Breaking news; ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಗೆದ್ದ ಕನ್ನಡಿಗ
ಹಾಸನ, ಸೆಪ್ಟೆಂಬರ್ 05; ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಸುಹಾಸ್ ಯತಿರಾಜ್ ಬೆಳ್ಳಿ ಪದಕವನ್ನು ಪಡೆದಿದ್ದಾರೆ. ಐಎಎಸ್ ಅಧಿಕಾರಿಯಾಗಿರುವ ಸುಹಾಸ್ ಕನ್ನಡಿಗರು.
ಭಾನುವಾರ ನಡೆದ ಪುರುಷರ ಸಿಂಗಲ್ಸ್ ಎಸ್ ಎಲ್ 4 ಫೈನಲ್‌ನಲ್ಲಿ ಫ್ರಾನ್ಸ್‌ನ ಲುಕಾಸ್ ಮಝೂರ್ ವಿರುದ್ಧ ಸುಹಾಸ್ ಯತಿರಾಜ್ ಸೋಲು ಕಂಡಿದ್ದಾರೆ. ಉತ್ತರ ಪ್ರದೇಶದಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಸುಹಾಸ್ ಭಾರತಕ್ಕೆ 18ನೇ ಪದಕ ತಂದುಕೊಟ್ಟರು.
ಸುಹಾಸ್ ಯತಿರಾಜ್ ಪ್ಯಾರಾ ಬ್ಯಾಡ್ಮಿಂಟನ್‌ನ ಎಸ್ ಎಲ್ 4 ವಿಭಾಗದಲ್ಲಿ ಸದ್ಯ ವಿಶ್ವದ ನಂ 3ನೇ ಆಟಗಾರರು. ಐಎಎಸ್ ಅಧಿಕಾರಿಯಾಗಿರುವ ಅವರು ಉತ್ತರ ಪ್ರದೇಶದಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.

ಸುಹಾಸ್ ಎಲ್. ಯತಿರಾಜ್ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಸೇವೆ ಮತ್ತು ಕ್ರೀಡೆಯಲ್ಲಿ ಅವರ ಸಾಧನೆಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
A fantastic confluence of service and sports! @dmgbnagar Suhas Yathiraj has captured the imagination of our entire nation thanks to his exceptional sporting performance. Congratulations to him on winning the Silver medal in Badminton. Best wishes to him for his future endeavours. pic.twitter.com/bFM9707VhZ
— Narendra Modi (@narendramodi) September 5, 2021
ಪ್ಯಾರಾ ಒಲಿಂಪಿಕ್ಸ್‌ನಲ್ಲಿ ಪದಕ ಗೆದ್ದ ಮೊದಲ ಐಎಎಸ್ ಅಧಿಕಾರಿ ಎಂಬ ಕೀರ್ತಿಯೂ ಸುಹಾಸ್ ಎಲ್. ಯತಿರಾಜ್ ಪಾಲಾಗಿದೆ. ಐಎಎಸ್ ಅಧಿಕಾರಿಯಾಗಿರುವ ಅವರು ಗೌತಮ್ ಬುದ್ಧ ನಗರ (ನೋಯ್ಡಾ) ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ.
ಹಾಸನ ಮೂಲದವರು; ಸುಹಾಸ್ ಎಲ್. ಯತಿರಾಜ್ ಕನ್ನಡಿಗರು. 1983ರ ಜುಲೈ 2ರಂದು ಹಾಸನದಲ್ಲಿ ಜನಿಸಿದ ಸುಹಾಸ್ ಇಂಜಿನಿಯರಿಂಗ್ ಪದವೀಧರರು. ಸುರತ್ಕಲ್‌ನ ಎನ್‌ಐಟಿಕೆಯಿಂದ ಕಂಪ್ಯೂಟರ್ ಇಂಜಿನಿಯರ್ ಪದವಿ ಪಡೆದಿದ್ದಾರೆ.
ಈ ಹಿಂದೆ ಸುಹಾಸ್ ಎಲ್. ಯತಿರಾಜ್ ಪ್ರಯಾಗ್‌ರಾಜ್, ಆಗ್ರಾ, ಜೌನ್‌ಪುರ, ಸೋನ್‌ಭದ್ರಾ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಣೆ ಮಾಡಿದ್ದಾರೆ. 2020ರಲ್ಲಿ ಸುಹಾಸ್ ಎಲ್. ಯತಿರಾಜ್‌ರನ್ನು ನೋಯ್ಡಾ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಗಿ ನೇಮಿಸಲಾಗಿದೆ.
ಸುಹಾಸ್ ಯತಿರಾಜ್ ಸಾಧನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಹ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.
Congratulations to para-shuttler from Karnataka Suhas Yathiraj, IAS & District Magistrate of Noida, for winning the silver medal in the final of the men's singles badminton SL4 event in #TokyoParalympics. #Praise4Para #CheerForPara pic.twitter.com/6hpm8EpJUa
— CM of Karnataka (@CMofKarnataka) September 5, 2021












Click it and Unblock the Notifications