Vaibhav: ಆರೆಂಜ್ ಕ್ಯಾಪ್‌ನಿಂದ ಕೋಟಿ ಕಾರಿನವರೆಗೆ.. ಕ್ರಿಕೆಟ್ ದಿಗ್ಗಜರ ದಾಖಲೆ ಉಡೀಸ್ ಮಾಡಿದ ಬಾಲಕ ವೈಭವ್

Vaibhav Sooryavanshi: ಐಪಿಎಲ್‌ 2026ರ ಫೈನಲ್‌ ಪಂದ್ಯದಲ್ಲಿ ಗುಜರಾಟ್‌ ಟೈಟಾನ್ಸ್ ತಂಡವನ್ನು ಮಣಿಸಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಸತತ ಎರಡನೇ ಬಾರಿ ಚಾಂಪಿಯನ್‌ ಪಟ್ಟ ಅಲಂಕರಿಸಿದೆ. ಆದರೆ ಮತ್ತೊಂದೆಡೆ ರಾಜಸ್ಥಾನ್ ರಾಯಲ್ಸ್ ಪರ ಈ ಸೀಸನ್‌ ಪೂರ್ತಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಮಾಡಿ ದಿಗ್ಗಜರನ್ನೇ ಬೆರಗುಗೊಳಿಸಿದ 15 ವರ್ಷದ ವೈಭವ್ ಸೂರ್ಯವಂಶಿ ಅವರಿಗೆ ಪ್ರಮುಖ ಪ್ರಶಸ್ತಿಗಳನ್ನು ತಮ್ಮ ಮಡಿಗೇರಿಸಿಕೊಂಡಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಐಪಿಎಲ್ 2026ರ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿರುವ ಯುವ ಸ್ಟಾರ್ ಆಟಗಾರ ವೈಭವ್ ಸೂರ್ಯವಂಶಿ ಅವರು, ಯುನಿರ್ವಸಲ್ ಬಾಸ್ ಅಂತಲೇ ಪ್ರಸಿದ್ಧಿ ಪಡೆದಿರುವ ಕ್ರಿಸ್ ಗೇಲ್, ವಿರಾಟ್ ಕೊಹ್ಲಿ ಮತ್ತು ಜೋಸ್ ಬಟ್ಲರ್ ಅವರಂತಹ ದಿಗ್ಗಜರ ದಾಖಲೆಗಳನ್ನು ಧೂಳೀಪಟ ಮಾಡಿದ್ದಾರೆ.

Vaibhav Sooryavanshi Wins 5 Major IPL 2026 Awards Creates History with Record-Breaking Season

ಈ ಹಿಂದೆ ವಿರಾಟ್ ಕೊಹ್ಲಿ ಮತ್ತು ಬಟ್ಲರ್ ಒಂದೇ ಐಪಿಎಲ್ ಸೀಸನ್‌ನಲ್ಲಿ ತಲಾ 4 ಪ್ರಶಸ್ತಿಗಳನ್ನು ಗೆದ್ದುಕೊಂಡು ದಾಖಲೆ ಬರೆದಿದ್ದರು. ಆದರೆ ಈ ಬಾರಿಯ ಟೂರ್ನಿಯಲ್ಲಿ ಸ್ಪೋಟಕ ಬ್ಯಾಟಿಂಗ್ ಮಾಡಿರುವ ವೈಭವ್ ಸೂರ್ಯವಂಶಿ ಅವರು ಬರೋಬ್ಬರಿ 5 ಪ್ರಮುಖ ಪ್ರಶಸ್ತಿಗಳನ್ನು ಮುಡಿಗೇರಿಸಿಕೊಳ್ಳುವ ಮೂಲಕ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.

ವೈಭವ್ ಮುಡಿಗೆ 5 ಪ್ರತಿಷ್ಠಿತ ಪ್ರಶಸ್ತಿಗಳ ಗರಿ

* ಆರೆಂಜ್ ಕ್ಯಾಪ್: ಐಪಿಎಲ್‌ 2026ರಲ್ಲಿ ವೈಭವ್ ಸೂರ್ಯವಂಶಿ ಅವರು ಆಡಿದ 16 ಪಂದ್ಯಗಳಿಂದ ಒಟ್ಟು 776 ರನ್ ಸಿಡಿಸಿ ಅತೀ ಹೆಚ್ಚು ರನ್‌ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಿಗೆ ನೀಡಲಾಗುವ ಪ್ರತಿಷ್ಠಿತ ಆರೆಂಜ್ ಕ್ಯಾಪ್ ಜೊತೆಗೆ 10 ಲಕ್ಷ ರೂಪಾಯಿ ನಗದನ್ನು ತಮ್ಮದಾಗಿಸಿಕೊಂಡಿದ್ದಾರೆ.

* ಮೋಸ್ಟ್ ವ್ಯಾಲ್ಯೂಬಲ್ ಪ್ಲೇಯರ್ (MVP): ಈ ಸೀಸನ್‌ನಲ್ಲಿ ಕಣಕ್ಕಿಳಿದ ಎಲ್ಲಾ ಆಟಗಾರರಿಗಿಂತ ಅತ್ಯಂತ ಆಕ್ರಮಣಕಾರಿ ಆಟಗಾರನಾಗಿ ಗುರುತಿಸಿಕೊಂಡಿರುವ ವೈಭವ್ ಸೂರ್ಯವಂಶಿ ಅವರು, ಒಟ್ಟು 436.5 ಎಂವಿಪಿ ಅಂಕಗಳನ್ನು ಗಳಿಸಿದ್ದಾರೆ. ಈ ಅಮೋಘ ಪ್ರದರ್ಶನಕ್ಕಾಗಿ ಅವರಿಗೆ 10,00,000 ರೂಪಾಯಿ ನಗದು ಬಹುಮಾನ ನೀಡಿ ಗೌರವಿಸಲಾಗಿದೆ.

