Vaibhav Suryavanshi: ಯುವ ಸ್ಟಾರ್ ಕ್ರಿಕೆಟಿಗ ವೈಭವ್ ಸೂರ್ಯವಂಶಿ ವಿಜಯ್ ಹಜಾರೆ ಟ್ರೋಫಿ ಟೂರ್ನಿಯಿಂದ ಔಟ್: ಇಲ್ಲಿದೆ ಕಾರಣ
Vaibhav Suryavanshi: ಭಾರತೀಯ 14 ವರ್ಷದ ಯುವ ಸ್ಟಾರ್ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅವರು ವಿಜಯ್ ಹಜಾರೆ ಟ್ರೋಫಿಯ ಮುಂದಿನ ಪಂದ್ಯಗಳಿಂದ ಹೊರಗುಳಿದಿದ್ದಾರೆ. ಇದಕ್ಕೆ ಕಾರಣವೂ ಇದೆ. ಹಾಗಾದ್ರೆ ಅದೇನು ಎನ್ನುವ ಪ್ರಶ್ನೆ ಬಹುತೇಕ ಮಂದಿಯ ತಲೆಯಲ್ಲಿ ಕಾಡುತ್ತಿರುತ್ತದೆ. ಅದೆಲ್ಲದಕ್ಕೂ ಉತ್ತರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ವೈಭವ್ ಸೂರ್ಯವಂಶಿ ಅವರು ಕ್ರಿಕೆಟ್‌ನಲ್ಲಿ ವಯಸ್ಸಿಗೂ ಮೀರಿ ದಾಖಲೆಗಳನ್ನು ಮಾಡುತ್ತಲಿದ್ದಾರೆ. ಇನ್ನೂ ವಿಜಯ್ ಹಜಾರೆ ಟ್ರೋಫಿಯ ಮೊದಲ ಪಂದ್ಯದಲ್ಲಿ ಅರುಣಾಚಲ ಪ್ರದೇಶದ ವಿರುದ್ಧ ಸ್ಫೋಟಕ ಶತಕ ಸಿಡಿಸಿದ ಸೂರ್ಯವಂಶಿ ಟೂರ್ನಿಯ ಮುಂದಿನ ಪಂದ್ಯಗಳಲ್ಲಿ ಬಿಹಾರ ತಂಡದಿಂದ ಹೊರಗುಳಿದಿದ್ದಾರೆ. ಅದರಂತೆಯೇ ಲೀಗ್ ಪಂದ್ಯದಲ್ಲಿ ಮಣಿಪುರದ ವಿರುದ್ಧ ಬಿಹಾರದ ಪ್ಲೇಯಿಂಗ್ 11ನಲ್ಲಿ ಕಾಣಿಸಿಕೊಂಡಿರಲಿಲ್ಲ. ಇದಕ್ಕೆ ಕಾರಣ ಇಲ್ಲಿದೆ ನೋಡಿ.

ವೈಭವ್ ಸೂರ್ಯವಂಶಿಗೆ ಪ್ರಶಸ್ತಿ: ವಯಸ್ಸಿಗೂ ದಾಖಲೆ ಮಾಡುವುದಕ್ಕೆ ಯಾವುದೇ ಸಂಬಂಧ ಇಲ್ಲ ಎಂಬುದನ್ನು ವೈಭವ್ ಸೂರ್ಯವಂಶಿ ಅವರು ಸಾಬೀತು ಮಾಡಿದ್ದಾರೆ. ಬಿಹಾರದ ಈ ಯುವ ಸ್ಟಾರ್ ಕ್ರಿಕೆಟ್‌ರ್ ಸ್ಫೋಟಕ ಬ್ಯಾಟಿಂಗ್‌ನಿಂದ ದೊಡ್ಡ ಸ್ಟಾರ್ ಆಟಗಾರರು ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇದೀಗ ಅವರು ಭಾರತದ ಯುವಕರಿಗೆ ನೀಡುವ ಅತ್ಯುನ್ನತ ನಾಗರಿಕ ಗೌರವಕ್ಕೆ ಪಾತ್ರರಾಗಿದ್ದಾರೆ. ನವದೆಹಲಿಯಲ್ಲಿ ವೈಭವ್ ಸೂರ್ಯವಂಶಿ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ ಮಾಡಲಾಯಯಿತು. ಈ ಮೂಲಕ ವೈಭವ್ ಅವರು ಇಡೀ ರಾಷ್ಟ್ರದ ಗಮನ ಸೆಳೆದರು.
