ವೈಭವ್ ಸೂರ್ಯವಂಶಿ ಆಯ್ಕೆ ಸಾಧ್ಯವಿಲ್ಲ: ಟೀಮ್ ಇಂಡಿಯಾ ಮಾಜಿ ಕ್ರಿಕೆಟರ್ ಹೇಳಿಕೆ ಹಿಂದಿದೆ ಮಹತ್ವದ ಸಂದೇಶ

Vaibhav Sooryavanshi: ಸದ್ಯ ಟೀಮ್ ಇಂಡಿಯಾ ಹಾಗೂ ವೆಸ್ಟ್‌ ಇಂಡೀಸ್ ನಡುವೆ ಟಿ20 ಸರಣಿ ನಡೆಯುತ್ತಿದೆ. ಇನ್ನೂ ಇಂದು (ಅಕ್ಟೋಬರ್ 09) ನಡೆಯುವ ಪಂದ್ಯದಲ್ಲಿ ಯುವ ಪ್ರತಿಭೆ 15 ವರ್ಷದ ವೈಭವ್ ಸೂರ್ಯವಂಶಿ ಅವರನ್ನು ಆಡಿಸುವ ಬಗ್ಗೆ ಭಾರತದ ಮಾಜಿ ಕ್ರಿಕೆಟರ್ ಆಕಾಶ್ ಚೋಪ್ರಾ ಮಹತ್ವದ ಹೇಳಿಕೆ ನೀಡಿದ್ದಾರೆ.

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ವಿಫಲವಾದ ನಂತರ, ಭಾರತ ತಂಡದಲ್ಲಿ ಅವರ ಸ್ಥಾನದ ಬಗ್ಗೆ ಮತ್ತೆ ಚರ್ಚೆಗಳು ಆರಂಭವಾಗಿವೆ. ಆದರೆ, ಸಂಜು ಅವರನ್ನು ಹೊರಗಿಟ್ಟು ಯುವ ಆಟಗಾರ ವೈಭವ್ ಸೂರ್ಯವಂಶಿ ಅವರನ್ನು ಕಣಕ್ಕಿಳಿಸುವುದು ಈ ಸಮಯದಲ್ಲಿ ಸಾಧ್ಯವಿಲ್ಲ ಎಂದು ಭಾರತದ ಮಾಜಿ ಕ್ರಿಕೆಟರ್ ಆಕಾಶ್ ಚೋಪ್ರಾ ಅಭಿಪ್ರಾಯ ವ್ಯಕ್ತಪಡಿದ್ದಾರೆ.

Vaibhav Sooryavanshi Aakash Chopra Rules Out 15-Year-Old s Selection vs West Indies in 2nd T20I

ಸಂಜು ಸ್ಯಾಮ್ಸನ್ ಅವರ ಇತ್ತೀಚಿನ ಫಾರ್ಮ್

ಸಂಜು ಸ್ಯಾಮ್ಸನ್ ತಮ್ಮ ಇತ್ತೀಚಿನ ಟಿ20 ಇನ್ನಿಂಗ್ಸ್‌ಗಳಲ್ಲಿ (11, 2, 7 ಮತ್ತು 9) ರನ್ ಗಳಿಸಲು ಪರದಾಡುತ್ತಿದ್ದಾರೆ. ಲಖನೌದಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲೂ ಅವರು ಕೇವಲ 9 ರನ್‌ಗಳಿಗೆ ಔಟಾಗಿದ್ದರು. ಅದಕ್ಕೂ ಮುನ್ನ ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲಿ ಸತತ ಎರಡು ಅರ್ಧಶತಕಗಳನ್ನು ಬಾರಿಸಿದ್ದರೂ, ಪ್ರಸ್ತುತ ಸರಣಿಯ ಆರಂಭದಲ್ಲಿ ದೊಡ್ಡ ಮೊತ್ತ ಗಳಿಸಲು ವಿಫಲರಾಗಿದ್ದಾರೆ.

ವೈಭವ್ ಸೂರ್ಯವಂಶಿ ಆಡಿಸಬೇಕೆಂಬ ಚರ್ಚೆ

ಮತ್ತೊಂದೆಡೆ ಯುವ ಬ್ಯಾಟರ್ ವೈಭವ್ ಸೂರ್ಯವಂಶಿ ಅವರ ಪ್ರದರ್ಶನವು ಆಯ್ಕೆಗಾರರ ಗಮನ ಸೆಳೆದಿದೆ. ಅವರು ಏಷ್ಯನ್ ಗೇಮ್ಸ್‌ ವೇಳೆ ಅಭಿಷೇಕ್ ಶರ್ಮಾ ಅವರೊಂದಿಗೆ ಭಾರತ ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಈ ಹಿನ್ನೆಲೆಯಲ್ಲಿ, ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೂ ಅವರನ್ನು ಆರಂಭಿಕರಾಗಿ ಪರಿಗಣಿಸಬೇಕೆಂಬ ಕೂಗುಗಳು ಕೇಳಿಬಂದಿದ್ದವು.