* ಎಮರ್ಜಿಂಗ್ ಪ್ಲೇಯರ್ ಆಫ್ ದಿ ಸೀಸನ್: ತಮ್ಮ ಅದ್ಭುತ ಬ್ಯಾಟಿಂಗ್ ಕೌಶಲ್ಯದ ಮೂಲಕ ಎಲ್ಲರ ಗಮನ ಸೆಳೆದ ವೈಭವ್ ಸೂರ್ಯವಂಶಿ ಈ ವರ್ಷದ ಉದಯೋನ್ಮುಖ ಆಟಗಾರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಗೌರವದೊಂದಿಗೆ 10 ಲಕ್ಷ ರೂಪಾಯಿ ನಗದು ಬಹುಮಾನವನ್ನು ಪಡೆದಿದ್ದಾರೆ.

* ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್: ಟೂರ್ನಿಯುದ್ದಕ್ಕೂ ಎದುರಾಳಿ ಬೌಲರ್‌ಗಳ ಮೇಲೆ ಸವಾರಿ ಮಾಡಿದ ವೈಭವ್ ಬರೋಬ್ಬರಿ 237.30ರ ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ್ದಾರೆ. ಈ ಸ್ಫೋಟಕ ಬ್ಯಾಟಿಂಗ್‌ಗಾಗಿ ಅವರಿಗೆ ಸೂಪರ್ ಸ್ಟ್ರೈಕರ್ ಪ್ರಶಸ್ತಿ ಲಭಿಸಿದ್ದು, ಅತ್ಯಾಧುನಿಕ ಟಾಟಾ ಸಿಯೆರಾ ಕಾರನ್ನು ಬಹುಮಾನವಾಗಿ ನೀಡಲಾಗಿದೆ. ಈ ಕಾರಿನ ಆರಂಭಿಕ ಬೆಲೆ ಸುಮಾರು 12 ಲಕ್ಷ ಆಗಿದ್ದು, ಟಾಪ್‌ ಎಂಡ್ 25 ಲಕ್ಷ ರೂಪಾಯಿವರೆಗೂ ಇದೆ.

* ಸೂಪರ್ ಸಿಕ್ಸರ್ಸ್ ಆಫ್ ದಿ ಸೀಸನ್: ಕೇವಲ ರನ್ ಗಳಿಸುವುದಷ್ಟೇ ಅಲ್ಲದೆ ಮೈದಾನದ ಮೂಲೆ ಮೂಲೆಗೂ ಸಿಕ್ಸರ್‌ಗಳ ಸುರಿಮಳೆಗೈದ ಇವರು ಆಡಿದ 16 ಇನ್ನಿಂಗ್ಸ್‌ಗಳಲ್ಲಿ ಬರೋಬ್ಬರಿ 72 ಸಿಕ್ಸರ್‌ಗಳನ್ನು ಚಚ್ಚಿದ್ದಾರೆ. ಈ ಸೀಸನ್‌ನಲ್ಲಿ ಅತಿ ಹೆಚ್ಚು ಸಿಕ್ಸ್ ಹೊಡೆದ ಆಟಗಾರನಾಗಿ ಹೊರಹೊಮ್ಮಿದ ಇವರಿಗೆ 10 ಲಕ್ಷ ರೂಪಾಯಿ ನಗದು ಪುರಸ್ಕಾರ ಸಿಕ್ಕಿದೆ.

ಐಪಿಎಲ್‌ 2026ರಲ್ಲಿ ವೈಭವ್‌ಗೆ ಸಿಕ್ಕ ಪ್ರಶಸ್ತಿಗಳು

* ಆರೆಂಜ್ ಕ್ಯಾಪ್
* ಮೋಸ್ಟ್ ವ್ಯಾಲ್ಯೂಬಲ್ ಪ್ಲೇಯರ್
* ಎಮರ್ಜಿಂಗ್ ಪ್ಲೇಯರ್ ಆಫ್ ದಿ ಸೀಸನ್
* ಸೂಪರ್ ಸ್ಟ್ರೈಕರ್ ಆಫ್ ದಿ ಸೀಸನ್
* ಸೂಪರ್ ಸಿಕ್ಸರ್ಸ್ ಆಫ್ ದಿ ಸೀಸನ್

ಒಟ್ಟಿನಲ್ಲಿ ಹೇಳುವುದಾದರೆ ಕೇವಲ ರನ್‌ಗಳ ಮೂಲಕ ಮಾತ್ರವಲ್ಲದೆ ಪ್ರಶಸ್ತಿಗಳ ಬೇಟೆಯಾಡುವ ಮೂಲಕವೂ ವೈಭವ್ ಸೂರ್ಯವಂಶಿ ಈ ಬಾರಿಯ ಐಪಿಎಲ್‌ನಲ್ಲಿ ಜಾಗತಿಕ ಕ್ರಿಕೆಟ್ ಜಗತ್ತು ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಇವರು ಇನ್ನೂ ದೊಡ್ಡ ಮಟ್ಟದ ಸಾಧನೆ ಮಾಡಲಿ ಎನ್ನುವುದು ಕ್ರಿಕೆಟ್‌ ದಿಗ್ಗಜರು ಹಾಗೂ ಅಭಿಮಾನಿಗಳ ಆಶಯವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+