Vaibhav Sooryavanshi: 36 ವರ್ಷಗಳ ಹಳೆಯ ಐತಿಹಾಸಿಕ ದಾಖಲೆ ಧೂಳೀಪಟ ಮಾಡಿದ ವೈಭವ್ ಸೂರ್ಯವಂಶಿ

Vaibhav Sooryavanshi: ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ತಾರೆ 15 ವರ್ಷದ ವೈಭವ್ ಸೂರ್ಯವಂಶಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುತ್ತಿದ್ದಂತೆ ಹೊಸ ಇತಿಹಾಸ ಬರೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಅವರು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ ಹೆಸರಲ್ಲಿದ್ದ 36 ವರ್ಷಗಳ ಹಳೆಯ ಐತಿಹಾಸಿಕ ದಾಖಲೆಯೊಂದನ್ನು ಧೂಳೀಪಟ ಮಾಡಿದ್ದಾರೆ.

ಕ್ರಿಕೆಟ್ ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ಬ್ಯಾಟರ್ ಸಚಿನ್ ತೆಂಡೂಲ್ಕರ್ ಅವರು 1989ರಲ್ಲಿ ಪಾಕಿಸ್ತಾನದ ವಿರುದ್ಧ ಕರಾಚಿಯಲ್ಲಿ ತಮ್ಮ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದಾಗ ಅವರಿಗೆ 16 ವರ್ಷ 205 ದಿನಗಳಾಗಿತ್ತು. ಕಳೆದ ಮೂರೂವರೆ ದಶಕಗಳಿಂದ ಭಾರತದ ಪರ ಅತಿ ಕಿರಿಯ ವಯಸ್ಸಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ ದಾಖಲೆ ಸಚಿನ್ ಹೆಸರಲ್ಲೇ ಇತ್ತು. ಆದರೆ ಬಿಹಾರ ಮೂಲದ ಎಡಗೈ ಓಪನರ್ ವೈಭವ್ ಸೂರ್ಯವಂಶಿ ಕೇವಲ 15 ವರ್ಷ 100ಕ್ಕೂ ಹೆಚ್ಚು ದಿನಗಳ ವಯಸ್ಸಿನಲ್ಲಿ ಇಂಗ್ಲೆಂಡ್ ವಿರುದ್ಧ ಭಾರತದ ಟಿ20 ಕ್ಯಾಪ್ ಧರಿಸುವ ಮೂಲಕ ಈ ಸುದೀರ್ಘ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

Vaibhav Sooryavanshi Breaks Sachin Tendulkar s 36-Year Record on India Debut Against England

ಆಡುವ ಹನ್ನೊಂದರ ಬಳಗದಲ್ಲಿ ಸ್ಥಾನ

ಇತ್ತೀಚೆಗಷ್ಟೇ ಮುಕ್ತಾಯಗೊಂಡ ಐಪಿಎಲ್ 2026ರ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ ಪರ ಆಡಿದ್ದ ವೈಭವ್ ಸೂರ್ಯವಂಶಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದರು. ಬರೋಬ್ಬರಿ 237ಕ್ಕೂ ಅಧಿಕ ಸ್ಟ್ರೈಕ್ ರೇಟ್‌ನಲ್ಲಿ 776 ರನ್ ಸಿಡಿಸಿ ಟೂರ್ನಿಯ ಅತ್ಯುತ್ತಮ ಯುವ ಆಟಗಾರನಾಗಿ ಹೊರಹೊಮ್ಮಿದ್ದರು. ವಿಶ್ವದ ದಿಗ್ಗಜ ಬೌಲರ್‌ಗಳನ್ನು ಅತ್ಯಂತ ಸುಲಭವಾಗಿ ಎದುರಿಸುತ್ತಿದ್ದ ಇವರ ಆಟದ ಶೈಲಿಯನ್ನ ಕಂಡ ಬಿಸಿಸಿಐ ಆಯ್ಕೆ ಸಮಿತಿಯು ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ತಂಡದಲ್ಲಿ ಸ್ಥಾನ ನೀಡಿತ್ತು. ಹಿರಿಯ ಆಟಗಾರ ಸಂಜು ಸ್ಯಾಮ್ಸನ್ ಅವರ ಬದಲಿಗೆ ಆಡುವ ಹನ್ನೊಂದರ ಬಳಗ ಸೇರಿದ ವೈಭವ್ ಮೈದಾನಕ್ಕಿಳಿಯುತ್ತಿದ್ದಂತೆ ಇತಿಹಾಸದ ಪುಟ ಸೇರಿದರು.

ವೈಭವ್‌ ಆಟಕ್ಕೆ ದಿಗ್ಗಜರಿಂದ ಶ್ಲಾಘನೆ

ವೈಭವ್ ಸೂರ್ಯವಂಶಿ ಅವರ ಈ ಐತಿಹಾಸಿಕ ಸಾಧನೆಗೆ ಕ್ರಿಕೆಟ್ ಲೋಕದ ದಿಗ್ಗಜರು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಮಾಜಿ ನಾಯಕ ಕಪಿಲ್ ದೇವ್ ಅವರು ಇವರ ಆಟದ ಶೈಲಿಯನ್ನು ಸಚಿನ್ ಮತ್ತು ವಿರಾಟ್ ಕೊಹ್ಲಿ ಅವರ ಆರಂಭಿಕ ದಿನಗಳಿಗೆ ಹೋಲಿಸಿದ್ದರೆ, ಭಾರತ ತಂಡದ ಮ್ಯಾನೇಜ್‌ಮೆಂಟ್ ಇವರನ್ನು ಭಾರತೀಯ ಕ್ರಿಕೆಟ್‌ನ ಮುಂದಿನ ಸೂಪರ್‌ಸ್ಟಾರ್ ಎಂದು ಬಣ್ಣಿಸಿದೆ.

ಅತಿ ಕಿರಿಯ ವಯಸ್ಸಿಗೆ ಇಷ್ಟೊಂದು ದೊಡ್ಡ ವೇದಿಕೆಯಲ್ಲಿ ಅದೂ ಇಂಗ್ಲೆಂಡ್‌ನಂತಹ ಬಲಿಷ್ಠ ತಂಡದ ವಿರುದ್ಧ ಅವರದ್ದೇ ನೆಲದಲ್ಲಿ ಆಡುವುದು ಸಾಮಾನ್ಯದ ಮಾತಲ್ಲ. ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದು ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಅದ್ಧೂರಿ ಮುನ್ನುಡಿ ಬರೆದಿರುವ ವೈಭವ್ ಸೂರ್ಯವಂಶಿ ಮುಂಬರುವ ದಿನಗಳಲ್ಲಿ ಟೀಮ್ ಇಂಡಿಯಾ ಪರ ಇನ್ನೂ ಯಾವೆಲ್ಲಾ ಮೈಲಿಗಲ್ಲುಗಳನ್ನು ಸ್ಥಾಪಿಸಲಿದ್ದಾರೆ ಎಂಬುದನ್ನು ನೋಡಲು ಇಡೀ ವಿಶ್ವವೇ ಕಾತರದಿಂದ ಕಾಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+