ಇದು ವೈಭವ್ ಸೂರ್ಯವಂಶಿ ಅವರ ವೃತ್ತಿಜೀವನದ ಒಂದು ಐತಿಹಾಸಿಕ ಸಾಧನೆಯಾಗಿದೆ. ಯುವ ಕ್ರಿಕೆಟಿಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದರು. ಬಿಹಾರದ ಈ ಯುವ ಸ್ಟಾರ್ ಕ್ರಿಕೆಟ್‌ರ್ ಸ್ಫೋಟಕ ಬ್ಯಾಟಿಂಗ್‌ನಿಂದ ದೊಡ್ಡ ಸ್ಟಾರ್ ಆಟಗಾರರು ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಇದೀಗ ಅವರು ಭಾರತದ ಯುವಕರಿಗೆ ನೀಡುವ ಅತ್ಯುನ್ನತ ನಾಗರಿಕ ಗೌರವಕ್ಕೆ ಪಾತ್ರರಾಗಿದ್ದಾರೆ. ನವದೆಹಲಿಯಲ್ಲಿ ವೈಭವ್ ಸೂರ್ಯವಂಶಿ ಅವರು ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರದಾನ ಮಾಡಲಾಯಯಿತು. ಈ ಮೂಲಕ ವೈಭವ್ ಅವರು ಇಡೀ ರಾಷ್ಟ್ರದ ಗಮನ ಸೆಳೆದರು.
ಇದು ವೈಭವ್ ಸೂರ್ಯವಂಶಿ ಅವರ ವೃತ್ತಿಜೀವನದ ಒಂದು ಐತಿಹಾಸಿಕ ಸಾಧನೆಯಾಗಿದೆ. ಯುವ ಕ್ರಿಕೆಟಿಗ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಈ ಪ್ರಶಸ್ತಿಯನ್ನು ಸ್ವೀಕರಿಸಿದರು. 14 ವರ್ಷದ ಯುವ ಸ್ಟಾರ್ ಕ್ರಿಕೆಟಿಗ ವೈಭವ್ ಸೂರ್ಯವಂಶಿ, 7 ವರ್ಷದ ಚೆಸ್‌ಪಟು ವಾಕಾ ಲಕ್ಷ್ಮಿ ಪ್ರಗ್ನಿಕಾ ಸೇರಿದಂತೆ 20 ಮಕ್ಕಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರತಿಷ್ಠಿತ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರವನ್ನು ಪ್ರದಾನ ಮಾಡಿದರು.
VAIBHAV SURYAVANSHI - He is achieving Greatness at the age of 14 😍
— Johns. (@CricCrazyJohns) December 26, 2025
- He has awarded Pradhan Mantri Rashtriya Bal Puruskar. 🏅 pic.twitter.com/1X2JZVDHs8
ವೈಭವ್ ಸೂರ್ಯವಂಶಿ ಸಾಧನೆ: ಬುಧವಾರ ರಾಂಚಿಯಲ್ಲಿ ನಡೆದ ವಿಜಯ್ ಹಜಾರೆ ಟ್ರೋಫಿಯ ಪಂದ್ಯದಲ್ಲಿ ಬಿಹಾರ ತಂಡದ ಸೂರ್ಯವಂಶಿ 84 ಎಸೆತಗಳಲ್ಲಿ 16 ಬೌಂಡರಿ ಮತ್ತು 15 ಸಿಕ್ಸರ್‌ಗಳ ಸಹಿತ 190 ರನ್ ಕಲೆಹಾಕಿದರು. ಈ ಮೂಲಕ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಅತ್ಯಂತ ಕಿರಿಯ ವಯಸ್ಸಿನ ಆಟಗಾರ ಎನಿಸಿಕೊಂಡರು.
ವೈಭವ್ ಸೂರ್ಯವಂಶಿ ಅವರು ಅತೀ ವೇಗವಾಗು ಕೇವಲ 36 ಎಸೆತಗಳಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ವಯಸ್ಸಿನ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ. ಈ ಪಂದ್ಯದಲ್ಲಿ ಬಿಹಾರ ತಂಡವು 6 ವಿಕೆಟ್‌ಗೆ 574 ರನ್ ಗಳಿಸಿತು. ಇದು ಲಿಸ್ಟ್ ಎ ಕ್ರಿಕೆಟ್‌ನಲ್ಲಿ ದಾಖಲಾದ ಅತ್ಯಧಿಕ ಮೊತ್ತ ಆಗಿದೆ.
