India vs Australia: ಮೊದಲ ಟೆಸ್ಟ್‌ನಲ್ಲಿ ಮೂವರು ಕನ್ನಡಿಗರು!

ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿಯ ಮೊದಲ ಪಂದ್ಯಕ್ಕೆ ಭಾರತ ತಂಡ ಸಜ್ಜಾಗುತ್ತಿದೆ. ನವೆಂಬರ್ 22ರಂದು ಪರ್ತ್‌ನಲ್ಲಿ ಮೊದಲ ಟೆಸ್ಟ್‌ ನಡೆಯಲಿದ್ದು, ಆಸ್ಟ್ರೇಲಿಯಾ ಬೌಲರ್ ಗಳನ್ನು ಎದುರಿಸಲು ಭಾರತದ ಬ್ಯಾಟಿಂಗ್ ಪಡೆ ಭರ್ಜರಿ ಅಭ್ಯಾಸ ನಡೆಸುತ್ತಿದೆ. ನಾಯಕ ರೋಹಿತ್ ಶರ್ಮಾ ಮೊದಲ ಟೆಸ್ಟ್‌ಗೆ ಅಲಭ್ಯರಾಗಿರುವ ಕಾರಣ ಜಸ್ಪ್ರೀತ್ ಬುಮ್ರಾ ಮೊದಲ ಪಂದ್ಯಕ್ಕೆ ನಾಯಕತ್ವ ವಹಿಸಲಿದ್ದಾರೆ. ರೋಹಿತ್ ಇಲ್ಲದ ಕಾರಣ ಮೊದಲ ಟೆಸ್ಟ್‌ಗೆ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ ಎನ್ನುವ ಕುತೂಹಲ ಹೆಚ್ಚಾಗಿದೆ.

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕರ್ನಾಟಕದ ಮೂವರು ಆಟಗಾರರು ಭಾರತ ತಂಡಕ್ಕೆ ಆಯ್ಕೆಯಾಗಿದ್ದಾರೆ. ಭಾರತ ಎ ತಂಡದ ಭಾಗವಾಗಿದ್ದ ದೇವದತ್ ಪಡಿಕ್ಕಲ್ ಆಸ್ಟ್ರೇಲಿಯಾ ಎ ವಿರುದ್ಧ ಸರಣಿ ಮುಗಿದ ಅಲ್ಲೇ ಉಳಿಯುವಂತೆ ಕೇಳಲಾಗಿದೆ. ಇದೀಗ ಬಾರ್ಡರ್-ಗವಾಸ್ಕರ್ ಟ್ರೋಫಿ (ಬಿಜಿಟಿ) 2024-25ರ ತಂಡಕ್ಕೆ ಸೇರಿಸಲಾಗಿದ್ದು, ಮೊದಲ ಟೆಸ್ಟ್‌ನಲ್ಲಿ ಅವಕಾಶ ಪಡೆಯುವ ಸಾಧ್ಯತೆ ಹೆಚ್ಚಾಗಿದೆ.

Three karnataka players in 1st test against australia bgt

ಒಂದು ತಿಂಗಳ ಹಿಂದೆ ಆಸ್ಟ್ರೇಲಿಯಾ ಎ ವಿರುದ್ಧದ ಟೆಸ್ಟ್‌ ಪಂದ್ಯದಲ್ಲಿ 88 ರನ್ ಗಳಿಸಿದ್ದರು. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಪಡಿಕ್ಕಲ್ 58.57 ಸರಾಸರಿ ಹೊಂದಿದ್ದು ಭಾರತದ ಬ್ಯಾಟಿಂಗ್ ಬಲ ಹೆಚ್ಚಿಸಬಹುದು ಎಂದು ನಿರೀಕ್ಷೆ ಮಾಡಲಾಗಿದೆ.

