ತಿದ್ದಾರೆ. ಹಾರ್ದಿಕ್ ಪಾಂಡ್ಯ ಟೂರ್ನಿಯಲ್ಲಿ ಧಮಾಕೆದಾರ್ ಪ್ರದರ್ಶನ ನೀಡುವಲ್ಲಿ ವಿಫಲರಾಗುತ್ತಿದ್ದಾರೆ. ಇವರ ಆಟದ ಮೇಲೆ ಟೀಕೆಗಳು ಕೇಳು ಬರುತ್ತಿವೆ. ಹೀಗಿರುವಾಗ ಹಾರ್ದಿಕ್ ಟಿ20 ವಿಶ್ವಕಪ್‌ನ ತಂಡದಲ್ಲಿ ಸ್ಥಾನ ಪಡೆಯುತ್ತಾರಾ ಎಂಬ ಪ್ರಶ್ನೆಗಳು ಎದ್ದಿವೆ.

ಇನ್ನೇನು ಕೆಲವೇ ದಿನಗಳಲ್ಲಿ ಟಿ20 ವಿಶ್ವಕಪ್‌ಗೆ 15 ಜನರ ತಂಡವನ್ನು ಬಿಸಿಸಿಐ ಪ್ರಕಟಿಸಲಿದೆ. ಆಯ್ಕೆದಾರರು ಐಪಿಎಲ್ ಮೇಲೂ ಕಣ್ಣು ನೆಟ್ಟಿದ್ದಾರೆ. ಈ ಆವೃತ್ತಿಯಲ್ಲಿ ಎಲ್ಲರ ಚಿತ್ತವನ್ನು ಕದ್ದಿದ್ದ ಪ್ಲೇಯರ್ ಹಾರ್ದಿಕ್ ಪಾಂಡ್ಯ ಸ್ಥಿರ ಪ್ರದರ್ಶನ ನೀಡುತ್ತಿಲ್ಲ. ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗುತ್ತಿಲ್ಲ.
ಐಪಿಎಲ್ ಪ್ರದರ್ಶನದ ಮೇಲೆ ಭವಿಷ್ಯ
ಐಪಿಎಲ್‌ನ ಉಳಿದ ಪಂದ್ಯಗಳಲ್ಲಿ ಹಾರ್ದಿಕ್ ಪಾಂಡ್ಯ ಬೌಲಿಂಗ್ ಪ್ರದರ್ಶನ ಹೇಗೆ ನೀಡುತ್ತಾರೆ ಎಂಬುದರ ಬಗ್ಗೆ ಇವರ ಆಯ್ಕೆಯನ್ನು ಪರಿಗಣಿಸಲಾಗುತ್ತದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಇವರು ಐಪಿಎಲ್‌ನಲ್ಲಿ ಸ್ಥಿರ ಬೌಲಿಂಗ್ ಮಾಡುವ ಅನಿವಾರ್ಯತೆ ಇದೆ. ವರದಿಯ ಪ್ರಕಾರ, ಸಭೆಯಲ್ಲಿ ಸೀಮ್ ಬೌಲಿಂಗ್ ಜೊತೆಗೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡುವ ಆಟಗಾರನ ಅಗತ್ಯತೆಯ ಬಗ್ಗೆ ಸಾಕಷ್ಟು ಚರ್ಚೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಇದುವರೆಗೆ ಮುಂಬೈ ಇಂಡಿಯನ್ಸ್ ಆಡಿರುವ 6 ಪಂದ್ಯಗಳ ಪೈಕಿ ಹಾರ್ದಿಕ್ 4 ಪಂದ್ಯಗಳಲ್ಲಿ ಬೌಲಿಂಗ್ ಮಾಡಿದ್ದಾರೆ. ಇವರು ರನ್ ನೀಡಿ ಕೈ ಸುಟ್ಟುಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ಈಗ 4 ಪಂದ್ಯಗಳಲ್ಲಿ ಕೇವಲ ಮೂರು ವಿಕೆಟ್‌ಗಳನ್ನು ಪಡೆದಿದ್ದಾರೆ.

