Vaibhav Suryavanshi: ಅಂಡರ್ 19 ವಿಶ್ವಕಪ್ ಹೀರೋ ವೈಭವ್ ಸೂರ್ಯವಂಶಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಗೈರು
Vaibhav Suryavanshi: ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ತಂಡವು ಇಂಗ್ಲೆಂಡ್ ವಿರುದ್ಧ ಭರ್ಜರಿ ಗೆಲುವು ಸಾಧಿಸಿ 6ನೇ ಟ್ರೊಫಿಗೆ ಮುತ್ತಿಟ್ಟಿತು. ಈ ಗೆಲುವಿನ ಪ್ರಮುಖ ರುವಾರಿ 14 ವರ್ಷದ ವೈಭವ್ ಸೂರ್ಯವಂಶಿ ಅವರು ಇದೀಗ ಭಾರೀ ಸುದ್ದಿಯಲ್ಲಿದ್ದಾರೆ. ಇತ್ತೀಚೆಗಷ್ಟೇ ಅವರು ಸಿಬಿಎಸ್‌ಇ ಎಸ್‌ಎಸ್‌ಎಲ್ ಪರೀಕ್ಷೆ ಬರೆಯಲು ಪ್ರವೇಶ ಪತ್ರವನ್ನು ಪಡೆದುಕೊಂಡಿದ್ದರು. ಆದರೆ, ಇದೀಗ ಅವರು ಪರೀಕ್ಷೆಯಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ. ಹಾಗಾದ್ರೆ, ಇದಕ್ಕೆ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇತ್ತೀಚೆಗಷ್ಟೇ ನಡೆದ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ 14 ವರ್ಷದ ವೈಭವ್ ಸೂರ್ಯವಂಶಿ ಅವರು ಇಂಗ್ಲೆಂಡ್ ವಿರುದ್ಧ 14 ಬೌಂಡರಿ ಹಾಗೂ 14 ಸಿಕ್ಸ್‌ಗಳೊಂದಿಗೆ ಬರೋಬ್ಬರಿ 175 ರನ್‌ಗಳನ್ನು ಕಲೆಹಾಕಿದ್ದರು. ಇವರು ಕಲೆಹಾಕಿದ ಈ ಬೃಹತ್ ರನ್‌ಗಳೇ ಟೀಂ ಇಂಡಿಯಾ ಗೆಲುವಿಗೆ ಪ್ರಮುಖ ಕಾರಣವಾದವು. ಬಳಿಕ ಅಂಡರ್ 19 ವಿಶ್ವಕಪ್ ಹೀರೋ ವೈಭವ್ ಅಕ್ರಮಣಕಾರಿ ಬ್ಯಾಟಿಂಗ್ ಶೈಲಿಗೆ ಅಭಿನಂದನೆಗಳ ಸುರಿಮಳೆಯೇ ಹರಿದುಬಂದಿತು. ಅಭಿಮಾನಿಗಳು ಅಷ್ಟೇ ಅಲ್ಲದೆ, ಕ್ರಿಕೆಟ್ ದಿಗ್ಗಜರು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ರಾಜಕೀಯ ಗಣ್ಯರು ಪ್ರಶಂಸೆ ವ್ಯಕ್ತಪಡಿಸಿದರು.

ಪರೀಕ್ಷೆಯಿಂದ ಹಿಂದೆ ಸರಿದ ವೈಭವ್
ವೈಭವ್ ಸಿಬಿಎಸ್‌ಇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಪ್ರವೇಶ ಪತ್ರವನ್ನು ಸಹ ಪಡೆದಿದ್ದು, ಇದೀಗ ದಿಢೀರ್ ಪರೀಕ್ಷೆಯಿಂದ ಹಿಂದೆ ಸರಿದು ಅಚ್ಚರಿ ಮೂಡಿಸಿದ್ದಾರೆ. ಇದಕ್ಕೆ ಕಾರಣವೂ ಇದೆ. ಐಪಿಎಲ್ 2026 ಆರಂಭಕ್ಕೂ ಮುನ್ನ ನಾಗ್ಪುರದಲ್ಲಿ ನಡೆಯಲಿರುವ ರಾಜಸ್ಥಾನ್ ರಾಯಲ್ಸ್ ಪೂರ್ವ ಪಂದ್ಯಾವಳಿ ಶಿಬಿರಕ್ಕೆ ಸೇರಲು 10ನೇ ತರಗತಿ ಬೋರ್ಡ್ ಪರೀಕ್ಷೆಗಳಿಂದ ವೈಭವ್ ಹಿಂದೆ ಸರಿಯುವ ನಿರ್ಧಾರ ಮಾಡಿದ್ಧಾರೆ. ಈ ಮೂಲಕ ಬಿಹಾರದ ಯುವ ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯಾಂಶಿ ಅವರು ಕ್ರಿಕೆಟ್‌ಗೆ ಆದ್ಯತೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಆರ್‌ಆರ್ ತಂಡದ ಕೋಚ್ ಹೇಳಿದ್ದೇನು?