ಆಕಾಶ್ ಚೋಪ್ರಾ ಹೇಳಿದ್ದೇನು?

ಈ ಬಗ್ಗೆ ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಆಕಾಶ್ ಚೋಪ್ರಾ ಅವರು, ವೆಸ್ಟ್‌ ಇಂಡೀಸ್‌ ವಿರುದ್ಧ ಎರಡನೇ ಟಿ20 ಪಂದ್ಯಕ್ಕೆ ಸಂಜು ಸ್ಯಾಮ್ಸನ್ ಬದಲಿಗೆ ವೈಭವ್ ಸೂರ್ಯವಂಶಿಗೆ ಅವಕಾಶ ನೀಡುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ. 'ಬಿಹಾರದ ನೆರೆಹೊರೆಯಲ್ಲಿ ಸೂರ್ಯವಂಶಿ ಬಗ್ಗೆ ಚರ್ಚೆಗಳು ನಡೆಯುತ್ತಿರಬಹುದು. ಆದರೆ, ಅವರಿಗೆ ಈ ಹಂತದಲ್ಲಿ ಪ್ಲೇಯಿಂಗ್ 11ನಲ್ಲಿ ಅವಕಾಶ ಸಿಗಲು ಸಾಧ್ಯವಿಲ್ಲ,' ಎಂದು ಹೇಳಿದ್ದಾರೆ.

'ಒಂದೆರಡು ಪಂದ್ಯಗಳಲ್ಲಿ ವಿಫಲರಾದ ತಕ್ಷಣವೇ ಸಂಜು ಸ್ಯಾಮ್ಸನ್ ಅವರನ್ನು ಬದಲಾಯಿಸಬೇಕು ಎನ್ನಲು ಸಾಧ್ಯವಿಲ್ಲ. ಪ್ರತಿ ಪಂದ್ಯದ ನಂತರವೂ ನಾವು ಹೀಗೆಯೇ ಪ್ರಶ್ನೆ ಮಾಡಲು ಆರಂಭಿಸಿದರೆ ಕ್ರಿಕೆಟ್‌ನಲ್ಲಿ ಒಂದು ತಂಡವನ್ನು ನಿರ್ವಹಣೆ ಮಾಡುವುದು ಹೇಗೆ?,' ಎಂದು ಆಕಾಶ್ ಚೋಪ್ರಾ ಅವರು ಪ್ರಶ್ನಿಸಿದ್ದಾರೆ.

ಚೋಪ್ರಾ ಅವರ ಪ್ರಕಾರ, ಸಂಜು ಸ್ಯಾಮ್ಸನ್ ಟಿ20 ವಿಶ್ವಕಪ್ ವಿಜೇತ ತಂಡದಲ್ಲಿ ಹಾಗೂ ನಂತರದ ಪ್ರಮುಖ ಪಂದ್ಯಗಳಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದಾರೆ. ಪ್ರತಿಯೊಂದು ಪಂದ್ಯದ ನಂತರವೂ ಆಟಗಾರನ ಸ್ಥಾನದ ಮೇಲೆ ಅನುಮಾನ ವ್ಯಕ್ತಪಡಿಸುವುದು ಸರಿಯಲ್ಲ. ಅಲ್ಲದೆ ಆಲ್‌ರೌಂಡರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ತಂಡಕ್ಕೆ ಸೇರಿಸಿಕೊಳ್ಳುವ ವಿಚಾರವಾಗಿಯೂ ಮಾತನಾಡಿದ ಅವರು, 'ನಿತೀಶ್‌ಗೆ ಅವಕಾಶ ನೀಡಲು ತಾವು ಇಷ್ಟಪಡುವುದಾಗಿ ಹೇಳಿದರೂ, ತಂಡದ ಮ್ಯಾನೇಜ್‌ಮೆಂಟ್ ತಕ್ಷಣವೇ ಪ್ಲೇಯಿಂಗ್ 11ನಲ್ಲಿ ಬದಲಾವಣೆ ಮಾಡುವ ಆಲೋಚನೆಯಲ್ಲಿ ಇಲ್ಲ,' ಎಂದು ತಿಳಿಸಿದ್ದಾರೆ.

ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ 5 ಪಂದ್ಯಗಳ ಟಿ20 ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ. ಲಖನೌ ಪಂದ್ಯದಲ್ಲಿ ಭಾರತ 8 ವಿಕೆಟ್‌ಗಳ ಜಯಗಳಿಸಿತ್ತು. ಸಂಜು ಸ್ಯಾಮ್ಸನ್ ಮುಂಬರುವ ಪಂದ್ಯಗಳಲ್ಲಿ ರನ್ ಗಳಿಸಿ ತಮ್ಮ ಮೇಲಿರುವ ಟೀಕೆಗಳಿಗೆ ಉತ್ತರಿಸಬೇಕಾದ ಅಗತ್ಯವಿದೆ. ಈ ಕ್ಷಣಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+