Vaibhav Suryavanshi: ಸಾಗರದಾಚೆ ಯುವ ಆಟಗಾರನ ಬ್ಯಾಟಿಂಗ್ "ವೈಭವ": ಇಲ್ಲಿದೆ ದಾಖಲೆಗಳ ಪಟ್ಟಿ
ಟೀಮ್ ಇಂಡಿಯಾದ ಯುವ ಆಟಗಾರ ವೈಭವ್ ಸೂರ್ಯವಂಶಿ ಸಾಗರದಾಚೆ ತಮ್ಮ ಧಮಾಕೆದಾರ್ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ನಾರ್ಥಾಂಪ್ಟನ್ ಮೂರನೇ ಯುಥ್ ಏಕದಿನ ಪಂದ್ಯಕ್ಕೆ ಸಾಕ್ಷಯಾಯಿತು. ಈ ಪಂದ್ಯದಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿದ ವೈಭವ್ ಸೂರ್ಯವಂಶಿ, ತಮ್ಮ ಕ್ಲಾಸಿಕ್ ಬ್ಯಾಟಿಂಗ್ ಮುಂದುವರೆಸಿದರು. ಈ ಮೂಲಕ ಭಾರತದ ಭವಿಷ್ಯ ಉಜ್ವಲವಾಗಿದೆ ಎಂಬುದನ್ನು ಸಾರಿ ಹೇಳಿದರು.
ಮೊದಲು ಬ್ಯಾಟ್ ಮಾಡಿದ ಆತಿಥೇಯ ಇಂಗ್ಲೆಂಡ್ ತಂಡ 40 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 268 ರನ್ ಸೇರಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಯಂಗ್ ಟೀಮ್ ಇಂಡಿಯಾದ ಆರಂಭಿಕ ಆಟಗಾರ ಹಾಗೂ ನಾಯಕ ಅಭಿಗ್ಯಾನ್ ಕುಂಡು (12) ದೊಡ್ಡ ಇನಿಂಗ್ಸ್ ಕಟ್ಟಲಿಲ್ಲ. ಆದರೆ ಎರಡನೇ ವಿಕೆಟ್‌ಗೆ ವೈಭವ್ ಸೂರ್ಯವಂಶಿ ಹಾಗೂ ವಿಹಾನ್ ಮಲೋತ್ರಾ ಜೋಡಿ ಎರಡನೇ ವಿಕೆಟ್‌ಗೆ 78 ರನ್‌ಗಳ ಜೊತೆಯಾಟವನ್ನು ನೀಡಿ ತಂಡಕ್ಕೆ ಆಧಾರವಾಯಿತು.

ಈಗಾಗಲೇ ಐಪಿಎಲ್‌ನಲ್ಲಿ ಅಬ್ಬರಿದ್ದ ವೈಭವ್ ಸೂರ್ಯವಂಶಿ ಇಂಗ್ಲೆಂಡ್‌ನಲ್ಲೂ ತಮ್ಮ ಅಮೋಘ ಬ್ಯಾಟಿಂಗ್ ಮುಂದುವರೆಸಿದರು. ಇವರು 277.41ರ ಸ್ಟ್ರೈಕ್ ರೇಟ್‌ನಲ್ಲಿ ರನ್ ಕಲೆ ಹಾಕಿದರು. ಇವರು 31 ಎಸೆತಗಳಲ್ಲಿ 6 ಬೌಂಡರಿ, 9 ಸಿಕ್ಸರ್ ಸಹಾಯದಿಂದ 86 ರನ್ ಸಿಡಿಸಿ ಅಬ್ಬರಿಸಿದರು. ಈ ಇನಿಂಗ್ಸ್ ಮೂಲಕ ವೈಭವ್ ಸೂರ್ಯವಂಶಿ ಹಲವು ದಾಖಲೆಗಳನ್ನು ಬರೆದರು.
9 ಸಿಕ್ಸರ್
ಟೀಮ್ ಇಂಡಿಯಾದ 14 ವರ್ಷದ ಆಟಗಾರ ವೈಭವ್ ಸೂರ್ಯವಂಶಿ ಹಲವು ದಾಖಲೆಗಳನ್ನು ಬರೆದರು. ವೈಭವ್ ಸೂರ್ಯವಂಶಿ ಯೂತ್ ಏಕದಿನ ಪಂದ್ಯದ ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಬಾರಿಸಿದ ಭಾರತದ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇದಕ್ಕೂ ಮೊದಲು ಮಂದೀಪ್ ಸಿಂಗ್ ಹಾಗೂ ರಾಜ್ ಬಾವಾ ತಲಾ 8 ಶತಕ ಬಾರಿಸಿದ್ದರು. ರಾಜ್ ಬಾವಾ 2022ರಲ್ಲಿ ಉಗಾಂಡ ವಿರುದ್ಧ ಈ ಸಾಧನೆ ಮಾಡಿದ್ದರೆ, 2009ರಲ್ಲಿ ಮಂದೀಪ್ ಸಿಂಗ್ 8 ಶತಕ ಬಾರಿಸಿದ್ದರು.
2ನೇ ವೇಗದ ಅರ್ಧಶತಕ
ಟೀಮ್ ಇಂಡಿಯಾದ ಪರ ವೇಗವಾಗಿ ಅರ್ಧಶತಕ ಬಾರಿಸಿದ ಎರಡನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ವೈಭವ್ ಸೂರ್ಯವಂಶಿ ಪಾತ್ರರಾದರು. ರಿಷಭ್ ಪಂತ್ 2016ರಲ್ಲಿ 18 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಅಬ್ಬರಿಸಿದ್ದರು.
ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 34.3 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 274 ರನ್ ಬಾರಿಸಿ ಜಯ ಸಾಧಿಸಿತು. ಈ ಮೂಲಕ ಭಾರತ 5 ಪಂದ್ಯಗಳ ಯುತ್ ಏಕದಿನ ಸರಣಿಯಲ್ಲಿ 2-1ರಿಂದ ಮುನ್ನಡೆ ಸಾಧಿಸಿದೆ.












Click it and Unblock the Notifications