ಕೆಎಲ್ ರಾಹುಲ್‌ ಆಡೋದು ಫಿಕ್ಸ್

ನ್ಯೂಜಿಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯದಲ್ಲಿ ರನ್ ಗಳಿಸುವಲ್ಲಿ ವಿಫಲರಾದ ಬಳಿಕ ಉಳಿದ ಎರಡು ಪಂದ್ಯಗಳಲ್ಲಿ ಅವರನ್ನು ಪ್ಲೇಯಿಂಗ್ ಇಲೆವೆನ್‌ನಿಂದ ಕೈಬಿಡಲಾಗಿತ್ತು. ಆದರೆ ಆಸ್ಟ್ರೇಲಿಯಾದಲ್ಲಿ ಕೆಎಲ್ ರಾಹುಲ್‌ ಮೊದಲ ಪಂದ್ಯದಲ್ಲೇ ಅವಕಾಶ ಪಡೆಯುವುದು ಬಹುತೇಕ ಖಚಿತವಾಗಿದೆ. ಅಭ್ಯಾಸದ ವೇಳೆ ಮೊಣಕೈಗೆ ಚೆಂಡು ತಾಗಿದ್ದರಿಂದ ಗಾಯಗೊಂಡರು, ಒಂದೇ ದಿನದಲ್ಲಿ ಸುಧಾರಿಸಿಕೊಂಡಿದ್ದು ಫಿಟ್ ಆಗಿದ್ದಾರೆ.

ನೆಟ್ಸ್‌ನಲ್ಲಿ ಕಠಿಣ ಅಭ್ಯಾಸ ಮಾಡುತ್ತಿದ್ದು ಮೊದಲ ಟೆಸ್ಟ್‌ನಲ್ಲಿ ಆಡಲು ಸಜ್ಜಾಗುತ್ತಿದ್ದಾರೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಇನ್ನಿಂಗ್ಸ್ ಆರಂಭಿಸುತ್ತಾರಾ ಅಥವಾ ಮಧ್ಯಮ ಕ್ರಮಾಂಕದಲ್ಲಿ ಆಡುತ್ತಾರಾ ಎನ್ನುವುದನ್ನು ಕಾದು ನೋಡಬೇಕಿದೆ. ದೇವದತ್ ಪಡಿಕ್ಕಲ್ ಆಡಿದರೆ ಯಶಸ್ವಿ ಜೈಸ್ವಾಲ್ ಜೊತೆ ಇನ್ನಿಂಗ್ಸ್ ಆರಂಭಿಸುವುದು ಬಹುತೇಕ ಖಚಿತವಾಗಿದ್ದು ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಇದೆ.

ವೇಗದ ಬೌಲರ್ ಪ್ರಸಿದ್ಧ್ ಕೃಷ್ಣ

ವೇಗದ ಬೌಲರ್ ಪ್ರಸಿದ್ಧ್‌ ಕೃಷ್ಣ ಕೂಡ ಮೊದಲ ಟೆಸ್ಟ್‌ನಲ್ಲಿ ಪ್ಲೇಯಿಂಗ್‌ ಇಲೆವೆನ್‌ನಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಆಸ್ಟ್ರೇಲಿಯಾದಲ್ಲಿ ವೇಗಿಗಳು ಪ್ರಮುಖ ಪಾತ್ರ ವಹಿಸುವ ಕಾರಣ, ಒಬ್ಬರು ಸ್ಪಿನ್ನರ್ ಮತ್ತು ನಾಲ್ವರು ವೇಗಿಗಳು ಆಡುವ ಸಾಧ್ಯತೆ ಇದೆ. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮೊದಲ ಎರಡು ಆಯ್ಕೆಯಾಗಿದ್ದು, ಉಳಿದ ಎರಡು ಸ್ಥಾನಗಳಿಗೆ ಪ್ರಸಿದ್ಧ್ ಕೃಷ್ಣ, ಆಕಾಶ್ ದೀಪ್, ಹರ್ಷಿತ್ ರಾಣಾ ನಡುವೆ ಪೈಪೋಟಿ ನಡೆಯುತ್ತಿದೆ.

ಮೊದಲ ಟೆಸ್ಟ್‌ಗೆ ಭಾರತ ತಂಡ

ಜಸ್ಪ್ರೀತ್ ಬುಮ್ರಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ದೇವದತ್ ಪಡಿಕ್ಕಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+