ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರಿನಲ್ಲಿ ಫಿಬಾ ಅಂಡರ್ 18 ಮಹಿಳಾ‌ ಏಷ್ಯನ್ ಬ್ಯಾಸ್ಕೆಟ್‌ಬಾಲ್‌ ಚಾಂಪಿಯನ್ ಶಿಪ್

|
Google Oneindia Kannada News

ಬೆಂಗಳೂರು, ಆಗಸ್ಟ್ 19: ಬೆಂಗಳೂರಿನಲ್ಲಿ ಸೆಪ್ಟೆಂಬರ್ 5 ರಿಂದ 11 ರವರೆಗೂ ಫಿಬಾ ಅಂಡರ್ 18 ಮಹಿಳಾ‌ ಏಷ್ಯನ್ ಬ್ಯಾಸ್ಕೆಟ್‌ಬಾಲ್‌ ಚಾಂಪಿಯನ್ ಶಿಪ್ ನಡೆಯಲಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣ ಹಾಗೂ ಕೋರಮಂಗಲದ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್ ನಡೆಯಲಿದೆ. ಭಾರತ, ಜಪಾನ್, ಚೀನಾ, ಇಂಡೋನೇಷ್ಯಾ, ಮಲೇಷ್ಯಾ ಸೇರಿದಂತೆ ಒಟ್ಟು 16 ತಂಡಗಳು ಭಾಗಿಯಾಗಲಿವೆ. ಈ ಕ್ರೀಡಾಕೂಟದಲ್ಲಿ 16 ಅಂತರಾಷ್ಟ್ರೀಯ ತಂಡಗಳ 192 ಕ್ರೀಡಾಪಟುಗಳು, 96 ಅಧಿಕಾರಿಗಳು, 100 ಸ್ವಯಂಸೇವಕರು ಭಾಗವಹಿಸಲಿದ್ದಾರೆ.

ಕ್ರೀಡಾಪಟುಗಳಿಗಾಗಿ ಆನ್‌ಲೈನ್ ಪೋರ್ಟಲ್ ಆರಂಭಿಸಿದ ಕ್ರೀಡಾ ಸಚಿವಾಲಯಕ್ರೀಡಾಪಟುಗಳಿಗಾಗಿ ಆನ್‌ಲೈನ್ ಪೋರ್ಟಲ್ ಆರಂಭಿಸಿದ ಕ್ರೀಡಾ ಸಚಿವಾಲಯ

ವಿಜೇತರಿಗೆ ಸ್ಪೈನ್‌ ಫಿಬಾ ವಿಶ್ವಕಪ್‌ಗೆ ಆಯ್ಕೆ

ಈ ಕ್ರೀಡಾಕೂಟದಲ್ಲಿ ವಿಜೇತರಾದ ಮೊದಲ 4 ತಂಡಗಳು 2023ರ ಜುಲೈನಲ್ಲಿ ಸ್ಪೇನ್‌ನಲ್ಲಿ ನಡೆಯಲಿರುವ ಅಂಡರ್- 19 ಮಹಿಳೆಯರ ಫಿಬಾ ವಿಶ್ವ ಕಪ್ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆಯಲಿದ್ದಾರೆ ಎಂದು ಸಚಿವರು ತಿಳಿಸಿದರು.

 The FIBA ​​Under-18 Womens Asian Basketball Championship in Bengaluru from September 5 to 11

ವಿಶ್ವದರ್ಜೆಯ ಕ್ರೀಡಾಕೂಟ ಆಯೋಜಿಸಲು ಸಶಕ್ತ

ಈ ಕ್ರೀಡಾಕೂಟಕ್ಕೆ ಫೆಡರೇಷನ್ ಆಫ್ ಬ್ಯಾಸ್ಕೆಟ್ ಬಾಲ್ ಅಸೋಸಿಯೇಷನ್ ಮಾರ್ಗಸೂಚಿ ಪ್ರಕಾರ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದ್ದು, ನಮ್ಮ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯೂ ಈ ಟೂರ್ನಿಗೆ ಅಗತ್ಯವಿರುವ ಎಲ್ಲಾ ಸಹಕಾರ ನೀಡುತ್ತಿದೆ. ಮುಕ್ತಾಯ ಸಮಾರಂಭ 11 ನೇ ತಾರೀಖಿನಂದು ನಡೆಯಲಿದ್ದು ಈ ಕಾರ್ಯಕ್ರಮಕ್ಕೆ ಗೌರವಾನ್ವಿತ ರಾಜ್ಯಪಾಲರು, ಮುಖ್ಯಮಂತ್ರಿಗಳು ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ. ಬೆಂಗಳೂರಿಗೆ ಈ ಕ್ರೀಡಾಕೂಟದ ಆತಿಥ್ಯವಹಿಸಲು ಅವಕಾಶ ಸಿಕ್ಕಿರುವುದು ನಮ್ಮೆಲ್ಲರಿಗೆ ಸಂತಸ ತಂದಿದೆ. ವಿಶ್ವದರ್ಜೆಯ ಯಾವುದೇ ಕ್ರೀಡಾಕೂಟವನ್ನು ಆಯೋಜಿಸಲು ನಾವು ಸಶಕ್ತರಾಗಿದ್ದೇವೆ ಎಂದು ಸಚಿವ ಡಾ.ನಾರಾಯಣಗೌಡ ಹೇಳಿದರು.

ಇದೇ ವೇಳೆ ಇರಾನ್‌ನಲ್ಲಿ ನಡೆಯಲಿರುವ ಫಿಬಾ ಅಂಡರ್ 18 ಪುರುಷರ ಬ್ಯಾಸ್ಕೆಟ್ ಬಾಲ್ ಚಾಂಪಿಯನ್ ಶಿಪ್‌ನಲ್ಲಿ ಪಾಲ್ಗೊಳ್ಳುವ ಭಾರತ ತಂಡದ ಆಟಗಾರರಿಗೆ ಕಿಟ್‌ಗಳನ್ನು ನೀಡಿ ಶುಭ ಹಾರೈಸಿದರು.

 The FIBA ​​Under-18 Womens Asian Basketball Championship in Bengaluru from September 5 to 11

ಇಂಡಿಯನ್ ಬ್ಯಾಸ್ಕೆಟ್ ಬಾಲ್ ಫೆಡರೇಷನ್ ಅಧ್ಯಕ್ಷ ಕೆ ಗೋವಿಂದರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ ಉಪಸ್ಥಿತರಿದ್ದರು.

English summary
The FIBA ​​Under-18 Women's Asian Basketball Championship will be held in Bengaluru from September 5 to 11. A total of 16 teams including India, Japan, China, Indonesia and Malaysia will participate. 192 athletes, 96 officials, 100 volunteers from 16 international teams will participate in this sports event, Know more,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X