6,6,6,6,6,6,6..4,4,4,4,4,4,4.. 92: ಹೊಸ ಇತಿಹಾಸ ಸೃಷ್ಟಿಸಿದ ವೈಭವ್ ಸೂರ್ಯವಂಶಿ, 57 ವರ್ಷಗಳ ಹಳೆಯ ದಾಖಲೆ ಧೂಳೀಪಟ

Vaibhav Sooryavanshi: ಭಾರತೀಯ ಕ್ರಿಕೆಟ್‌ನ ಯುವ ಪ್ರತಿಭೆ 15 ವರ್ಷದ ವೈಭವ್ ಸೂರ್ಯವಂಶಿ ಅವರು ಆಕ್ರಮಣಕಾರಿ ಆಟದ ಮೂಲಕವೇ ಹೆಸರಾಗಿದ್ದಾರೆ. ಇದೀಗ ದುಲೀಪ್‌ ಟ್ರೋಫಿಯ ಸೆಮಿಫೈನಲ್‌ ಪಂದ್ಯದಲ್ಲಿ ಅವರು ಪೂರ್ವ ವಲಯದ ಪರ ಆರಂಭಿಕರಾಗಿ ಕಣಕ್ಕಿಳಿದು ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿ ಮತ್ತೊಂದು ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಭಾರತೀಯ ದೇಶೀಯ ಕ್ರಿಕೆಟ್‌ನ ಪ್ರಮುಖ ಟೂರ್ನಿಯಾದ ದುಲೀಪ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ಬಿಹಾರದ ಉದಯೋನ್ಮುಖ ಬ್ಯಾಟರ್ ವೈಭವ್ ಸೂರ್ಯವಂಶಿ ಹೊಸ ಇತಿಹಾಸ ಬರೆದಿದ್ದಾರೆ. ತಮ್ಮ ಅದ್ಭುತ ಬ್ಯಾಟಿಂಗ್ ಪ್ರದರ್ಶನದ ಮೂಲಕ ದುಲೀಪ್ ಟ್ರೋಫಿ ಇತಿಹಾಸದಲ್ಲೇ ಸಾರ್ವಕಾಲಿಕ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

Vaibhav Sooryavanshi Creates History in Duleep Trophy Breaks 57-Year-Old Record Know details

ಹೊಸ ಇತಿಹಾಸ ಸೃಷ್ಟಿಸಿದ ವೈಭವ್ ಸೂರ್ಯವಂಶಿ

ವೈಭವ್ ಸೂರ್ಯವಂಶಿ ಅವರು ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಅರ್ಧಶತಕ ಬಾರಿಸಿದ ಅತ್ಯಂತ ಕಿರಿಯ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಸೆಮಿಫೈನಲ್‌ನಂತಹ ನಿರ್ಣಾಯಕ ಪಂದ್ಯದಲ್ಲಿ ಆಕ್ರಮಣಕಾರಿ ಬೌಲಿಂಗ್ ಪಡೆಯನ್ನು ಎದುರಿಸಿದ ಅವರು, ಅತ್ಯಂತ ತಾಳ್ಮೆ ಮತ್ತು ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿ ತಂಡಕ್ಕೆ ಆಸರೆಯಾದರು.

57 ವರ್ಷಗಳ ಹಳೆಯ ದಾಖಲೆ ಧೂಳೀಪಟ

ವೈಭವ್ ಸೂರ್ಯವಂಶಿ ಕೇವಲ 15 ವರ್ಷ 157 ದಿನಗಳ ವಯಸ್ಸಿನಲ್ಲಿ ಈ ಐತಿಹಾಸಿಕ ಸಾಧನೆ ಮಾಡಿದ್ದಾರೆ. ಈ ಮೂಲಕ 1969 ರಲ್ಲಿ ಲಕ್ಷ್ಮಣ್ ಸಿಂಗ್ (16 ವರ್ಷ 23 ದಿನಗಳು) ನಿರ್ಮಿಸಿದ್ದ 57 ವರ್ಷಗಳಷ್ಟು ಹಳೆಯ ದಾಖಲೆಯನ್ನು ಸಂಪೂರ್ಣವಾಗಿ ಅಳಿಸಿಹಾಕಿದ್ದಾರೆ.

ದುಲೀಪ್ ಟ್ರೋಫಿಯಲ್ಲಿ ಅರ್ಧಶತಕ ಸಿಡಿಸಿದ ಕಿರಿಯ ಆಟಗಾರರರು

* ವೈಭವ್ ಸೂರ್ಯವಂಶಿ: 15 ವರ್ಷ 175 ದಿನಗಳು
* ಲಕ್ಷ್ಮಣ್ ಸಿಂಗ್ (1969): 16 ವರ್ಷ 23 ದಿನಗಳು
* ಪಿಯೂಷ್ ಚಾವ್ಲಾ (2005): 16 ವರ್ಷ 307 ದಿನಗಳು

ಪೂರ್ವ ವಲಯ ಪರ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಅವರು, ಕೇವಲ 42 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಆಫ್ ಸ್ಪಿನ್ನರ್ ಸರಾಂಶ್ ಜೈನ್ ಎಸೆತದಲ್ಲಿ ಭರ್ಜರಿ ಸಿಕ್ಸರ್ ಬಾರಿಸುವ ಮೂಲಕ ಈ ಮೈಲಿಗಲ್ಲು ತಲುಪಿದರು. ಅಭಿಮನ್ಯು ಈಶ್ವರನ್ ಅವರೊಂದಿಗೆ ಸೇರಿ ಮೊದಲ ವಿಕೆಟ್‌ಗೆ 100 ರನ್‌ಗಳನ್ನು ಕಲೆಹಾಕಿ ಗಮನ ಸೆಳೆದರು.

