Vaibhav Suryavanshi: ಅಂಡರ್-19 ವಿಶ್ವಕಪ್ ಹೀರೋ ವೈಭವ್ ಸೂರ್ಯವಂಶಿಗೆ ಮುಂದಿನ ಆವೃತ್ತಿಯಲ್ಲಿ ನೋ ಎಂಟ್ರಿ
Vaibhav Suryavanshi: ಭಾರತೀಯ ಕ್ರಿಕೆಟ್ನಲ್ಲಿ ಅಪರೂಪದ ಪ್ರತಿಭೆಯಾಗಿ ಹೊರಹೊಮ್ಮಿರುವ ವೈಭವ್ ಸೂರ್ಯವಂಶಿ ಇದೀಗ ಕೇವಲ 16 ವರ್ಷದ ವಯಸ್ಸಿನಲ್ಲೇ ದೊಡ್ಡ ಸಾಧನೆ ಮಾಡಿದ್ದಾರೆ. 2026ರ ಅಂಡರ್-19 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಚಾಂಪಿಯನ್ ಆಗಲು ಮಹತ್ವದ ಕೊಡುಗೆ ನೀಡಿದ ಈ ಯುವ ಎಡಗೈ ಬ್ಯಾಟ್ಸ್ಮನ್, ತಮ್ಮ ಆಕ್ರಮಣಕಾರಿ ಆಟದಿಂದ ದೇಶದಾದ್ಯಂತ ಗಮನ ಸೆಳೆದಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ಸಾಧನೆ ಮಾಡಿರುವ ಅವರಿಗೆ ಮುಂದಿನ ಬಾರಿಯ ಅಂಡರ್ 19 ವಿಶ್ವಕಪ್ನಲ್ಲಿ ಅವಕಾಶ ಸಿಗುವುದಿಲ್ಲ. ಇದಕ್ಕೆ ಕಾರಣವೂ ಕೂಡ ಇದೆ. ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇಂಗ್ಲೆಂಡ್ ವಿರುದ್ಧ ನಡೆದ ಅಂಡರ್ 19 ವಿಶ್ವಕಪ್ 2026 ಫೈನಲ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ವೈಭವ್, ಕೇವಲ 80 ಎಸೆತಗಳಲ್ಲಿ 15 ಸಿಕ್ಸ್, 15 ಬೌಂಡರಿಗಳ ಸಹಿತ 175 ರನ್ಗಳನ್ನು ಕಲೆಹಾಕಿ ಇಡೀ ದೇಶದ ಗಮನ ಸೆಳೆದರು. ಅವರ ಈ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಭಾರತ ತಂಡ 50 ಓವರ್ಗಳಲ್ಲಿ 411 ರನ್ಗಳ ಬೃಹತ್ ಮೊತ್ತ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಇಂಗ್ಲೆಂಡ್ 311 ರನ್ಗಳಿಗೆ ಎಲ್ಲಾ ವಿಕೆಟ್ ಕಳೆದುಕೊಂಡು 100 ರನ್ಗಳ ಅಂತರದಿಂದ ಸೋಲುವ ಮೂಲಕ ಭಾರತಕ್ಕೆ ಶರಣಾಯಿತು.

ಮುಂದಿನ ಬಾರಿಯಿಂದ ಅವಕಾಶ ಮಿಸ್: ಈ ಅದ್ಭೂತ ಸಾಧನೆಯೊಂದಿಗೆ ವೈಭವ್ ಸೂರ್ಯವಂಶಿ ಪಂದ್ಯ ಶ್ರೇಷ್ಠ ಹಾಗೂ ಸರಣಿ ಶ್ರೇಷ್ಠ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡರು. ಆದರೆ, ಇಷ್ಟೆಲ್ಲಾ ಸಾಧನೆಗಳನ್ನು ಮಾಡಿರುವ ವೈಭವ್ ಅವರು ಮುಂದಿನ ಅಂಡರ್-19 ವಿಶ್ವಕಪ್ಗಳಲ್ಲಿ ಕಣಕ್ಕಿಳಿಯಲು ಸಾಧ್ಯವಾಗುವುದಿಲ್ಲ ಎನ್ನುವ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಇದಕ್ಕೆ ಕಾರಣ ಏನು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
ಇದಕ್ಕೆ ಕಾರಣ ಬಿಸಿಸಿಐ ರೂಪಿಸಿರುವ ವಿಶೇಷ ನಿಯಮ. ಆ ನಿಯಮದ ಪ್ರಕಾರ, ಒಬ್ಬ ಆಟಗಾರ ತನ್ನ ವೃತ್ತಿಜೀವನದಲ್ಲಿ ಕೇವಲ ಒಮ್ಮೆ ಮಾತ್ರ ಅಂಡರ್-19 ವಿಶ್ವಕಪ್ನಲ್ಲಿ ಭಾಗವಹಿಸಲು ಅವಕಾಶ ಇದೆ. ವೈಭವ್ ಸೂರ್ಯವಂಶಿ ಈಗಾಗಲೇ ಈ ಮಟ್ಟದ ವಿಶ್ವಕಪ್ನಲ್ಲಿ ಆಡಿರುವುದರಿಂದ, 2028 ಹಾಗೂ 2030ರಲ್ಲಿ ನಡೆಯುವ ಅಂಡರ್-19 ವಿಶ್ವಕಪ್ಗಳಿಗೆ ಅವರು ಅರ್ಹರಾಗುವುದಿಲ್ಲ.
