Vijay Hazare Trophy 2023: ದೆಹಲಿ ವಿರುದ್ಧ 6 ವಿಕೆಟ್‌ಗಳ ಗೆಲುವು ಸಾಧಿಸಿದ ಕರ್ನಾಟಕ

ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಕರ್ನಾಟಕ ತಂಡ ಭರ್ಜರಿ ಪ್ರದರ್ಶನ ನೀಡುತ್ತಿದೆ. ಇದುವರೆಗೂ ಆಡಿರುವ ಮೂರು ಪಂದ್ಯಗಳಲ್ಲಿ ಗೆಲುವು ಕಂಡಿದ್ದು, ಸಿ ಗುಂಪಿನ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ.

ಸೋಮವಾರ ಅಹಮದಾಬಾದ್‌ನ ಸರ್ದಾರ್ ಪಟೇಲ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕ ದೆಹಲಿ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ. ಕರ್ನಾಟಕ ಬೌಲಿಂಗ್ ದಾಳಿಗೆ ದೆಹಲಿ ತತ್ತರಿಸಿದೆ.

Vijay Hazare Trophy 2023 : Karnataka Won By 6 Wickets Against Delhi

ಟಾಸ್ ಗೆದ್ದ ಕರ್ನಾಟಕ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಕರ್ನಾಟಕ ವೇಗದ ಬೌಲಿಂಗ್ ದಾಳಿಯನ್ನು ಎದುರಿಸಲು ದೆಹಲಿ ಬ್ಯಾಟರ್ ಗಳು ಪರದಾಡಿದರು. ಆರಂಭದಲ್ಲೇ ವಿಕೆಟ್ ಕಳೆದುಕೊಂಡ ದೆಹಲಿ ಒತ್ತಡಕ್ಕೆ ಸಿಲುಕಿತು. ದೆಹಲಿ 36.3 ಓವರ್ ಗಳಲ್ಲಿ 143 ರನ್‌ಗಳಿಗೆ ಆಲೌಟ್ ಆಯಿತು. ಇದರಲ್ಲಿ ಆಯುಶ್ ಬದೋನಿ ಒಬ್ಬರೇ 100 ರನ್ ಗಳಿಸಿದರೆ ಉಳಿದ ಬ್ಯಾಟರ್ ಗಳು ಒಟ್ಟಾಗಿ ಗಳಿಸಿದ್ದ 37 ರನ್ ಉಳಿದ 6 ರನ್ ವೈಡ್ ಮತ್ತು ಲೆಗ್‌ಬೈ ಮೂಲಕ ಬಂದವು.

ಆಯುಶ್ ಬದೋನಿ 106 ಎಸೆತಗಳಲ್ಲಿ 12 ಬೌಂಡರಿ 4 ಸಿಕ್ಸರ್ ಸಹಿತ 100 ರನ್ ಗಳಿಸಿದರು. ಪ್ರಿಯಾಂಶ್ ಆರ್ಯ (15) ಮತ್ತು ಯಶ್ ದುಲ್ (11) ಎರಡಂಕಿ ರನ್ ಗಳಿಸಿದ್ದು ಬಿಟ್ಟರೆ ಉಳಿದ ಎಲ್ಲರೂ ಒಂದಂಕಿ ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ಕರ್ನಾಟಕದ ಪರ ವಿಧ್ವತ್ ಕಾವೇರಪ್ಪ ಮತ್ತು ವಾಸುಕಿ ಕೌಶಿಕ್ ಅತ್ಯುತ್ತಮ ಬೌಲಿಂಗ್ ಮಾಡಿದರು, ಇಬ್ಬರೂ ಕೂಡ ತಲಾ ಮೂರು ವಿಕೆಟ್ ಪಡೆದರು. ವಿಜಯ್‌ಕುಮಾರ್ ವೈಶಾಕ್ ಮತ್ತು ಕೃಷ್ಣಪ್ಪ ಗೌತಮ್ ತಲಾ ಎರಡು ವಿಕೆಟ್ ಪಡೆದರು.

ಪಡಿಕ್ಕಲ್ ಅರ್ಧಶತಕ

ಈ ಸಾಧಾರಣ ಮೊತ್ತವನ್ನು ಬೆನ್ನತ್ತಿದ ಕರ್ನಾಟಕ ತಂಡಕ್ಕೆ ಆರಂಭದಲ್ಲೇ ಆಘಾತ ಎದುರಾಯಿತು. ರವಿಕುಮಾರ್ ಸಮರ್ಥ್ 2 ರನ್ ಗಳಿಸಿ ಔಟಾದರೆ, ನಾಯಕ ಮಯಾಂಕ್ ಅಗರ್ವಾಲ್ 12 ರನ್ ಗಳಿಸಿ ಔಟಾದರು. ಆದರೆ ದೇವದತ್ ಪಡಿಕ್ಕಲ್ 69 ಎಸೆತಗಳಲ್ಲಿ 3 ಬೌಂಡರಿ 6 ಸಿಕ್ಸರ್ ಸಹಿತ 70 ರನ್ ಗಳಿಸಿ ತಂಡದ ಗೆಲುವು ಸುಲಭವಾಗಿಸಿದರು. ನಿಕಿನ್ ಜೋಸ್ 13 ರನ್ ಗಳಿಸಿದರೆ, ಮನೀಶ್ ಪಾಂಡೆ ಅಜೇಯ 28 ಮತ್ತು ಶರತ್ ಬಿಆರ್ 7 ರನ್ ಗಳಿಸಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಕರ್ನಾಟಕ ಮುಂದಿನ ಪಂದ್ಯದಲ್ಲಿ ಬಿಹಾರ ತಂಡವನ್ನು ಎದುರಿಸಲಿದೆ. ನವೆಂಬರ್ 29ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ.

ಉಭಯ ತಂಡಗಳ ಆಡುವ ಬಳಗ

ಕರ್ನಾಟಕ : ರವಿಕುಮಾರ್ ಸಮರ್ಥ್, ಮಯಾಂಕ್ ಅಗರ್ವಾಲ್ (ನಾಯಕ), ದೇವದತ್ ಪಡಿಕ್ಕಲ್, ನಿಕಿನ್ ಜೋಸ್, ಮನೀಶ್ ಪಾಂಡೆ, ಕೃಷ್ಣಪ್ಪ ಗೌತಮ್, ಶರತ್ ಬಿಆರ್ (ವಿಕೆಟ್ ಕೀಪರ್), ಜಗದೀಶ ಸುಚಿತ್, ವಿಜಯ್‌ಕುಮಾರ್ ವೈಶಾಕ್, ವಾಸುಕಿ ಕೌಶಿಕ್, ವಿಧ್ವತ್ ಕಾವೇರಪ್ಪ.

ದೆಹಲಿ : ಪ್ರಿಯಾಂಶ್ ಆರ್ಯ, ಅನುಜ್ ರಾವತ್(ವಿಕೆಟ್ ಕೀಪರ್), ಹಿಮ್ಮತ್ ಸಿಂಗ್, ಆಯುಷ್ ಬದೋನಿ, ಯಶ್ ಧುಲ್ (ನಾಯಕ), ಹರ್ಷಿತ್ ರಾಣಾ, ಲಲಿತ್ ಯಾದವ್, ಪ್ರಾಂಶು ವಿಜಯರಾನ್, ಸುಯಶ್ ಶರ್ಮಾ, ಇಶಾಂತ್ ಶರ್ಮಾ, ಮಯಾಂಕ್ ಯಾದವ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+