U19 World Cup: ವಿಶ್ವಕಪ್‌ ಫೈನಲ್‌ನಲ್ಲಿ ಮತ್ತೆ ಭಾರತ-ಆಸ್ಟ್ರೇಲಿಯಾ ಮುಖಾಮುಖಿ

ಗುರುವಾರ ದಕ್ಷಿಣ ಆಫ್ರಿಕಾದ ಬೆನೋನಿಯಲ್ಲಿ ನಡೆದ ಅಂಡರ್-19 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಟಾಮ್ ಸ್ಟ್ರೇಕರ್ ಅವರ ಆರು ವಿಕೆಟ್ ಗಳಿಕೆ ಮತ್ತು ಹ್ಯಾರಿ ಡಿಕ್ಸನ್ ಅವರ ಅರ್ಧಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡವು ಪಾಕಿಸ್ತಾನದ ವಿರುದ್ಧ ಒಂದು ವಿಕೆಟ್‌ನ ರೋಚಕ ಗೆಲುವು ಸಾಧಿಸಿದೆ.

ಈ ಗೆಲುವಿನ ಮೂಲಕ ಆಸ್ಟ್ರೇಲಿಯಾ ಫೈನಲ್‌ ಪ್ರವೇಶಿಸಿದೆ. ಫೈನಲ್‌ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಭಾರತದ ಸೆಣೆಸಲಿದೆ. ಫೆಬ್ರವರಿ 11ರಂದು ಇದೇ ಮೈದಾನದಲ್ಲಿ ಫೈನಲ್ ಪಂದ್ಯ ನಡೆಯಲಿದೆ.

 U19 World Cup: Australia Clinch Narrow Victory Over Pakistan, Set to Face India in Final

ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ 48.5 ಓವರ್ ಗಳಲ್ಲಿ 179 ರನ್ ಗಳಿಸುವಷ್ಟರಲ್ಲಿ ಆಲೌಟ್ ಆಯಿತು. ಅಜಾನ್ ಅವೈಸ್ 52 ರನ್, ಅರಾಫತ್ ಮಿನಾಸ್ 52 ರನ್ ಗಳಿಸುವ ಮೂಲಕ ಪಾಕಿಸ್ತಾನ ತಂಡಕ್ಕೆ ನೆರವಾದರು. ಟಾಮ್ ಸ್ಟ್ರೇಕರ್ 9.5 ಓವರ್ ಗಳಲ್ಲಿ 24 ರನ್ ನೀಡಿ 6 ವಿಕೆಟ್ ಪಡೆಯುವ ಮೂಲಕ ಪಾಕಿಸ್ತಾನಕ್ಕೆ ಆಘಾತ ನೀಡಿದರು.

ಹೋರಾಟ ನೀಡಿದ ಪಾಕಿಸ್ತಾನ

ಪಾಕಿಸ್ತಾನ ನೀಡಿದ 180 ರನ್‌ಗಳ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ ಒಂದು ಹಂತದಲ್ಲಿ ಸೋಲಿನ ಸುಳಿಗೆ ಸಿಲುಕಿದರೂ, ಅಂತಿಮವಾಗಿ ಒಂದು ವಿಕೆಟ್‌ನಿಂದ ರೋಚಕ ಗೆಲುವು ಸಾಧಿಸಿ ಫೈನಲ್‌ಗೆ ಪ್ರವೇಶ ಪಡೆದುಕೊಂಡಿತು.

ಹ್ಯಾರಿ ಡಿಕ್ಸನ್ 50 ರನ್ ಗಳಿಸುವ ಮೂಲಕ ಆಸ್ಟ್ರೇಲಿಯಾ ತಂಡಕ್ಕೆ ನೆರವಾದರು. ಒಲಿವರ್ ಪೀಕ್ 49 ರನ್ ಗಳಿಸಿದರು. ಅಲಿ ರಾಜಾ 4 ವಿಕೆಟ್ ಪಡೆದರೆ, ಅರಾಫತ್ ಮಿನಾಸ್ 2 ವಿಕೆಟ್ ಪಡೆದರು. 164 ರನ್‌ಗಳಿಗೆ 9 ನೇ ವಿಕೆಟ್ ಕಳೆದುಕೊಂಡ ಆಸ್ಟ್ರೇಲಿಯಾ ಸೋಲುವ ಆತಂಕಕ್ಕೆ ಒಳಗಾಗಿತ್ತು. ಆದರೆ ರಾಫ್ ಮಾಕ್‌ಮಿಲ್ಲನ್ ಅಜೇಯ 19 ರನ್ ಗಳಿಸುವ ಮೂಲಕ ತಮ್ಮ ತಂಡವನ್ನು ಗೆಲುವಿನ ದಡ ಸೇರಿಸಿದರು.

ಭಾರತದ ವಿರುದ್ಧ ಫೈನಲ್

ಅಂಡರ್ 19 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತ ಪ್ರಾಬಲ್ಯ ಹೊಂದಿದೆ. ಭಾರತದ ಯುವ ಪಡೆ 9ನೇ ಬಾರಿಗೆ ಫೈನಲ್ ಪ್ರವೇಶಿಸಿದ್ದರೆ, ಆಸ್ಟ್ರೇಲಿಯಾ ಆರನೇ ಬಾರಿ ಏಕದಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಆಡುತ್ತಿದೆ.

ಭಾರತವು ದಾಖಲೆಯ ಐದು ಬಾರಿ ಏಕದಿನ ವಿಶ್ವಕಪ್ ಪ್ರಶಸ್ತಿ ಗೆದ್ದಿದ್ದರೆ ಆಸ್ಟ್ರೇಲಿಯಾ ಮೂರು ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಆಸ್ಟ್ರೇಲಿಯಾ ಕೊನೆಯ ಬಾರಿಗೆ 2010 ರಲ್ಲಿ ಪಾಕಿಸ್ತಾನದ ವಿರುದ್ಧ ಜಯಗಳಿಸಿ ಟ್ರೋಫಿಯನ್ನು ಎತ್ತಿ ಹಿಡಿದಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+