92 ರನ್‌ ಸಿಡಿಸಿದ ವಂಡರ್ ಕಿಡ್

ಹರ್ಷ್ ದುಬೆ ಬೌಲಿಂಗ್‌ನಲ್ಲಿ ಸಿಕ್ಸರ್ ಬಾರಿಸಲು ಹೋಗಿ ಡೀಪ್ ಮಿಡ್‌ ವಿಕೆಟ್‌ನಲ್ಲಿದ್ದ ಅರ್ಷದ್ ಖಾನ್‌ಗೆ ಕ್ಯಾಚ್ ನೀಡಿದರು. ಈ ಮೂಲಕ ವೈಭವ್ ಸೂರ್ಯವಂಶಿ ಅವರಿ 81 ಎಸೆತಗಳಲ್ಲಿ 7 ಬೌಂಡರಿ ಹಾಗೂ 7 ಸಿಕ್ಸರ್‌ಗಳ ನೆರವಿನಿಂದ ಬರೋಬ್ಬರೊ 92 ರನ್‌ಗಳನ್ನು ಸಿಡಿಸಿ ವಿಕೆಟ್‌ ಒಪ್ಪಿಸಿದರು. ಹೀಗೆ ಶತಕ ಜಸ್ಟ್‌ ಮಿಸ್‌ ಆಯಿತು.

ಪಂದ್ಯದ ಆರಂಭದಲ್ಲಿ 2 ರನ್ ಗಳಿಸಿದ್ದಾಗಲೇ ಎದುರಾಳಿ ತಂಡವರು ವೈಭವ್ ಅವರ ಕ್ಯಾಚ್‌ ಕೈಚೆಲ್ಲಿದರು. ಈ ಅವಕಾಶವನ್ನು ಸರಿಯಾಗಿ ಬಳಸಿಕೊಂಡ ವಂಡರ್ ಕಿಡ್‌ ಸ್ಫೋಟಕ ಬ್ಯಾಟಿಂಗ್ ಮಾಡಿದರು. ಇದು ಅವರ ವೃತ್ತಿಜೀವನದ 2ನೇ ಪ್ರಥಮ ದರ್ಜೆ ಅರ್ಧಶತಕವಾಗಿದೆ. ಈ ಹಿಂದೆ ರಣಜಿ ಟ್ರೋಫಿಯಲ್ಲಿ ಮೇಘಾಲಯ ವಿರುದ್ಧ ಕೇವಲ 33 ಎಸೆತಗಳಲ್ಲಿ ತಮ್ಮ ಮೊದಲ ಅರ್ಧಶತಕ ಸಿಡಿಸಿದ್ದರು.

ಈಶಾನ್ಯ ವಲಯದ ವಿರುದ್ಧದ ಕಳೆದ ಪಂದ್ಯದಲ್ಲಿ ಕೇವಲ 8 ರನ್‌ಗೆ ವಿಕೆಟ್‌ ಒಪ್ಪಿಸಿ ನಿರಾಸೆ ಮೂಡಿಸಿದ್ದ ಸೂರ್ಯವಂಶಿ, ಸೆಮಿಫೈನಲ್‌ನಂತಹ ಮಹತ್ವದ ಪಂದ್ಯದಲ್ಲಿ ನೀಡಿದ ಈ ಪ್ರದರ್ಶನವು ಪ್ರೇಕ್ಷಕರು ಹಾಗೂ ಕ್ರಿಕೆಟ್ ವಿಶ್ಲೇಷಕರ ಮೆಚ್ಚುಗೆಗೆ ಪಾತ್ರವಾಗಿದೆ.

ಕೇವಲ 15ನೇ ವಯಸ್ಸಿನ ವೈಭವ್ ಸೂರ್ಯವಂಶಿ ಅವರು ಈಗಾಗಲೇ ದೇಶೀಯ ಕ್ರಿಕೆಟ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಶೈಲಿಯಿಂದ ಗಮನ ಸೆಳೆದಿದ್ದಾರೆ. ಈ ಹಿಂದೆ ಭಾರತೀಯ ಅಂಡರ್-19 ಕ್ರಿಕೆಟ್ ತಂಡ ಹಾಗೂ ರಣಜಿ ಟ್ರೋಫಿಯಲ್ಲೂ ಉತ್ತಮ ಪ್ರದರ್ಶನ ನೀಡಿದ್ದ ಇವರು, ಪ್ರಸ್ತುತ ದುಲೀಪ್ ಟ್ರೋಫಿ ಸೆಮಿಫೈನಲ್‌ನಲ್ಲಿ ಪ್ರದರ್ಶಿಸಿದ ಅದ್ಭುತ ಬ್ಯಾಟಿಂಗ್ ಶೈಲಿ ಭಾರಿ ಮೆಚ್ಚುಗೆಗೆ ಪಾತ್ರವಾಗಿದೆ. ವೈಭವ್ ಅವರು ತನ್ನ ಅದ್ಭುತ ಪ್ರತಿಭೆಯನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದು, ಭಾರತೀಯ ಕ್ರಿಕೆಟ್‌ನ ಭವಿಷ್ಯದ ದೊಡ್ಡ ಆಟಗಾರ ಆಗುವುದರಲ್ಲಿ ಎರಡೂ ಮಾತಿಲ್ಲ ಎನ್ನುವ ಮಾತುಗಳು ದಟ್ಟವಾಗಿ ಕೇಳಿಬರುತ್ತಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+