ಬಿಸಿಸಿಐ ನಿಯಮ ಹೇಳುವುದೇನು?: ಕಿರಿಯ ಮಟ್ಟದ ಕ್ರಿಕೆಟ್ನಲ್ಲಿ ವಯಸ್ಸಿನ ವಂಚನೆ ತಪ್ಪಿಸುವುದು ಹಾಗೂ ಹೆಚ್ಚಿನ ಹೊಸ ಪ್ರತಿಭೆಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಬಿಸಿಸಿಐ ಈ ನಿಯಮವನ್ನು ಜಾರಿಗೆ ತಂದಿದೆ. ಆದ್ದರಿಂದ 2028ರಲ್ಲಿ ವೈಭವ್ 16 ವರ್ಷದವನಾಗಿದ್ದರೂ ಸಹ, ಅವರಿಗೆ ಅಂಡರ್-19 ವಿಶ್ವಕಪ್ನಲ್ಲಿ ಆಡಲು ಅವಕಾಶ ಸಿಗುವುದಿಲ್ಲ. ಆದರೂ, ವೈಭವ್ ಸೂರ್ಯವಂಶಿ ಅವರ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ನೋಡಿದರೆ, ಮುಂದಿನ ವರ್ಷಗಳಲ್ಲಿ ಅವರು ಹಿರಿಯ ಮಟ್ಟದ ಕ್ರಿಕೆಟ್ನಲ್ಲಿ ಭಾರತ ತಂಡಕ್ಕೆ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತದೆ.
ಪ್ರಶಂಸೆಗಳ ಸುರಿಮಳೆ: ವೈಭವ್ ಸೂರ್ಯವಂಶಿ ಅವರು ಬ್ಯಾಟಿಂಗ್ ಶೈಲಿಗೆ ಈಗಾಗಲೇ ಹಲವು ಕ್ರಿಕೆಟ್ ದಿಗ್ಗಜರು ಸೇರಿದಂತೆ ಸೇರಿದಂತೆ ರಾಜಕೀಯ ವಲಯದಲ್ಲಿ ಪ್ರಧಾನ ಮಂತ್ರಿ ಅವರೂ ಕೂಡ ಸೈ ಎಂದು ಹೇಳಿರುವುದಲ್ಲದೆ, ಪ್ರಶಂಸೆಗಳ ಸುರಿಮಳೆಯನ್ನೇ ಸುರಿಸಿದ್ದಾರೆ. ವೈಭವ್ ಅವರ ಒಳಗಿನ ಅದ್ಭುತ ಬ್ಯಾಟಿಂಗ್ ಪ್ರತಿಭೆ ಹೊರಬಂದಿದ್ದೇ ಐಪಿಎಲ್ನಲ್ಲಿ ಅಂದರೆ ತಪ್ಪಾಗಲಾರದು.
ಕಳೆದ ಐಪಿಎಲ್ ಸೀಸನ್ನಲ್ಲಿ ರಾಜಸ್ಥಾನ್ ರಾಯಲ್ಸ್ ಅವರನ್ನು ಖರೀದಿ ಮಾಡಿತ್ತು. ಈ ವೇಳೆ ಆರಂಭದಲ್ಲಿ ಬೆಂಚ್ ಕಾಯಿಸಲಾಗಿದ್ದು, ಸಂಜು ಸ್ಯಾಮ್ಸನ್ ಗಾಯದಿಂದ ಬಳಲುತ್ತಿದ್ದ ಕಾರಣ ಅವರ ಸ್ಥಾನದಲ್ಲಿ ವೈಭನ್ನನ್ನು ಆಡಿಸಲಾಯಿತು. ಆರಂಭಿಕರಾಗಿ ಕಣಕ್ಕಿಳಿಯುತ್ತಿದ್ದ ವೈಭವ್ ಸಿಕ್ಸರ್ಗಳ ಸುರಿಮಳೆ ಸುರಿಸಿ ಎಲ್ಲಾ ಪ್ರಾಂಚೈಸಿಗಳ ದಂಗಾಗುವಂತೆ ಮಾಡಿದರು. ಇದೀಗ ಅವರು ಭಾರತೀಯ ಕ್ರಿಕೆಟ್ನ ಉದಯೋನ್ಮುಖ ಯುವ ಪ್ರತಿಭೆಯಾಗಿ ಗುರುತಿಸಿಕೊಂಡಿದ್ದಾರೆ.
ಕಿರಿಯ ವಯಸ್ಸಿನಲ್ಲೇ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್ ಶೈಲಿಯಿಂದ ಗಮನ ಸೆಳೆದಿರುವ ವೈಭವ್, ದೇಶೀಯ ಕಿರಿಯರ ಟೂರ್ನಿಗಳಲ್ಲಿ ನಿರಂತರವಾಗಿ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಎಡಗೈ ಬ್ಯಾಟ್ಸ್ಮನ್ ಆಗಿರುವ ಅವರು ವೇಗದ ರನ್ ಗಳಿಸುವ ಸಾಮರ್ಥ್ಯ ಹಾಗೂ ಬಿಗ್ ಶಾಟ್ಗಳನ್ನು ಹೊಡೆಯಲು ಹೆಸರುವಾಸಿಯಾಗಿದ್ದಾರೆ. ಇನ್ನೂ 2026ರ ಅಂಡರ್-19 ವಿಶ್ವಕಪ್ನಲ್ಲಿ ಫೈನಲ್ ಪಂದ್ಯದಲ್ಲಿ ಭಾರತದ ಪರ ಸ್ಫೋಟಕ ಶತಕ ಸಿಡಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳನ್ನು ಬೆರಗುಗೊಳಿಸಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications