Vaibhav Suryavanshi: 14 ವರ್ಷದ ಯುವ ಸ್ಟಾರ್ ಕ್ರಿಕೆಟಿಗ ವೈಭವ್ ಸೂರ್ಯವಂಶಿಗೆ ನಾಯಕನ ಪಟ್ಟ ಯಾಕೆ? ಇಲ್ಲಿದೆ ಅಸಲಿ ಸತ್ಯ
Vaibhav Suryavanshi: ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಏಕದಿನ ಪಂದ್ಯಗಳಿಗೆ ಭಾರತ ಅಂಡರ್ 19 ತಂಡ ಪ್ರಕಟವಾಗಿದೆ. 15 ಮಂದಿ ಬಲಿಷ್ಠ ಆಟಗಾರರನ್ನು ಪ್ರಕಟಿಸಿದೆ. ಇದರಲ್ಲಿ ಸ್ಥಾನ ಪಡೆದ 14 ವರ್ಷದ ವೈಭವ್ ಸೂರ್ಯವಂಶಿಗೆ ನಾಯಕನ ಪಟ್ಟ ಕಟ್ಟಲಾಗಿದೆ. ಹಾಗಾದ್ರೆ, ಇವರಿಗೆ ಈ ಸ್ಥಾನ ನೀಡಲು ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ದಕ್ಷಿಣ ಆಫ್ರಿಕಾ ವಿರುದ್ಧದ ಅಂಡರ್ 19 ಸರಣಿಗೆ ಭಾರತ ತಂಡ ಪ್ರಕಟವಾಗಿದೆ. ಈ ಸರಣಿಗೆ 14 ವರ್ಷದ ಯುವ ಸ್ಟಾರ್ ಆಟಗಾರ ವೈಭವ್ ಸೂರ್ಯವಂಶಿಗೆ ನಾಯಕತ್ವದ ಜವಾಬ್ದಾರಿ ವಹಿಸಲಾಗಿದೆ. ಜನವರಿ 3ರಿಂದ ಮೂರು ಪಂದ್ಯಗಳ ಸರಣಿ ಆರಂಭ ಆಗಲಿದೆ. ವಿಲ್ಲೋಮೂರ್ ಪಾರ್ಕ್‌ನಲ್ಲಿ ಜನವರಿ 3, 5 ಹಾಗೂ 7ರಂದು ಪಂದ್ಯಗಳು ನಡೆಯಲಿವೆ.

ವೈಭವ್ ಸೂರ್ಯವಂಶಿಗೆ ಸ್ಥಾನ: ಮತ್ತೊಂದೆಡೆ, ಅಂಡರ್ 19 ವಿಶ್ವಕಪ್ಗಾಗಿ ಬಿಸಿಸಿಐ 15 ಸದಸ್ಯರ ಟೀಂ ಇಂಡಿಯಾ ತಂಡವನ್ನು ಪ್ರಕಟಿಸಿದೆ. ಈ ಐಸಿಸಿ ಟೂರ್ನಿಗೆ ಆಯುಷ್ ಮ್ಹಾತ್ರೆ ನಾಯಕ, ವಿಹಾನ್ ಮಲ್ಹೋತ್ರಾಗೆ ಉಪನಾಯಕನ ಪಟ್ಟ ಕಟ್ಟಿದೆ. ತಂಡದಲ್ಲಿ ಯುವ ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿ ಅವರನ್ನು ಸ್ಥಾನ ಪಡೆದಿದ್ದಾರೆ.
ಸೂರ್ಯವಂಶಿಗೆ ನಾಯಕತ್ವ ನೀಡಲು ಕಾರಣವೇನು?: ವಿಶ್ವಕಪ್‌ಗೂ ಮನ್ನ ಏಕದಿನ ಸರಣಿಗಾಗಿ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಬೇಕಾಗುತ್ತದೆ. ಇದಕ್ಕೆ ಬಹುತೇಕ ಅಂಡರ್-19 ವಿಶ್ವಕಪ್‌ಗೆ ಆಯ್ಕೆ ಆದ ಆಟಗಾರರೇ ಇರಲಿದ್ದಾರೆ. ಆದರೆ, ಏಕದಿನ ಪಂದ್ಯಗಳಿಗೆ ನಾಯಕತ್ವದಲ್ಲಿ ಬದಲಾವಣೆ ಆಗಲಿದೆ. ಇದಕ್ಕೆ ಕಾರಣವೂ ಇದೆ. ಆಯುಷ್ ಮ್ಹಾತ್ರೆ ಗಾಯಗೊಂಡ ಕಾರಣ ಹೊರಗುಳಿದಿದ್ದು, ಅವರ ಜವಾಬ್ದಾರಿಯನ್ನು ವೈಭವ್ ಸೂರ್ಯವಂಶಿ ಅವರಿಗೆ ವಹಿಸಲಾಗಿದೆ.
ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ ಭಾರತ ತಂಡ: ವೈಭವ್ ಸೂರ್ಯವಂಶಿ (ನಾಯಕ), ಆರನ್ ಜಾರ್ಜ್ (ಉಪನಾಯಕ), ವೇದಾಂತ್ ತ್ರಿವೇದಿ, ಅಭಿಗ್ಯಾನ್ ಕುಂಡು (ವಿ.ಕೀ.), ಹರ್ವಂಶ್ ಸಿಂಗ್ (ವಿ.ಕೀ.), ಆರ್.ಎಸ್. ಅಂಬ್ರಿಸ್, ಕನಿಷ್ಕ್ ಚೌಹಾಣ್, ಖಿಲನ್ ಎ. ಪಟೇಲ್, ಮೊಹಮ್ಮದ್ ಅನನ್, ಹೆನಿಲ್ ಪಟೇಲ್, ಡಿ.ದೀಪೇಶ್, ಕಿಶನ್ ಕುಮಾರ್ ಸಿಂಗ್, ಉಧವ್ ಮೋಹನ್, ಯುವರಾಜ್ ಗೋಹಿಲ್, ರಾಹುಲ್ ಕುಮಾರ್.
ಆಯುಷ್ ಮ್ಹಾತ್ರೆ ಮತ್ತು ವಿಹಾನ್ ಮಲ್ಹೋತ್ರಾ ಗಾಯಗಳಿಂದ ಬಳಲುತ್ತಿದ್ದು, ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗುಳಿಯಲಿದ್ದಾರೆ. ಇವರು ಅಂಡರ್ 19 ವಿಶ್ವಕಪ್‌ಗೆ ತಂಡವನ್ನು ಸೇರ್ಪಡೆಗೊಳ್ಳಲಿದ್ದಾರೆ. 2026ರ ಜನವರಿ 15ರಿಂದ ಫೆಬ್ರವರಿ 6ರ ವರೆಗೆ ಜಿಂಬಾಬ್ವೆ ಮತ್ತು ನಮೀಬಿಯಾದಲ್ಲಿ ಐಸಿಸಿ ಪುರುಷರ ಅಂಡರ್-19 ವಿಶ್ವಕಪ್ ನಡೆಯಲಿದೆ. ಅಂಡರ್-19 ವಿಶ್ವಕಪ್‌ಗೆ 16 ತಂಡಗಳನ್ನು ನಾಲ್ಕು ಗುಂಪುಗಳಾಗಿ ವಿಂಗಡಿಸಲಾಗಿದೆ.
ಭಾರತವು ಇದುವರೆಗೆ ಐದು ಬಾರಿ ಅಂಡರ್ 19 ವಿಶ್ವಕಪ್ ಗೆದ್ದುಕೊಂಡಿದೆ. 2000, 2008, 2012, 2018 ಮತ್ತು 2022ರಂದು ಚಾಂಪಿಯನ್ ಆಗಿದೆ. ಈ ಮೂಲಕ ಭಾರತ ಮೊದಲನೇ ಸ್ಥಾನದಲ್ಲಿದ್ದರೆ, ಆಸ್ಟ್ರೇಲಿಯಾ 1988, 2002, 2010, 2024 ನಾಲ್ಕೂ ಬಾರಿ ಗೆದ್ದು ನಂತರದ ಸ್ಥಾನದಲ್ಲಿದೆ.
ಐದು ಬಾರಿ ಚಾಂಪಿಯನ್ ಆಗಿರುವ ಭಾರತವು ನ್ಯೂಜಿಲೆಂಡ್, ಯುಎಸ್ಎ ಮತ್ತು ಬಾಂಗ್ಲಾದೇಶದೊಂದಿಗೆ ಬಿ ಗುಂಪಿನಲ್ಲಿ ಸ್ಥಾನ ಪಡೆದಿದೆ. ಭಾರತವು ಜನವರಿ 15ರಂದು ಬುಲವಾಯೊದ ಕ್ವೀನ್ಸ್ ಸ್ಪೋರ್ಟ್ಸ್ ಕ್ಲಬ್‌ನಲ್ಲಿ ಯುಎಸ್ಎ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ. ನಂತರ ಜನವರಿ 17ರಂದು ಅದೇ ಸ್ಥಳದಲ್ಲಿ ಬಾಂಗ್ಲಾದೇಶ ಮತ್ತು ಜನವರಿ 24ರಂದು ನ್ಯೂಜಿಲೆಂಡ್ ವಿರುದ್ಧದ ಸೆಣಸಲಿದೆ.
ಅಂಡರ್ -19 ವಿಶ್ವಕಪ್‌ಗೆ ಭಾರತ ತಂಡ: ಆಯುಷ್ ಮ್ಹಾತ್ರೆ (ನಾಯಕ), ವಿಹಾನ್ ಮಲ್ಹೋತ್ರಾ (ಉಪನಾಯಕ), ವೈಭವ್ ಸೂರ್ಯವಂಶಿ, ಆರೋನ್ ಜಾರ್ಜ್, ವೇದಾಂತ್ ತ್ರಿವೇದಿ, ಅಭಿಜ್ಞಾನ್ ಕುಂದು (ವಿಕೆಟ್ ಕೀಪರ್), ಹರ್ವಂಶ್ ಸಿಂಗ್ (ವಿಕೆಟ್ ಕೀಪರ್), ಆರ್‌ಎಸ್ ಅಂಬ್ರೀಷ್, ಕಾನಿಷ್ಕ್ ಚೌಹಾಣ್, ಖಿಲಾಮ್ ಎ ಪಾಟೀಲ್, ಮೊಹಮ್ಮದ್ ಎನಾನ್, ಉಧವ್ ಮೋಹನ್, ಹೆನಿಲ್ ಪಟೇಲ್, ಡಿ.ದೀಪೇಶ್, ಕಿಶನ್ ಕುಮಾರ್ ಸಿಂಗ್.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video












Click it and Unblock the Notifications