RCB: ಆರ್ ಸಿಬಿ ಪ್ಲೇಆಫ್ ಲೆಕ್ಕಾಚಾರ; ಇನ್ಮುಂದೆ ಪ್ರತಿ ಪಂದ್ಯ ಕೂಡ ಫೈನಲ್!
ಮಹಿಳಾ ಪ್ರೀಮಿಯರ್ ಲೀಗ್ (WPL) 2025 ಆವೃತ್ತಿಯಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದ ಆರ್ ಸಿಬಿ ಬಳಿಕ ಬೆಂಗಳೂರಿನಲ್ಲಿ ನಡೆದ ನಾಲ್ಕು ಪಂದ್ಯಗಳನ್ನು ಸೋತು ಸಂಕಷ್ಟಕ್ಕೆ ಸಿಲುಕಿದೆ. ಆರ್ ಸಿಬಿ ಆಡಿರುವ 6 ಪಂದ್ಯಗಳಲ್ಲಿ ಎರಡು ಪಂದ್ಯಗಳನ್ನು ಮಾತ್ರ ಗೆದ್ದಿದ್ದು 4 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.
ಸುಳಭವಾಗಿ ಪ್ಲೇಆಫ್ ತಲುಪುವ ಅವಕಾಶ ಕಳೆದುಕೊಂಡಿದ್ದು ಆರ್ ಸಿಬಿ ಪ್ಲೇಆಫ್ ಹಾದಿ ಮತ್ತಷ್ಟು ಕಠಿಣವಾಗಿದೆ. ಆರ್ ಸಿಬಿ ಪ್ಲೇಆಫ್ ಪ್ರವೇಶಿಸಬೇಕು ಎಂದರೆ ಇನ್ನುಳಿದ ಎರಡೂ ಪಂದ್ಯಗಳಲ್ಲಿ ದೊಡ್ಡ ಅಂತರದಲ್ಲಿ ಗೆದ್ದು ನಾಲ್ಕು ಪಾಯಿಂಟ್ ಪಡೆಯುವ ಜೊತೆಗೆ ರನ್ ರೇಟ್ ಕೂಡ ಸುಧಾರಿಸಿಕೊಳ್ಳಬೇಕಾಗುತ್ತದೆ.

ಮುಂದಿನ ಎರಡು ಪಂದ್ಯಗಳನ್ನು ಯುಪಿ ವಾರಿಯರ್ಸ್ ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ ಆಡಲಿದೆ. ಈ ಎರಡೂ ಪಂದ್ಯಗಳು ಮಾಡು ಇಲ್ಲವೇ ಮಡಿ ಪಂದ್ಯಗಳಾಗಿದೆ. ಎರಡೂ ಪಂದ್ಯ ಗೆದ್ದರು ಉಳಿದ ತಂಡಗಳ ಫಲಿತಾಂಶಗಳ ಮೇಲೆ ಕೂಡ ಅವಲಂಬಿತವಾಗಿದೆ.
ಮುಂಬೈ ಇಂಡಿಯನ್ಸ್ ಮತ್ತು ಯುಪಿ ವಾರಿಯರ್ಸ್ ಮುಂದಿನ ಮೂರು ಪಂದ್ಯಗಳಲ್ಲಿ ಕನಿಷ್ಠ ಎರಡು ಪಂದ್ಯಗಳನ್ನು ಸೋತರೆ ಮಾತ್ರ ಆರ್ ಸಿಬಿಗೆ ಪ್ಲೇಆಫ್ ಅವಕಾಶ ಇರಲಿದೆ.
ತವರಿನಲ್ಲಿ ಸತತ ನಾಲ್ಕು ಪಂದ್ಯಗಳನ್ನು ಸೋತಿದ್ದು ಹಾಲಿ ಚಾಂಪಿಯನ್ನರಿಗೆ ದೊಡ್ಡ ಹೊಡೆತವನ್ನೇ ನೀಡಿದೆ. ಯುಪಿ ವಾರಿಯರ್ಸ್ ವಿರುದ್ಧ ಸುಲಭವಾಗಿ ಗೆಲ್ಲಬಹುದಾಗಿದ್ದ ಪಂದ್ಯವನ್ನು ಸೋತು ಪಂದ್ಯಾವಳಿಯಿಂದ ಹೊರಬೀಳುವ ಆತಂಕದಲ್ಲಿದೆ.
