Vijay Mallya: ವಿಜಯ್ ಮಲ್ಯ ಆರ್‌ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್
RCB Vijay Mallya: ಐಪಿಎಲ್ 19ನೇ ಸೀಸನ್ ಇಂದಿನಿಂದ (ಮಾರ್ಚ್ 28) ಆರಂಭವಾಗಲಿದೆ. ಬೆಂಗಳೂರು ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ. ಇದಕ್ಕೂ ಮುನ್ನ ವಿಜಯ್ ಮಲ್ಯ ಅವರು ತಮ್ಮ ಟ್ವಿಟ್‌ನಲ್ಲಿ ಆರ್‌ಸಿಬಿಗೆ ವಿಶೇಷ ಸಂದೇಶದ ಮೂಲಕ ಶುಭ ಹಾರೈಸಿದ್ದಾರೆ. ಇದು ಇದೀಗ ಭಾರೀ ವೈರಲ್ ಆಗುತ್ತಿದೆ.
ಯುನೈಟೆಡ್ ಬ್ರೂವರೀಸ್ ಗ್ರೂಪ್‌ನ ಅಧ್ಯಕ್ಷ ವಿಜಯ್ ಮಲ್ಯ ಅವರು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಆರಂಭಿಕ ಪಂದ್ಯಕ್ಕೂ ಮುನ್ನ ಆರ್‌ಸಿಬಿ ತಂಡಕ್ಕೆ ಶುಭ ಹಾರೈಸಿದ್ದಾರೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಮಾಲೀಕರಾದ ಇವರು, ಸಾಮಾಜಿಕ ಜಾಲತಾಣದ ಮೂಲಕ ತಂಡಕ್ಕೆ ವಿಶೇಷ ಸಂದೇಶವೊಂದನ್ನು ಕಳುಹಿಸಿದ್ದಾರೆ.

ವಿಜಯ್ ಮಲ್ಯ ಟ್ವಿಟ್‌ನಲ್ಲಿ ಏನಿದೆ?
70 ವರ್ಷದ ವಿಜಯ್ ಮಲ್ಯ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ, "ನಮ್ಮ ಬೆಂಗಳೂರಿನ ಸಿಂಹಗಳು ಕಾಯುತ್ತಿದ್ದ ದಿನ ಬಂದಿದೆ... ನಮ್ಮ ಸಿಂಹಗಳು.. ಐಪಿಎಲ್ ಚಾಂಪಿಯನ್ಸ್.. ಶುಭವಾಗಲಿ ಮತ್ತು ಧೈರ್ಯದಿಂದ ಆಟವಾಡಿ," ಎಂದು ಇಂಗ್ಲೀಷ್ ಪದಗಳಲ್ಲಿ ಕನ್ನಡದ ಸಂದೇಶ ಕಳುಹಿಸಿದ್ದಾರೆ. ಇದು ಇದೀಗ ಎಲ್ಲಡೆ ವೈರಲ್ ಆಗುತ್ತಿದೆ.
The Day has arrived for our Lions of Bengaluru…namma sinhagulu…IPL Champions. Good Luck and Play Bold…Dhairyadinda ațavadi.
— Vijay Mallya (@TheVijayMallya) March 28, 2026
'ದಿ ಕಿಂಗ್ ಆಫ್ ಗುಡ್ ಟೈಮ್ಸ್' ಖ್ಯಾತಿಯ ವಿಜಯ್ ಮಲ್ಯ ಅವರು ಹಣಕಾಸಿನ ಹಗರಣಗಳಲ್ಲಿ ಸಿಲುಕಿಕೊಂಡ ನಂತರ, ಅಮೃತ್ ಥಾಮಸ್ ತಂಡದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡರು. ಕೆಲವು ದಿನಗಳ ಹಿಂದೆಯಷ್ಟೇ, ಆದಿತ್ಯ ಬಿರ್ಲಾ ಗ್ರೂಪ್, ದಿ ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಬ್ಲ್ಯಾಕ್‌ಸ್ಟೋನ್ ಸಂಸ್ಥೆಗಳು ಆರ್‌ಸಿಬಿ ತಂಡವನ್ನು ದಾಖಲೆಯ 1.78 ಬಿಲಿಯನ್ ಡಾಲರ್ ಮೊತ್ತಕ್ಕೆ ಖರೀದಿಸಿವೆ. ಇದು ಐಪಿಎಲ್ ಇತಿಹಾಸದಲ್ಲೇ ಫ್ರಾಂಚೈಸಿಯೊಂದಕ್ಕೆ ಲಭಿಸಿದ ಅತ್ಯಧಿಕ ಮೌಲ್ಯವಾಗಿದೆ. ಅಲ್ಲದೆ, ಇದು ಆರ್‌ಸಿಬಿಯ ಬ್ರ್ಯಾಂಡ್ ಮೌಲ್ಯ ಎಷ್ಟು ಪ್ರಬಲವಾಗಿದೆ ಎಂಬುದನ್ನು ಎತ್ತಿತೋರಿಸುತ್ತದೆ.
