ಅರಸೀಕೆರೆ ಎಕ್ಸ್‌ಪ್ರೆಸ್‌ ಡೇವಿಡ್ ಜಾನ್ಸನ್ ಸಾವಿಗೆ ಜಯ್ ಶಾ, ಅನಿಲ್ ಕುಂಬ್ಳೆ, ಗಂಭಿರ್ ಸಂತಾಪ

ಅರಸೀಕೆರೆ ಎಕ್ಸ್‌ಪ್ರೆಸ್ ಎಂದೇ ಖ್ಯಾತರಾಗಿರುವ ಭಾರತ ಮತ್ತು ಕರ್ನಾಟಕ ತಂಡದ ಮಾಜಿ ಕ್ರಿಕೆಟಿಗ ಡೇವಿಡ್ ಜಾನ್ಸನ್ 52 ನೇ ವಯಸ್ಸಿನಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕ್ರಿಕೆಟ್ ಜಗತ್ತಿನಲ್ಲಿ ಆಘಾತ ಉಂಟಾಗಿದೆ.

ಭಾರತ ತಂಡಕ್ಕಾಗಿ ಡೇವಿಡ್ ಜಾನ್ಸನ್ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. 1996ರಲ್ಲಿ ಅವರು ಭಾರತಕ್ಕಾಗಿ ಮೊದಲ ಪಂದ್ಯವನ್ನು ಆಡಿದ್ದರು. ಅವರು ಆತ್ಮಹತ್ಯೆ ಮಾಡಿಕೊಂಡಿರುವುದು ಮಾಜಿ ಕ್ರಿಕೆಟಿಗರಿಗೆ ಆಘಾತ ಉಂಟುಮಾಡಿದೆ.

tributes pour in for karnataka cricketer david johnson

ಸಂತಾಪ ಸೂಚಿಸಿದ ಜಯ್ ಶಾ, ಅನಿಲ್ ಕುಂಬ್ಳೆ

ಮಾಜಿ ಕ್ರಿಕೆಟಿಗನ ಅನಿರೀಕ್ಷಿತ ಸಾವಿಗೆ ಮಾಜಿ ಕ್ರಿಕೆಟಿಗರು ಸಂತಾಪ ಸೂಚಿಸಿದ್ದಾರೆ. ಬಿಸಿಸಿಐ ಕಾರ್ಯದರ್ಶಿ ಜಯ್ ಶಾ, ಭಾರತದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ಅನಿಲ್ ಕುಂಬ್ಳೆ ಮತ್ತು ಇತರರು ಜಾನ್ಸನ್ ಅವರ ನಿಧನಕ್ಕೆ ಎಕ್ಸ್‌ನಲ್ಲಿ ಸಂತಾಪ ಸೂಚಿಸಿ ಪೋಸ್ಟ್ ಮಾಡಿದ್ದಾರೆ.

ನನ್ನ ಕ್ರಿಕೆಟ್ ಸಹೋದ್ಯೋಗಿ ಡೇವಿಡ್ ಜಾನ್ಸನ್ ಅವರ ನಿಧನವನ್ನು ಕೇಳಿ ದುಃಖವಾಯಿತು. ಅವರ ಕುಟುಂಬಕ್ಕೆ ಹೃತ್ಪೂರ್ವಕ ಸಂತಾಪ ಎಂದು ಅನಿಲ್ ಕುಂಬ್ಳೆ ಎಕ್ಸ್‌ನಲ್ಲಿ ಸಂತಾಪ ಸೂಚಿಸಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಬಿಸಿಸಿಐ ಕಾರ್ಯದರ್ಶಿ ಜಯ್‌ ಶಾ ಕೂಡ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು, "ಮಾಜಿ ಭಾರತೀಯ ವೇಗದ ಬೌಲರ್ ಡೇವಿಡ್ ಜಾನ್ಸನ್ ಅವರ ಕುಟುಂಬ ಮತ್ತು ಸ್ನೇಹಿತರಿಗೆ ಸಂತಾಪಗಳು. ಕ್ರಿಕೆಟ್‌ಗೆ ಅವರ ಕೊಡುಗೆ ಸದಾ ಸ್ಮರಣೀಯ" ಎಂದು ಹೇಳಿದ್ದಾರೆ.

ಡೇವಿಡ್ ಜಾನ್ಸನ್ ಅವರ ನಿಧನದಿಂದ ದುಃಖವಾಗಿದೆ. ಅವರ ಕುಟುಂಬ ಮತ್ತು ಆತ್ಮೀಯರಿಗೆ ದೇವರು ಶಕ್ತಿ ನೀಡಲಿ ಎಂದು ಗೌತಮ್ ಗಂಭೀರ್ ಸಂತಾಪ ವ್ಯಕ್ತಪಡಿಸಿದ್ದಾರೆ.

ಮಾಜಿ ಸಚಿವ ಅಶ್ವತ್ಥ ನಾರಾಯಣ ಕೂಡ ಮಾಜಿ ಕ್ರಿಕೆಟಿಗನ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, "ಭಾರತದ ಮಾಜಿ ಕ್ರಿಕೆಟರ್‌, ಕನ್ನಡಿಗ ಡೇವಿಡ್‌ ಜಾನ್ಸನ್‌ ಅವರು ಆತ್ಮಹತ್ಯೆಗೆ ಶರಣಾದ ಸಂಗತಿ ತಿಳಿದು ಮನಸ್ಸಿಗೆ ನೋವಾಯಿತು.

ಅಂದಿನ ಸಮಯದಲ್ಲಿಯೇ ಗಂಟೆಗೆ ಸುಮಾರು 157.8 ವೇಗದಲ್ಲಿ ಬೌಲಿಂಗ್‌ ಮಾಡುವ ಸಾಮರ್ಥ್ಯ ಹೊಂದಿದ್ದ ಅವರು ಹಾಸನ ಜಿಲ್ಲೆಯ ಅರಸಿಕೆರೆಯವರು. ಮೃತರ ಆತ್ಮಕ್ಕೆ ಸದ್ಗತಿ ಕೋರಿ ಪ್ರಾರ್ಥಿಸುವೆ. ಓಂ ಶಾಂತಿ." ಎಂದು ದುಃಖ ವ್ಯಕ್ತಪಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+