ತವರಿನಲ್ಲಿ ಆಡುವುದೇ ದೊಡ್ಡ ಸಮಸ್ಯೆ?
ಆರ್ ಸಿಬಿ ತಂಡಕ್ಕೆ ತವರಿನಲ್ಲಿ ಆಡುವುದೇ ದೊಡ್ಡ ಸಮಸ್ಯೆಯಾಗಿದೆ. ಕಳೆದ ಆವೃತ್ತಿಯಲ್ಲಿ ಕೂಡ ತವರಿನಲ್ಲಿ ಪಂದ್ಯಗಳನ್ನು ಗೆಲ್ಲುವಲ್ಲಿ ತಡಕಾಡಿದ್ದ ಆರ್ ಸಿಬಿ ದೆಹಲಿಯಲ್ಲಿ ಸತತವಾಗಿ ಪಂದ್ಯಗಳನ್ನು ಗೆದ್ದಿದ್ದು ಮಾತ್ರವಲ್ಲದೆ ಚಾಂಪಿಯನ್ ಕೂಡ ಆಗಿತ್ತು.
ಮಹಿಳಾ ತಂಡಕ್ಕೆ ಮಾತ್ರವಲ್ಲ ಪುರುಷ ತಂಡಕ್ಕೂ ಕೂಡ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗೆಲುವು ಪಡೆಯುವುದು ಕಠಿಣ ಸವಾಲಾಗಿದೆ. ತವರಿನಲ್ಲಿ ಕಳಪೆ ಗೆಲುವಿನ ಸರಾಸರಿಯನ್ನು ಹೊಂದಿರುವ ತಂಡ ಆರ್ ಸಿಬಿಯಾಗಿದೆ. ಕಪ್ ಗೆಲ್ಲದೇ ಇದ್ದರೂ ಆರ್ ಸಿಬಿಗೆ ಸಿಗುವ ಅಭಿಮಾನಿಗಳ ಬೆಂಬಲ ಕಡಿಮೆಯೇನಲ್ಲ, ಕಿಕ್ಕಿರಿದು ಸೇರುವ ಅಭಿಮಾನಿಗಳು ಮೈದಾನದಿಂದ ಗೆಲುವಿನ ಖುಷಿಯಲ್ಲಿ ಹೋಗುವುದಕ್ಕಿಂತ ಸೋಲಿನ ನೋವಿನಲ್ಲಿ ಹೋಗುವುದೇ ಹೆಚ್ಚಾಗಿದೆ.
-
Virat Kohli: ಘನತೆಗೆ ತಕ್ಕ ಆಟ ಇಲ್ಲ; ವಿರಾಟ್ ಕೊಹ್ಲಿ ಬದಲಿಗೆ ಬೆಥೆಲ್ ಆಡಿಸುವ ಸೂಚನೆ ನೀಡಿದ್ರಾ ಭಾರತದ ಮಾಜಿ ಕ್ರಿಕೆಟಿಗ? -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್ -
RCB Playing 11 Prediction: ಎಲ್ಎಸ್ಜಿ ವಿರುದ್ಧ ಆರ್ಸಿಬಿ ಪ್ಲೇಯಿಂಗ್ 11 ಭವಿಷ್ಯ -
RCB Vs LSG: ಬೆಂಗಳೂರಿನಲ್ಲಿ ಆರ್ಸಿಬಿ-ಎಲ್ಎಸ್ಜಿ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
ಸುಮ್ನೆ ಬಾಲ್ ಕೊಡೋ ಮಾರಾಯ.. ನಾ ಕೊಡಕಿಲ್ಲ ಏನ್ ಮಾಡ್ತೀರಾ? ಟಿಮ್ ಡೇವಿಡ್-ಅಂಪೈರ್ ಫನ್ನಿ ವಿಡಿಯೋ ಭಾರೀ ವೈರಲ್ -
ಬೆಂಗಳೂರಲ್ಲಿ RCB ಪಂದ್ಯ: ಏ.15ರಂದು ಸ್ಟೇಡಿಯಂ ಸುತ್ತ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ












Click it and Unblock the Notifications