Vaibhav Sooryavanshi: ವೈಭವ್ ಸೂರ್ಯವಂಶಿ ಎರಡು ಪದಗಳ ಪೋಸ್ಟ್ ಭಾರಿ ವೈರಲ್‌.. ಮುನ್ಸೂಚನೆ ಏನು?

Vaibhav Sooryavanshi: ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು (ಅಕ್ಟೋಬರ್ 14) ಸಂಜೆ 7 ಗಂಟೆಗೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ಕ್ರೀಡಾಂಗಣಲ್ಲಿ ನಡೆಯಲಿದೆ. ಇದಕ್ಕೂ ಮುನ್ನ ಯುವ ಆಟಗಾರ ವೈಭವ್ ಸೂರ್ಯವಂಶಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಕೇವಲ ಎರಡೇ ಎರಡು ಪದಗಳ ಪೋಸ್ಟ್ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ.

ಶ್ರೇಯಸ್ ಅಯ್ಯರ್ ನೇತೃತ್ವದ ಭಾರತ ಟಿ20 ತಂಡವು ಸರಣಿಯಲ್ಲಿ 2-1 ಅಂತರದ ಮುನ್ನಡೆ ಸಾಧಿಸಿದ್ದು, ಈ ಪಂದ್ಯವನ್ನು ಗೆದ್ದು ಸರಣಿ ಕೈವಶ ಮಾಡಿಕೊಳ್ಳುವ ಗುರಿ ಹೊಂದಿದೆ. ಆದರೆ, ಕಳೆದ ಮೂರೂ ಪಂದ್ಯಗಳಲ್ಲಿ 15 ವರ್ಷದ ಉದಯೋನ್ಮುಖ ಪ್ರತಿಭೆ ವೈಭವ್ ಸೂರ್ಯವಂಶಿ ಅವರಿಗೆ ಅಂತಿಮ ಆಡುವ 11ರ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ.

Vaibhav Sooryavanshi Stay Seated Post Goes Huge Viral Ahead of India vs West Indies 4th T20 Match

ಸಾಮಾಜಿಕ ಜಾಲತಾಣದಲ್ಲಿ ವೈಭವ್ ಪೋಸ್ಟ್

ನಾಲ್ಕನೇ ಟಿ20 ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿ ತಮ್ಮ ಅಭ್ಯಾಸದ ಫೋಟೋಗಳನ್ನು ಹಂಚಿಕೊಂಡು, 'Stay Seated' (ಕುಳಿತೇ ಇರಿ/ನಿರೀಕ್ಷಿಸಿ) ಎಂಬ ಎರಡೇ ಪದಗಳ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಇದರೊಂದಿಗೆ ಚಂಡಮಾರುತದ ಎಮೋಜಿಗಳನ್ನು ಹಾಕಿಕೊಂಡಿದ್ದಾರೆ. ಅವಕಾಶಕ್ಕಾಗಿ ಕಾಯುತ್ತಿರುವ ಹಾಗೂ ಶೀಘ್ರದಲ್ಲೇ ಮೈದಾನದಲ್ಲಿ ಬಿರುಗಾಳಿ ಎಬ್ಬಿಸಲು ಸಿದ್ಧರಾಗಿರುವ ಸುಳಿವನ್ನು ಅವರು ಈ ಪೋಸ್ಟ್ ಮೂಲಕ ನೀಡಿದ್ದಾರೆ.

