Vaibhav Sooryavanshi: 15 ವರ್ಷದ ವೈಭವ್ ಸೂರ್ಯವಂಶಿ ನನ್ನ ಫೇವರೆಟ್ ಆಟಗಾರ: ಎಸ್‌ಆರ್‌ಎಚ್‌ ನಾಯಕ ಪ್ಯಾಟ್ ಕಮಿನ್ಸ್

Vaibhav Sooryavanshi: ಐಪಿಎಲ್ 2026ರಲ್ಲಿ 15 ವರ್ಷದ ಯುವ ಪ್ರತಿಭೆ ವೈಭವ್ ಸೂರ್ಯವಂಶಿ ಅವರ ಬ್ಯಾಟಿಂಗ್ ಅಬ್ಬರ ಮುಂದುವರೆದಿದೆ. ಶನಿವಾರ ಜೈಪುರದಲ್ಲಿ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ಸ್ ಪರ ವೈಭವ್ ಕೇವಲ 36 ಎಸೆತಗಳಲ್ಲಿ ಶತಕ ಸಿಡಿಸುವ ಮೂಲಕ ಅವರು ಕ್ರಿಕೆಟ್ ಲೋಕವನ್ನು ಬೆರಗುಗೊಳಿಸಿದ್ದಾರೆ. ಇದರ ಬೆನ್ನಲ್ಲೇ ಇವರ ಬಗ್ಗೆ ಒಬ್ಬರಾದ ಪ್ಯಾಟ್ ಕಮಿನ್ಸ್ ಅಚ್ಚರಿ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ.

ಜೈಪುರದ ಸವಾಯಿ ಮಾನ್‌ಸಿಂಗ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಎಸ್‌ಆರ್‌ಎಚ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ವೈಭವ್ ಕೇವಲ 37 ಎಸೆತಗಳಲ್ಲಿ 5 ಬೌಂಡರಿ, 12 ಭರ್ಜರಿ ಸಿಕ್ಸರ್‌ಗಳ ಸಹಿತ 103 ರನ್‌ ಬಾರಿಸಿ ಮಿಂಚಿದರು. ಇದು ಐಪಿಎಲ್ ಇತಿಹಾಸದಲ್ಲಿ ಭಾರತೀಯ ಆಟಗಾರನೊಬ್ಬ ಬಾರಿಸಿದ ಎರಡನೇ ಅತಿ ವೇಗದ ಶತಕವಾಗಿದೆ.

Vaibhav Sooryavanshi Century 15-Year-Old Sensation Shocks IPL 2026 SRH Captain Pat Cummins Reacts

ಕಮಿನ್ಸ್‌ಗೆ ಮೊದಲ ಎಸೆತದಲ್ಲೇ ಸಿಕ್ಸ್‌ ಸಿಡಿಸಿದ ವೈಭವ್‌

ವಿಶ್ವದ ಶ್ರೇಷ್ಠ ಬೌಲರ್‌ಗಳಲ್ಲಿ ಒಬ್ಬರಾದ ಪ್ಯಾಟ್ ಕಮಿನ್ಸ್ ಎಸೆದ ಪಂದ್ಯದ ಮೊದಲ ಎಸೆತವನ್ನೇ ವೈಭವ್ ಸಿಕ್ಸರ್‌ಗೆ ಅಟ್ಟುವ ಮೂಲಕ ತಮ್ಮ ಕೆಚ್ಚೆದೆಯ ಆಟದ ಪ್ರದರ್ಶನ ನೀಡಿದರು. ಇವರ ಈ ಅದ್ಭುತ ಬ್ಯಾಟಿಂಗ್ ನೆರವಿನಿಂದ ರಾಜಸ್ಥಾನ್ ರಾಯಲ್ಸ್‌ ತಂಡವು ನಿಗದಿ 20 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 228 ರನ್‌ಗಳನ್ನು ಪೇರಿಸಿತು. ಆದರೆ, ಆರ್‌ಆರ್‌ ನೀಡಿದ 229 ರನ್‌ಗಳನ ಗುರಿಯನ್ನು ಎಸ್‌ಆರ್‌ಎಚ್‌ 18.3 ಓವರ್‌ಗಳಿಗೆ ಮುಟ್ಟಿ ಗೆಲುವು ಸಾಧಿಸಿತು. ಇದೆಲ್ಲದರ ನಡುವೆ ಗಮನ ಸೆಳೆದಿದ್ದು ಮಾತ್ರ ವೈಭವ್ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ.