ಐಪಿಎಲ್ 2025 ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡಿದ್ದ ವೈಭವ್ ಸೂರ್ಯವಂಶಿ ಅವರು, ಗುಜರಾತ್ ಟೈಟನ್ಸ್ ವಿರುದ್ಧ 38 ಎಸೆತಗಳಲ್ಲಿ 101 ರನ್ ಬಾರಿಸಿದ್ದರು. ಈ ಮೂಲಕ ಟಿ-20 ಕ್ರಿಕೆಟ್‌ನಲ್ಲಿ ಶತಕ ಸಿಡಿಸಿದ ಅತ್ಯಂತ ಕಿರಿಯ ವಯಸ್ಸಿನ ಬ್ಯಾಟರ್ ಎಂಬ ದಾಖಲೆ ಸೃಷ್ಟಿಸಿದರು. 35 ಎಸೆತಗಳಲ್ಲಿ ಮೂರಂಕಿ ದಾಟಿದ ಅವರು, ಐಪಿಎಲ್ ಇತಿಹಾಸದಲ್ಲಿ ಎರಡನೇ ಅತ್ಯಂತ ವೇಗದ ಶತಕ ದಾಖಲಿಸಿದ ಹೆಗ್ಗಳಿಕೆ ಅವರದ್ದಾಗಿದೆ.
ಕರ್ನಾಟಕದ ಈಜು ಪ್ರತಿಭೆಗೆ ಪ್ರಶಸ್ತಿ: ಈ ಪ್ರಶಸ್ತಿಗೆ ಕರ್ನಾಟಕದ ಈಜು ಪ್ರತಿಭೆ ಧಿನಿಧಿ ದೇಸಿಂಗು ಕೂಡ ಪಾತ್ರರಾಗಿದ್ದಾರೆ. ಸೂರತ್‌ನ ಪ್ರಗ್ನಿಕಾ, ಸರ್ಬಿಯಾದಲ್ಲಿ ನಡೆದ 2025ರ ಫಿಡೆ ವಿಶ್ವ ಶಾಲಾ ಚೆಸ್ ಚಾಂಪಿಯನ್‌ಷಿಪ್‌ನಲ್ಲಿ 7 ವರ್ಷದೊಳಗಿನ ಬಾಲಕಿಯರ ಪ್ರಶಸ್ತಿ ಗೆದ್ದರು. ಅಲ್ಲಿ 9ರಲ್ಲಿ 9 ಅಂಕಗಳನ್ನು ಗಳಿಸಿ ದಾಖಲೆ ಮಾಡಿದರು.
ಬೆಂಗಳೂರಿನ 15 ವರ್ಷದ ಧಿನಿಧಿ ಮಹಿಳೆಯರ 200 ಮೀಟರ್ ಫ್ರೀಸ್ಟೈಲ್‌ನಲ್ಲಿ 2024ರ ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದಿದ್ದರು. ಒಲಿಂಪಿಕ್ಸ್‌ನ ಭಾರತದ ತುಕಡಿಯಲ್ಲಿ ಅತ್ಯಂತ ಕಿರಿಯ ವಯಸ್ಸಿನ ಕ್ರೀಡಾಪಟು ಅವರಾಗಿದ್ದರು. 200 ಮೀಟರ್ ಫ್ರೀಸ್ಟೈಲ್‌ನಲ್ಲಿ ಪರಿಣತಿ ಹೊಂದಿರುವ ಅವರು 100 ಮೀಟರ್ ಫ್ರೀಸ್ಟೈಲ್ ಮತ್ತು 200 ಮೀಟರ್ ವೈಯಕ್ತಿಕ ಮೆಡ್ಲೆಯಲ್ಲೂ ಸ್ಪರ್ಧಿಸುತ್ತಾರೆ. 2022ರ ಏಷ್ಯನ್ ಕ್ರೀಡಾಕೂಟದಲ್ಲಿ ಸ್ಪರ್ಧಿಸಿದ ಭಾರತದ ಅತ್ಯಂತ ಕಿರಿಯ ವಯಸ್ಸಿನ ಕ್ರೀಡಾಪಟು ಎಂಬ ಹೆಗ್ಗಳಿಕೆ ಅವರದ್ದಾಗಿದೆ.
