IPL 2025: ಐಪಿಎಲ್ ಹರಾಜಿನಲ್ಲಿ ಕೋಟಿ ಪಡೆದ 13 ವರ್ಷದ ಕ್ರಿಕೆಟಿಗನಿಗೆ ಹೊಸ ಸಂಕಷ್ಟ!

ಸೌದಿ ಅರೇಬಿಯಾದ ಜೆಡ್ಡಾದಲ್ಲಿ ಎರಡು ದಿನಗಳ ಕಾಲ ಐಪಿಎಲ್ 2025ರ ಮೆಗಾ ಹರಾಜು ಮುಕ್ತಾಯವಾಗಿದೆ. ಈ ಐಪಿಎಲ್ ಹರಾಜಿನಲ್ಲಿ ಹಲವು ವಿಶೇಷತೆಗಳಿವೆ, 13 ವರ್ಷದ ಬಿಹಾರ ಕ್ರಿಕೆಟಿಗ ವೈಭವ್ ಸೂರ್ಯವಂಶಿ ರಾಜಸ್ಥಾನ ರಾಯಲ್ಸ್ ತಂಡಕ್ಕೆ 1.1 ಕೋಟಿ ರೂಪಾಯಿಗೆ ಹರಾಜಾಗುವ ಮೂಲಕ ಅಚ್ಚರಿ ಮೂಡಿಸಿದರು. ಐಪಿಎಲ್ ಹರಾಜಿನಲ್ಲಿ ಮಾರಾಟವಾದ ಅತ್ಯಂತ ಕಿರಿಯ ಆಟಗಾರ ಎಂಬ ಇತಿಹಾಸವನ್ನು ನಿರ್ಮಿಸಿದರು.

ಆದರೆ ಇದೀಗ ವೈಭವ್ ಸೂರ್ಯವಂಶಿಗೆ ಹೊಸ ಸಂಕಷ್ಟ ಎದುರಾಗಿದೆ. ಯುವ ಬ್ಯಾಟರ್ ವಯಸ್ಸಿನ ಬಗ್ಗೆ ಸುಳ್ಳು ಮಾಹಿತಿ ನೀಡಿ ವಂಚಿಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ. ಆದರೆ ವೈಭಯ್ ತಂದೆ ಈ ಆರೋಪಗಳನ್ನು ತಳ್ಳಿ ಹಾಕಿದ್ದಾರೆ.

vaibhav suryavanshi age test ipl contract

ಪಿಟಿಐ ಸುದ್ದಿ ಸಂಸ್ಥೆ ಜೊತೆ ಮಾತನಾಡಿದ ವೈಭವ್ ಸೂರ್ಯವಂಶಿ ಅವರ ತಂದೆ, ತಮ್ಮ ಮಗ ಯಾವುದೇ ಸಮಯದಲ್ಲಿ ವಯಸ್ಸಿನ ಪರೀಕ್ಷೆಗೆ ಒಳಗಾಗಲು ಸಿದ್ಧ ಎಂದು ಹೇಳಿದ್ದಾರೆ. 8.5 ವರ್ಷ ವಯಸ್ಸಿನಲ್ಲೇ ಅವರು ಮೂಳೆ ಪರೀಕ್ಷೆಗೆ ಒಳಗಾಗಿದ್ದರು ಎಂದು ಹೇಳಿದ್ದಾರೆ. ವೈಭವ್ ಸೂರ್ಯವಂಶಿ ಈಗಾಗಲೇ ಅಂಡರ್-19 ತಂಡದಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ ಎಂದು ಹೇಳಿದರು.

ಭರವಸೆ ಮೂಡಿಸಿರುವ ಬ್ಯಾಟರ್

ವೈಭವ್ ಸೂರ್ಯವಂಶಿ ದೇಶೀಯ ಕ್ರಿಕೆಟ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಇತ್ತೀಚೆಗೆ, ಅವರು ಚೆನ್ನೈನಲ್ಲಿ ಆಸ್ಟ್ರೇಲಿಯಾ ಅಂಡರ್ 19 ವಿರುದ್ಧ ಯೂತ್ ಟೆಸ್ಟ್‌ನಲ್ಲಿ 62 ಎಸೆತಗಳಲ್ಲಿ 104 ರನ್ ಗಳಿಸುವ ಮೂಲಕ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಶತಕ ಗಳಿಸಿದ ಎರಡನೇ ಅತ್ಯಂತ ಕಿರಿಯ ಆಟಗಾರನಾಗಿದ್ದಾರೆ.

ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಈಗಾಗಲೇ ಚೊಚ್ಚಲ ಪಂದ್ಯವನ್ನು ಮಾಡಿದರು, ಬಿಹಾರ ಪರ 6 ಎಸೆತಗಳಲ್ಲಿ 13 ರನ್ ಗಳಿಸಿದ್ದಾರೆ. ಕಳೆದ ಆವೃತ್ತಿಯಲ್ಲಿ 12ನೇ ವರ್ಷದಲ್ಲೇ ರಣಜಿ ಟ್ರೋಫಿಗೆ ಪದಾರ್ಪಣೆ ಮಾಡಿದ್ದರು. ವಿನೂ ಮಂಕಡ್ ಟ್ರೋಫಿಯಲ್ಲಿ ಮಿಂಚಿದ ಅವರು ಐದು ಪಂದ್ಯಗಳಲ್ಲಿ 400 ರನ್ ಗಳಿಸಿ ಮಿಂಚಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+