Virat Kohli: ನಿವೃತ್ತಿ ಬಗ್ಗೆ ಮಹತ್ವದ ಹೇಳಿಕೆ ನೀಡಿದ ವಿರಾಟ್ ಕೊಹ್ಲಿ
2025ರ ವರ್ಷದ ಆರಂಭ ಭಾರತ ತಂಡಕ್ಕೆ ಉತ್ತಮವಾಗಿ ಏನೂ ಇರಲಿಲ್ಲ. ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಭಾರತ ಹೀನಾಯ ಸೋಲು ಕಂಡು ವ್ಯಾಪಕ ಟೀಕೆಗೆ ಗುರಿಯಾಗಿತ್ತು. ಬಳಿಕ ಭಾರತದ ಸ್ಟಾರ್ ಬ್ಯಾಟರ್ ಗಳಿಗೂ ರಣಜಿ ಟ್ರೋಫಿಯಲ್ಲಿ ಆಡುವಂತೆ ಬಿಸಿಸಿಐ ಖಡಕ್ ಸೂಚನೆ ಕೊಟ್ಟಿತ್ತು. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಕೆಎಲ್ ರಾಹುಲ್ ಕೂಡ ರಣಜಿ ಪಂದ್ಯಗಳಲ್ಲಿ ಆಡಿದ್ದರು.
ಬಳಿಕ ನಡೆದ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಭಾರತ ಸತತ ಮೂರು ಪಂದ್ಯಗಳನ್ನು ಗೆದ್ದು ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡಿತ್ತು. ಆದರೂ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಅವರ ಫಾರ್ಮ್ ಚಿಂತೆಗೆ ಕಾರಣವಾಗಿತ್ತು, ಆದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಫೈನಲ್ ತಲುಪಿದ್ದಲ್ಲದೆ ಪ್ರಶಸ್ತಿಯನ್ನು ಕೂಡ ಗೆದ್ದುಕೊಂಡಿದೆ.

ಫೈನಲ್ ಗೆದ್ದ ಬಳಿಕ ಭಾರತದ ಸಂಭ್ರಮ
ನ್ಯೂಜಿಲೆಂಡ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸುತ್ತಿದ್ದಂತೆ ಭಾರತೀಯ ಆಟಗಾರರ ಸಂಭ್ರಮ ಮುಗಿಲುಮುಟ್ಟಿತ್ತು. ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ವಿಕೆಟ್ ಬಳಸಿಕೊಂಡೇ ದಾಂಡಿಯಾ ನೃತ್ಯ ಮಾಡುವ ಮೂಲಕ ಖುಷಿ ಪಟ್ಟರು.
ಭಾರತ ಟ್ರೋಫಿ ಗೆದ್ದರೂ ಅಭಿಮಾನಿಗಳಲ್ಲಿ ಅದೊಂದು ಆತಂಕ ಕಾಡುತ್ತಿತ್ತು. 2024ರಲ್ಲಿ ಟಿ20 ವಿಶ್ವಕಪ್ ಗೆಲ್ಲುತ್ತಿದ್ದಂತೆ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ವಿದಾಯ ಘೋಷಣೆ ಮಾಡಿದ್ದರು. ಈಗಲೂ ಏನಾದರೂ ಇಬ್ಬರೂ ಏಕದಿನ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದರೆ ಎನ್ನುವ ಆತಂಕವಿತ್ತು.
ಆದರೆ ಫೈನಲ್ ಪಂದ್ಯ ಗೆದ್ದ ಬಳಿಕ ಇಬ್ಬರೂ ದಿಗ್ಗಜ ಆಟಗಾರರು ನಿವೃತ್ತಿ ಬಗ್ಗೆ ಮಾತನಾಡದೆ ತಂಡದ ಆಟದ ಬಗ್ಗೆ ಮಾತ್ರ ಮಾತನಾಡಿದ್ದು ಸಂತಸ ಮೂಡಿಸಿತು. ತಂಡದ ಗೆಲುವಿನ ಬಗ್ಗೆ ಮಾತನಾಡಿದ ವಿರಾಟ್ ಕೊಹ್ಲಿ ಉತ್ತಮ ಆಟಗಾರರು ತಂಡದಲ್ಲಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ.
"ಇದು ಅದ್ಭುತ ಕ್ಷಣ, ಆಸ್ಟ್ರೇಲಿಯಾ ಪ್ರವಾಸದ ಸೋಲಿನ ಬಳಿಕ ನಂತರ ನಾವು ಮತ್ತೆ ವಾಪಸಾತಿ ಮಾಡಿದ್ದೇವೆ ಮತ್ತು ದೊಡ್ಡ ಪಂದ್ಯಾವಳಿಯನ್ನು ಗೆದ್ದಿದ್ದೇವೆ, ಆದ್ದರಿಂದ ಚಾಂಪಿಯನ್ಸ್ ಟ್ರೋಫಿಯನ್ನು ಗೆಲ್ಲುವುದು ಅದ್ಭುತ ಅನುಭವವಾಗಿದೆ. ಡ್ರೆಸ್ಸಿಂಗ್ ರೂಂನಲ್ಲಿ ಪ್ರತಿಭಾವಂತ ಆಟಗಾರರಿದ್ದಾರೆ. ತಮ್ಮ ಆಟವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲು ಪ್ರಯತ್ನಿಸುತ್ತಿದ್ದಾರೆ. ಹಿರಿಯ ಆಟಗಾರರಾಗಿ ಅವರಿಗೆ ಬೆಂಬಲ ನೀಡಲು ಸಂತೋಷವಾಗುತ್ತದೆ. ನಮ್ಮ ಅನುಭವವನ್ನು ಅವರ ಜೊತೆ ಹಂಚಿಕೊಳ್ಳುತ್ತೇವೆ, ಅದು ತಂಡದ ಬಲ ಹೆಚ್ಚಿಸಲ ಸಹಾಯವಾಗುತ್ತದೆ" ಎಂದು ಹೇಳಿದರು.
ತಂಡವನ್ನು ತೊರೆಯುವಾಗ ತಂಡವು ಉತ್ತಮ ಸ್ಥಿತಿಯಲ್ಲಿರಬೇಕು ಎಂದು ಬಯಸುತ್ತೇನೆ. ಮುಂದಿನ 8 ವರ್ಷಗಳವರೆಗೆ ಜಗತ್ತನ್ನು ಎದುರಿಸಲು ಸಜ್ಜಾಗಿರುವ ತಂಡವಿದೆ ಎಂದು ಭಾವಿಸಿದ್ದೇನೆ. ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ ಉತ್ತಮ ಆಟಗಾರರಾಗಿದ್ದಾರೆ ಎಂದು ಹೇಳಿದರು. ಸದ್ಯ ಕೊಹ್ಲಿ ಈಗಲೇ ವಿದಾಯ ಹೇಳುವುದಿಲ್ಲ ಎನ್ನುವುದನ್ನು ಪರೋಕ್ಷವಾಗಿ ಸೂಚಿಸಿದ್ದಾರೆ. 2027ರ ಏಕದಿನ ವಿಶ್ವಕಪ್‌ನಲ್ಲಿ ಕೊಹ್ಲಿ ಆಡಬೇಕು ಎಂದು ಅಭಿಮಾನಿಗಳು ಬಯಸುತ್ತಿದ್ದಾರೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications