Vaibhav Suryavanshi: ಮಗನೆ ಇದು ಆರಂಭವಷ್ಟೇ: ವೈಭವ್ ಸೂರ್ಯವಂಶಿಗೆ ತಂದೆ ನೀಡಿದ ಈ ಎಚ್ಚರಿಕೆ ಹಿಂದಿದೆ ಮಹತ್ವದ ಸಂದೇಶ
Vaibhav Suryavanshi: ಅಂಡರ್-19 ವಿಶ್ವಕಪ್ 2026 ಫೈನಲ್ನಲ್ಲಿ ಭಾರತವು ಇಂಗ್ಲೆಂಡ್ ತಂಡವನ್ನು ಭರ್ಜರಿಯಾಗಿ ಮಣಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಐತಿಹಾಸಿಕ ಗೆಲುವಿನ ರೂವಾರಿ 16 ವರ್ಷದ ವೈಭವ್ ಸೂರ್ಯವಂಶಿಗೆ ಪ್ರಶಂಸೆಗಳ ಸುರಿಮಳೆಯೇ ಹರಿದಬರುತ್ತಿದೆ. ಆದರೆ, ಅವರ ತಂದೆ ಮಾತ್ರ, ಅವನು ಇನ್ನೂ ಏನು ಸಾಧನೆ ಮಾಡಿಲ್ಲ. ಇದು ಆರಂಭ ಮಾತ್ರ ಎನ್ನುವ ಅಚ್ಚರಿ ಹೇಳಿಕೆ ನೀಡಿ ಗಮನ ಸೆಳೆದಿದ್ದಾರೆ. ಹಾಗಾದ್ರೆ, ಅವರು ಹೀಗೆ ಹೇಳಿದ್ದು ಯಾಕೆ ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ಗಳಲ್ಲಿ 9 ವಿಕೆಟ್ ಕಳೆದುಕೊಂಡು 411 ರನ್ ಗಳಿಸಿತು. ಈ ಬೃಹತ್ ಮೊತ್ತಕ್ಕೆ ಕಾರಣವಾದವರಲ್ಲಿ ವೈಭವ್ ಅವರ ಕೊಡುಗೆ ಅತ್ಯಂತ ದೊಡ್ಡದು. ಅವರು 80 ಎಸೆತಗಳಲ್ಲಿ 15 ಬೌಂಡರಿ ಹಾಗೂ 15 ಸಿಕ್ಸ್ಗಳೊಂದಿಗೆ 175 ರನ್ ಸಿಡಿಸಿ ಪಂದ್ಯದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.

ವೈಭವ್ ಸೂರ್ಯವಂಶಿ ಅವರ ಈ ಸ್ಫೋಟಕ ಇನ್ನಿಂಗ್ಸ್ ಕ್ರಿಕೆಟ್ ಅಭಿಮಾನಿಗಳು ಮಾತ್ರವಲ್ಲದೆ, ಹಲವು ಮಾಜಿ ಆಟಗಾರರು ಹಾಗೂ ಗಣ್ಯರಿಂದಲೂ ಭಾರಿ ಪ್ರಶಂಸೆಗೆ ಪಾತ್ರವಾಗಿದೆ. ಅಲ್ಲದೆ, ಟೂರ್ನಿಯ ಅತ್ಯುತ್ತಮ ಆಟಗಾರ ಪ್ರಶಸ್ತಿಯನ್ನೂ ಅವರು ತಮ್ಮದಾಗಿಸಿಕೊಂಡಿದ್ದಾರೆ.
ವೈಭವ್ ಸೂರ್ಯವಂಶಿ ತಂದೆ ಅಚ್ಚರಿ ಹೇಳಿಕೆ: ಇಡೀ ದೇಶವೇ ವೈಭವ್ ಸಾಧನೆಯನ್ನು ಸಂಭ್ರಮಿಸುತ್ತಿರುವಾಗ ಅವರ ತಂದೆ ಸಂಜೀವ್ ಸೂರ್ಯವಂಶಿ ಮಾತ್ರ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. "ನನ್ನ ಮಗ ಇನ್ನೂ ಏನೂ ಸಾಧನೆ ಮಾಡಿಲ್ಲ. ಅವನ ನಿಜವಾದ ಪ್ರಯಾಣ ಈಗಷ್ಟೇ ಆರಂಭವಾಗಿದೆ," ಎಂದು ಅವರು ಹೇಳಿದ್ದಾರೆ.
ತಮ್ಮ ಮಗನ ಬಗ್ಗೆ ದೊಡ್ಡ ಗುರಿಗಳನ್ನು ಇಟ್ಟುಕೊಂಡಿರುವ ಸಂಜೀವ್ ಅವರು, "ವೈಭವ್ ಭಾರತ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿ ವೈಟ್ ಜರ್ಸಿ ಧರಿಸುವವರೆಗೂ ನಾನು ಅವನನ್ನು ದೊಡ್ಡ ಸ್ಟಾರ್ ಎಂದು ಕರೆಯಲಾರೆ. ಸೀಮಿತ ಓವರ್ಗಳ ಕ್ರಿಕೆಟ್ ಮಾತ್ರವಲ್ಲ, ಟೆಸ್ಟ್ ಕ್ರಿಕೆಟ್ನಲ್ಲಿ ಸಾಬೀತುಪಡಿಸಿದಾಗಲೇ ನಿಜವಾದ ಮಹತ್ವ ಬರುತ್ತದೆ," ಎಂದು ತಿಳಿಸಿದ್ದಾರೆ.
ಜೊತೆಗೆ, ಶಿಸ್ತು, ವಿನಯ ಹಾಗೂ ನಿರಂತರ ಅಭ್ಯಾಸವೇ ಯಶಸ್ಸಿನ ಮೂಲ ಎಂದು ಅವರು ತಮ್ಮ ಮಗನಿಗೆ ಬೋಧಿಸುತ್ತಿರುವುದಾಗಿ ಹೇಳಿದ್ದಾರೆ. ಸಚಿನ್ ತೆಂಡೂಲ್ಕರ್ ಅವರಂತೆಯೇ ಸಾಧನೆಯ ಜೊತೆಗೆ ಸರಳತೆ ಮತ್ತು ಗೌರವವನ್ನು ಉಳಿಸಿಕೊಳ್ಳಬೇಕು ಎಂಬುದೇ ನಮ್ಮ ಆಶಯವೆಂದು ಅವರು ಹೇಳಿದ್ದಾರೆ.
ಅಂಡರ್-19 ವಿಶ್ವಕಪ್ನಲ್ಲಿ 7 ಪಂದ್ಯಗಳಲ್ಲಿ ಮೂರು ಅರ್ಧಶತಕ ಹಾಗೂ ಒಂದು ಭರ್ಜರಿ ಶತಕ ಬಾರಿಸಿರುವ ವೈಭವ್, ಮುಂದಿನ ದಿನಗಳಲ್ಲಿ ಭಾರತೀಯ ಕ್ರಿಕೆಟ್ನಲ್ಲಿ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಹಲವರು ಹೇಳುವ ಮಾತಾಗಿದೆ. ಇನ್ನೂ ಮುಂದಿನ ಐಪಿಎಲ್ ಹರಾಜಿನಲ್ಲೂ ಈ ಯುವ ಆಟಗಾರನ ಮೇಲೆ ಎಲ್ಲಾ ಫ್ರಾಂಚೈಸಿಗಳು ಕಣ್ಣು ಇಟ್ಟಿವೆ ಎನ್ನಲಾಗುತ್ತಿದೆ. ಒಟ್ಟಿನಲ್ಲಿ, ವೈಭವ್ ಸೂರ್ಯವಂಶಿ ಅವರ ಸಾಧನೆಗೆ ದೇಶವೇ ಶ್ಲಾಘನೆ ವ್ಯಕ್ತಪಡಿಸುತ್ತಿದೆ. ಆದರೆ, ಅವರ ತಂದೆ ಮಾತ್ರ ಟೆಸ್ಟ್ ಧರಿಸುವ ಚಾಲೆಂಜ್ ಹಾಕಿದ್ದಾರೆ. ಹಾಗೆಯೇ ನೋಡಿದರೆ, ಇದು ಉತ್ತಮ ಪ್ರೇರಣೆಯಂತಲೇ ಹೇಳಬಹುದು.
ಇಂಗ್ಲೆಂಡ್ ವಿರುದ್ಧ ಮಿಂಚಿದ ವೈಭವ್: ಫೆಬ್ರವರಿ 6ರ ಶುಕ್ರವಾರ ಹರಾರೆ ಸ್ಪೋರ್ಟ್ಸ್ ಕ್ಲಬ್ನಲ್ಲಿ ನಡೆದ ಅಂಡರ್ 19 ವಿಶ್ವಕಪ್ 2026 ಫೈನಲ್ ಪಂದ್ಯದಲ್ಲಿ ಭಾರತ ಇಂಗ್ಲೆಂಡ್ ಅನ್ನು 100 ರನ್ಗಳ ಅಂತದಿಂದ ಸೋಲಿಸಿ ಚಾಂಪಿಯನ್ ಆಯಿತು. ಮೊದಲು ಬ್ಯಾಟ್ ಬೀಸಿದ ಭಾರತ ನಿಗದಿತ 20 ಓವರ್ಗಳಲ್ಲಿ 9 ವಿಕೆಟ್ ನಷ್ಟಕ್ಕೆ 411 ರನ್ಗಳನ್ನು ಕಲೆಹಾಕಿತು. ಇದರಲ್ಲಿ ಅತೀ ಹೆಚ್ಚು ರನ್ಗಳ ಪಾಲು ವೈಭವ್ನದ್ದೇ ಇದೆ. ವೈಭವ್ ಸೂರ್ಯವಂಶಿ 80 ಎಸೆತಗಳಲ್ಲಿ 15 ಬೌಂಡರಿ, 15 ಸಿಕ್ಸ್ಗಳ ಸಹಿತ 175 ರನ್ಗಳನ್ನು ಸಿಡಿಸಿ ಮಿಂಚಿದರು.
-
IPL VIP Ticket: ಐಪಿಎಲ್ ಟಿಕೆಟ್ ನನಗಂತೂ ಬೇಡ: ಆರ್ಸಿಬಿ ಪಂದ್ಯದ ಟಿಕೆಟ್ ನಿರಾಕರಿಸಿದ ಬಿಜೆಪಿ ಶಾಸಕ ಸುರೇಶ್ ಕುಮಾರ್ -
RCB: ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾಲುದಾರ ನವಿ ಯುಪಿಐ, ಫ್ಯಾನ್ಸ್ ಗಮನಿಸಿ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು












Click it and Unblock the Notifications