ನಾಯಕನಾಗಿ ಕಳಪೆ ಸಾಧನೆ
ಮುಂಬೈ ಇಂಡಿಯನ್ಸ್ ನಾಯಕರಾಗಿ ಹಾರ್ದಿಕ್ ಪಾಂಡ್ಯ ವೈಫಲ್ಯ ಅನುಭವಿಸಿದ್ದಾರೆ. ಆರಂಭಿಕ ಸತತ ಮೂರು ಪಂದ್ಯಗಳನ್ನು ಸೋತ ಮುಂಬೈ ಕಳಪೆ ಪ್ರದರ್ಶನ ನೀಡಿತ್ತು. ಸದ್ಯ ಮುಂಬೈ ಆಡಿರುವ 6 ಪಂದ್ಯಗಳಲ್ಲಿ 2 ಗೆಲುವು ದಾಖಲಿಸಿದ್ದು, 4 ಅಂಕಗಳೊಂದಿಗೆ ಎಂಟನೇ ಸ್ಥಾನದಲ್ಲಿದೆ.
ಎಂತಹ ಪ್ಲೇಯರ್ ಹುಡುಕುತ್ತಿದೆ ಆಯ್ಕೆ ಸಮಿತಿ
ಬಿಸಿಸಿಐನ ಆಯ್ಕೆ ಸಮಿತಿಯು ತಂಡದಲ್ಲಿ ವೇಗದ ಬೌಲರ್ ಹಾಗೂ ಮಿಡ್ಲ್ ಆರ್ಡರ್ ಹುಡುಕಾಟದಲ್ಲಿದೆ. ಇದು ತಂಡದಲ್ಲಿ ಸಮತೋಲನವನ್ನು ಸೃಷ್ಟಿಸುತ್ತದೆ. ಅಲ್ಲದೆ ತಂಡಕ್ಕೆ ಹೆಚ್ಚಿನ ಬೌಲಿಂಗ್ ಆಯ್ಕೆಗಳನ್ನು ನೀಡುತ್ತದೆ. ಈ ಸ್ಥಾನಕ್ಕೆ ಹಾರ್ದಿಕ್ ಪಾಂಡ್ಯ ಸರಿಯಾಗಿ ಹೊಂದುತ್ತಾರೆ. ಆದರೆ ಇತ್ತೀಚಿನ ಅವರ ಪ್ರದರ್ಶನ ಪ್ರಶ್ನೆಗಳು ಏಳುವಂತೆ ಮಾಡಿವೆ.
ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್‌ನಲ್ಲಿ ಬಾಂಗ್ಲಾದೇಶದ ವಿರುದ್ಧ ಪಂದ್ಯದ ವೇಳೆ ಗಾಯಗೊಂಡಿದ್ದ ಹಾರ್ದಿಕ್ ಪಾಂಡ್ಯ, ಐಪಿಎಲ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಫಿಟ್ನೆಸ್ ಬಗ್ಗೆಯೂ ಪ್ರಶ್ನೆಗಳು ಎದ್ದಿದ್ದವು. ಆದರೆ ಎನ್‌ಸಿಎ ಇವರನ್ನು ಫಿಟ್ ಎಂದು ಘೋಷಿಸಿತು. ಅಲ್ಲದೆ ಎಂಐ ತಂಡವನ್ನು ಸದ್ಯ ಹಾರ್ದಿಕ್ ಮುನ್ನಡೆಸುತ್ತಿದ್ದಾರೆ. ಇನ್ನುಳಿದ ಪಂದ್ಯಗಳಲ್ಲಿ ಹಾರ್ದಿಕ್ ಯಾವ ರೀತಿ ಪ್ರದರ್ಶನ ನೀಡಲಿದ್ದಾರೆ ಮತ್ತು ಅವರ ಬಗ್ಗೆ ಆಯ್ಕೆಗಾರರು ಯಾವ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications