ವೈಭವ್ ಸೂರ್ಯವಂಶಿ ಟೆಸ್ಟ್ ಕ್ರಿಕೆಟ್ ಭವಿಷ್ಯದ ಕುರಿತು ರಾಹುಲ್ ದ್ರಾವಿಡ್ ಅಚ್ಚರಿ ಹೇಳಿಕೆ
Vaibhav Sooryavanshi: ಟೀಮ್ ಇಂಡಿಯಾ ಯುವ ಕ್ರಿಕೆಟರ್ 15 ವರ್ಷದ ವೈಭವ್ ಸೂರ್ಯವಂಶಿ ಅವರು ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ ಹೇಸರಾಗಿದ್ದಾರೆ. ಇದೀಗ ಈ ಬಾಲಕನ ಟೆಸ್ಟ್ ಕ್ರಿಕೆಟ್ ಭವಿಷ್ಯದ ಕುರಿತು ರಾಹುಲ್ ದ್ರಾವಿಡ್ ಅವರು ಅಚ್ಚರಿ ಹೇಳಿಕೆ ನೀಡಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಭಾರತೀಯ ಕ್ರಿಕೆಟ್‌ನ ಉದಯೋನ್ಮುಖ ಪ್ರತಿಭೆ ವೈಭವ್ ಸೂರ್ಯವಂಶಿ ಅವರು ಈಗಾಗಲೇ ವೈಟ್ ಬಾಲ್ ಕ್ರಿಕೆಟ್‌ನಲ್ಲಿ ಸ್ಫೋಟಕ ಬ್ಯಾಟಿಂಗ್ ಮೂಲಕ ಸಂಚಲನ ಮೂಡಿಸಿದ್ದಾರೆ. ಆದರೂ ಅವರ ಟೆಸ್ಟ್ ಕ್ರಿಕೆಟ್ ಭವಿಷ್ಯದ ಬಗ್ಗೆ ಟೀಮ್ ಇಂಡಿಯಾ ಮಾಜಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ.

776 ರನ್ ಗಳಿಸಿ ಮಿಂಚಿದ್ದ ವೈಭವ್ ಸೂರ್ಯವಂಶಿ
ವೈಭವ್ ಸೂರ್ಯವಂಶಿ ವೈಟ್-ಬಾಲ್ ಕ್ರಿಕೆಟ್‌ನಲ್ಲಿ ಅದ್ಭುತ ಯಶಸ್ಸು ಕಂಡಿದ್ದಾರೆ. ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ ಪರ ಅತ್ಯಧಿಕ 776 ರನ್ ಗಳಿಸಿ ಮಿಂಚಿದ್ದರು. ಬಳಿಕ ಕೊಲಂಬೊದಲ್ಲಿ ನಡೆದ ಶ್ರೀಲಂಕಾ 'ಎ' ವಿರುದ್ಧದ ತ್ರಿಕೋನ ಸರಣಿಯ ಫೈನಲ್ ಪಂದಗಯದಲ್ಲಿ ಕೇವಲ 29 ಎಸೆತಗಳಲ್ಲಿ 94 ರನ್ ಬಾರಿಸಿ ಗಮನ ಸೆಳೆದಿದ್ದರು.
ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆಯಲ್ಲಿ ಸಾಧನೆ
ಇಂಗ್ಲೆಂಡ್ ವಿರುದ್ಧ ಭಾರತೀಯ ಹಿರಿಯರ ತಂಡಕ್ಕೆ ಪಾದಾರ್ಪಣೆ ಮಾಡಿದ ನಂತರ ಅವರು, ಜಿಂಬಾಬ್ವೆ ಪ್ರವಾಸದಲ್ಲಿ 151 ರನ್ ಗಳಿಸಿ 'ಪ್ಲೇಯರ್ ಆಫ್ ದಿ ಸರಣಿ' ಪ್ರಶಸ್ತಿ ಮುಡಿಗೇರಿಸಿಕೊಂಡರು. ಒಟ್ಟಿನಲ್ಲಿ 6 ಟಿ-20 ಇನಿಂಗ್ಸ್‌ಗಳಲ್ಲಿ 189.21ರ ಸ್ಟ್ರೈಕ್ ರೇಟ್‌ನಲ್ಲಿ 193 ರನ್‌ಗಳನ್ನ ಕಲೆಹಾಕಿದ್ದಾರೆ.
ವೈಭವ್ ಟೆಸ್ಟ್ ಕ್ರಿಕೆಟ್ ಬಗ್ಗೆ ದ್ರಾವಿಡ್ ಹೇದ್ದೇನು?
ವೈಟ್-ಬಾಲ್‌ನಲ್ಲಿ ತೋರಿದ ಪ್ರದಶರ್ನಕ್ಕೆ ಹೋಲಿಸಿದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ ವೈಭವ್ ಸೂರ್ಯವಂಶಿ ಅವರಿಂದ ನಿರೀಕ್ಷಿತ ಪ್ರದರ್ಶನ ಕಂಡುಬರುತ್ತಿಲ್ಲ. 8 ಪ್ರಥಮ ದರ್ಜೆ ಪಂದ್ಯಗಳಲ್ಲಿ 17.25ರ ಸರಾಸರಿ ಹೊಂದಿರುವ ಅವರು ಪ್ರಸ್ತುತ ದುಲೀಪ್ ಟ್ರೋಫಿಯಲ್ಲಿ ಈಸ್ಟ್ ಝೋನ್ ತಂಡವನ್ನ ಪ್ರತಿನಿಧಿಸುತ್ತಿದ್ದಾರೆ. ಐಪಿಎಲ್‌ನಲ್ಲಿ ವೈಭವ್ ಅವರೊಂದಿಗೆ ಕೆಲಸ ಮಾಡಿರುವ ರಾಹುಲ್ ದ್ರಾವಿಡ್, ಅವರಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಯಶಸ್ವಿಯಾಗುವ ಸಾಮರ್ಥ್ಯವಿದೆ ಎಂದು ಹೇಳಿದ್ದಾರೆ.
ಟೆಸ್ಟ್ ಕ್ರಿಕೆಟ್ ಬಗ್ಗೆ ವೈಭವ್‌ಗೆ ಮಹತ್ವದ ಸಲಹೆ
ವೈಟ್-ಬಾಲ್ ತಂಡದಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವುದರಿಂದ ವೈಭವ್ ಸೂರ್ಯವಂಶಿಗೆ ಟೆಸ್ಟ್ ಕ್ರಿಕೆಟ್‌ನಲ್ಲಿ ಕನಿಷ್ಠ 2 ಪೂರ್ಣ ಸೀಸನ್‌ಗಳನ್ನು ಆಡಲು ಸಮಯ ಸಿಗುತ್ತದೆಯೇ ಎಂಬುದು ದ್ರಾವಿಡ್ ಅವರ ಪ್ರಮುಖ ಕಳವಳವಾಗಿದೆ. 'ವೈಭವ್‌ಗೆ ಅವರಿಗೆ ಇನ್ನೂ 15 ವರ್ಷ ಮಾತ್ರ. ದೇಶೀಯ ರೆಡ್ ಬಾಲ್ ಕ್ರಿಕೆಟ್‌ನಲ್ಲಿ ಸಾಕಷ್ಟು ಅಭ್ಯಾಸ ನಡೆಸಿ ಪಳಗಿದರೆ ಮಾತ್ರ ಟೆಸ್ಟ್ ತಂಡದಲ್ಲಿ ನೆಲೆ ನಿಲ್ಲಲು ಸಾಧ್ಯ. ಆದರೆ ಬಿಡುವಿಲ್ಲದ ಪಂದ್ಯಾವಳಿಗಳ ವೇಳಾಪಟ್ಟಿಯಿಂದಾಗಿ ಇದು ಕೊಂಚ ಕಷ್ಟಕರ,' ಎಂದು ಹೇಳಿದ್ದಾರೆ.
ದುಲೀಪ್ ಟ್ರೋಫಿ ಪಂದ್ಯದಲ್ಲಿ ವೈಭವ್ ಪ್ರದರ್ಶನ
ಇತ್ತೀಚೆಗೆ ನಡೆದ ದುಲೀಪ್ ಟ್ರೋಫಿ ಪಂದ್ಯದಲ್ಲಿ ನಾರ್ತ್ ಈಸ್ಟ್ ಝೋನ್ ವಿರುದ್ಧ ವೈಭವ್ ಸೂರ್ಯವಂಶಿ ಬ್ಯಾಟಿಂಗ್‌ನಲ್ಲಿ 8 ರನ್‌ಗಳಿಗೆ ವಿಕೆಟ್ ಒಪ್ಪಿಸಿದರು. ಆದರೆ ಬೌಲಿಂಗ್‌ನಲ್ಲಿ ಕೇವಲ 4 ಎಸೆತಗಳ ಅಂತರದಲ್ಲಿ 2 ಪ್ರಮುಖ ವಿಕೆಟ್‌ಗಳನ್ನು ಕಬಳಿಸಿ ತಂಡಕ್ಕೆ ನೆರವಾಗುವ ಮೂಲಕ ಗಮನ ಸೆಳೆದರು.
ವೈಭವ್ ಸೂರ್ಯವಂಶಿ ಅವರ ಪ್ರತಿಭೆ ಮತ್ತು ಕೌಶಲ್ಯದ ಬಗ್ಗೆ ಯಾವುದೇ ಸಂಶಯ ಇಲ್ಲ. ಆದರೂ ಟೆಸ್ಟ್ ಕ್ರಿಕೆಟ್‌ನಲ್ಲಿ ಪೂರ್ಣಪ್ರಮಾಣದಲ್ಲಿ ಪಳಗಬೇಕಂದ್ರೆ ಅವರಿಗೆ ದೇಶೀಯ ರೆಡ್-ಬಾಲ್ ಕ್ರಿಕೆಟ್‌ನಲ್ಲಿ ಹೆಚ್ಚಿನ ಪಂದ್ಯಗಳನ್ನು ಆಡುವ ಅವಕಾಶ ಮತ್ತು ಸಮಯ ಸಿಗುವುದು ಅತ್ಯಗತ್ಯವಾಗಿದೆ,' ಎಂದು ರಾಹುಲ್ ದ್ರಾವಿಡ್ ಅವರು ಹೇಳಿದ್ದಾರೆ.


Click it and Unblock the Notifications