ಹೊಸ ಮಾಲೀಕರು ಡಿಯಾಜಿಯೊ ಅಂಗಸಂಸ್ಥೆಯಾದ ಯುನೈಟೆಡ್ ಸ್ಪಿರಿಟ್ಸ್ ಲಿಮಿಟೆಡ್‌ನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಪೂರ್ಣ 100% ಪಾಲನ್ನು ಖರೀದಿಸಲು ಅಂತಿಮ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ಇದು ಪುರುಷರ ಇಂಡಿಯನ್ ಪ್ರೀಮಿಯರ್ ಲೀಗ್ ಮತ್ತು ಮಹಿಳಾ ಪ್ರೀಮಿಯರ್ ಲೀಗ್ ಎರಡೂ ಫ್ರಾಂಚೈಸಿಗಳನ್ನು ಒಳಗೊಂಡಿದೆ. ಈ ವ್ಯವಹಾರದ ಒಟ್ಟು ಮೌಲ್ಯವು 166.6 ಶತಕೋಟಿ ರೂಪಾಯಿಗಳು (ಸುಮಾರು 1.78 ಬಿಲಿಯನ್ ಯುಎಸ್ ಡಾಲರ್) ಎಂದು ಅಂದಾಜಿಸಲಾಗಿದೆ.
ವಿಜಯ್ ಮಲ್ಯ ಟ್ವಿಟ್‌ಗೆ ಬಂದಿರುವ ಪ್ರತಿಕ್ರಿಯೆಗಳು
"ಇಂದು ಬೆಂಗಳೂರಿನ ಪಾಲಿಗೆ ಒಂದು ಅದ್ಭುತ ರಾತ್ರಿ, ಏಕೆಂದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2026ರ ಆವೃತ್ತಿಯ ಮೊದಲ ಪಂದ್ಯ ನಡೆಯುತ್ತಿದೆ. ಅದರಲ್ಲೂ ವಿಶೇಷವಾಗಿ, ಹಾಲಿ ಚಾಂಪಿಯನ್ ಆಗಿರುವ ನಮ್ಮ ಆರ್‌ಸಿಬಿ ತಂಡವು ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳುವ ಹಂಬಲದೊಂದಿಗೆ ಕಣಕ್ಕಿಳಿಯುತ್ತಿರುವುದರಿಂದ ಕ್ರೀಡಾಂಗಣದ ವಾತಾವರಣವು ಸಂಪೂರ್ಣ ರೋಮಾಂಚನಕಾರಿಯಾಗಿರಲಿದೆ," ಎಂದು ವಿಜಯ್ ಮಲ್ಯ ಟ್ವಿಟ್‌ಗೆ ಮತ್ತೊಬ್ಬ ಬಳಕೆದಾರರು ಟ್ವಿಟ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.
It’s a massive night here in Bengaluru with the IPL 2026 season opener at the Chinnaswamy. The atmosphere is going to be electric, especially with the home team starting their title defense.