ಅಂಡರ್ 19 ವಿಶ್ವಕಪ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಫೈನಲ್‌ನಲ್ಲಿ ಆಕ್ರಮಣಕಾರಿ ಬ್ಯಾಟಿಂಗ್ ಮೂಲಕ 175 ರನ್‌ಗಳನ್ನು ಕಲೆಹಾಕಿದ ವೈಭವ್ ಸೂರ್ಯವಂಶಿ ಅವರು ಇಂದು ಅಂದರೆ ಫೆಬ್ರವರಿ 17ರಿಂದ ಮಾರ್ಚ್ 11ರ ವರೆಗೆ 10 ನೇ ತರಗತಿಯ ಬೋರ್ಡ್ ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, ಅವರ ಕೋಚ್ ಮನೀಶ್ ಓಜಾ ಅವರ ಪ್ರಕಾರ, ವೈಭವ್ ಈಗಾಗಲೇ ಐಪಿಎಲ್‌ನ ಮುಂಬರುವ ಋತುವಿಗೆ ಸಿದ್ಧತೆಗಳನ್ನ ಪ್ರಾರಂಭಿಸಿದ್ದಾರೆ. ಆದ್ದರಿಂದ ಪರೀಕ್ಷೆಗೆ ಹಾಜರಾಗಿಲ್ಲ. ಇದು ಮಾರ್ಚ್ 26 ರಿಂದ ಪ್ರಾರಂಭ ಆಗುತ್ತದೆ ಆದ್ದರಿಂದ.
ಐಪಿಎಲ್‌ಗೆ ಭರ್ಜರಿ ತಯಾರಿ
ಈಗಾಗಲೇ ಅಂಡರ್ 19 ವಿಶ್ವಕಪ್ ಟೂರ್ನಿಯಲ್ಲಿ ಮಿಂಚಿರುವ ವೈಭನ್ ಸೂರ್ಯವಂಶಿ ಐಪಿಎಲ್ 2026ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದಲ್ಲೂ ಕೂಡ ಸ್ಫೋಟಕ ಬ್ಯಾಟಿಂಗ್ ಮಾಡುವ ಭರವಸೆ ಹುಟ್ಟುಹಾಕಿದ್ದಾರೆ. ಮಾರ್ಚ್ 26ರಿಂದ ಪ್ರಾರಂಭ ಆಗಲಿರುವ ಟೂರ್ನಿಗೆ ಈಗಾಗಲೇ ತಯಾರಿ ಪ್ರಾರಂಭ ಮಾಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
"ವೈಭನ್ ಸೂರ್ಯವಂಶಿ ಅವರು 10ನೇ ತರಗತಿ ಪರೀಕ್ಷೆ ಬರೆಯುವುದಿಲ್ಲ. ಸದ್ಯ ಅವರು ನಾಗ್ಪುರದಲ್ಲಿದ್ದು, ಮುಂಬರುವ ಐಪಿಎಲ್‌ಗೆ ಅಭ್ಯಾಸ ಆರಂಭಿಸಿದ್ದಾರೆ. ಅವರು, ಈಗಾಗಲೇ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೇರಿಕೊಂಡಿದ್ದಾರೆ, ಎಂದು ತಂಡದ ಕೋಚ್ ಮನೀಶ್ ಓಜಾ ತಿಳಿಸಿದ್ದಾರೆ.
ವೈಭವ್ ಸೂರ್ಯವಂಶಿ ಪರೀಕ್ಷೆ ನಿಯಮಗಳು ಅವರ ಶಾಲಾ ಪ್ರಾಂಶುಪಾರು ಸ್ಪಷ್ಟನೆ ನೀಡಿದ್ದರು. "ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡು ದೇಶಕ್ಕೆ ಹೆಮ್ಮೆ ತಂದಿದ್ದಾರೆ. ಆದರೂ, ಶಿಕ್ಷಣ ಸಂಸ್ಥೆಯ ನಿಯಮಗಳ ವಿಷಯದಲ್ಲಿ ಅವರಿಗೆ ಯಾವುದೇ ವಿನಾಯಿತಿ ಇರುವುದಿಲ್ಲ," ಎಂದು ಹೇಳಿದ್ದರು. ಈ ವಿಷಯವನ್ನು ಬಿಹಾರದ ಸಮಸ್ತಿಪುರದಲ್ಲಿರುವ ಪೊದಾರ್ ಇಂಟರ್‌ನ್ಯಾಷನಲ್ ಸ್ಕೂಲ್ ಪ್ರಾಂಶುಪಾಲರಾದ ನೀಲ್ ಕಿಶೋರ್ ಸ್ಪಷ್ಟಪಡಿಸಿದ್ದರು.
"ಇದು ಅಕಾಡೆಮಿಕ್ ಪಿಚ್, ಕ್ರಿಕೆಟ್ ಮೈದಾನವಲ್ಲ. ಪರೀಕ್ಷಾ ಕೇಂದ್ರದಲ್ಲಿ ವೈಭವ್ ಕೂಡ ಒಬ್ಬ ಸಾಮಾನ್ಯ ವಿದ್ಯಾರ್ಥಿಯಷ್ಟೇ. ಇತರ ವಿದ್ಯಾರ್ಥಿಗಳಿಗೆ ಅನ್ವಯ ಆಗುವ ನಿಯಮಗಳೇ ವೈಭವ್‌ಗೂ ಸಹ ಅನ್ವಯವಾಗುತ್ತವೆ. ಅವರಿಗೆ ಯಾವುದೇ ವಿಶೇಷ ಪ್ರೋಟೋಕಾಲ್ ಅಥವಾ ನಿಯಮಗಳು ಇರುವುದಿಲ್ಲ," ಎಂದು ಪ್ರಾಂಶುಪಾಲರು ತಿಳಿಸಿದರು. ಆದರೆ, ಇದೀಗ ವೈಭವ್ ಸೂರ್ಯವಂಶಿ ಅವರು ಪರೀಕ್ಷೆಯಿಂದ ಹಿಂದೆ ಸರಿದು ಐಪಿಎಲ್‌ನತ್ತ ಗಮನಹರಿಸಿದ್ದಾರೆ ಎನ್ನಲಾಗುತ್ತಿದೆ.
-
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
ಕ್ರಿಕೆಟ್ ಆಟ, ಬೆಟ್ಟಿಂಗ್ ದಂಧೆ, ಜೂಜಿನ ಮಜಾ ಇದೇ ಮಾರ್ಚ್ 28ರಿಂದ ಪ್ರಾರಂಭ: ವಿವೇಕಾನಂದ ಎಚ್.ಕೆ. ಮಹತ್ವದ ಸಂದೇಶ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB Yash Dayal: ಐಪಿಎಲ್ 2026ರ ಸೀಸನ್ನಿಂದ ಸ್ಟಾರ್ ವೇಗಿ ಯಶ್ ದಯಾಳ್ ಔಟ್; ಆರ್ಸಿಬಿ ಅಧಿಕೃತ ಮಾಹಿತಿ -
ಶುಭ್ಮನ್ ಗಿಲ್ ಭೇಟಿಯಾದ ಅನನ್ಯಾ ಬಿರ್ಲಾ; ಆರ್ಸಿಬಿ ಹೊಸ ಮಾಲೀಕನ ಸಹೋದರಿಗೆ ಗುಜರಾತ್ ಜೆರ್ಸಿನಾ ಎಂದ ನೆಟ್ಟಿಗರು -
IPL 2026: ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್: ಐಪಿಎಲ್ ಟಿಕೆಟ್ ಇದ್ದರೆ 'ನಮ್ಮ ಮೆಟ್ರೋ' ಪ್ರಯಾಣ ಉಚಿತ -
IPL 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಟಿಕೆಟ್ ಮಾರಾಟ ಶುರು; ಇಲ್ಲಿವೆ ಬುಕಿಂಗ್ ಮಾಡುವ ವಿಧಾನಗಳು -
Nandini: ಆರ್ಸಿಬಿ ಜೊತೆ ರಾರಾಜಿಸಲಿದೆ ನಮ್ಮ ಹೆಮ್ಮೆಯ 'ನಂದಿನಿ': ಐಪಿಎಲ್-2026ರಲ್ಲಿ ಕನ್ನಡಿಗರಿಗೆ ಡಬಲ್ ಧಮಾಕಾ -
IPL 2026: ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಪಂದ್ಯ, ಮಾರ್ಚ್ 28ಕ್ಕೆ ಬೆಂಗಳೂರಿನ ಯಾವ ರಸ್ತೆಗಳೆಲ್ಲ ಬಂದ್ ಆಗಲಿದೆ? ಇಲ್ಲಿದೆ ಮಾಹಿತಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ











Click it and Unblock the Notifications