ಸಿ.ವಿ.ರಾಮನ್ ನಗರದ ಡಿಆರ್‌ಡಿಒ ಕೇಂದ್ರೀಯ ವಿದ್ಯಾಲಯದಲ್ಲಿ 10ನೇ ತರಗತಿ ಓದುತ್ತಿರುವ ಧಿನಿಧಿ 2018ರಲ್ಲಿ ಹವ್ಯಾಸಕ್ಕಾಗಿ ಈಜು ಕಲಿಯಲು ಆರಂಭಿಸಿದ್ದರು. ನಂತರ ಅವರು ಸ್ಪರ್ಧಾತ್ಮಕ ಈಜಿನಲ್ಲಿ ತೊಡಗಿಸಿಕೊಂಡರು. ಡಾಲ್ಫಿನ್ ಅಕ್ವಾಟಿಕ್ಸ್‌ನ ಬಿ.ಎಂ. ಮಧು ಕುಮಾರ್ ಅವರಿಂದ ತರಬೇತಿ ಪಡೆಯುತ್ತಿದ್ದಾರೆ.
2023ರಲ್ಲಿ 100 ಮೀ ಫ್ರೀಸ್ಟೈಲ್‌ನಲ್ಲಿ ಜೂನಿಯರ್ ಮತ್ತು ಸಬ್ ಜೂನಿಯರ್ ರಾಷ್ಟ್ರೀಯ ಈಜು ಚಾಂಪಿಯನ್‌ಷಿಪ್‌ನಲ್ಲಿ ರಾಷ್ಟ್ರೀಯ ದಾಖಲೆ ಬರೆದಿದ್ದರು. 200 ಮೀಟರ್ ಫ್ರೀಸ್ಟೈಲ್ ಮತ್ತು 200 ಮೀಟರ್ ವೈಯಕ್ತಿಕ ಮೆಡ್ಲೆಯಲ್ಲೂ ದಾಖಲೆ ಬರೆದಿದ್ದರು. ಅದೇ ವರ್ಷ ಗೋವಾದಲ್ಲಿ ನಡೆದ ರಾಷ್ಟ್ರೀಯ ಕ್ರೀಡಾಕೂಟದಲ್ಲಿ 7 ಚಿನ್ನದ ಪದಕಗಳಿಗೆ ಕೊರಳೊಡ್ಡಿದ್ದರು.
ದೋಹಾದಲ್ಲಿ ನಡೆದ ವಿಶ್ವ ಚಾಂಪಿಯನ್‌ಷಿಪ್‌ನಲ್ಲಿಯೂ ಭಾಗವಹಿಸಿದ್ದರು. ಒಡಿಶಾದಲ್ಲಿ ನಡೆದ 78ನೇ ರಾಷ್ಟ್ರೀಯ ಸೀನಿಯರ್ ಈಜು ಚಾಂಪಿಯನ್‌ಷಿಪ್‌ನಲ್ಲಿ 100 ಮೀಟರ್ ಹಾಗೂ 200 ಮೀಟರ್ ಫ್ರೀಸ್ಟೈಲ್‌ನಲ್ಲಿ ರಾಷ್ಟ್ರೀಯ ದಾಖಲೆಗಳೊಂದಿಗೆ ಚಿನ್ನದ ಪದಕಗಳನ್ನು ಗೆದ್ದುಕೊಂಡಿದ್ದಾರೆ. ಇನ್ನೂ ಪ್ರತಿಷ್ಠಿತ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಯನ್ನು ಕ್ರೀಡೆ, ಶೌರ್ಯ, ಸಾಮಾಜಿಕ ಸೇವೆ ಮತ್ತು ಪರಿಸರ ಕ್ಷೇತ್ರದಲ್ಲಿ ಅದ್ಭುತ ಸಾಧನೆ ಮಾಡಿದವರಿಗೆ ನೀಡಲಾಗುತ್ತದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ -
ಎಲೆಕ್ಷನ್ ಇವತ್ತೇ ನಡೆದರೆ ತಮಿಳುನಾಡು, ಕೇರಳಂ, ಪಶ್ಚಿಮ ಬಂಗಾಳದಲ್ಲಿ ಯಾರಿಗೆ ಗೆಲುವು? ಸಮೀಕ್ಷೆ ನೀಡಿದ ಮಾಹಿತಿ ಇಲ್ಲಿದೆ -
ಟೀಂ ಇಂಡಿಯಾ ಕ್ರಿಕೆಟರ್ ಕುಲದೀಪ್ ಯಾದವ್ ಕೈಹಿಡಿದ ವಂಶಿಕಾ ಚಡ್ಡಾ ಯಾರು? -
Bengaluru: 1 ತಿಂಗಳು ಬದುಕೋಕೆ ಇಷ್ಟೊಂದು ಖರ್ಚಾಗುತ್ತಾ? ಯುವತಿಯ ಪೋಸ್ಟ್ ಕಂಡು ಬೆಚ್ಚಿಬಿದ್ದ ನೆಟ್ಟಿಗರು












Click it and Unblock the Notifications