— Jackson Bose (@Jacksonbose1) March 28, 2026
ಮತ್ತೊಬ್ಬರು, "ಬೆಂಗಳೂರಿನ ಸಿಂಹಗಳು ಈ ಬಾರಿ ಆರಂಭದಿಂದಲೇ ಗರ್ಜಿಸಲಿವೆ. ಅದ್ಭುತ ಆಟ ಆಡಲಿದ್ದಾರೆ. ಆದರೆ ತಂಡದಲ್ಲಿ ಯಾರಿಗೂ ಕನ್ನಡ ಅರ್ಥವಾಗುವುದಿಲ್ಲ," ಎಂದು ಬರೆದುಕೊಂಡಿದ್ದಾರೆ. ಇನ್ನೂ ಕಳೆದ ವರ್ಷ ಆರ್‌ಸಿಬಿ ಪಂಜಾಬ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ, 18 ವರ್ಷಗಳ ಸುದೀರ್ಘ ಕಾಯುವಿಕೆಗೆ ಅಂತ್ಯ ಹಾಡಿ ಚೊಚ್ಚಲ ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿಯಿತು. ಈ ಬಾರಿಯೂ ಕೂಡ ಅದೇ ನಿರೀಕ್ಷೆಯೊಂದಿಗೆ ಕಣಕ್ಕಿಳಿಯುತ್ತಿದೆ. ಒಟ್ಟಿನಲ್ಲಿ ಇದೀಗ ಪಂದ್ಯ ಆರಂಭಕ್ಕೂ ಮುನ್ನ ವಿಜಯ್ ಮಲ್ಯ ಅವರು ಟ್ವಿಟ್ ಮೂಲಕ ಇಂಗ್ಲೀಷ್ ಪದಗಳಲ್ಲಿ ಕನ್ನಡ ಸಂದೇಶ ಕಳುಹಿಸಿರುವುದು ಇದೀಗ ಸಖತ್ ಸೌಂಡ್ ಮಾಡುತ್ತಿದ್ದು, ಈ ಟ್ವಿಟ್‌ಗೆ ಮೆಚ್ಚುಗೆಗಳ ಸುರಿಮಳೆ ಹರಿದುಬಂದಿದೆ.
-
IPL 2026: RCB ಫ್ಯಾನ್ಸ್ಗಾಗಿ ಬಿಎಂಟಿಸಿ ಬಸ್ಗಳ ಕಾರ್ಯಾಚರಣೆ, ಎಲ್ಲಿಂದ ಎಲ್ಲಿಗೆ? ಮಾರ್ಗ ಡಿಟೇಲ್ಸ್ -
RCB: ಆರ್ ಸಿಬಿ ತಂಡದ ಅಧಿಕೃತ ಪೇಮೆಂಟ್ಸ್ ಪಾಲುದಾರ ನವಿ ಯುಪಿಐ, ಫ್ಯಾನ್ಸ್ ಗಮನಿಸಿ -
RCB Playing 11 Prediction: ಎಸ್ಆರ್ಎಚ್ ವಿರುದ್ಧ ಆರ್‌ಸಿಬಿ ಪ್ಲೇಯಿಂಗ್ 11 -
ಐಪಿಎಲ್ 2026: ಆರ್‌ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
IPL 2026: ಆರ್‌ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಮೈದಾನಕ್ಕೆ ಬರ್ತಾರಾ ಆರ್‌ಸಿಬಿ ಅಭಿಮಾನಿಗಳ ಹೊಸ ಕ್ರಶ್ ಬಿರ್ಲಾ ಕುಡಿ ಅನನ್ಯಾ?; ಕಾವ್ಯಾ ಮಾರನ್ ಬಗ್ಗೆ ಹೊಸ ಚರ್ಚೆ -
IPL Free VIP Tickets: ಶಾಸಕರಿಗೆ ಐಪಿಎಲ್ ವಿಐಪಿ ಟಿಕೆಟ್ ಪಡೆಯುವ ಹಕ್ಕು ಇದೆ: ಡಿ.ಕೆ.ಶಿವಕುಮಾರ್ ಸಮರ್ಥನೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
IPL 2026 Full Schedule: ಐಪಿಎಲ್ 2026ರ ಸಂಪೂರ್ಣ ವೇಳಾಪಟ್ಟಿ ಪ್ರಕಟ -
IPL 2026: ಆರ್‌ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಕ್ರಿಕೆಟ್ ಆಟ, ಬೆಟ್ಟಿಂಗ್ ದಂಧೆ, ಜೂಜಿನ ಮಜಾ ಇದೇ ಮಾರ್ಚ್ 28ರಿಂದ ಪ್ರಾರಂಭ: ವಿವೇಕಾನಂದ ಎಚ್.ಕೆ. ಮಹತ್ವದ ಸಂದೇಶ










Click it and Unblock the Notifications