WTC Points Table: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ತಲುಪಲು ಇನ್ನೆಷ್ಟು ಪಂದ್ಯ ಗೆಲ್ಲಬೇಕು?

ಕಾನ್ಪುರದಲ್ಲಿ ನಡೆದ ಬಾಂಗ್ಲಾದೇಶದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ ಅಮೋಘ ಗೆಲುವು ಸಾಧಿಸುವ ಮೂಲಕ 2-0 ಅಂತರದಲ್ಲಿ ಸರಣಿಯನ್ನು ಗೆದ್ದುಕೊಂಡಿದೆ. ಎರಡು ದಿನಗಳ ಆಟ ಸಂಪೂರ್ಣವಾಗಿ ಮಳೆಯಿಂದ ರದ್ದಾದರೂ, ನಾಲ್ಕನೇ ದಿನ ಬಾಂಗ್ಲಾದೇಶವನ್ನು ಆಲೌಟ್ ಮಾಡಿದ ಭಾರತ, ಬಳಿಕ ಟಿ20 ಮಾದರಿಯಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸುವ ಮೂಲಕ ಪಂದ್ಯದ ಮೇಲೆ ಹಿಡಿತ ಸಾಧಿಸಿತು. ಐದನೇ ದಿನ ಕೂಡ ತಮ್ಮ ಆಕ್ರಮಣಕಾರಿ ಆಟ ಮುಂದುವರೆಸಿದ ರೋಹಿತ್ ಶರ್ಮಾ ಪಡೆ 7 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿತು.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಫೈನಲ್ ತಲುಪುವ ಗುರಿ ಹೊಂದಿರುವ ಭಾರತ, ಈ ಪಂದ್ಯವನ್ನು ಗೆಲ್ಲಲೇಬೇಕೆಂಬ ಹಠದಲ್ಲಿ ಆಡಿತು. ಅಂದುಕೊಂಡಂತೆ ಭಾರತ ಗೆಲುವು ಸಾಧಿಸಿ, 2-0 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿತು, ಈ ಗೆಲುವಿನ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಫೈನಲ್ ಹಾದಿ ಮತ್ತಷ್ಟು ಸುಲಭವಾಗಿದೆ.

Updated World Test Championship points table India win Against Bangladesh

ಈಗಾಗಲೇ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತ ತನ್ನ ಪ್ರಾಬಲ್ಯವನ್ನು ಮುಂದುವರೆಸಿದೆ. 2023-2025ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಸೈಕಲ್‌ನಲ್ಲಿ ಭಾರತ 11 ಪಂದ್ಯಗಳನ್ನು ಆಡಿದ್ದು 8 ಪಂದ್ಯಗಳಲ್ಲಿ ಗೆಲುವು ಸಾಧಿಸಿದೆ, 2 ಪಂದ್ಯಗಳಲ್ಲಿ ಮಾತ್ರ ಸೋಲು ಕಂಡಿದ್ದು, 1 ಪಂದ್ಯವನ್ನು ಡ್ರಾ ಮಾಡಿಕೊಂಡಿದೆ. ಈ ಮೂಲಕ 74.24 ಗೆಲುವಿನ ಸರಾಸರಿ (ಪಿಸಿಟಿ) ಯೊಂದಿಗೆ ಮೊದಲ ಸ್ಥಾನದಲ್ಲಿದೆ.

62.5 ಪಿಸಿಟಿ ಹೊಂದಿರುವ ಆಸ್ಟ್ರೇಲಿಯಾ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಶ್ರೀಲಂಕಾ ತಂಡ 9 ಟೆಸ್ಟ್‌ ಪಂದ್ಯಗಳನ್ನು ಆಡಿದ್ದು, 5 ಪಂದ್ಯಗಳಲ್ಲಿ ಗೆಲುವು ಸಾಧಿಸುವ ಮೂಲಕ 55.56 ಪಿಸಿಟಿಯೊಂದಿಗೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಈ ಆವೃತ್ತಿ ಮುಗಿಯುವ ವೇಳೆಗೆ ಅಂಕಪಟ್ಟಿಯಲ್ಲಿ ಮೊದಲ ಎರಡು ಸ್ಥಾನಗಳಲ್ಲಿರುವ ತಂಡಗಳು ಫೈನಲ್‌ಗೆ ಅರ್ಹತೆ ಪಡೆಯುತ್ತವೆ.

ಭಾರತದ ಫೈನಲ್ ಹಾದಿ

ವಿಶ್ವ ಟೆಸ್ಟ್‌ ಕ್ರಿಕೆಟ್‌ನಲ್ಲಿ ಪ್ರಾಬಲ್ಯ ಮುಂದುವರೆಸಿರುವ ಭಾರತ ಈ ಬಾರಿ ಕೂಡ ಫೈನಲ್ ತಲುಪುವ ವಿಶ್ವಾಸದಲ್ಲಿದೆ. ಈ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಸೈಕಲ್‌ನಲ್ಲಿ ಭಾರತ ಇನ್ನೂ 8 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು, ಇದರಲ್ಲಿ ಕನಿಷ್ಠ ನಾಲ್ಕು ಪಂದ್ಯಗಳನ್ನು ಗೆದ್ದು ಒಂದು ಪಂದ್ಯವನ್ನು ಡ್ರಾ ಮಾಡಿಕೊಂಡರೆ, ಇತರೆ ತಂಡಗಳ ಫಲಿತಾಂಶಗಳನ್ನು ನೆಚ್ಚಿಕೊಳ್ಳದೇ ಫೈನಲ್‌ಗೆ ನೇರವಾಗಿ ಪ್ರವೇಶ ಪಡೆಯಲಿದೆ.

ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿ ಬಳಿಕ ಭಾರತ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಅಕ್ಟೋಬರ್ 16 ರಂದು ಮೊದಲ ಟೆಸ್ಟ್ ಪಂದ್ಯ ಆರಂಭವಾಗಲಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಭಾರತ ಕನಿಷ್ಠ 2 ಪಂದ್ಯ ಗೆದ್ದು ಒಂದು ಪಂದ್ಯ ಡ್ರಾ ಮಾಡಿಕೊಂಡರು ಫೈನಲ್‌ ಸ್ಥಾನ ಬಹುತೇಕ ಖಚಿತವಾಗಲಿದೆ.

ನ್ಯೂಜಿಲೆಂಡ್ ವಿರುದ್ಧದ ಸರಣಿ ಬಳಿಕ ಬಹುನಿರೀಕ್ಷಿತ ಬಾರ್ಡರ್ ಗವಾಸ್ಕರ್ ಟ್ರೋಫಿ ಸರಣಿ ನಡೆಯಲಿದೆ. ಭಾರತ ಆಸ್ಟ್ರೇಲಿಯಾದಲ್ಲಿ 5 ಟೆಸ್ಟ್‌ ಪಂದ್ಯಗಳನ್ನು ಆಡಲಿದ್ದು, ಪ್ರಾಬಲ್ಯ ಮುಂದುವರೆಸುವ ವಿಶ್ವಾಸದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+