ಜಗತ್ತಿನ ಯಾವ ಬೌಲರ್‌ಗೂ ಹೆದರಲ್ಲ: ವೈಭವ್ ಸೂರ್ಯವಂಶಿ ಹಿಂಗ್ ಹೇಳಿದ್ಯಾಕೆ?

Vaibhav Sooryavanshi: ಭಾರತೀಯ ಕ್ರಿಕೆಟ್‌ನ ಅದ್ಭುತ ಪ್ರತಿಭೆ 15 ವರ್ಷದ ವೈಭವ್ ಸೂರ್ಯವಂಶಿ ಅವರು ಆಕ್ರಮಣಕಾರಿ ಆಟದ ಮೂಲಕ ನಿರಂತರ ಸುದ್ದಿಯಲ್ಲಿದ್ದಾರೆ. ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಒಂದರಲ್ಲಿ ನಿಮಗೆ ಯಾವ ಬೌಲರ್‌ ಕಂಡರೆ ಭಯ ಎಂದು ಕೇಳಲಾಗಿದೆ. ಈ ಪ್ರಶ್ನೆಗೆ ಅವರು ನೀಡಿದ ಉತ್ತರ ಇದೀಗ ಸಖತ್ ಸದ್ದು ಮಾಡುತ್ತಿದೆ.

ಐಪಿಎಲ್‌ನ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಹಂಚಿಕೊಂಡ ವಿಡಿಯೋ ಒಂದರಲ್ಲಿ ವೈಭವ್ ಸೂರ್ಯವಂಶಿ ಕಾಣಿಸಿಕೊಂಡಿದ್ದಾರೆ. ಈ ಸಂದರ್ಶನದಲ್ಲಿ ಜಗತ್ತಿನ ಯಾವ ಬೌಲರ್‌ ಅನ್ನು ಎದುರಿಸಲು ಕಷ್ಟ ಎನಿಸುತ್ತದೆ ಎಂದು ಪ್ರಶ್ನೆ ಕೇಳಲಾಗಿದೆ. ಇದಕ್ಕೆ ಯಾವುದೇ ಹಿಂಜರಿಕೆ ಇಲ್ಲದೆ ತಕ್ಷಣ ಉತ್ತರಿಸಿದ ವೈಭವ್, 'ಇನ್ನೂ ಯಾರೂ ಇಲ್ಲ.' ಎಂದು ಹೇಳಿದ್ದಾರೆ. 15 ವರ್ಷದ ಈ ಯುವ ಆಟಗಾರನ ಆತ್ಮವಿಶ್ವಾಸ ಮತ್ತು ಧೈರ್ಯದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ನೆಟ್ಟಿಗರು ಅವರ ಕ್ರೀಡಾ ಮನೋಭಾವವನ್ನು ಶ್ಲಾಘಿಸಿದ್ದಾರೆ.

Vaibhav Sooryavanshi Bold Reply Goes Viral I m Not Afraid of Any Bowler Know Complete details

ಜಿಂಬಾಬ್ವೆ ವಿರುದ್ಧ ಅದ್ಭುತ ಪ್ರದರ್ಶನ

ಐಪಿಎಲ್ ಮತ್ತು ದೇಶೀಯ ಕ್ರಿಕೆಟ್‌ನಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್‌ನಿಂದ ಸದ್ದು ಮಾಡಿರುವ ಬಾಲಕ ವೈಭವ್ ಸೂರ್ಯವಂಶಿ ಇತ್ತೀಚೆಗೆ ಮುಕ್ತಾಯಗೊಂಡ ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲೂ ಅದ್ಭುತ ಪ್ರದರ್ಶನ ನೀಡಿದ್ದರು. ಈ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಯನ್ನೂ ಕೂಡ ಪಡೆದುಕೊಂಡರು.

ಎದುರಾಳಿ ಬೌಲರ್‌ಗಳ ಮೇಲೆ ವೈಭವ್ ಸೂರ್ಯವಂಶಿ ಸವಾರಿ

ಮೈದಾನದಲ್ಲಿ ಎದುರಾಳಿ ಬೌಲರ್‌ಗಳ ಮೇಲೆ ಸವಾರಿ ಮಾಡುವ ವೈಭವ್ ಸೂರ್ಯವಂಶಿ ಅವರು ದಿಗ್ಗಜರು ಹಾಗೂ ಅಭಿಮಾನಿಗಳ ಗಮನ ಸೆಳೆದಿದ್ದಾರೆ. ಅವರ ಈ ಭಯವಿಲ್ಲದ ಆಟದ ವೈಖರಿಯೇ ಅವರಿಗೆ ಇಷ್ಟು ಸಣ್ಣ ವಯಸ್ಸಿನಲ್ಲಿ ದೊಡ್ಡ ಮಟ್ಟದ ಯಶಸ್ಸು ಮತ್ತು ಮನ್ನಣೆ ತಂದುಕೊಟ್ಟಿದೆ ಎಂದು ಹೇಳಿದರೆ ತಪ್ಪಾಗಲಾರದು.

ವೈಭವ್ ಸೂರ್ಯವಂಶಿ ಅವರ ಈ ನಿರಂತರ ಪ್ರದರ್ಶನವನ್ನು ಗುರುತಿಸಿರುವ ಆಯ್ಕೆ ಸಮಿತಿ, ಮುಂಬರುವ ದುಲೀಪ್ ಟ್ರೋಫಿ ಟೂರ್ನಿಗೆ ಈಸ್ಟ್ ಝೋನ್ ತಂಡದ ಉಪನಾಯಕನಾಗಿ ಅವರನ್ನು ಆಯ್ಕೆ ಮಾಡಿದೆ. ಇಶಾನ್ ಕಿಶನ್ ನಾಯಕತ್ವದ ಈ ತಂಡದಲ್ಲಿ ಯುವ ಆಟಗಾರ ವೈಭವ್‌ಗೆ ಈ ಜವಾಬ್ದಾರಿಯನ್ನೂ ನೀಡಿರುವುದು ಅವರ ವೃತ್ತಿಜೀವನದ ಮತ್ತೊಂದು ಪ್ರಮುಖ ಮೈಲಿಗಲ್ಲಾಗಿದೆ. ಒಟ್ಟಿನಲ್ಲಿ ಯಾವುದೇ ವಿಶ್ವದರ್ಜೆಯ ಬೌಲರ್‌ಗೂ ಅಂಜದ ವೈಭವ್ ಸೂರ್ಯವಂಶಿ ಅವರ ಆಕ್ರಮಣಕಾರಿ ಆಟ ಮುಂಬರುವ ದಿನಗಳಲ್ಲಿ ಭಾರತೀಯ ಕ್ರಿಕೆಟ್‌ನಲ್ಲಿ ದೊಡ್ಡ ಮಟ್ಟದ ಸಂಚಲನ ಮೂಡಿಸುವ ಮುನ್ಸೂಚನೆ ನೀಡುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+