ವೈಭವ್ ಬಗ್ಗೆ ಅಚ್ಚರಿ ಹೇಳಿಕೆ ನೀಡಿದ ಪ್ಯಾಟ್ ಕಮಿನ್ಸ್‌

ಪಂದ್ಯದ ನಂತರ ಮಾತನಾಡಿದ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ನಾಯಕ ಪ್ಯಾಟ್ ಕಮಿನ್ಸ್, "ವೈಭವ್ ಈಗ ನನ್ನ ಹೊಸ ಫೇವರೆಟ್ ಆಟಗಾರ. ಅವರ ಬ್ಯಾಟಿಂಗ್ ನೋಡುವುದು ನಿಜಕ್ಕೂ ಅದ್ಭುತ. ಅವರು ಯಾವುದೇ ಭಯವಿಲ್ಲದೆ ಚೆಂಡನ್ನು ಲೀಲಾಜಾಯವಾಗಿ ಬೌಂಡರಿ, ಸಿಕ್ಸರ್‌ ಬಾರಿಸುತ್ತಾರೆ," ಎಂದು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ.

ಯಾರು ಈ ವೈಭವ್ ಸೂರ್ಯವಂಶಿ?

ಬಿಹಾರದ ಸಮಸ್ತಿಪುರದವರಾದ ವೈಭವ್ ಸೂರ್ಯವಂಶಿ ಅವರು, ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ಪ್ರಥಮ ದರ್ಜೆ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಸುದ್ದಿಯಾಗಿದ್ದರು. ಈ ಬಾರಿಯ ಐಪಿಎಲ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡ ಇವರ ಮೇಲೆ ಭರವಸೆ ಇಟ್ಟು ಅವಕಾಶ ನೀಡಿತ್ತು. ಅದನ್ನು ಅವರು ಸರಿಯಾಗಿ ಬಳಸಿಕೊಂಡು ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದ ಮೂಲಕ ಕ್ರಿಕೆಟ್‌ ದಿಗ್ಗಜರನ್ನೇ ನಿಬ್ಬೆರಗಾಗುವಂತೆ ಮಾಡಿದ್ದಾರೆ.

ಎಸ್‌ಆರ್‌ಎಚ್‌ ವಿರುದ್ಧ ಸ್ಫೋಟಕ ಬ್ಯಾಟಿಂಗ್

ವೈಭವ್ ಸೂರ್ಯವಂಶಿ ಅವರ 103 ರನ್‌ಗಳ ನೆರವಿನಿಂದ ರಾಜಸ್ಥಾನ್ ರಾಯಲ್ಸ್ 20 ಓವರ್‌ಗಳಲ್ಲಿ 228 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. ಆದರೆ, ಈ ಗುರಿಯನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಅಭಿಷೇಕ್ ಶರ್ಮಾ ಮತ್ತು ಇಶಾನ್ ಕಿಶನ್ ಅವರ ಬಿರುಸಿನ ಬ್ಯಾಟಿಂಗ್ ನೆರವಿನಿಂದ 5 ವಿಕೆಟ್‌ಗಳ ಜಯ ಸಾಧಿಸಿತು. ಸೋತರೂ ಸಹ ಆರ್‌ಆರ್ ತಂಡದ ವೈಭವ್ ಸೂರ್ಯವಂಶಿ ಈ ಪಂದ್ಯದ ಹೀರೊ ಆಗಿ ಕ್ರಿಕೆಟ್‌ ದಿಗ್ಗಜರ ಗಮನ ಸೆಳೆದರು.

ದಿಗ್ಗಜರ ಗಮನ ಸೆಳೆದ ವೈಭವ್

ವೈಭವ್ ಪ್ರಸ್ತುತ ಈ ಸೀಸನ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮುಂಚೂಣಿಯಲ್ಲಿದ್ದು, ಭಾರತೀಯ ಕ್ರಿಕೆಟ್‌ನ ಮುಂದಿನ ಭರವಸೆಯ ಆಟಗಾರನಾಗಿ ಗುರುತಿಸಿಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಇವರನ್ನು ಭಾರತೀಯ ಹಿರಿಯ ಕ್ರಿಕೆಟ್‌ ತಂಡಕ್ಕೆ ಆಯ್ಕೆ ಮಾಡಿದರು ಅಚ್ಚರಿಯಿಲ್ಲ. ಯಾಕಂದ್ರೆ, ಅಷ್ಟರ ಮಟ್ಟಿಗೆ ಸ್ಪೋಟಕ ಬ್ಯಾಟಿಂಗ್ ಪ್ರದರ್ಶನದ ಮೂಲಕ ಅಭಿಮಾನಿಗಳು ಹಾಗೂ ಕ್ರಿಕೆಟ್‌ ದಿಗ್ಗಜರ ಮನಸು ಗೆದ್ದುಬಿಟ್ಟಿದ್ದಾರೆ. ಈಗಾಗಲೇ ಹಲವರು ಬಿಸಿಸಿಐಗೆ ಈ ಬಗ್ಗೆ ಪ್ರಸ್ತಾವನೆಯನ್ನೂ ಸಹ ಸಲ್ಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+