ಪಾದಾರ್ಪಣೆ ಪಂದ್ಯದಲ್ಲೇ ಫ್ಲಾಪ್.. ಮುಂದಿದೆ ಹಬ್ಬ ಎಂದು ಇಂಗ್ಲೆಂಡ್ ಆಟಗಾರರಿಗೆ ಕಣ್ಸನ್ನೆ ಮಾಡಿದ ವೈಭವ್
Vaibhav Sooryavanshi: ಮ್ಯಾಂಚೆಸ್ಟರ್‌ನಲ್ಲಿ ಶನಿವಾರ (ಜುಲೈ 04) ಭಾರತ-ಇಂಗ್ಲೆಂಡ್ ನಡುವೆ ಟಿ20 ಸರಣಿಯ ಎರಡನೇ ಪಂದ್ಯ ನಡೆಯುತ್ತಿದೆ. ಭಾರತೀಯ ಕ್ರಿಕೆಟ್‌ನ ಯುವ ಆಟಗಾರ 15 ವರ್ಷದ ವೈಭವ್ ಸೂರ್ಯವಂಶಿ ಅವರು ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಆದರೆ ತಮ್ಮ ಬಹುನಿರೀಕ್ಷಿತ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯದಲ್ಲಿ ದೊಡ್ಡ ಇನಿಂಗ್ಸ್ ಆಡುವಲ್ಲಿ ಅವರು ವಿಫಲರಾದರು. ಅವರು 10 ಎಸೆತಗಳಲ್ಲಿ 2 ಭರ್ಜರಿ ಸಿಕ್ಸರ್‌ಗಳ ನೆರವಿನಿಂದ 14 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.
ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಅವರು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆಯೇ ಭಾರತ ಮೊದಲು ಬ್ಯಾಟಿಂಗ್ ಇಳಿಯಿತು. ಆದರೆ ಅಭಿಷೇಕ್ ಶರ್ಮಾ ಅವರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ ಅವರು ದೊಡ್ಡ ಇನ್ನಿಂಗ್ಸ್ ಕಟ್ಟಲು ವಿಫಲರಾದರು. ಆದರೂ ಅಂತಾರಾಷ್ಟ್ರೀಯ ಪಾದಾರ್ಪಣೆಯ ಮೊದಲ ಪಂದ್ಯ ಆದ ಕಾರಣ ಅವರು ಮುಂದಿನ ಮ್ಯಾಚ್‌ನಲ್ಲಿ ಅಬ್ಬರಿಸುವ ಭರವಸೆಯನ್ನೂ ಮೂಡಿಸಿದ್ದಾರೆ. ಇದು ಅವರ ಕಣ್ಣುಗಳಲ್ಲೇ ಎದ್ದು ಕಾಣುತ್ತಿತ್ತು.

ಎರಡು ಭರ್ಜರಿ ಸಿಕ್ಸರ್ ಸಿಡಿಸಿದ ವೈಭವ್
ಭಾರತದ ಪರ ಇನ್ನಿಂಗ್ಸ್ ಆರಂಭಿಸಿದ 15 ವರ್ಷದ ವೈಭವ್ ಸೂರ್ಯವಂಶಿ ಆರಂಭದಲ್ಲೇ ತಮ್ಮ ಎಂದಿನ ಆಕ್ರಮಣಕಾರಿ ಆಟಕ್ಕೆ ಕೈಹಾಕಿದರು. ಇಂಗ್ಲೆಂಡ್ ಬೌಲರ್‌ಗಳ ವಿರುದ್ಧ ಎರಡು ಆಕರ್ಷಕ ಸಿಕ್ಸರ್‌ಗಳನ್ನು ಸಿಡಿಸಿ ಅಭಿಮಾನಿಗಳಲ್ಲಿ ದೊಡ್ಡ ಭರವಸೆ ಹುಟ್ಟುಹಾಕಿದರು. ಆದರೆ ಇನಿಂಗ್ಸ್‌ನ 4ನೇ ಓವರ್‌ನಲ್ಲಿ ಇಂಗ್ಲೆಂಡ್ ಸ್ಪಿನ್ನರ್ ವಿಲ್ ಜಾಕ್ಸ್ ಅವರ ಬೌಲಿಂಗ್‌ನಲ್ಲಿ ಮತ್ತೊಂದು ದೊಡ್ಡ ಶಾಟ್‌ಗೆ ಮುಂದಾದ ವೈಭವ್ ಕ್ರೀಸ್ ಬಿಟ್ಟು ಮುಂದೆ ಬಂದು ಆಡಲು ಹೋಗಿ ಸ್ಟಂಪ್ ಔಟ್ ಆದರು.
