Mohammed Shami:ಮೊಹಮ್ಮದ್ ಶಮಿ ಗ್ರಾಮದಲ್ಲಿ ಮಿನಿ ಸ್ಟೇಡಿಯಂ, ಜಿಮ್ ನಿರ್ಮಾಣಕ್ಕೆ ಮುಂದಾದ ಸರ್ಕಾರ

ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಮೊಹಮ್ಮದ್ ಶಮಿ ಅವರ ಅತ್ಯುತ್ತಮ ಪ್ರದರ್ಶನದ ನಂತರ, ಉತ್ತರ ಪ್ರದೇಶದ ಅಮ್ರೋಹಾದಲ್ಲಿ ಜಿಲ್ಲಾಡಳಿತ ಅಧಿಕಾರಿಗಳು ಶಮಿ ಅವರ ಸ್ವಗ್ರಾಮದಲ್ಲಿ ಮಿನಿ-ಸ್ಟೇಡಿಯಂ ಮತ್ತು ಓಪನ್ ಜಿಮ್ ನಿರ್ಮಿಸಲು ಯೋಜಿಸುತ್ತಿದ್ದಾರೆ.

ಈ ಸಂಬಂಧ ಅಮ್ರೋಹ ಜಿಲ್ಲಾ ಮ್ಯಾಜಿಸ್ಟ್ರೇಟ್ ರಾಜೇಶ್ ತ್ಯಾಗಿ ಶುಕ್ರವಾರ ಪ್ರಕಟಣೆ ಹೊರಡಿಸಿದ್ದಾರೆ. ಮೊಹಮ್ಮದ್ ಶಮಿ ಅವರ ಗ್ರಾಮದಲ್ಲಿ (ಸಹಸ್‌ಪುರ್ ಅಲಿನಗರ) ಮಿನಿ ಸ್ಟೇಡಿಯಂ ಮತ್ತು ಓಪನ್ ಜಿಮ್ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಡಿಎಂ ರಾಜೇಶ್ ತ್ಯಾಗಿ ಎಎನ್‌ಐಗೆ ತಿಳಿಸಿದ್ದಾರೆ.

ಮೊಹಮ್ಮದ್ ಶಮಿ ತವರೂರು ಸಹಸ್ಪುರ್ ಅಲಿನಗರದಲ್ಲಿ ಮಿನಿ ಸ್ಟೇಡಿಯಂ ಮತ್ತು ಓಪನ್ ಜಿಮ್ ಸ್ಥಾಪಿಸುವ ಗುರಿಯನ್ನು ಹೊಂದಲಾಗಿದೆ.

mohammed-shamis-village-post-world-cup-triumph

ಅಮೋಘ ಪ್ರದರ್ಶನ ನೀಡುತ್ತಿರುವ ಶಮಿ

ನಡೆಯುತ್ತಿರುವ ಐಸಿಸಿ ವಿಶ್ವಕಪ್ 2023 ರಲ್ಲಿ ಅಸಾಧಾರಣ ಪ್ರದರ್ಶನ ನೀಡುತ್ತಿರುವ ಶಮಿ ಅವರು ತಮ್ಮ ಮಾರಕ ಬೌಲಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಲೀಗ್ ಹಂತದ ಪಂದ್ಯಗಳ ಮೊದಲಾರ್ಧದಲ್ಲಿ ಆಡದಿದ್ದರು ಸಹ ಭಾರತ ಫೈನಲ್‌ಗೆ ತಲುಪಲು ಗಮನಾರ್ಹ ಕೊಡುಗೆ ನೀಡಿದರು.

ರಾಷ್ಟ್ರೀಯ ಲೋಕದಳ (ಆರ್‌ಎಲ್‌ಡಿ) ಪಕ್ಷದ ನಾಯಕ ಜಯಂತ್ ಸಿಂಗ್ ಅವರು ಶಮಿ ಅವರ ಗ್ರಾಮದಲ್ಲಿ ಕ್ರೀಡಾ ಸೌಲಭ್ಯವನ್ನು ನಿರ್ಮಿಸಲು ಹಣವನ್ನು ನೀಡಲು ಉತ್ಸಾಹ ಹೊಂದಿದ್ದಾರೆ.

ಮೊಹಮ್ಮದ್ ಶಮಿ ಅವರ ಹಳ್ಳಿಯಲ್ಲಿ (ಸಹಪುರ್ ಅಲಿನಗರ) ಕ್ರೀಡಾ ಸೌಲಭ್ಯದ ನಿರ್ಮಾಣಕ್ಕೆ ಸಹಾಯ ಮಾಡಲು ನನ್ನ ಸಂಸದರ ನಿಧಿಯನ್ನು ಒದಗಿಸಲು ನಾನು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ.

ಹಲವು ದಾಖಲೆ ನಿರ್ಮಿಸಿದ ಶಮಿ

ಮೊಹಮ್ಮದ್ ಶಮಿ ಈ ಬಾರಿ ವಿಶ್ವಕಪ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದಾರೆ. ಈ ಬಾರಿ ವಿಶ್ವಕಪ್‌ನಲ್ಲಿ ಆಡಿರುವ 6 ಪಂದ್ಯಗಳಲ್ಲಿ 23 ವಿಕೆಟ್ ಪಡೆದುಕೊಂಡಿದ್ದು, ಈ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡಿದ್ದಾರೆ.

ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊಹಮ್ಮದ್ ಶಮಿ 9.5 ಓವರ್ ಗಳಲ್ಲಿ 57 ರನ್ ಬಿಟ್ಟುಕೊಟ್ಟು 7 ವಿಕೆಟ್ ಪಡೆದು ಮಿಂಚಿದರು. ಈ ಮೂಲಕ ವಿಶ್ವಕಪ್‌ನಲ್ಲಿ ವೇಗವಾಗಿ 50 ಪಡೆದ ಸಾಧನೆ ಮಾಡಿದರು, ವಿಶ್ವಕಪ್‌ನಲ್ಲಿ ಅತಿ ಹೆಚ್ಚು ಬಾರಿ 5 ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಏಕದಿನ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+