Breaking; ಮಲ್ಯ ಜೊತೆ Universe Boss, ಪೋಟೋ ವೈರಲ್
ಮುಂಬೈ, ಜೂನ್ 22; ಉದ್ಯಮಿ ವಿಜಯ್ ಮಲ್ಯ ಕ್ರಿಕೆಟಿಗ, ಯೂನಿವರ್ಸ್ ಬಾಸ್ ಎಂದು ಕರೆಸಿಕೊಳ್ಳುವ ಕ್ರಿಸ್ ಗೇಲ್ ಭೇಟಿ ಮಾಡಿದ್ದಾರೆ. ಇಬ್ಬರ ಭೇಟಿಯ ಚಿತ್ರಗಳು ಟ್ವಿಟರ್‌ನಲ್ಲಿ ವೈರಲ್ ಆಗುತ್ತಿದೆ.
ವಿಜಯ್ ಮಲ್ಯ ಕ್ರಿಕೆಟಿಗ ಕ್ರಿಸ್ ಗೇಲ್ ಭೇಟಿ ಮಾಡಿದ್ದು, ತಮ್ಮ ಅಧಿಕೃತ ಖಾತೆಯಿಂದ ಫೋಟೋವನ್ನು ಟ್ವೀಟ್ ಮಾಡಿದ್ದಾರೆ. 'ನನ್ನ ಉತ್ತಮ ಸ್ನೇಹಿತ ಕ್ರಿಸ್ಟೋಫರ್ ಹೆನ್ರಿ ಗೇಲ್ ಅವರನ್ನು ಭೇಟಿಯಾದೆ' ಎಂದು ಬರೆದಿದ್ದಾರೆ.
'ಆರ್‌ಸಿಬಿ ತಂಡಕ್ಕೆ ನೇಮಿಸಿಕೊಂಡಾಗಿನಿಂದ ಯೂನಿವರ್ಸ್ ಬಾಸ್ ಕ್ರಿಸ್ ಗೇಲ್ ಜೊತೆ ನಾನು ಉತ್ತಮ ಸ್ನೇಹ ಹೊಂದಿದ್ದೇನೆ. ಅವರು ಎಂದಿಗೂ ಉತ್ತಮ ಆಟಗಾರ' ಎಂದು ವಿಜಯ್ ಮಲ್ಯ ಟ್ವೀಟ್ ಮಾಡಿದ್ದಾರೆ.

ಕೋಲ್ಕತ್ತಾ ನೈಟ್ ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಪಂಜಾಬ್ ಸೂಪರ್ ಕಿಂಗ್ಸ್ ತಂಡಗಳಲ್ಲಿ ಐಪಿಎಲ್ ಆಡಿದ್ದ ಕ್ರಿಸ್ ಗೇಲ್ ಸದ್ಯ ಐಪಿಎಲ್ ಪಂದ್ಯಗಳಿಂದ ದೂರ ಉಳಿದಿದ್ದಾರೆ. ಭಾರತದ ಅವರ ಅಭಿಮಾನಿಗಳು ಗೇಲ್ ಹೊಡಿಬಡಿ ಆಟ ಮಿಸ್ ಮಾಡಿಕೊಳ್ಳುತ್ತಿದ್ದಾರೆ.
2022ರ ಐಪಿಎಲ್ ಪಂದ್ಯಗಳಿಂದ ಕ್ರಿಸ್ ಗೇಲ್ ದೂರ ಉಳಿದಿದ್ದರು. ಕೋವಿಡ್ ಕಾರಣದಿಂದ ಬಯೋಬಬಲ್ ನಿಯಮಗಳನ್ನು ಆಟಗಾರರು ಪಾಲಿಸಬೇಕಿತ್ತು. ಆದರೆ ಈ ನಿಯಮಗಳನ್ನು ಒಪ್ಪದ ಗೇಲ್ ಐಪಿಎಲ್ ಟೂರ್ನಿಯಿಂದ ದೂರವಾಗಿದ್ದರು.
2020ರಲ್ಲಿ ಕೇವಲ 7 ಪಂದ್ಯಗಳನ್ನು ಅವರು ಮಾಡಿದ್ದರು. 2021ರ ಐಪಿಎಲ್ ಆವೃತ್ತಿಯಲ್ಲಿ ಗೇಲ್ ಪಂಜಾಬ್ ತಂಡದಲ್ಲಿದ್ದರು. ಆದರೆ ಅಭಿಮಾನಿಗಳನ್ನು ಸಂತಸಪಡಿಸುವಂತೆ ಬ್ಯಾಟಿಂಗ್ ಮಾಡುವುದರಲ್ಲಿ ವಿಫಲರಾಗಿದ್ದರು. 10 ಪಂದ್ಯಗಳನ್ನು ಮಾಡಿ ಕೇವಲ 193 ರನ್ ಗಳಿಸಿದ್ದರು.
Great to catch up with my good friend Christopher Henry Gayle @henrygayle , the Universe Boss. Super friendship since I recruited him for RCB. Best acquisition of a player ever. pic.twitter.com/X5Ny9d6n6t
— Vijay Mallya (@TheVijayMallya) June 22, 2022
ಕ್ರಿಸ್ ಗೇಲ್ ಸಾಮಾಜಿಕ ತಾಲತಾಣಗಳಲ್ಲಿ ಸಕ್ರಿಯರು. ಬಹಳಷ್ಟು ಪಾರ್ಟಿಗಳಲ್ಲಿ ಪಾಲ್ಗೊಳ್ಳುವ ಅವರು ಅದರ ಫೋಟೋಗಳನ್ನು ಅಪ್ ಲೋಡ್ ಮಾಡುತ್ತಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಗೇಲ್ ಆಡುತ್ತಿದ್ದ ದಿನಗಳಿಂದ ಅವರಿಗೆ ಕರ್ನಾಟಕದಲ್ಲಿ ಲಕ್ಷಾಂತರ ಅಭಿಮಾನಿಗಳಿದ್ದಾರೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications