Vaibhav: 6,6,6,6.. 4,4,4,4.. ಜಿಂಬಾಬ್ವೆ ವಿರುದ್ಧ ಅಬ್ಬರಿಸಿದ ವಂಡರ್ ಕಿಡ್ ವೈಭವ್ ಸೂರ್ಯವಂಶಿ, ಟೀಕಾಕಾರರಿಗೆ ತಿರುಗೇಟು
India vs Zimbabwe 1st T20I: ಹರಾರೆಯಲ್ಲಿ ಗುರುವಾರ (ಜುಲೈ 23) ನಡೆದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡವು ಜಿಂಬಾಬ್ವೆ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತು. 15 ವರ್ಷದ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಟೀಮ್ ಇಂಡಿಯಾ ಶುಭಾರಂಭ ಮಾಡಿದೆ.
ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶ್ರೇಯಸ್ ಅಯ್ಯರ್ ಅವರು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. ಅದರಂತೆಯೇ ಮೊದಲು ಬ್ಯಾಟ್ ಬಿಸಿದ ಜಿಂಬಾಬ್ವೆ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 125 ರನ್‌ಗಳನ್ನು ಸಾಧಾರಣ ಮೊತ್ತ ಪೇರಿಸಿತು. ಬಳಿಕ ಬ್ಯಾಟ್ ಬೀಸಿದ ಭಾರತ ತಂಡವು ವೈಭವ್ ಸೂರ್ಯವಂಶಿ ಅವರ ಆಕ್ರಮಣಕಾರಿ ಆಟದ ನೆರವಿನಿಂದ 13.2 ಓವರ್‌ಗಳಲ್ಲಿ 126 ರನ್ ಗಳಿಸಿ ಭರ್ಜರಿ ಗೆಲುವು ಸಾಧಿಸಿತು.

ಆಕ್ರಮಣಕಾರಿ ಆಟ ಆಡಿದ ವೈಭವ್
126 ರನ್‌ಗಳ ಸಾಧಾರಣ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾಗೆ ವೈಭವ್ ಸೂರ್ಯವಂಶಿ ಉತ್ತಮ ಆರಂಭ ನೀಡಿದರು. ಅವರು ಕೇವಲ 18 ಎಸೆತಗಳಲ್ಲಿ ಅರ್ಧಶತಕ (50) ಪೂರೈಸಿ 19ನೇ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು. ಎಡಗೈ ಬ್ಯಾಟರ್ ಸೂರ್ಯವಂಶಿ ಅವರ ಈ ಆಕ್ರಮಣಕಾರಿ ಇನ್ನಿಂಗ್ಸ್‌ನಲ್ಲಿ 4 ಬೌಂಡರಿ ಮತ್ತು 4 ಸಿಕ್ಸರ್‌ಗಳು ಸೇರಿವೆ.
ಭಾರತದ ಪರ ಯಾರು ಎಷ್ಟು ರನ್ ಬಾರಿಸಿದರು?
ಭಾರತದ ಪರ ಬ್ಯಾಟ್ ಬೀಸಿದ ಅಭಿಷೇಕ್ ಶರ್ಮಾ ಅವರು ಕೇವಲ ಒಂದು ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಬಳಿಕ ಇಶಾನ್ ಕಿಶನ್ 35(24), ನಾಯಕ ಶ್ರೇಯಸ್ ಅಯ್ಯರ್ ಅಜೇಯ 28(24) ರನ್‌ಗಳ ಕೊಡುಗೆ ನೀಡಿದರು. ಇನ್ನೂ ಅರ್ಧಶತಕ ಸಿಡಿಸಿದ ವೈಭವ್ ಸೂರ್ಯವಂಶಿ ಅವರು ತಂಡದ ಪರ ಅತೀ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡರು.
ಭಾರತದ ಬೌಲರ್‌ಗಳ ಮಾರಕ ಬೌಲಿಂಗ್ ದಾಳಿ
ಇದಕ್ಕೂ ಮೊದಲು ಟೀಮ್ ಇಂಡಿಯಾ ಬೌಲರ್‌ಗಳು ಶಿಸ್ತುಬದ್ಧ ಬೌಲಿಂಗ್ ದಾಳಿ ನಡೆಸಿ ಜಿಂಬಾಬ್ವೆಯನ್ನು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ಕಿತ್ತು 125 ರನ್‌ಗಳಿಗೆ ಕಟ್ಟಿಹಾಕಿದರು. ಮಯಾಂಕ್ ಯಾದವ್ ನಾಲ್ಕೂ ಓವರ್ ಬೌಲಿಂಗ್ ಎಸೆದು ಕೇವಲ 18 ರನ್ ನೀಡಿ 2 ವಿಕೆಟ್ ಕಿತ್ತರೆ, ಪ್ರಿನ್ಸ್ ಯಾದವ್ 19 ರನ್ ಬಿಟ್ಟುಕೊಟ್ಟು ಅವರೂ ಕೂಡ 2 ವಿಕೆಟ್ ಕಬಳಿಸಿದರು. ಉಳಿದಂತೆ ಶಿವಂ ದುಬೆ ಹಾಗೂ ರವಿ ಬಿಷ್ಣೋಯಿ ತಲಾ ಒಂದು ವಿಕೆಟ್ ಪಡೆದರು.
ಜಿಂಬಾಬ್ವೆ ಪರ ವೆಸ್ಲಿ ಮಾಧವೆರೆ ಅವರು 34 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಿತ 39 ರನ್ ಗಳಿಸಿದರು. ಈ ಮೂಲಕ ಅವರು ತಂಡದ ಪರ ಗರಿಷ್ಠ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡರು. ಉಳಿದಂತೆ ರಿಯಾನ್ ಬುರಿ 26(35), ತಡಿವಾನಶೆ ಮರುಮಾನಿ ಅಜೇಯ 27(20) ರನ್ ಗಳಿಸಿದ್ದು ಬಿಟ್ಟರೆ, ಉಳಿದವರು ಎರಡಂಕಿ ದಾಟಲಿಲ್ಲ.
ಒಟ್ಟಿನಲ್ಲಿ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಹೀರೋ ಆಗಿದ್ದು ಬಾಲಕ ವೈಭವ್ ಸೂರ್ಯವಂಶಿ. ಜಿಂಬಾಬ್ವೆ ವಿರುದ್ಧ ಭಾರತದ ಪರ ವೈಭವ್ ಸ್ಫೋಟಕ ಅರ್ಧಶತಕ ಸಿಡಿಸಿದರು. ಈ ಮೂಲಕ ಅವರು ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅರ್ಧಶತಕ ಗಳಿಸಿದ ವಿಶ್ವದ ಅತ್ಯಂತ ಕಿರಿಯ ಆಟಗಾರ ಎಂಬ ದಾಖಲೆಯನ್ನು ತಮ್ಮ ಹೆಸರಿಗೆ ಬರೆದುಕೊಂಡರು. ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಇಂಗ್ಲೆಂಡ್ ವಿರುದ್ಧ ನಡೆದ ಟಿ20 ಸರಣಿಯ ಮೂರು ಪಂದ್ಯಗಳಲ್ಲಿ ಹೆಚ್ಚು ರನ್ ಗಳಿಸುವಲ್ಲಿ ವಿಫಲರಾಗಿದ್ದರು. ಆದರೆ ಇದೀಗ ಜಿಂಬಾಬ್ವೆ ವಿರುದ್ಧ ಅವರು ಅಬ್ಬರದ ಆಟ ಆಡಿ ತಂಡದ ಗೆಲುವಿಗೆ ಕಾರಣರಾಗುವುದಲ್ಲದೆ, ಯಾರೆಲ್ಲಾ ಫ್ಲಾಪ್ ಎಂಬ ಪಟ್ಟವನ್ನು ಕೊಟ್ಟಿದ್ದರೂ ಅವರಿಗೆ ತಕ್ಕ ಉತ್ತರ ನೀಡಿದ್ದಾರೆ.


Click it and Unblock the Notifications