ವೈಭವ್ ಔಟಾದ ಬಳಿಕ ಭಾರತ ತಂಡ ಆರಂಭಿಕ ಆಘಾತ ಎದುರಿಸಿತು. ಸದ್ಯ ಈಗ ತಿಲಕ್ ವರ್ಮಾ ಅವರು ಅಕ್ಷರ್ ಪಾಟೇಲ್ ಬ್ಯಾಟಿಂಗ್ ಮುಂದುವರೆಸಿದ್ದಾರೆ. ಇನ್ನೂ ಪಂದ್ಯದ ಆರಂಭಕ್ಕೂ ಮುನ್ನ ಭಾರತ ತಂಡದ ಯುವ ಆಟಗಾರ ತಿಲಕ್ ವರ್ಮಾ ಅವರಿಂದ ವೈಭವ್ ಸೂರ್ಯವಂಶಿ ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಕ್ಯಾಪ್ ಪಡೆದರು. ಈ ವೇಳೆ ಹಿರಿಯ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್ ಅವರಿಗೆ ವಿಶ್ರಾಂತಿ ನೀಡಿ ವೈಭವ್‌ಗೆ ಆಡುವ ಹನ್ನೊಂದರ ಬಳಗದಲ್ಲಿ ಅವಕಾಶ ಕಲ್ಪಿಸಲಾಗಿತ್ತು.
ಹೊಸ ದಾಖಲೆ ಬರೆದ ವೈಭವ್ ಸೂರ್ಯವಂಶಿ
ಮೈದಾನಕ್ಕೆ ಕಾಲಿಡುತ್ತಿದ್ದಂತೆ ವೈಭವ್ ಸೂರ್ಯವಂಶಿ ಭಾರತೀಯ ಪುರುಷರ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಿರಿಯ ವಯಸ್ಸಿಗೆ ಪದಾರ್ಪಣೆ ಮಾಡಿದ ಆಟಗಾರ ಎಂಬ ಸಾರ್ವಕಾಲಿಕ ದಾಖಲೆ ಬರೆದರು. ಕೇವಲ 15 ವರ್ಷದ ವಯಸ್ಸಿನ ವೈಭವ್ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರ 36 ವರ್ಷಗಳ ಹಳೆಯ ದಾಖಲೆಯನ್ನು ಮುರಿದರು.
ಸಚಿನ್ ತೆಂಡೂಲ್ಕರ್ ಅವರು 1989ರಲ್ಲಿ ಪಾಕಿಸ್ತಾನದ ವಿರುದ್ಧ ತಮ್ಮ 16ನೇ ವಯಸ್ಸಿ (16 ವರ್ಷ 205 ದಿನಗಳು)ಲ್ಲೇ ಪಾದಾರ್ಪಣೆ ಮಾಡಿದ್ದರು. ಇದೀಗ ಆ ದಾಖಲೆ ಇತಿಹಾಸದ ಪುಟ ಸೇರಿದ್ದು, ಬಿಹಾರದ ಯುವ ಕ್ರಿಕೆಟಿಗ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ವೈಭವ್ ಸೂರ್ಯವಂಶಿ ಅವರ ಈ ಪಾದಾರ್ಪಣೆಗಾಗಿಯೇ ಇಡೀ ಕ್ರಿಕೆಟ್ ಜಗತ್ತು ಕಾತರದಿಂದ ಕಾಯುತ್ತಿದ್ದು, ಇದು ಕೊನೆಗೂ ಈಡೇರಿದಂತಾಗಿದೆ. ಇಂದಿನ ಪಂದ್ಯದಲ್ಲಿ ಕಡಿಮೆ ರನ್‌ಗೆ ವಿಕೆಟ್ ಒಪ್ಪಿಸಿದಾಗ ಇದೇ ಕೊನೆಯಲ್ಲ, ಮುಂದಿನ ಪಂದ್ಯದಲ್ಲಿ ನನ್ನ ಅಸಲಿ ಆಟ ತೋರಿಸುತ್ತೇನೆ ಎಂದು ಇಂಗ್ಲೆಂಡ್ ಆಟಗಾರರಿಗೆ ಕಣ್ಸನ್ನೆ ಮೂಲಕ ಎಚ್ಚರಿಸಿ ಗಮನ ಸೆಳೆದಿದ್ದಾರೆ.
ಭಾರತ ಪ್ಲೇಯಿಂಗ್ 11: ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.












Click it and Unblock the Notifications