ವೈಭವ್ ಸೂರ್ಯವಂಶಿ ಆಯ್ಕೆ ಕುರಿತು ಚರ್ಚೆ

ಅಭಿಷೇಕ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್ ಆರಂಭಿಕರಾಗಿ ಕಣಕ್ಕಿಳಿಯುತ್ತಿರುವುದರಿಂದ ವೈಭವ್ ಸೂರ್ಯವಂಶಿ ಅವರಿಗೆ ಅವಕಾಶ ಸಿಕ್ಕಿರಲಿಲ್ಲ. ಆದರೆ ಭಾರತ ತಂಡದ ಮಾಜಿ ಸಹಾಯಕ ತರಬೇತುದಾರ ಅಭಿಷೇಕ್ ನಾಯರ್ ಸೇರಿದಂತೆ ಹಲವು ಕ್ರಿಕೆಟ್ ತಜ್ಞರು ವೈಭವ್ ಸೂರ್ಯವಂಶಿಗೆ ಅವಕಾಶ ನೀಡುವಂತೆ ಹೇಳಿದ್ದಾರೆ. 'ಭಾರತ ತಂಡ ಈ ಪಂದ್ಯವನ್ನು ಗೆದ್ದು 3-1 ಮುನ್ನಡೆ ಸಾಧಿಸಲಿ, ನಂತರ ಅಂತಿಮ ಪಂದ್ಯದಲ್ಲಿ ವೈಭವ್ ಸೂರ್ಯವಂಶಿಗೆ ಆಡಲು ಅವಕಾಶ ನೀಡಬೇಕು,' ಎಂದು ನಾಯರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಐಪಿಎಲ್ ಮತ್ತು ದೇಶೀಯ ಕ್ರಿಕೆಟ್‌ನಲ್ಲಿ ಅತ್ಯಂತ ಕಿರಿಯ ವಯಸ್ಸಿನಲ್ಲಿ ಶತಕ ಸಿಡಿಸಿ ದಾಖಲೆ ನಿರ್ಮಿಸಿರುವ ವೈಭವ್ ಸೂರ್ಯವಂಶಿ ಅವರಿಗೆ ಇಂದಿನ ಪಂದ್ಯದ ಪ್ಲೇಯಿಂಗ್‌ 11ನಲ್ಲಿ ಅವಕಾಶ ಸಿಗಲಿದೆಯೇ ಎಂಬುದನ್ನು ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದಾರೆ. ಅವರಿಗೆ ಅವಕಾಶ ಕಲ್ಪಿಸಿಕೊಡಲೇಬೇಕೆನ್ನುವ ಕೂಗುಗಳು ಜೋರಾಗಿ ಕೇಳಿಬರುತ್ತಲಿವೆ.

ಭಾರತ ತಂಡ ಮೊದಲ ಪಂದ್ಯವನ್ನು 8 ವಿಕೆಟ್‌ಗಳಿಂದ ಗೆದ್ದು ಶುಭಾರಂಭ ಮಾಡಿತ್ತು. ಆದರೆ ಎರಡನೇ ಪಂದ್ಯದಲ್ಲಿ ವೆಸ್ಟ್ ಇಂಡೀಸ್ 6 ವಿಕೆಟ್‌ಗಳಿಂದ ಗೆದ್ದು ತಿರುಗೇಟು ನೀಡಿತ್ತು. ಮೂರನೇ ಪಂದ್ಯದಲ್ಲಿ ಭಾರತ 14 ರನ್‌ಗಳ ಭರ್ಜರಿ ಜಯ ಸಾಧಿಸಿ ಸರಣಿಯಲ್ಲಿ ಮತ್ತೆ ಮುನ್ನಡೆ ಕಾಯ್ದುಕೊಂಡಿದೆ. ಹೈದರಾಬಾದ್‌ನ ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ಮತ್ತೆ ರನ್‌ಗಳ ಮಳೆ ಹರಿಯುವ ನಿರೀಕ್ಷೆಯಿದೆ. ಈ ಪಂದ್ಯದಲ್ಲಿ ಭಾರತ ಗೆದ್ದರೆ ಸರಣಿಯನ್ನು ತನ್ನದಾಗಿಸಿಕೊಳ್ಳಲಿದೆ. ಒಂದು ವೇಳೆ ಸೋತರೆ ಕೊನೆಯ ಪಂದ್ಯಕ್ಕಾಗಿ ಕಾಯಬೇಕಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+